ವಿದೇಶ ಫ್ಯಾಷನ್‌ ಲೋಕ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್‌ ಹೌಸ್‌ ಸಂಪಾದಕೀಯ

Maharashtra Horror : ತಂದೆಯಿಂದಲೇ ಹೆಣ್ಣು ಮಕ್ಕಳ ಮೇಲೆ ಅತ್ಯಾಚಾರ; ಛೋಟಾ ರಾಜನ್ ಗ್ಯಾಂಗ್ ಸದಸ್ಯನ ಬಂಧನ

ಹೆಣ್ಣುಮಕ್ಕಳಿಗೆ ಅಪ್ಪನೇ ಸೂಪರ್ ಹೀರೋ ಎಂಬ ಮಾತುಗಳು ನಾವು ಹಾಗಾಗ ಕೇಳುತ್ತಿರುತ್ತೇವೆ. ಅದರಂತೆ ಹೆಣ್ಣುಮಕ್ಕಳು ಅಪ್ಪನ ಮೇಲೆ ವಿಶೇಷ ಪ್ರೀತಿಯನ್ನು ಇಟ್ಟಿರುತ್ತಾರೆ. ಆದರೆ ಇಲ್ಲಿ ನಡೆದ ಘಟನೆಯೊಂದು ಅಪ್ಪ ಎಂಬ ಪದಕ್ಕೆ ಮಸಿ ಬಳಿದಂತಿದೆ. ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯಲ್ಲಿ ತನ್ನ ಸ್ವಂತ ಹೆಣ್ಣುಮಕ್ಕಳ ಮೇಲೆ ಅತ್ಯಾಚಾರ ಎಸಗಿ ಪತ್ನಿಗೆ ಚಿತ್ರಹಿಂಸೆ ನೀಡಿದ 56 ವರ್ಷದ ವ್ಯಕ್ತಿಯನ್ನು ಶುಕ್ರವಾರ ಪೊಲೀಸರು ಬಂಧಿಸಿದ್ದಾರೆ

ತಂದೆಯಿಂದಲೇ ಹೆಣ್ಣು ಮಕ್ಕಳ ಮೇಲೆ ಅತ್ಯಾಚಾರ

ಸಾಂದರ್ಭಿಕ ಚಿತ್ರ

Profile Vishakha Bhat Mar 1, 2025 4:46 PM

ಮುಂಬೈ: ಅನ್ಯರಿಂದ, ಕೆಟ್ಟ ದೃಷ್ಟಿಯಿಂದ ಮಗಳನ್ನು ಕಾಪಾಡಬೇಕಿದ್ದ ತಂದೆಯೇ ಪೈಶಾಚಿಕ ಕೃತ್ಯ ಎಸಗಿದ್ದಾನೆ. ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯಲ್ಲಿ ತನ್ನ ಸ್ವಂತ ಹೆಣ್ಣುಮಕ್ಕಳ ಮೇಲೆ ಅತ್ಯಾಚಾರ (Maharashtra Horror) ಎಸಗಿ ಪತ್ನಿಗೆ ಚಿತ್ರಹಿಂಸೆ ನೀಡಿದ 56 ವರ್ಷದ ವ್ಯಕ್ತಿಯನ್ನು ಶುಕ್ರವಾರ ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ. ಆರೋಪಿಯನ್ನು ಮೀರಾ-ಭಯಂದರ್ ವಸೈ-ವಿರಾರ್ ಎಂದು ಗುರುತಿಸಲಾಗಿದ್ದು, ಈತ ಛೋಟಾ ರಾಜನ್ ಗ್ಯಾಂಗ್‌ನೊಂದಿಗೆ ಸಂಬಂಧ ಹೊಂದಿರುವ ಆರೋಪವನ್ನು ಎದುರಿಸುತ್ತಿದ್ದ. ಸಿಂಧುದುರ್ಗ ಜಿಲ್ಲೆಯಲ್ಲಿ ಈತನನ್ನು ಬಂಧಿಸಲಾಗಿದೆ.

2018 ರಿಂದ ಇಲ್ಲಿಯವರೆಗೆ ತನ್ನ ಇಬ್ಬರು ಹೆಣ್ಣು ಮಕ್ಕಳ ಮೇಲೆ ಈತ ಹಲವು ಬಾರಿ ಅತ್ಯಾಚಾರ ಮಾಡಿದ್ದ ಎಂದು ತಿಳಿದು ಬಂದಿದೆ. ಈ ಬಗ್ಗೆ ಆರೋಪಿಯ ಪತ್ನಿ ಪೊಲೀಸರಿಗೆ ದೂರು ಸಲ್ಲಿಸಿದ್ದು, ಇದೀಗ ಆರೋಪಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ಈ ಬಗ್ಗೆ ಮಾತನಾಡಿರುವ ಹಿರಿಯ ಇನ್ಸ್‌ಪೆಕ್ಟರ್ ಅವಿರಾಜ್ ಕುರ್ಹಾಡೆ, ಆರೋಪಿಯು 2018 ರಿಂದ ಫೆಬ್ರವರಿ 2025 ರ ನಡುವೆ ಹಲವಾರು ಬಾರಿ ತನ್ನ ಇಬ್ಬರು ಹಿರಿಯ ಹೆಣ್ಣುಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಮತ್ತು ಅವರಲ್ಲಿ ಒಬ್ಬರಿಗೆ ಗರ್ಭಪಾತ ಮಾಡಿಸಲು ಒತ್ತಾಯಿಸಿದ್ದಾನೆ ಎಂಬ ಆರೋಪವಿದೆ. ಅವನು ತನ್ನ ಹೆಂಡತಿಯನ್ನು ಹೊಡೆದು ಚಿತ್ರಹಿಂಸೆ ನೀಡಿದ್ದಾನೆ ಮತ್ತು ಹೆಣ್ಣುಮಕ್ಕಳನ್ನು ಲೈಂಗಿಕವಾಗಿ ಕಿರುಕುಳ ನೀಡಿದ್ದಾನೆ ಎಂದು ಅವರು ಹೇಳಿದ್ದಾರೆ.

13 ವರ್ಷದಿಂದಲೂ ಅತ್ಯಾಚಾರಕ್ಕೊಳಗಾಗಿದ್ದ 23 ವರ್ಷದ ಹಿರಿಯ ಮಗಳು, ಈ ಹಿಂದೆ ನಾಲ್ಕು ಬಾರಿ ಗರ್ಭಪಾತ ಮಾಡಿಸಿಕೊಳ್ಳುವಂತೆ ಒತ್ತಾಯಿಸಲಾಗಿದೆ ಎಂದು ಪೊಲೀಸರಿಗೆ ತಿಳಿಸಿದ್ದಾಳೆ. ಆಕೆಯ ಸಹೋದರಿಗೆ 10 ವರ್ಷ ತುಂಬುತ್ತಿದ್ದಂತೆ, ಆಕೆಯ ಮೇಲೆ ಕೂಡ ಲೈಂಗಿಕ ದೌರ್ಜನ್ಯ ಎಸಗಲು ಪ್ರಾರಂಭಿಸಿದ್ದಾನೆ. ಸೋಮವಾರ, ಅವರು ತಮ್ಮ ತಾಯಿಯ ಸಹೋದರಿಗೆ ಫೋನ್ ಮಾಡಿ ಸಹಾಯ ಮಾಡುವಂತೆ ಕೇಳಿದ್ದಾಳೆ.

ಈ ಸುದ್ದಿಯನ್ನೂ ಓದಿ: Pune Horror: ಪುಣೆ ಪ್ರಕರಣ; ದೀದೀ ಎಂದು ಕರೆದು ಅತ್ಯಾಚಾರ ನಡೆಸಿದ !

ದೂರಿನ ಆಧಾರದ ಮೇಲೆ, ಪೊಲೀಸರು ಆರೋಪಿಗಳ ವಿರುದ್ಧ ಭಾರತೀಯ ನ್ಯಾಯ ಸಂಹಿತಾ ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯ ಸಂಬಂಧಿತ ನಿಬಂಧನೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ತನಿಖೆಯಿಂದ ಆರೋಪಿಯ ಮೇಲೆ ಪಾಲ್ಘರ್, ಕರ್ಜತ್, ಕಂಕವ್ಲಿ ಮತ್ತು ಸಿಯಾನ್ ಪೊಲೀಸ್ ಠಾಣೆಗಳಲ್ಲಿ ಆರು ಪ್ರಕರಣಗಳು ಇರುವುದು ಬೆಳಕಿಗೆ ಬಂದಿದೆ.