Pakistan Spy Arrest: ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡುತ್ತಿದ್ದ ವ್ಯಕ್ತಿ ಬೆಂಗಳೂರಿನಲ್ಲಿ ಬಂಧನ
ಕೇಂದ್ರ ಮತ್ತು ರಾಜ್ಯ ಗುಪ್ತಚರ ಅಧಿಕಾರಿಗಳು, ಮಿಲಿಟರಿ ಇಂಟಲಿಜೆನ್ಸ್ ಅಧಿಕಾರಿಗಳು ಜಂಟಿಯಾಗಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿವೆ. ಬಿಇಎಲ್ನ ಪ್ರಾಡಕ್ಟ್ ಡೆವಲಪ್ಮೆಂಟ್ ಆ್ಯಂಡ್ ಇನ್ನೋವೇಶನ್ ಸೆಂಟರ್ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದು, ದೇಶದ ಗುಪ್ತ ರಕ್ಷಣಾ ಮಾಹಿತಿಗಳನ್ನು ಸಂಗ್ರಹಿಸಿ ಪಾಕಿಸ್ತಾನಕ್ಕೆ ರವಾನಿಸುತ್ತಿದ್ದ ಎನ್ನಲಾಗಿದೆ.

ಸಾಂದರ್ಭಿಕ ಚಿತ್ರ

ಬೆಂಗಳೂರು: ದೇಶದ ಗುಪ್ತ ರಕ್ಷಣಾ ಮಾಹಿತಿಗಳನ್ನು ಸಂಗ್ರಹಿಸಿ ಪಾಕಿಸ್ತಾನಕ್ಕೆ ರವಾನಿಸುತ್ತಿದ್ದ ಗೂಢಚಾರನೊಬ್ಬನನ್ನು (Pakistan Spy) ಬೆಂಗಳೂರಿನಲ್ಲಿ (Bengaluru) ಬಂಧಿಸಲಾಗಿದೆ. ಗುಪ್ತಚರ ಇಲಾಖೆ (Intelligence Department) ಹಾಗೂ ಸೇನಾ ಇಂಟಲಿಜೆನ್ಸ್ (Military Intelligence) ವಿಭಾಗ ನಡೆಸಿದ ಮಹತ್ವದ ಕಾರ್ಯಾಚರಣೆಯೊಂದರಲ್ಲಿ ಈತನನ್ನು ಸೆರೆಹಿಡಿಯಲಾಗಿದೆ. ಬಂಧಿತನನ್ನು ದೀಪ್ ರಾಜ್ ಚಂದ್ರ ಎಂದು ಗುರುತಿಸಲಾಗಿದ್ದು, ಈತ ಭಾರತ್ ಎಲೆಕ್ಟ್ರಾನಿಕ್ಸ್‌ನಲ್ಲಿ ಕೆಲಸ ಮಾಡುತ್ತಿದ್ದ.
ಬಿಇಎಲ್ನಲ್ಲಿ ಕೆಲಸ ಮಾಡುತ್ತಿದ್ದ ದೀಪ್ ರಾಜ್ ಚಂದ್ರ ಮೂಲತಃ ಉತ್ತರಪ್ರದೇಶದ ಗಾಜಿಯಾಬಾದ್ ನಿವಾಸಿ. ಈತ ಬಿಇಎಲ್ನ ಪ್ರಾಡಕ್ಟ್ ಡೆವಲಪ್ಮೆಂಟ್ ಆ್ಯಂಡ್ ಇನ್ನೋವೇಶನ್ ಸೆಂಟರ್ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ. ಬೆಂಗಳೂರಿನ ಮತ್ತಿಕೆರೆ ಬಳಿ ನೆಲೆಸಿದ್ದ. ಈತ ಬಿಇಎಲ್ನಿಂದ ರಕ್ಷಣಾ ವಿಚಾರಗಳನ್ನು ಪಾಕಿಸ್ತಾನಕ್ಕೆ ರವಾನಿಸುತ್ತಿದ್ದ ಎಂಬ ಆರೋಪವಿದೆ. ಕೇಂದ್ರ ಮತ್ತು ರಾಜ್ಯ ಗುಪ್ತಚರ ಅಧಿಕಾರಿಗಳು, ಮಿಲಿಟರಿ ಇಂಟಲಿಜೆನ್ಸ್ ಅಧಿಕಾರಿಗಳು ಜಂಟಿಯಾಗಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿವೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.
ಮರಳು ಲಾರಿ ಡಿಕ್ಕಿ ಹೊಡೆದು ಬೈಕ್ ಸವಾರರಿಬ್ಬರ ಸಾವು
ಕೊಪ್ಪಳ: ಅಕ್ರಮವಾಗಿ ಮರಳು (sand mafia) ಸಾಗಿಸುತ್ತಿದ್ದ ಟಿಪ್ಪರ್ ಹರಿದು (Road Accident News) ಬೈಕ್ ಸವಾರರಿಬ್ಬರು (bike riders) ಸಾವನ್ನಪ್ಪಿರುವ ಘಟನೆ ಕೊಪ್ಪಳ (Koppala News) ಜಿಲ್ಲೆಯ ಕನಕಗಿರಿ ತಾಲೂಕಿನ ನವಲಿ ಬಳಿ ನಡೆದಿದೆ. ರಮೇಶ ಜವಳಗೇರಿ (27), ಸಿದ್ದಪ್ಪ ಪ್ಯಾಟ್ಯಾಳ್ (34) ಮೃತ ಯುವಕರು. ಸಾವನ್ನಪ್ಪಿರುವ ಇಬ್ಬರು ಯುವಕರು ಕನಕಗಿರಿ ತಾಲೂಕಿನ ಗುಡೂರಿನ ನಿವಾಸಿಗಳಾಗಿದ್ದು, ಇಂದು ಬೈಕ್ ಮೇಲೆ ಹೋಗುತ್ತಿದ್ದ ವೇಳೆ ಮರಳು ತುಂಬಿದ ಟಿಪ್ಪರ್ ಹರಿದಿದೆ. ಪರಿಣಾಮ ಟಿಪ್ಪರ್ ಕೆಳಗೆ ಸಿಲುಕಿ ಯುವಕರ ದೇಹ ಛಿದ್ರವಾಗಿದೆ.
ನವಲಿ ಕಡೆಯಿಂದ ಗುಡೂರಿಗೆ ತೆರಳುವ ಮಾರ್ಗ ಮಧ್ಯದಲ್ಲಿ ಈ ಭೀಕರ ಅಪಘಾತ ಸಂಭವಿಸಿದ್ದು, ಇಬ್ಬರು ಯುವಕರ ಪೈಕಿ ಒಬ್ಬನ ಮೃತದೇಹ ಛಿದ್ರ ಛಿದ್ರವಾಗಿದೆ. ರಸ್ತೆ ತುಂಬ ದೇಹದ ಮಾಂಸ ಚೆಲ್ಲಾಪಿಲ್ಲಿಯಾಗಿದೆ. ಮತ್ತೋರ್ವ ಯುವಕನ ತಲೆ ಛದ್ರಗೊಂಡಿದೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಹಗಲು ರಾತ್ರಿ ಎನ್ನದೇ ಇಲ್ಲಿ ಮರಳು ತುಂಬಿದ ಟಿಪ್ಪರ್ ಗಳು ಓಡಾಡುತ್ತಿದ್ದು, ಅಕ್ರಮ ಮರಳು ದಂಧೆಗೆ ಯುವಕರು ಬಲಿಯಾಗಿದ್ದಾರೆ ಎಂದು ಆರೋಪ ವ್ಯಕ್ತವಾಗಿದೆ. ಈ ಅಕ್ರಮ ಮರಳು ದಂಧೆಗೆ ಬ್ರೇಕ್ ಹಾಕಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.
ಇದನ್ನೂ ಓದಿ: Belagavi news: ಬೆಳಗಾವಿಯಲ್ಲಿ ದೇವಾಲಯಕ್ಕೆ ಕಲ್ಲು ಎಸೆದ ಯುವಕ, ವಾತಾವರಣ ಉದ್ವಿಗ್ನ