ಆಂಧ್ರ ಪ್ರದೇಶದಲ್ಲಿ ಬಸ್ ಪಲ್ಟಿ; 9 ಮಂದಿ ಸಾವು
ಬಸ್ ಪಲ್ಟಿಯಾಗಿ ಒಂಬತ್ತು ಮಂದಿ ಸಾವನ್ನಪ್ಪಿರುವ ಘಟನೆ ಆಂಧ್ರಪ್ರದೇಶದ ಅಲ್ಲೂರಿ ಸೀತಾರಾಮ ರಾಜು ಜಿಲ್ಲೆಯಲ್ಲಿ ನಡೆದಿದೆ. ಈ ಘಟನೆಯಲ್ಲಿ ಸುಮಾರು 22 ಮಂದಿ ಗಾಯಗೊಂಡಿದ್ದಾರೆ. ಚಿಂತೂರು ಮತ್ತು ಭದ್ರಾಚಲಂ ನಡುವಿನ ಘಾಟ್ ರಸ್ತೆಯಲ್ಲಿ ಈ ಘಟನೆ ಶುಕ್ರವಾರ ಬೆಳಗ್ಗೆ ನಡೆದಿದೆ.
(ಸಂಗ್ರಹ ಚಿತ್ರ) -
ಆಂಧ್ರಪ್ರದೇಶ: ಬಸ್ಸೊಂದು ಪಲ್ಟಿಯಾಗಿ (Bus overturn) ಒಂಬತ್ತು ಮಂದಿ ಮೃತಪಟ್ಟು, 22 ಮಂದಿ ಗಾಯಗೊಂಡ ಘಟನೆ ಆಂಧ್ರಪ್ರದೇಶದ (andhra pradesh) ಅಲ್ಲೂರಿ ಸೀತಾರಾಮ ರಾಜು ಜಿಲ್ಲೆಯಲ್ಲಿ ನಡೆದಿದೆ. ಶುಕ್ರವಾರ ಬೆಳಗ್ಗಿನ ಜಾವಾ ಈ ಘಟನೆ ಚಿಂತೂರು ಮತ್ತು ಭದ್ರಾಚಲಂ ನಡುವಿನ ಘಾಟ್ ರಸ್ತೆಯಲ್ಲಿ (Bus accident) ನಡೆದಿದೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಭದ್ರಾಚಲಂ ಆಸ್ಪತ್ರೆಗೆ ದಾಖಲಿಸಲಾಗಿದ್ದು, ನಾಲ್ವರ ಸ್ಥಿತಿ ಗಂಭೀರವಾಗಿದೆ. ಮೃತರ ಗುರುತು ಪತ್ತೆ ಮಾಡಲಾಗಿಲ್ಲ ಎಂದು ಎಂದು ಅಲ್ಲೂರಿ ಸೀತಾರಾಮ ರಾಜು ಜಿಲ್ಲಾ ಕಲೆಕ್ಟರ್ ದಿನೇಶ್ ಕುಮಾರ್ ತಿಳಿಸಿದ್ದಾರೆ.
ಘಟನೆಯ ಕುರಿತು ಮಾಹಿತಿ ನೀಡಿರುವ ಪೊಲೀಸ್ ವರಿಷ್ಠಾಧಿಕಾರಿ ಅಮಿತ್ ಬರ್ದಾರ್, ಚಿಂತೂರು-ಮರೇಡುಮಿಲ್ಲಿ ಘಾಟ್ ರಸ್ತೆಯಲ್ಲಿ ಬೆಳಗ್ಗೆ 4.30ರ ಸುಮಾರಿಗೆ ಈ ಘಟನೆ ನಡೆದಿದೆ. ದುರ್ಗಾ ದೇವಸ್ಥಾನದ ಬಳಿ ಅಪಘಾತ ಸಂಭವಿಸಿದೆ. ಅಪಘಾತದ ರಭಸಕ್ಕೆ ಬಸ್ ಘಾಟ್ ರಸ್ತೆಯಿಂದ ಕೆಳಗೆ ಬಿದ್ದಿದೆ. ಇದರಿಂದ ಸುಮಾರು ಒಂಬತ್ತು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. 22 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಇವರಲ್ಲಿ ನಾಲ್ವರ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ: Kalaburagi Accident: ಕಲಬುರಗಿಯಲ್ಲಿ ಭೀಕರ ಸರಣಿ ಅಪಘಾತ; ವೃದ್ಧ ದಂಪತಿ ಸೇರಿ ಮೂವರ ಸಾವು
ಬಸ್ ಸಂಪೂರ್ಣವಾಗಿ ಕಣಿವೆಗೆ ಬಿದ್ದಿಲ್ಲ. ಅಪಘಾತದ ತೀವ್ರತೆಗೆ ನಜ್ಜುಗುಜ್ಜಾಗಿ ಸಿಲುಕಿಕೊಂಡಿತ್ತು. ಅಪಘಾತಕ್ಕೆ ಕಾರಣ ಏನು ಎಂಬುದು ತಿಳಿದು ಬಂದಿಲ್ಲ. ಮೃತರ ಗುರುತು ಪತ್ತೆ ಕಾರ್ಯ ನಡೆಸಲಾಗುತ್ತಿದೆ ಎಂದು ಅವರು ಹೇಳಿದರು.
ಘಟನೆಗೆ ತಕ್ಷಣ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು, ಚಿತ್ತೂರು ಜಿಲ್ಲೆಯ ಅಲ್ಲೂರಿ ಸೀತಾರಾಮ ರಾಜು ಬಳಿ ನಡೆದ ಬಸ್ ಅಪಘಾತ ಇಂದು ಮುಂಜಾನೆ ನಮ್ಮನ್ನು ಬೆಚ್ಚಿಬೀಳಿಸಿದೆ. ಇದರಲ್ಲಿ ಹಲವಾರು ಮಂದಿ ಬಲಿಯಾಗಿದ್ದಾರೆ. ಈ ಕುರಿತು ಅಧಿಕಾರಿಗಳೊಂದಿಗೆ ಮಾತನಾಡಿದ್ದೇನೆ ಮತ್ತು ಸಂತ್ರಸ್ತರಿಗೆ ಸಹಾಯ ನೀಡುತ್ತಿರುವ ಬಗ್ಗೆ ಮಾಹಿತಿಗಳು ಬಂದಿವೆ. ಗಾಯಾಳುಗಳಿಗೆ ಉತ್ತಮ ವೈದ್ಯಕೀಯ ನೆರವು ಸಿಗುವಂತೆ ನೋಡಿಕೊಳ್ಳಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಮೃತರ ಕುಟುಂಬಗಳಿಗೆ ಸರ್ಕಾರ ಬೆಂಬಲವಾಗಿದೆ ಎಂದು ತಿಳಿಸಿದ್ದಾರೆ.
అల్లూరి సీతారామరాజు జిల్లా చింతూరు వద్ద జరిగిన యాత్రికుల ప్రైవేటు బస్సు ప్రమాదం తీవ్రంగా కలిచివేసింది. ఈ ప్రమాదంలో పలువురు ప్రాణాలు కోల్పోవడం విచారకరం. ప్రమాదంపై అధికారులతో మాట్లాడాను, బాధితులకు అందుతున్న సాయంపై వివరాలు తెలుసుకున్నాను. క్షతగాత్రులకు మెరుగైన వైద్య సాయం అందేలా…
— N Chandrababu Naidu (@ncbn) December 12, 2025
ಇನ್ನೊಂದು ರಸ್ತೆ ಅಪಘಾತ ಪ್ರಕರಣ ಅರುಣಾಚಲ ಪ್ರದೇಶದ ಅಂಜಾವ್ ಜಿಲ್ಲೆಯಲ್ಲಿ ನಡೆದಿದೆ. ಹಯುಲಿಯಾಂಗ್-ಚಾಗಲಗಂ ರಸ್ತೆಯ ಕಂದಕಕ್ಕೆ ಮಿನಿಟ್ರಕ್ ಬಿದ್ದಿದ್ದು ಇದರಲ್ಲಿ ಅಸ್ಸಾಂನ ಟಿನ್ಸುಕಿಯಾದ 21 ಮಂದಿ ಸಾವನ್ನಪ್ಪಿದ್ದಾರೆ. ಈ ಘಟನೆಯಲ್ಲಿ ಓರ್ವ ಮಾತ್ರ ಬದುಕಿ ಉಳಿದಿದ್ದಾನೆ ಎಂದು ತಿನ್ಸುಕಿಯಾ ಜಿಲ್ಲೆಯ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಮಯಾಂಕ್ ಕುಮಾರ್ ತಿಳಿಸಿದ್ದಾರೆ.
ಇದನ್ನೂ ಓದಿ: Prajwal Revanna Case: ಪ್ರಜ್ವಲ್ ರೇವಣ್ಣಗೆ ಸುಪ್ರೀಂ ಕೋರ್ಟ್‌ನಲ್ಲಿ ಮತ್ತೊಂದು ಶಾಕ್
ನಿರ್ಮಾಣ ಕಾರ್ಯಗಳಿಗಾಗಿ ಟ್ರಕ್ ನಲ್ಲಿ 22 ಮಂದಿ ಹಯುಲಿಯಾಂಗ್‌ಗೆ ಹೋಗುತ್ತಿದ್ದರು. ಘಟನೆಯಲ್ಲಿ ಮೃತಪಟ್ಟ ಕುಟುಂಬಗಳಿಗೆ ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ 2 ಲಕ್ಷ ರೂ., ಗಾಯಾಳುಗಳಿಗೆ 50,000 ರೂ. ಆರ್ಥಿಕ ಪರಿಹಾರವನ್ನು ಘೋಷಿಸಲಾಗಿದೆ.