ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Neha Hiremath murder case: ನೇಹಾ ಹಿರೇಮಠ್ ಕೊಲೆ ಆರೋಪಿ ಫಯಾಜ್‌ಗೆ ಜಾಮೀನು ಇಲ್ಲ

Hubballi: ಕಳೆದ 1 ವರ್ಷ 4 ತಿಂಗಳಿಂದ ಧಾರವಾಡ ಕಾರಾಗೃಹದಲ್ಲಿರುವ ಫಯಾಜ್‌ಗೆ ಜಾಮೀನಿನ ಮೇಲೆ ಹೊರಬರುವ ಪ್ರಯತ್ನಕ್ಕೆ ಹಿನ್ನಡೆಯಾಗಿದೆ. ಜಾಮೀನು ಅರ್ಜಿ ತಿರಸ್ಕಾರಗೊಂಡ ಹಿನ್ನೆಲೆ ನೇಹಾ ಪೋಷಕರು ನಿಟ್ಟುಸಿರು ಬಿಡುವಂತಾಗಿದೆ. ಫಯಾಜ್‌ ಪರ ವಕೀಲರು ಹೈಕೋರ್ಟ್ ಮೊರೆ ಹೋಗಲು ನಿರ್ಧರಿಸಿದ್ದಾರೆ.

ನೇಹಾ ಹಿರೇಮಠ್ ಕೊಲೆ ಆರೋಪಿ ಫಯಾಜ್‌ಗೆ ಜಾಮೀನು ಇಲ್ಲ

ಕೊಲೆ ಆರೋಪಿ ಫಯಾಜ್‌, ನೇಹಾ ಹಿರೇಮಠ

ಹರೀಶ್‌ ಕೇರ ಹರೀಶ್‌ ಕೇರ Aug 5, 2025 9:28 AM

ಹುಬ್ಬಳ್ಳಿ: ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಹುಬ್ಬಳ್ಳಿಯ (Hubballi) ನೇಹಾ ಹಿರೇಮಠ್ ಹತ್ಯೆ ಪ್ರಕರಣದ (Neha Hiremath murder case) ಆರೋಪಿ ಫಯಾಜ್‍ಗೆ ಜಾಮೀನು ನೀಡಲು ಕೋರ್ಟ್‌ ನಿರಾಕರಿಸಿದೆ. ಆಗಸ್ಟ್ 4ರಂದು ಜಾಮೀನು ಅರ್ಜಿ ವಿಚಾರಣೆ ನಡೆಸಿದ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಜಾಮೀನು ಅರ್ಜಿ ತಿರಸ್ಕರಿಸಿ ಆದೇಶ ಹೊರಡಿಸಿದ್ದಾರೆ. ಆ ಮೂಲಕ ಆರೋಪಿ ಫಯಾಜ್‌ಗೆ ಜೈಲೇ ಫಿಕ್ಸ್ ಆಗಿದೆ.

ಸುದೀರ್ಘ ವಾದ-ಪ್ರತಿವಾದಗಳನ್ನು ನ್ಯಾಯಾಧೀಶರು ಆಲಿಸಿದರು. ಪೊಲೀಸರು ಬಂಧನ ಪ್ರಕ್ರಿಯೆ ಸರಿಯಾಗಿ ಮಾಡಿಲ್ಲ. ಪೋಷಕರಿಗೆ ಯಾವುದೇ ಮಾಹಿತಿ ನೀಡಿಲ್ಲ. ಈ ಆಧಾರದಲ್ಲಿ ಫಯಾಜ್‌ಗೆ ಜಾಮೀನು ನೀಡುವಂತೆ ಫಯಾಜ್ ಪರ ವಕೀಲರು ಮನವಿ ಮಾಡಿದ್ದರು. ಆದರೆ ಫಯಾಜ್ ಜಾಮೀನು ಅರ್ಜಿಯನ್ನು ನ್ಯಾಯಾಧೀಶರು ತಿರಸ್ಕರಿಸಿದ್ದಾರೆ.

ಕಳೆದ 1 ವರ್ಷ 4 ತಿಂಗಳಿಂದ ಧಾರವಾಡ ಕಾರಾಗೃಹದಲ್ಲಿರುವ ಫಯಾಜ್‌ಗೆ ಜಾಮೀನಿನ ಮೇಲೆ ಹೊರಬರುವ ಪ್ರಯತ್ನಕ್ಕೆ ಹಿನ್ನಡೆಯಾಗಿದೆ. ಜಾಮೀನು ಅರ್ಜಿ ತಿರಸ್ಕಾರಗೊಂಡ ಹಿನ್ನೆಲೆ ನೇಹಾ ಪೋಷಕರು ನಿಟ್ಟುಸಿರು ಬಿಡುವಂತಾಗಿದೆ. ಫಯಾಜ್‌ಗೆ ಜಾಮೀನು ಅರ್ಜಿ ನಿರಾಕರಿಸಿರುವ ಹಿನ್ನೆಲೆ ಆತನ ಪರ ವಕೀಲರು ಹೈಕೋರ್ಟ್ ಮೊರೆ ಹೋಗಲು ನಿರ್ಧರಿಸಿದ್ದಾರೆ.

ನೇಹಾ ಹಿರೇಮಠ ಕೇಸ್‌ಗೆ ಸಂಬಂಧಿಸಿದ ವಿಚಾರಣೆಯನ್ನು ಕೋರ್ಟ್‌ ಆಗಸ್ಟ್ 6ಕ್ಕೆ ಮುಂದೂಡಿದೆ. ಆಗಸ್ಟ್ 6ರಂದು ಫಯಾಜ್‌ನನ್ನು ಖುದ್ದು ನ್ಯಾಯಾಲಯದಲ್ಲಿ ಹಾಜರಿರುವಂತೆ ನ್ಯಾಯಾಧೀಶರು ಸೂಚನೆ ನೀಡಿದ್ದಾರೆ.

ಆರೋಪಿ ಫಯಾಜ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಕೋರ್ಟ್​ ವಜಾ ಮಾಡಿದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ನೇಹಾ ತಂದೆ ನಿರಂಜನ ಹಿರೇಮಠ, ನಮಗೆ ಮೊದಲ ಜಯ ಸಿಕ್ಕಿದೆ, ನೇಹಾ ಆತ್ಮಕ್ಕೆ ಶಾಂತಿ ಸಿಕ್ಕಿದೆ. ವಾಮಮಾರ್ಗದ ಮೂಲಕ ಜಾಮೀನು ಪಡೆಯಲು ಯತ್ನ ನಡೆದಿತ್ತು. ಮತ್ತೆ ಯಾರ ಕೊಲೆಗೆ ಸಂಚು ರೂಪಿಸಿದ್ದನೋ ಏನೋ. ಎಲ್ಲರ ಹೋರಾಟಕ್ಕೆ ಮೊದಲ ಹಂತದಲ್ಲಿ ನ್ಯಾಯ ಸಿಕ್ಕಿದೆ. ನಮಗೆ ನ್ಯಾಯ ಸಿಗುತ್ತದೆ ಅನ್ನೋ ಭರವಸೆ ಮೂಡಿದೆ. ಆರೋಪಿ ಫಯಾಜ್​ಗೆ ಬೇಗನೆ ಗಲ್ಲು ಶಿಕ್ಷೆಯಾಗಬೇಕು ಎಂದರು.

ಇದನ್ನೂ ಓದಿ: ನೇಹಾ ಹಿರೇಮಠ ಹತ್ಯೆಯಾಗಿ 1 ವರ್ಷ: ಶ್ರೀರಾಮ ಸೇನೆಯಿಂದ ಮಹಿಳೆಯರಿಗೆ ತ್ರಿಶೂಲ ದೀಕ್ಷೆ