NIA Raid: ಐದು ಕಡೆ ಎನ್‌ಐಎ ದಾಳಿ, ಮೂವರು ಶಂಕಿತ ಉಗ್ರರು ವಶಕ್ಕೆ
ದಾಳಿ ವೇಳೆ ಎನ್‌ಐಎ ಅಧಿಕಾರಿಗಳು 2 ವಾಕಿಟಾಕಿ, ಚಿನ್ನಾಭರಣ ವಶಕ್ಕೆ ಪಡೆದುಕೊಂಡಿದ್ದಾರೆ. ಉಗ್ರರ ಚಟುವಟಿಕೆಗೆ ನೆರವು ನೀಡುತ್ತಿದ್ದ ಆರೋಪದಡಿ ಈ ಮೂವರನ್ನು ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಬಂಧಿಸಿದ್ದಾರೆ. ಬೆಂಗಳೂರು (Bengaluru) ಹಾಗೂ ಕೋಲಾರದಲ್ಲಿ (Kolar) ಒಟ್ಟು ಐದು ಕಡೆ ದಾಳಿ (NIA Raid) ಮಾಡಲಾಗಿದೆ.


ಬೆಂಗಳೂರು: ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ತಂಡಗಳು ಬೆಂಗಳೂರು (Bengaluru) ಹಾಗೂ ಕೋಲಾರದಲ್ಲಿ (Kolar) ಒಟ್ಟು ಐದು ಕಡೆ ದಾಳಿ (NIA Raid) ಮಾಡಿದ್ದು, ಮೂವರು ಶಂಕಿತ ಉಗ್ರರನ್ನು (suspected terrorists) ಬಂಧಿಸಿವೆ. ಬೆಂಗಳೂರಿನ ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲಿನ ಮನೋವೈದ್ಯ ಡಾ.ನಾಗರಾಜ್, ಪರಪ್ಪನ ಅಗ್ರಹಾರ ಜೈಲಿನ ಎಎಸ್ಐ ಆಗಿದ್ದ ಚಾಂದ್ ಪಾಷಾ ಅನೀಸ್ ಹಾಗೂ ಫಾತಿಮಾ ಎನ್ನುವವರನ್ನು ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಬಂಧಿಸಿದ್ದಾರೆ. ಉಗ್ರರ ಚಟುವಟಿಕೆಗೆ ನೆರವು ನೀಡುತ್ತಿದ್ದ ಆರೋಪದಡಿ ಮೂವರನ್ನು ಬಂಧಿಸಲಾಗಿದೆ.
ದಾಳಿ ವೇಳೆ ಎನ್‌ಐಎ ಅಧಿಕಾರಿಗಳು 2 ವಾಕಿಟಾಕಿ, ಚಿನ್ನಾಭರಣ ವಶಕ್ಕೆ ಪಡೆದುಕೊಂಡಿದ್ದಾರೆ. ಉಗ್ರರ ಚಟುವಟಿಕೆಗೆ ನೆರವು ನೀಡುತ್ತಿದ್ದ ಆರೋಪದಡಿ ಈ ಮೂವರನ್ನು ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಬಂಧಿಸಿದ್ದಾರೆ. ಬಂಧಿತ ಫಾತಿಮಾ ಉಗ್ರ ಕೃತ್ಯದಲ್ಲಿ ಜೈಲುಪಾಲಾಗಿರುವ ಟಿ.ನಾಸೀರ್ ತಾಯಿ. ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಕೈದಿಗಳನ್ನು ಲಷ್ಕರ್-ಎ-ತೊಯ್ಬಾ ಉಗ್ರ ಸಂಘಟನೆಗೆ ಸೇರುವಂತೆ ಟಿ.ನಾಸೀರ್ ಪ್ರಚೋದನೆ ನೀಡುತ್ತಿದ್ದ ಎಂದು ತಿಳಿದುಬಂದಿದೆ.
ಕೋಲಾರ ತಾಲ್ಲೂಕು ಭಟ್ರಹಳ್ಳಿ ಗ್ರಾಮದ ಸತೀಶ್ ಗೌಡ ಎಂಬವರಿಗೆ ಎನ್.ಐ.ಎ ನೋಟೀಸ್ ನೀಡಿದೆ. ಬೆಂಗಳೂರಿನ ವೈಟ್ ಫೀಲ್ಡ್ ಬಳಿ ಮೊಬೈಲ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಸತೀಶ್ ಗೌಡ ಮನೆಯಲ್ಲಿ ಲಭ್ಯವಿಲ್ಲದ ಕಾರಣ ಕುಟುಂಬಸ್ಥರಿಗೆ ಎನ್‌ಐಎ ನೋಟೀಸ್ ನೀಡಿದ್ದು, 9-07-25 ರಂದು 10 ಗಂಟೆಗೆ ಬೆಂಗಳೂರು ಎನ್.ಐ.ಎ ಕಚೇರಿಗೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ.
41 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ
ಶಿರಸಿ: ಹಲವಾರು ವರ್ಷಗಳ ಹಿಂದೆ ಪ್ರಕರಣಗಳು ದಾಖಲಾಗಿ ನಂತರ ಕಾನೂನಿನ ಕುಣಿಕೆಯಿಂದ ತಪ್ಪಿಸಿಕೊಳ್ಳಲು ನ್ಯಾಯಾಲಯಗಳಿಗೆ ಹಾಜರಾಗದೇ ತಲೆಮರೆಸಿಕೊಂಡಿರುವ ಆರೋಪಿಗಳ ಹೆಡೆಮುರಿಕಟ್ಟುತ್ತಿದ್ದಾರೆ. ಕಳೆದ ಒಂದು ತಿಂಗಳಲ್ಲಿ ಮೂರು ಪ್ರಕರಣಗಳಲ್ಲಿ ಆರೋಪಿಗಳನ್ನು ಪತ್ತೆ ಮಾಡಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದು, ಕಳೆದ 41 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿತನನ್ನು (Sirsi News) ಶಿರಸಿ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ದಕ್ಷಿಣಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಮಂಡೂರ ನಿವಾಸಿ ಫಾಸ್ಕಲ್ ಮಾರ್ಟಿನ್ ರೊಡ್ರಿಗಸ್ ಬಂಧಿತ ವ್ಯಕ್ತಿ. ಈತನ ವಿರುದ್ಧ ಕಳೆದ 41 ವರ್ಷಗಳ ಹಿಂದೆ ಶಿರಸಿ ನಗರ ಪೊಲೀಸ್ ಠಾಣೆಯಲ್ಲಿ ಅಪಘಾತ ಪ್ರಕರಣ ದಾಖಲಾಗಿತ್ತು.
ತನಿಖೆ ನಡೆಸಿದ ಶಿರಸಿ ನಗರ ಪೊಲೀಸರು ಈತನ ವಿರುದ್ದ ನ್ಯಾಯಾಲಯಕ್ಕೆ ದೋಷಾರೋಪಣೆ ಪತ್ರ ಸಲ್ಲಿಸಿದ್ದರು. ಈತ ಬೇರೆ ಜಿಲ್ಲೆಯವನಾಗಿದ್ದರಿಂದ ಶಿಕ್ಷೆಯಿಂದ ಬಚಾವ್ ಆಗಲು ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದನು. ಶಿರಸಿ ನ್ಯಾಯಾಲಯವು ಇತನ ವಿರುದ್ದ ವಾರೆಂಟ್ ಹೊರಡಿಸಿತ್ತು. ಶಿರಸಿ ನಗರ ಪೊಲೀಸರು ಆರೋಪಿತನ ಪತ್ತೆಗಾಗಿ ಬೆಳ್ತಂಗಡಿ, ಮಂಗಳೂರು, ಉಡುಪಿ, ಪುತ್ತೂರು ಮುಂತಾದ ಕಡೆಗಳಲ್ಲಿ ಮಾಹಿತಿ ಸಂಗ್ರಹಿಸಿದ್ದರು. ಆರೋಪಿತ ಫಾಸ್ಕಲ್ ಮಾರ್ಟಿನ್ ರೊಡ್ರಿಗಸ್ ನೀಡಿದ್ದ ವಿಳಾಸವನ್ನೇ ಬದಲಾಯಿಸಿ ಬೆಂಗಳೂರಿನ ಬಗಲಗುಂಟೆಯಲ್ಲಿ ತಲೆಮರೆಸಿಕೊಂಡಿದ್ದು, ನಂತರ ಮೃತಪಟ್ಟಿದ್ದಾನೆ ಎಂಬ ಮಾಹಿತಿ ಪೊಲೀಸರಿಗೆ ಸಿಕ್ಕಿದೆ. ಆರೋಪಿತನ ಪತ್ತೆಗೆ ಕ್ರಮ ವಿಶೇಷ ಕ್ರಮ ತೆಗೆದುಕೊಂಡ ಶಿರಸಿ ನಗರ ಠಾಣೆ ಪೊಲೀಸರು ಕೊನೆಗೂ ಆತನನ್ನು ಪತ್ತೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಮುಂದಿನ ಕ್ರಮಕ್ಕಾಗಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಇದನ್ನೂ ಓದಿ: Kalaburagi News: ಮನೆಗೆ ನುಗ್ಗಿ ದರೋಡೆ: 4 ಜನ ಅಂತಾರಾಜ್ಯ ದರೋಡೆಕೋರರ ಬಂಧನ