ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Om Prakash Murder Case: ನಿವೃತ್ತ ಡಿಜಿಪಿ ಓಂ ಪ್ರಕಾಶ್ ಹತ್ಯೆ ಕೇಸ್: ಸಿಸಿಬಿಯಿಂದ ಪುತ್ರಿ ಕೃತಿಕಾಗೆ ಕ್ಲೀನ್ ಚಿಟ್

Charge sheet: ಚಾರ್ಜ್ ಶೀಟ್‌ನಲ್ಲಿ ಓಂ ಪ್ರಕಾಶ್ ಪುತ್ರಿ ಕೃತಿಕಾ ಹೆಸರು ಕೈಬಿಡಲಾಗಿದ್ದು, ತನಿಖೆ ವೇಳೆ ಕೊಲೆಯಲ್ಲಿ ಕೃತಿಕಾ ಪಾತ್ರ ಕಂಡುಬಾರದ ಹಿನ್ನೆಲೆಯಲ್ಲಿ ಕ್ಲೀನ್ ಚಿಟ್ ನೀಡಲಾಗಿದೆ. ಕೊಲೆ ವೇಳೆ ಕೃತಿಕಾ ಮನೆಯ ಮೇಲ್ಮಹಡಿಯಲ್ಲಿದ್ದರು. ಕೊಲೆಯಲ್ಲಿ ಭಾಗಿಯಾದ ಬಗ್ಗೆ ಸೂಕ್ತ ಸಾಕ್ಷ್ಯಗಳ ಕೊರತೆ ಹಿನ್ನೆಲೆಯಲ್ಲಿ ಸಿಸಿಬಿ ಪೊಲೀಸರು ಕ್ಲೀನ್ ಚಿಟ್ ನೀಡಿದ್ದಾರೆ.

ನಿವೃತ್ತ ಡಿಜಿಪಿ ಓಂ ಪ್ರಕಾಶ್ ಹತ್ಯೆ ಕೇಸ್: ಪುತ್ರಿ ಕೃತಿಕಾಗೆ ಕ್ಲೀನ್ ಚಿಟ್

ಓಂ ಪ್ರಕಾಶ್‌, ಕೃತಿಕಾ

ಹರೀಶ್‌ ಕೇರ ಹರೀಶ್‌ ಕೇರ Aug 13, 2025 9:47 AM

ಬೆಂಗಳೂರು : ಬೆಂಗಳೂರಿನಲ್ಲಿ (Bengaluru crime news) ಕರ್ನಾಟಕದ ನಿವೃತ್ತ ಡಿಜಿ ಮತ್ತು ಐಜಿಪಿ ಓಂ ಪ್ರಕಾಶ್ ಅವರ ಕೊಲೆ (Om Prakash Murder Case) ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಸಿಸಿಬಿ ಪೊಲೀಸರು (CCB police) ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಪ್ರಕರಣದ ತನಿಖೆ ನಡೆಸಿರುವ ಸಿಸಿಬಿ ಪೊಲೀಸರು ಬೆಂಗಳೂರಿನ 1ನೇ ಎಸಿಎಂಎಂ ನ್ಯಾಯಾಲಯಕ್ಕೆ 1,150 ಪುಟಗಳ ಚಾರ್ಜ್ ಶೀಟ್ ಸಲ್ಲಿಸಿದ್ದು, ಓಂ ಪ್ರಕಾಶ್ ಕೊಲೆ ಪ್ರಕರಣದಲ್ಲಿ ಮಗಳಿಗೆ ಕ್ಲೀನ್ ಚಿಟ್ ನೀಡಿದ್ದಾರೆ.

ಚಾರ್ಜ್ ಶೀಟ್‌ನಲ್ಲಿ ಓಂ ಪ್ರಕಾಶ್ ಪುತ್ರಿ ಕೃತಿಕಾ ಹೆಸರು ಕೈಬಿಡಲಾಗಿದ್ದು, ತನಿಖೆ ವೇಳೆ ಕೊಲೆಯಲ್ಲಿ ಕೃತಿಕಾ ಪಾತ್ರ ಕಂಡುಬಾರದ ಹಿನ್ನೆಲೆಯಲ್ಲಿ ಕ್ಲೀನ್ ಚಿಟ್ ನೀಡಲಾಗಿದೆ. ಕೊಲೆ ವೇಳೆ ಕೃತಿಕಾ ಮನೆಯ ಮೇಲ್ಮಹಡಿಯಲ್ಲಿದ್ದರು. ಕೊಲೆಯಲ್ಲಿ ಭಾಗಿಯಾದ ಬಗ್ಗೆ ಸೂಕ್ತ ಸಾಕ್ಷ್ಯಗಳ ಕೊರತೆ ಹಿನ್ನೆಲೆಯಲ್ಲಿ ಸಿಸಿಬಿ ಪೊಲೀಸರು ಕ್ಲೀನ್ ಚಿಟ್ ನೀಡಿದ್ದಾರೆ.

ಏಪ್ರಿಲ್ 22ರಂದು ನಿವೃತ್ತ ಐಜಿ ಮತ್ತು ಡಿಜಿಪಿ ಓಂ ಪ್ರಕಾಶ್ ಅವರನ್ನು ಪತ್ನಿಯೇ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ್ದರು. ಈ ಪ್ರಕರಣವನ್ನು ರಾಜ್ಯ ಸರ್ಕಾರವು ಸಿಸಿಬಿಗೆ ವರ್ಗಾವಣೆ ಮಾಡಿ ಆದೇಶಿಸಿತ್ತು. ಹೆಚ್ ಎಸ್ ಆರ್ ಲೇಔಟ್‌ನಲ್ಲಿರುವ ಅವರ ಮನೆಯಲ್ಲಿ ರಕ್ತದ ಮಡುವಿನಲ್ಲಿ ಓಂ ಪ್ರಕಾಶ್ ಅವರ ಮೃತದೇಹ ಪತ್ತೆಯಾಗಿತ್ತು. ತನಿಖೆ ನಡೆಸಿದ ಪೊಲೀಸರಿಗೆ ಸ್ಥಳದಲ್ಲಿ ಖಾರದಪುಡಿ ಡಬ್ಬಿ, ಚಾಕು ಪತ್ತೆಯಾಗಿತ್ತು. ಈ ಸಂಬಂಧ ಪೊಲೀಸರು ಪತ್ನಿ ಪಲ್ಲವಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು.

ಕೊಲೆಯ ಬಳಿಕ ಓಂಪ್ರಕಾಶ್‌ ಪತ್ನಿ ಹಾಗೂ ಪುತ್ರಿ ಇಬ್ಬರೂ ಮಾನಸಿಕವಾಗಿ ಅಸ್ಥಿರರಾಗಿರುವುದು ಕಂಡುಬಂದಿತ್ತು. ಪತ್ನಿ ಈಗಾಗಲೇ ಜೈಲುಪಾಲಾಗಿದ್ದಾರೆ. ಕೃತಿಯ ಅತಿಯಾದ ವರ್ತನೆಯಿಂದ ಬೇಸತ್ತು ಬಂಧುಬಳಗದವರು, ಸ್ನೇಹಿತರು ಆಕೆಯಿಂದ ದೂರವಾಗಿದ್ದಾರೆ. ಮನೆಯ ಸುತ್ತಮುತ್ತಲಿನವರು ಹಾಗೂ ಅಂಗಡಿಯವರು ಕೂಡ ಈಕೆಯ ವರ್ತನೆಯಿಂದ ರೋಸಿಹೋಗಿದ್ದು, ಅಂತರ ಕಾಪಾಡಿಕೊಂಡಿದ್ದಾರೆ. ಮಾನಸಿಕ ಖಿನ್ನತೆಗೆ ಒಳಗಾಗಿರುವ ಕೃತಿಯನ್ನು ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಬೇಕಿದೆ ಎಂದು ಅಕ್ಕಪಕ್ಕದವರು ಆಗ್ರಹಿಸಿದ್ದಾರೆ. ಇತ್ತೀಚೆಗೆ ಅವರು ನಂದಿನಿ ಹಾಲಿನ ಬೂತ್‌ನಲ್ಲಿ ರಂಪಾಟ ಎಬ್ಬಿಸಿ ಸ್ವತ್ತುಗಳಿಗೆ ಹಾನಿ ಎಸಗಿದ್ದರು.

ಇದನ್ನೂ ಓದಿ: Om Prakash Murder Case: ಕತ್ತು ಸೀಳಿ ಕೊಲ್ಲುವುದು ಹೇಗೆ ಎಂದು ಇಂಟರ್‌ನೆಟ್‌ನಲ್ಲಿ ಸರ್ಚ್‌ ಮಾಡಿದ್ದ ಓಂ ಪ್ರಕಾಶ್‌ ಪತ್ನಿ