ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಸಿಎಂ ಸುವೇಂದು ಅಧಿಕಾರಿ ಎಚ್ಚರಿಕೆ ಹೊರತಾಗಿಯೂ ಕೋಲ್ಕತಾದಲ್ಲಿ ನೇತಾಜಿ ಪ್ರತಿಮೆ ಧ್ವಂಸ

ಮುಖ್ಯಮಂತ್ರಿ ಸುವೇಂದು ಅಧಿಕಾರಿ ಅವರು ಎಚ್ಚರಿಕೆ ನೀಡಿದ್ದರೂ ಕೂಡ ಕಿಡಿಗೇಡಿಗಳು ದಕ್ಷಿಣ ಕೋಲ್ಕತ್ತಾದ ನ್ಯೂ ಅಲಿಪೋರ್ ಪ್ರದೇಶದ ಮೂರು-ಮಾರ್ಗ ಕ್ರಾಸಿಂಗ್ ಬಳಿ ಇರುವ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಪ್ರತಿಮೆಯನ್ನು ಧ್ವಂಸಗೊಳಿಸಿದ್ದಾರೆ. ಇದು ಈಗ ಸ್ಥಳೀಯರು ಮತ್ತು ರಾಜಕೀಯ ನಾಯಕರಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ.

ಸಂಗ್ರಹ ಚಿತ್ರ

ಕೋಲ್ಕತ್ತಾ: ಸ್ವಾತಂತ್ರ್ಯ ಹೋರಾಟಗಾರರಾದ ನೇತಾಜಿ ಸುಭಾಷ್ ಚಂದ್ರ ಬೋಸ್ (Netaji Subhas Chandra Bose) ಅವರ ವಿರುದ್ಧ ಅವಹೇಳನಕಾರಿ ಹೇಳಿಕೆಗಳು ಮತ್ತು ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳನ್ನು ಮಾಡುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮಕೈಗೊಳ್ಳುವುದಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ (CM Suvendu Adhikari) ಅವರು ಎಚ್ಚರಿಕೆ ನೀಡಿದ 24 ಗಂಟೆಯೊಳಗೆ ಕೋಲ್ಕತ್ತಾದ (Kolkata) ನೇತಾಜಿ ಪ್ರತಿಮೆಯನ್ನು ಗುರುವಾರ ಧ್ವಂಸಗೊಳಿಸಲಾಗಿದೆ. ಪ್ರತಿಮೆಯ ಬಲಗೈಯನ್ನು ಕಿಡಿಗೇಡಿಗಳು ಮುರಿದು ಹಾಕಿದ್ದಾರೆ. ಈ ಕುರಿತು ಪ್ರಕರಣ ದಾಖಲಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ದಕ್ಷಿಣ ಕೋಲ್ಕತ್ತಾದ ನ್ಯೂ ಅಲಿಪೋರ್ ಪ್ರದೇಶದ ಮೂರು ಮಾರ್ಗ ಕ್ರಾಸಿಂಗ್ ಬಳಿ ಇರುವ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಪ್ರತಿಮೆಯ ಬಲಗೈಯನ್ನು ಕಿಡಿಗೇಡಿಗಳು ಮುರಿದು ಹಾಕಿದ್ದಾರೆ. ಈ ಕುರಿತು ತನಿಖೆ ನಡೆಸಲು ಆರಂಭಿಸಲಾಗಿದೆ ಎಂದು ಕೋಲ್ಕತ್ತಾ ಪೊಲೀಸ್ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪೊನ್ನಣ್ಣನಿಗೆ ರಾಜಕೀಯ ಕಾರ್ಯದರ್ಶಿ ಸ್ಥಾನ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಅವರು ನೇತಾಜಿ ಸುಭಾಷ್ ಚಂದ್ರ ಬೋಸ್ ಅವರನ್ನು ಗುರಿಯಾಗಿಸಿಕೊಂಡು ಅವಹೇಳನಕಾರಿ ಹೇಳಿಕೆ ನೀಡುವ ಮತ್ತು ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳನ್ನು ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದರು. ಅವರು ಹೇಳಿಕೆ ನೀಡಿ 24 ಗಂಟೆ ಕೂಡ ಆಗಿರಲಿಲ್ಲ. ಅಷ್ಟರಲ್ಲಿ ಕೋಲ್ಕತ್ತಾದಲ್ಲಿ ಈ ಘಟನೆ ನಡೆದಿದೆ ಎಂದು ಅವರು ತಿಳಿಸಿದ್ದಾರೆ.



ನೇತಾಜಿ ಅವರ ಪ್ರತಿಮೆಯನ್ನು ಯಾವಾಗ ಮತ್ತು ಹೇಗೆ ಹಾನಿಗೊಳಿಸಲಾಯಿತು ಎಂಬುದು ತಿಳಿದು ಬಂದಿಲ್ಲ. ಇದನ್ನು ಉದ್ದೇಶಪೂರ್ವಕವಾಗಿ ಮಾಡಲಾಗಿದೆಯೇ ಎಂಬುದರ ಕುರಿತು ತನಿಖೆ ನಡೆಸಲಾಗುವುದು. ಇದಕ್ಕೆ ಸಂಬಂಧಿಸಿ ಸ್ಥಳದಲ್ಲಿ ಲಭ್ಯವಿರುವ ಸಿಸಿಟಿವಿ ದೃಶ್ಯಾವಳಿಗಳು ಮತ್ತು ಇತರ ಪುರಾವೆಗಳನ್ನು ಪರಿಶೀಲನೆ ನಡೆಸಲಾಗುತ್ತಿದೆ. ಘಟನೆಗೆ ಸಂಬಂಧಿಸಿದಂತೆ ಇಲ್ಲಿಯವರೆಗೆ ಯಾರನ್ನೂ ಬಂಧಿಸಲಾಗಿಲ್ಲ ಎಂದು ಅವರು ಹೇಳಿದರು.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಬಿಜೆಪಿ ದಕ್ಷಿಣ ಕೋಲ್ಕತ್ತಾ ಸಂಘಟನಾ ಕಾರ್ಯದರ್ಶಿ ತಾರಕ್ ಬ್ಯಾನರ್ಜಿ, ಕಿಡಿಗೇಡಿಗಳು ಬುಧವಾರ ರಾತ್ರಿ ಪ್ರತಿಮೆಯನ್ನು ಧ್ವಂಸ ಮಾಡಿದ್ದಾರೆ. ಅವರನ್ನು ತಕ್ಷಣ ಬಂಧಿಸಬೇಕು. ಮುಖ್ಯಮಂತ್ರಿಯವರ ಎಚ್ಚರಿಕೆಯ ಅನಂತರ ಈ ಘಟನೆ ನಡೆದಿದೆ. ನೇತಾಜಿಗೆ ಅಗೌರವ ತೋರಿಸುವುದನ್ನು ಸಹಿಸಲಾಗುವುದಿಲ್ಲ ಮತ್ತು ಆಡಳಿತವು ಕಠಿಣ ಕ್ರಮ ಕೈಗೊಳ್ಳುತ್ತದೆ ಎಂದು ಸಿಎಂ ಹೇಳಿದ್ದಾರೆ. ಈ ಕುರಿತು ತ್ವರಿತ ತನಿಖೆಯಾಗಬೇಕು ಎಂದು ಅವರು ಒತ್ತಾಯಿಸಿದರು.

ಘಟನೆಗೂ ಮೊದಲು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದ ಮುಖ್ಯಮಂತ್ರಿ ಸುವೇಂದು ಅಧಿಕಾರಿ, ನೇತಾಜಿ ಸುಭಾಷ್ ಚಂದ್ರ ಬೋಸ್ ಬಗ್ಗೆ ಅವಮಾನಕರ, ಸುಳ್ಳು ಮತ್ತು ಮಾನನಷ್ಟಕರ ಹೇಳಿಕೆಗಳನ್ನು ನೀಡುವ ಧೈರ್ಯವಿರುವವರನ್ನು ಬಂಧಿಸುವಂತೆ ಪೊಲೀಸರಿಗೆ ನಿರ್ದೇಶಿಸುತ್ತಿದ್ದೇನೆ. ಅವರು ತಕ್ಷಣ ಕ್ಷಮೆಯಾಚಿಸಬೇಕು ಮತ್ತು ಅಗೌರವದ ಪೋಸ್ಟ್‌ಗಳನ್ನು ಅಳಿಸಬೇಕು. ಸಾಮಾಜಿಕ ಮಾಧ್ಯಮಗಳಲ್ಲಿ ಹಾಕಿರುವ ಪೋಸ್ಟ್ ಅಳಿಸುವುದರಿಂದ ಅವರನ್ನು ಬಿಟ್ಟುಬಿಡಲಾಗುತ್ತದೆ ಎಂದರ್ಥವಲ್ಲ. ಪೊಲೀಸರು ಕಾನೂನಿನ ಪ್ರಕಾರ ಕ್ರಮ ಕೈಗೊಳ್ಳುತ್ತಾರೆ ಎಂದು ಹೇಳಿದ್ದರು.

"ವಿಶ್ವಕಪ್ ಹಾಕಿ ಪ್ರಶಸ್ತಿ"ಯತ್ತ ಭಾರತದ ಚಿತ್ತ

ಅನಂತ ಮಹಾರಾಜ್ ಎಂದೇ ಜನಪ್ರಿಯವಾಗಿರುವ ಬಿಜೆಪಿ ಸಂಸದ ನಾಗೇಂದ್ರನಾಥ್ ರಾಯ್ ಅವರು ನೇತಾಜಿ ಅವರನ್ನು "ಯುದ್ಧ ಅಪರಾಧಿ" ಎಂದು ಬಣ್ಣಿಸಿ ಅವರ ನಾಯಕತ್ವ ಮತ್ತು ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಆಜಾದ್ ಹಿಂದ್ ಫೌಜ್‌ನ ಪಾತ್ರವನ್ನು ಪ್ರಶ್ನಿಸಿದ್ದರು. ಇದರ ಬೆನ್ನಲ್ಲೇ ಅಧಿಕಾರಿಯವರು ಪೊಲೀಸರಿಗೆ ಈ ನಿರ್ದೇಶನ ನೀಡಿದ್ದಾರೆ.

ಅನಂತ ಮಹಾರಾಜ್ ಅವರ ಹೇಳಿಕೆ ವಿವಾದದ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳ ಸರ್ಕಾರ ಅವರಿಗೆ ನೀಡಿದ್ದ 'ಬಂಗಾ ಬಿಭೂಷಣ' ಪ್ರಶಸ್ತಿಯನ್ನು ಗುರುವಾರ ಹಿಂತೆಗೆದುಕೊಂಡಿದೆ.

ವಿದ್ಯಾ ಇರ್ವತ್ತೂರು

View all posts by this author