ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಪಾಗಲ್ ಪ್ರೇಮಿಯ ಅಟ್ಟಹಾಸ: ಬಾಲಕಿ ಮೇಲೆ ಕೊಡಲಿಯಿಂದ ದಾಳಿ, ಛಾವಣಿಯಿಂದ ತಳ್ಳಿದ ದುಷ್ಕರ್ಮಿ

ಮಧ್ಯ ಪ್ರದೇಶದ ಶಿವಪುರಿ ಜಿಲ್ಲೆಯಲ್ಲಿ ಪಾಗಲ್‌ ಪ್ರೇಮಿಯೊಬ್ಬ 17 ವರ್ಷದ ಬಾಲಕಿಯ ಮೇಲೆ ಕೊಡಲಿಯಿಂದ ದಾಳಿ ನಡೆಸಿ, ಮನೆಯ ಛಾವಣಿಯಲ್ಲಿ ನೇಣು ಹಾಕಲು ಯತ್ನಿಸಿ ಬಳಿಕ ಕೆಳಗೆ ತಳ್ಳಿದ ಭೀಕರ ಘಟನೆ ನಡೆದಿದೆ. ಗಂಭೀರವಾಗಿ ಗಾಯಗೊಂಡ ಬಾಲಕಿಯನ್ನು ಗ್ವಾಲಿಯರ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬಾಲಕಿಯ ಮೇಲೆ ಅಮಾನುಷ ಹಲ್ಲೆ, ಆರೋಪಿ ಬಂಧನ

ಬಂಧಿತ ಆರೋಪಿ ಧರ್ಮೇಂದ್ರ ಪರಿಹಾರ್ -

Profile
Sushmitha Jain Jun 6, 2026 11:35 PM

ಭೋಪಾಲ್, ಜೂ. 6: ಮಧ್ಯ ಪ್ರದೇಶದ (Madhya Pradesh) ಶಿವಪುರಿ ಜಿಲ್ಲೆಯ (Shivpuri district) ಚಂದಾವಳಿ ಗ್ರಾಮದಲ್ಲಿ ಶುಕ್ರವಾರ ಬೆಚ್ಚಿಬೀಳಿಸುವ ಘಟನೆ ನಡೆದಿದೆ. ಪ್ರೇಮಿಯೊಬ್ಬ 17 ವರ್ಷದ ಬಾಲಕಿಯ ಮೇಲೆ ಕೊಡಲಿಯಿಂದ ದಾಳಿ ನಡೆಸಿ, ಆಕೆಯನ್ನು ಮನೆಯ ಛಾವಣಿಯಿಂದ ನೇಣು ಹಾಕಲು ಯತ್ನಿಸಿ, ಬಳಿಕ ಕೆಳಗೆ ತಳ್ಳಿರುವ ಘಟನೆ ಬೆಳಕಿಗೆ ಬಂದಿದೆ. ಬೆಳಗ್ಗೆ ಸುಮಾರು 8 ಗಂಟೆಗೆ ಈ ಘಟನೆ ನಡೆದಿದ್ದು, ಬಾಲಕಿಯ ಕುಟುಂಬದವರು ಹೊಲಕ್ಕೆ ತೆರಳಿದ್ದ ವೇಳೆ ಆಕೆ ಮನೆಯಲ್ಲಿ ಒಬ್ಬಳೇ ಇದ್ದಳು. ಈ ವೇಳೆ ಧರ್ಮೇಂದ್ರ ಪರಿಹಾರ್ ಎಂಬ ಆರೋಪಿ ಮನೆಗೆ ನುಗ್ಗಿ ಬಾಲಕಿಯ ಮೇಲೆ ಕೊಡಲಿಯಿಂದ ಹಲ್ಲೆ ನಡೆಸಿದ್ದಾನೆ. ದಾಳಿಯಿಂದ ಬಾಲಕಿ ಗಂಭೀರವಾಗಿ ಗಾಯಗೊಂಡಿದ್ದಾಳೆ.

ಪ್ರಾಣ ಉಳಿಸಿಕೊಳ್ಳಲು ಬಾಲಕಿ ಮನೆಯ ಛಾವಣಿಗೆ ಓಡಿ ಹೋಗಿದ್ದಾಳೆ. ಆದರೆ ಆರೋಪಿ ಅಲ್ಲಿಗೂ ಹೋಗಿ, ಆಕೆಯ ಕುತ್ತಿಗೆಗೆ ಹಗ್ಗ ಕಟ್ಟಿ ನೇಣು ಹಾಕಲು ಯತ್ನಿಸಿದ್ದಾನೆ. ಘಟನೆಗೆ ಸಂಬಂಧಿಸಿದ ವಿಡಿಯೊದಲ್ಲಿ ಬಾಲಕಿ ರಕ್ತಸ್ರಾವವಾಗುತ್ತಿದ್ದರೂ ಆರೋಪಿ ಆಕೆಯನ್ನು ನೇಣು ಹಾಕಲು ಯತ್ನಿಸುತ್ತಿರುವುದು ಕಂಡುಬಂದಿದೆ. ಬಳಿಕ ಹಗ್ಗವನ್ನು ಬಿಟ್ಟುಬಿಟ್ಟ ಪರಿಣಾಮ ಬಾಲಕಿ ಕೆಳಗೆ ಬಿದ್ದಿದ್ದಾಳೆ.

ಬಾಲಕಿಯ ಕಿರುಚಾಟ ಕೇಳಿ ಸ್ಥಳೀಯರು ಸ್ಥಳಕ್ಕೆ ಧಾವಿಸಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಆಕೆಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಗ್ವಾಲಿಯರ್ ನಗರಕ್ಕೆ ರವಾನಿಸಲಾಗಿದೆ. ಆಕೆಯ ಸ್ಥಿತಿ ಚಿಂತಾಜನಕವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಪಿಎಚ್‌ಡಿ ಆಮಿಷ ತೋರಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ; ಧಾರವಾಡ ವಿವಿ ಪ್ರೊಫೆಸರ್‌ ವಿರುದ್ಧ ಗಂಭೀರ ಆರೋಪ

ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಆಗಮಿಸಿ ಆರೋಪಿ ಧರ್ಮೇಂದ್ರ ಪರೀಹಾರನನ್ನು ಬಂಧಿಸಿದ್ದಾರೆ. ತನಿಖೆ ಮುಂದುವರಿದಿದೆ ಎಂದು ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸಂಜೀವ್ ಮೂಲ್ ತಿಳಿಸಿದ್ದಾರೆ.

ಘಟನೆಯ ವಿರುದ್ಧ ಆಕ್ರೋಶಗೊಂಡ ಗ್ರಾಮಸ್ಥರು ಹಾಗೂ ಬಾಲಕಿಯ ಸಂಬಂಧಿಕರು ಆರೋಪಿಗೆ ಕಠಿಣ ಶಿಕ್ಷೆ ನೀಡುವಂತೆ ಆಗ್ರಹಿಸಿ ಹಲವು ಗಂಟೆಗಳ ಕಾಲ ರಸ್ತೆ ತಡೆ ನಡೆಸಿದರು. ಪ್ರತಿಭಟನೆಯಿಂದ ಸಂಚಾರದಲ್ಲಿ ವ್ಯತ್ಯಯ ಉಂಟಾಗಿತ್ತು. ಬಳಿಕ ಹಿರಿಯ ಪೊಲೀಸ್ ಹಾಗೂ ಆಡಳಿತಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಕಠಿಣ ಕಾನೂನು ಕ್ರಮದ ಭರವಸೆ ನೀಡಿದ ನಂತರ ಪ್ರತಿಭಟನೆಯನ್ನು ಹಿಂಪಡೆಯಲಾಯಿತು. ಈ ಘಟನೆ ಪ್ರದೇಶದ ಜನರಲ್ಲಿ ತೀವ್ರ ಆಕ್ರೋಶ ಮತ್ತು ಆತಂಕಕ್ಕೆ ಕಾರಣವಾಗಿದೆ.