ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

Physical Assault: ಮಹಿಳೆ ಮೇಲೆ ಅತ್ಯಾಚಾರ ಮಾಡಿ ಕೊಲ್ಲುವುದಾಗಿ ಬೆದರಿಕೆ ಹಾಕಿದ ಬಿಜೆಪಿ ನಾಯಕಿಯ ಪತಿ

ಬಿಜೆಪಿ ಕೌನ್ಸಿಲರ್ ಒಬ್ಬರ ಪತಿ ಮಹಿಳೆಯೊಬ್ಬರ ಮೇಲೆ ಚಾಕು ತೋರಿಸಿ ಅತ್ಯಾಚಾರ ಎಸಗಿ, ಅದರ ವಿಡಿಯೋ ಮಾಡಿ, ನಂತರ ಅದನ್ನು ತೋರಿಸಿ ಪದೇ ಪದೇ ಲೈಂಗಿಕ ಸಂಬಂಧ ಹೊಂದುವಂತೆ ಬೆದರಿಕೆ ಹಾಕಿದ ಘಟನೆ ಮಧ್ಯಪ್ರದೇಶದ ಸತ್ನಾ ಜಿಲ್ಲೆಯಲ್ಲಿ ನಡೆದಿದೆ.

ಸಾಂದರ್ಭಿಕ ಚಿತ್ರ

ಭೋಪಾಲ್‌: ಬಿಜೆಪಿ ಕೌನ್ಸಿಲರ್ ಒಬ್ಬರ ಪತಿ ಮಹಿಳೆಯೊಬ್ಬರ ಮೇಲೆ ಚಾಕು ತೋರಿಸಿ ಅತ್ಯಾಚಾರ ಎಸಗಿ, ಅದರ ವಿಡಿಯೋ ಮಾಡಿ, ನಂತರ ಅದನ್ನು (Physical Assault) ತೋರಿಸಿ ಪದೇ ಪದೇ ಲೈಂಗಿಕ ಸಂಬಂಧ ಹೊಂದುವಂತೆ ಬೆದರಿಕೆ ಹಾಕಿದ ಘಟನೆ ಮಧ್ಯಪ್ರದೇಶದ (Madhya Pradesh) ಸತ್ನಾ ಜಿಲ್ಲೆಯಲ್ಲಿ ನಡೆದಿದೆ. ವ್ಯಕ್ತಿಯ ಕಾಟಕ್ಕೆ ಬೇಸತ್ತ ಮಹಿಳೆ ಆತನ ಬಳಿ ಮಾತನಾಡುವ ವಿಡಿಯೋ ಒಂದನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾಳೆ. ಅದರದಲ್ಲಿ ಆತ ನೀನು ನನಗೇನೂ ಮಾಡಲಾಗುವುದಿಲ್ಲ ಎಂದು ಬೆದರಿಕೆ ಹಾಕಿದ್ದಾನೆ.

ವ್ಯಕ್ತಿಯನ್ನು ಅಶೋಕ್ ಸಿಂಗ್ ಎಂದು ಗುರುತಿಸಲಾಗಿದ್ದು, ಈತ ರಾಂಪುರ ಬಘೇಲನ್ ನಗರ ಪರಿಷತ್ತಿನ ಬಿಜೆಪಿ ಕೌನ್ಸಿಲರ್ ಎಂದು ತಿಳಿದು ಬಂದಿದೆ. ಸಿಂಗ್ ಪೊಲೀಸ್ ಅಧಿಕಾರಿಯನ್ನು ನಿಂದಿಸುತ್ತಿರುವ ಮತ್ತು ಸಂತ್ರಸ್ತ ಮಹಿಳೆಗೆ ಬೆದರಿಕೆ ಹಾಕುತ್ತಿರುವ ವೀಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗಿದ್ದು, ಇದು ಆಕ್ರೋಶಕ್ಕೆ ಕಾರಣವಾಗಿದೆ. ವೈರಲ್ ಆಗಿರುವ ಈ ಕ್ಲಿಪ್‌ನಲ್ಲಿ, ಆರೋಪಿಯು "ನನಗೆ ಏನಾಗುತ್ತದೆ? ಏನೂ ಆಗುವುದಿಲ್ಲ. ನೀವು ಎಲ್ಲಿ ಬೇಕಾದರೂ ದೂರು ನೀಡಿ, ನನಗೆ ಏನೂ ಆಗುವುದಿಲ್ಲ" ಎಂದು ಹೇಳುತ್ತಿರುವುದು ಕೇಳಿಬರುತ್ತಿದೆ. ಆದರೆ ಹಿನ್ನೆಲೆಯಲ್ಲಿ ಮಹಿಳೆ ಅಳುತ್ತಾ ದೂರು ದಾಖಲಿಸುವ ಬಗ್ಗೆ ಮಾತನಾಡುತ್ತಿರುವುದು ಕೇಳಿಸುತ್ತದೆ.

ಅಪರಾಧ ಸುಮಾರು ಆರು ತಿಂಗಳ ಹಿಂದೆ ನಡೆದಿದ್ದು, ತನ್ನ ಜೀವ ಮತ್ತು ಕುಟುಂಬಕ್ಕೆ ಬೆದರಿಕೆ ಇರುವುದರಿಂದ ತಾನು ಮೌನವಾಗಿದ್ದೇನೆ ಎಂದು ಆರೋಪಿಸಿ ಮಹಿಳೆ ಸೋಮವಾರ ಸತ್ನಾ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಹಂಸರಾಜ್ ಸಿಂಗ್ ಅವರಿಗೆ ಲಿಖಿತ ದೂರು ಸಲ್ಲಿಸಿದರು. ಎಸ್‌ಪಿ ತಕ್ಷಣ ತನಿಖೆಯನ್ನು ಉಪ ಪೊಲೀಸ್ ವರಿಷ್ಠಾಧಿಕಾರಿ ಮನೋಜ್ ತ್ರಿವೇದಿ ಅವರಿಗೆ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ. ಮಹಿಳೆಯ ಪ್ರಕಾರ, ಕರ್ಹಿ ನಿವಾಸಿ ಅಶೋಕ್ ಸಿಂಗ್ ಆಕೆಯ ಮನೆಗೆ ನುಗ್ಗಿ, ಚಾಕು ತೋರಿಸಿ ಆಕೆಯ ಮೇಲೆ ಅತ್ಯಾಚಾರ ಎಸಗಿ, ತನ್ನ ಮೊಬೈಲ್ ಫೋನ್‌ನಲ್ಲಿ ಕೃತ್ಯವನ್ನು ರೆಕಾರ್ಡ್ ಮಾಡಿಕೊಂಡಿದ್ದಲ್ಲದೆ, ಘಟನೆಯ ಬಗ್ಗೆ ಹೇಳಿದರೆ ಆಕೆ ಮತ್ತು ಆಕೆಯ ಕುಟುಂಬವನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದ.

ಭೂಗತ ಪಾತಕಿಯ ಮಗಳಾದರೂ ಲೈಂಗಿಕ ದೌರ್ಜನ್ಯ ಅನುಭವಿಸಿದ್ದೇನೆ ಎಂದ ಹಸೀನ್ ಮಸ್ತಾನ್ ಮಿರ್ಜಾ

ಸಿಂಗ್ ಅಪರಾಧ ಹಿನ್ನೆಲೆಯುಳ್ಳವನಾಗಿದ್ದು, ಈ ಹಿಂದೆ ಜಿಲ್ಲೆಯಿಂದ ಬಹಿಷ್ಕರಿಸಲ್ಪಟ್ಟಿದ್ದ ಎಂದು ಆಕೆ ಹೇಳಿಕೊಂಡಿದ್ದಾಳೆ. ಸಿಂಗ್ ನಿಯಮಿತವಾಗಿ ತನ್ನ ಅಂಗಡಿಗೆ ಬರುತ್ತಾನೆ, ಅವಳನ್ನು ನಿಂದಿಸುತ್ತಾನೆ ಮತ್ತು ಬೆದರಿಕೆ ಹಾಕುತ್ತಾನೆ ಎಂದು ಆಕೆ ದೂರಿನಲ್ಲಿ ಉಲ್ಲೇಖಿಸಿದ್ದಾಳೆ.

Vishakha Bhat Heggar

View all posts by this author