ಬಿಗ್​ಬಾಸ್ ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Pavithra Gowda: ಮತ್ತೆ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ಪವಿತ್ರಾ ಗೌಡ; ಕಾರಣವೇನು?

Supreme Court: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿ ಪವಿತ್ರಾ ಗೌಡ ಆಗಿದ್ದಾರೆ. ಎ1 ಪವಿತ್ರಾ ಗೌಡ, ಎ2 ನಟ ದರ್ಶನ್ ಸೇರಿ ಎಲ್ಲಾ ಆರೋಪಿಗಳು ಜೈಲಿನಲ್ಲಿದ್ದಾರೆ. ಈ ಹಿಂದೆ ಹೈಕೋರ್ಟ್ ನೀಡಿದ್ದ ಜಾಮೀನು ರದ್ದು ಮಾಡಿ ಸುಪ್ರೀಂ ಕೋರ್ಟ್ ಆದೇಶ ನೀಡಿತ್ತು. ಮತ್ತೆ ಎಲ್ಲಾ ಆರೋಪಿಗಳನ್ನು ಜೈಲಿಗೆ ಹಾಕಲಾಗಿತ್ತು. ಆದರೆ ಇದೀಗ ಎ1 ಆರೋಪಿ ಪವಿತ್ರಾ ಗೌಡ ಸುಪ್ರೀಂ ಕೋರ್ಟ್‌ನಲ್ಲಿ ಪುನರ್ ಪರಿಶೀಲನಾ ಅರ್ಜಿ ಸಲ್ಲಿಸಿದ್ದಾರೆ. ಗುರುವಾರ (ನವೆಂಬರ್ 6, 2025) ಈ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ನಡೆಸಲಿದ್ದು, ಇದರಿಂದ ಪ್ರಕರಣಕ್ಕೆ ಹೊಸ ತಿರುವು ಬರಬಹುದು.

ರೇಣುಕಾಸ್ವಾಮಿ, ಪವಿತ್ರಾ ಗೌಡ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ (Renukaswamy murder Case) ಎ1 ಆರೋಪಿ ಪವಿತ್ರಾ ಗೌಡ (Pavithra Gowda) ಮತ್ತೆ ಸುಪ್ರೀಂ ಕೋರ್ಟ್​ (Supreme Court) ಮೆಟ್ಟಿಲೇರಿದ್ದಾರೆ. ನಿನ್ನೆ ಸೆಷನ್ಸ್​​ ಕೋರ್ಟ್​​ನಲ್ಲಿ ನಟ ದರ್ಶನ್‌ (Actor Darshan) ಸೇರಿದಂತೆ ಪ್ರಕರಣದ ಎಲ್ಲ ಆರೋಪಿಗಳ ದೋಷಾರೋಪ ಪಟ್ಟಿ ಸಲ್ಲಿಸಲಾಗಿತ್ತು. ಆ ಬಳಿಕ ಪವಿತ್ರಾ ಈ ನಡೆ ತೆಗೆದುಕೊಂಡಿದ್ದಾರೆ. ಹೈಕೋರ್ಟ್ ನೀಡಿದ್ದ ಜಾಮೀನನ್ನು ರದ್ದು ಮಾಡಿದ ಸುಪ್ರೀಂ ಕೋರ್ಟ್‌ನ ಆದೇಶವನ್ನು ಮತ್ತೊಮ್ಮೆ ಪರಿಶೀಲಿಸುವಂತೆ ಕೋರಿ ಈ ಅರ್ಜಿ ಸಲ್ಲಿಸಲಾಗಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿ ಪವಿತ್ರಾಗೌಡ ಆಗಿದ್ದಾರೆ. ಎ1 ಪವಿತ್ರಾ ಗೌಟ, ಎ2 ನಟ ದರ್ಶನ್​ ಸೇರಿ ಎಲ್ಲಾ ಆರೋಪಿಗಳು ಜೈಲಿನಲ್ಲಿದ್ದಾರೆ. ಈ ಹಿಂದೆ ಹೈಕೋರ್ಟ್ ನೀಡಿದ್ದ ಜಾಮೀನು ರದ್ದು ಮಾಡಿ ಸುಪ್ರೀಂ ಕೋರ್ಟ್‌ ಆದೇಶ ನೀಡಿತ್ತು. ಮತ್ತೆ ಎಲ್ಲಾ ಆರೋಪಿಗಳನ್ನು ಜೈಲಿಗೆ ಹಾಕಲಾಗಿತ್ತು. ಆದರೆ ಇದೀಗ ಎ1 ಆರೋಪಿ ಪವಿತ್ರಾ ಗೌಡ ಸುಪ್ರೀಂ ಕೋರ್ಟ್‌ನಲ್ಲಿ ಪುನರ್ ಪರಿಶೀಲನಾ ಅರ್ಜಿ ಸಲ್ಲಿಸಿದ್ದಾರೆ. ಗುರುವಾರ (ನವೆಂಬರ್ 6, 2025) ಈ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ನಡೆಸಲಿದ್ದು, ಇದರಿಂದ ಪ್ರಕರಣಕ್ಕೆ ಹೊಸ ತಿರುವು ಬರಬಹುದು.

ಹೈಕೋರ್ಟ್​​ ನೀಡಿದ್ದ ಜಾಮೀನು ರದ್ದು ಮಾಡಿದ್ದ ಸುಪ್ರೀಂ

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಹೈಕೋರ್ಟ್ ಅಕ್ಟೋಬರ್ 2024ರಲ್ಲಿ ದರ್ಶನ್ ಮತ್ತು ಪವಿತ್ರಾ ಸೇರಿ ಆರೋಪಿಗಳಿಗೆ ಮಧ್ಯಂತರ ಜಾಮೀನು ನೀಡಿತ್ತು. ಡಿಸೆಂಬರ್‌ನಲ್ಲಿ ಸಾಮಾನ್ಯ ಜಾಮೀನು ಸಿಕ್ಕಿತ್ತು. ಆದರೆ ಕರ್ನಾಟಕ ಸರ್ಕಾರವು ಇದನ್ನು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿತ್ತು. ಆಗಸ್ಟ್ 14, 2025ರಂದು ಸುಪ್ರೀಂ ಕೋರ್ಟ್ ಹೈಕೋರ್ಟ್ ಆದೇಶವನ್ನು ರದ್ದುಪಡಿಸಿ ಮತ್ತೆ ಎಲ್ಲರನ್ನು ಜೈಲಿಗೆ ಹಾಕಲಾಗಿತ್ತು.

ಇದನ್ನೂ ಓದಿ: Darshan: ದರ್ಶನ್ & ಗ್ಯಾಂಗ್ ವಿರುದ್ಧ ಚಾರ್ಜ್​ಫ್ರೇಮ್; ಮುಂದಿನ ವಿಚಾರಣೆ ಹೇಗಿರಲಿದೆ? ಲಾಯರ್ ಫಸ್ಟ್ ರಿಯಾಕ್ಷನ್

ಈಗ ಪವಿತ್ರಾ ಗೌಡ ಸುಪ್ರೀಂ ಕೋರ್ಟ್‌ನಲ್ಲಿ ಪುನರ್ ಪರಿಶೀಲನಾ ಅರ್ಜಿ (ರಿವ್ಯೂ ಪಿಟಿಷನ್) ಸಲ್ಲಿಸಿದ್ದಾರೆ. "ಆದೇಶದಲ್ಲಿ ಕೆಲವು ತಪ್ಪುಗಳಿವೆ, ಅದನ್ನು ಮತ್ತೊಮ್ಮೆ ಪರಿಶೀಲಿಸಿ, ಜಾಮೀನು ನೀಡಿ" ಎಂದು ಕೋರಿದ್ದಾರೆ. ಅವರ ವಕೀಲರು "ಹೈಕೋರ್ಟ್ ನಿರ್ಧಾರವು ಸರಿಯಾಗಿತ್ತು. ಸುಪ್ರೀಂ ಕೋರ್ಟ್ ಸಾಕ್ಷ್ಯಗಳನ್ನು ಸರಿಯಾಗಿ ಪರಿಗಣಿಸಿಲ್ಲ" ಎಂದಿದ್ದಾರೆ. ಗುರುವಾರ ನ್ಯಾಯಮೂರ್ತಿಗಳು ಈ ಅರ್ಜಿಯನ್ನು ವಿಚಾರಣೆಗೆ ತೆಗೆದುಕೊಂಡಿದ್ದು, ರಾಜ್ಯ ಸರ್ಕಾರಕ್ಕೆ ನೋಟಿಸ್ ನೀಡಿದೆ. ಇದರಿಂದ ಜಾಮೀನು ಮತ್ತೊಮ್ಮೆ ಸಾಧ್ಯವಾಗಬಹುದು ಎಂದು ತಜ್ಞರು ಊಹಿಸಿದ್ದಾರೆ.

ಬೆಂಗಳೂರು 64ನೇ ಸೆಷನ್ಸ್ ಕೋರ್ಟ್‌ನಲ್ಲಿ ಇತ್ತೀಚಿಗೆ ದರ್ಶನ್ ಮತ್ತು ಪವಿತ್ರಾ ಸೇರಿ 17 ಆರೋಪಿಗಳ ವಿರುದ್ಧ ಕೊಲೆ, ಅಪಹರಣ, ಕಾನೂನುಬಾಹಿರ ಸಭೆ ಆರೋಪಗಳು ಸಲ್ಲಿಕೆಯಾಗಿವೆ. ಪೊಲೀಸರು 3,991 ಪುಟಗಳ ಚಾರ್ಜ್‌ಶೀಟ್ ಸಲ್ಲಿಸಿದ್ದು, ಡಿಜಿಟಲ್ ಸಾಕ್ಷ್ಯಗಳು ಆರೋಪಿಗಳ ಭಾಗವಹಿಸುವಿಕೆಯನ್ನು ತೋರಿಸುತ್ತವೆ. ರೇಣುಕಾಸ್ವಾಮಿ ಕುಟುಂಬ "ನ್ಯಾಯ ಸಿಗಬೇಕು" ಎಂದು ಒತ್ತಾಯಿಸುತ್ತಿದೆ.

ಹರೀಶ್‌ ಕೇರ

View all posts by this author