ಜೈಪುರ, ಜ. 20: ಅಪರಿಚಿತ ವ್ಯಕ್ತಿಯಾದ ತನ್ನೊಂದಿಗೆ ಮಾತನಾಡಲು ನಿರಾಕರಿಸಿದ 14 ವರ್ಷದ ಬಾಲಕಿ ಮೇಲೆ ಫೋಟೊಗ್ರಾಫರ್ ಆ್ಯಸಿಡ್ ಎರಚಿದ ಆಘಾತಕಾರಿ ಘಟನೆ ರಾಜಸ್ಥಾನದಲ್ಲಿ (Rajasthan) ನಡೆದಿದೆ. ಫೋಟೊಗ್ರಾಫರ್‌ನೊಂದಿಗೆ ಮಾತನಾಡಲು ನಿರಾಕರಿಸಿದ್ದಕ್ಕಾಗಿ ಮತ್ತು ಆತನನ್ನು ಗದರಿಸಿದ್ದಕ್ಕಾಗಿ ಬಾಲಕಿ ಆ್ಯಸಿಡ್ ದಾಳಿಗೆ ತುತ್ತಾಗಿದ್ದಾಳೆ. 9ನೇ ತರಗತಿಯ ವಿದ್ಯಾರ್ಥಿನಿ ಶಾಲೆಗೆ ಹೋಗುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಮೂರು ದಿನಗಳ ಹುಡುಕಾಟದ ನಂತರ ಆರೋಪಿಯನ್ನು ಬಂಧಿಸಲಾಗಿದೆ (Crime News).
ಆರೋಪಿಯನ್ನು ಚಂದ್ರರಾಮ್ ಮೇಘವಾಲ್ ಎಂಬವವರ ಪುತ್ರ 19 ವರ್ಷದ ಓಂಪ್ರಕಾಶ್ ಅಲಿಯಾಸ್ ಜಾನಿ ಎಂದು ಗುರುತಿಸಲಾಗಿದೆ. ತಾನು ಛಾಯಾಗ್ರಾಹಕನಾಗಿ ಕೆಲಸ ಮಾಡುತ್ತಿದ್ದಾಗ ಮದುವೆಯೊಂದರಲ್ಲಿ ಆ ಬಾಲಕಿಯನ್ನು ನೋಡಿದ್ದಾಗಿ ಹೇಳಿದ್ದಾನೆ. ಇದೇ ಕಾರಣ ಒಡ್ಡಿ ಆತ ಬಾಲಕಿಯನ್ನು ಸಂಪರ್ಕಿಸಿ ಮಾತನಾಡಲು ಪ್ರಯತ್ನಿಸಿದಾಗ, ಆಕೆ ಅವನನ್ನು ಗದರಿಸಿದ್ದಾಳೆ. ಅದು ಅವನಿಗೆ ನೋವುಂಟು ಮಾಡಿದ್ದರಿಂದ ಅವನು ಸೇಡು ತೀರಿಸಿಕೊಂಡಿದ್ದಾನೆ ಎನ್ನಲಾಗಿದೆ.
ಅಕ್ರಮ ಸಂಬಂಧ: ಯುವಕನಿಗೆ ಥಳಿಸಿ ಮೂತ್ರ ಕುಡಿಸಿದರು...
ಗಂಗಾನಗರ ಜಿಲ್ಲೆಯ ಸುಭಾಷ್ ಪಾರ್ಕ್ ಪ್ರದೇಶದಲ್ಲಿ ಶಾಲೆಯ ಕಡೆಗೆ ನಡೆದುಕೊಂಡು ಹೋಗುತ್ತಿದ್ದ ಬಾಲಕಿಯನ್ನು ಬೈಕ್‌ನಲ್ಲಿ ಹಿಂಬಾಲಿಸಿದ ಓಂಪ್ರಕಾಶ್ ಆಕೆಯ ಮೇಲೆ ಆ್ಯಸಿಡ್ ಎರಚಿ ಪರಾರಿಯಾಗಿದ್ದ. ಬಾಲಕಿಯ ಬಟ್ಟೆ ಮತ್ತು ಬೆರಳಿಗೆ ಸುಟ್ಟ ಗಾಯಗಳಾಗಿದ್ದು, ದೊಡ್ಡ ದುರಂತವೊಂದು ತಪ್ಪಿದೆ.
ಆರೋಪಿಯು ಆ್ಯಸಿಡ್ ದಾಳಿಗೆ ಯೋಜನೆ ರೂಪಿಸಿದ್ದಲ್ಲದೆ, ಪೊಲೀಸರಿಂದ ತಪ್ಪಿಸಿಕೊಳ್ಳಲು ಸಹ ಸಿದ್ಧತೆ ನಡೆಸಿದ್ದ. ಮುಖವನ್ನು ಬಟ್ಟೆ ಮತ್ತು ಹೆಲ್ಮೆಟ್‌ನಿಂದ ಮುಚ್ಚಿಕೊಂಡು, ಬೈಕ್‌ನ ನಂಬರ್ ಪ್ಲೇಟ್ ಅನ್ನು ಮತ್ತೊಂದು ಬಟ್ಟೆಯಿಂದ ಸುತ್ತಿಕೊಂಡಿದ್ದ.
ಅಪ್ರಾಪ್ತನನ್ನು ವಿವಸ್ತ್ರಗೊಳಿಸಿ ಮೆರವಣಿಗೆ ಮಾಡಿಸಿದರು, ಸಹಾಯಕ್ಕಾಗಿ ಅಂಗಲಾಚಿದರು ಯಾರೂ ಬರಲಿಲ್ಲ
ಈ ಘಟನೆ ಕ್ಯಾಮರಾದಲ್ಲಿ ಸೆರೆಯಾಗಿದೆ. ಆದರೆ ಆರೋಪಿ ಮುಖ ಮತ್ತು ವಾಹನದ ನಂಬರ್ ಪ್ಲೇಟ್ ಅನ್ನು ಮುಚ್ಚಿಕೊಂಡಿದ್ದರಿಂದ, ಆ ವ್ಯಕ್ತಿಯನ್ನು ಗುರುತಿಸುವುದು ಪೊಲೀಸರಿಗೆ ಕಷ್ಟವಾಗಿತ್ತು. ಪೊಲೀಸರು ಆ ಪ್ರದೇಶದ ಸಿಸಿಟಿವಿ ದೃಶ್ಯಾವಳಿಗಳನ್ನು ಸ್ಕ್ಯಾನ್ ಮಾಡಿ ಕೆಲವು ಸುಳಿವುಗಳ ಆಧಾರದ ಮೇಲೆ ಆರೋಪಿಯನ್ನು ಬಂಧಿಸಿದರು.
ಆರೋಪಿಯ ಬಗ್ಗೆ ಮಾಹಿತಿ ನೀಡಿದವರಿಗೆ 25,000 ರುಪಾಯಿ ಬಹುಮಾನ ನೀಡುವುದಾಗಿ ಪೊಲೀಸ್ ವರಿಷ್ಠಾಧಿಕಾರಿ ಡಾ. ಅಮೃತಾ ದುಹಾನ್ ಘೋಷಿಸಿದ್ದರು. ಸೋಮವಾರ (ಜನವರಿ 19) ಸಾರ್ವಜನಿಕರಲ್ಲಿ ಕಾನೂನಿನ ಭಯವನ್ನು ಹುಟ್ಟುಹಾಕಲು ಮತ್ತು ಇದೇ ರೀತಿಯ ಘಟನೆ ಮುಂದೆ ಆಗದಂತೆ ತಡೆಯಲು ಪೊಲೀಸರು ಆರೋಪಿಯನ್ನು ಮಾರುಕಟ್ಟೆಯಲ್ಲಿ ಮೆರವಣಿಗೆ ನಡೆಸಿದರು. ಇನ್ನು ಪ್ರಕರಣ ಸಂಬಂಧ ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದಾರೆ.