ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Physical Abuse: ಬಾಲಕಿ ಮೇಲೆ ಅತ್ಯಾಚಾರವೆಸಗಿ ಗರ್ಭಪಾತ ಮಾಡಿಸಿದ ಪಾಪಿ ಶಿಕ್ಷಕ!

ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಗಣಿತ ಶಿಕ್ಷಕ ರಾಜಣ್ಣ ಮೇಲೆ ಈ ಆರೋಪ ಬಂದಿದೆ. ಶಿಕ್ಷಕ ಹಾಗು ಗರ್ಭಪಾತ ಮಾಡಿದ ವೈದ್ಯೆ ಶಂಕರ್ ಲಕ್ಷ್ಮಿ ವಿರುದ್ಧ ದೂರು ನೀಡಲಾಗಿದೆ. ಚಳ್ಳಕೆರೆಯ ಲಕ್ಷ್ಮಿ ಶ್ರೀನಿವಾಸ್ ನರ್ಸಿಂಗ್ ಆಸ್ಪತ್ರೆಯ ವೈದ್ಯೆ ಆಗಿದ್ದು, ಮಕ್ಕಳ ರಕ್ಷಣಾಧಿಕಾರಿ ರೇಖಾ ಚಳ್ಳಕೆರೆ ಠಾಣೆಗೆ ದೂರು ನೀಡಿದ್ದಾರೆ.

ಆರೋಪಿ ಶಿಕ್ಷಕ ರಾಜಣ್ಣ

ಚಿತ್ರದುರ್ಗ, ಏ.10 : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದೆ. 16 ವರ್ಷದ ಬಾಲಕಿಯ ಮೇಲೆ ಶಿಕ್ಷಕನೇ ಅತ್ಯಾಚಾರ (Physical Abuse) ಎಸಗಿದ್ದಾನೆ. ನಂತರ ಅದರಿಂದ ಬಾಲಕಿಗೆ ಗರ್ಭಧಾರಣೆ (pregnant) ಆದಾಗ, ಆ ಶಿಕ್ಷಕನೇ ಆಕೆಗೆ ಗರ್ಭಪಾತ (Abortion) ಮಾಡಿಸಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಬೆಚ್ಚಿಬಿಳಿಸುವ ಈ ಘಟನೆ ಚಿತ್ರದುರ್ಗ (Chitradurga) ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ತಳಕು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಗಣಿತ ಶಿಕ್ಷಕ ರಾಜಣ್ಣ ಮೇಲೆ ಈ ಆರೋಪ ಬಂದಿದೆ. ಶಿಕ್ಷಕ ಹಾಗು ಗರ್ಭಪಾತ ಮಾಡಿದ ವೈದ್ಯೆ ಶಂಕರ್ ಲಕ್ಷ್ಮಿ ವಿರುದ್ಧ ದೂರು ನೀಡಲಾಗಿದೆ. ಚಳ್ಳಕೆರೆಯ ಲಕ್ಷ್ಮಿ ಶ್ರೀನಿವಾಸ್ ನರ್ಸಿಂಗ್ ಆಸ್ಪತ್ರೆಯ ವೈದ್ಯೆ ಆಗಿದ್ದು, ಮಕ್ಕಳ ರಕ್ಷಣಾಧಿಕಾರಿ ರೇಖಾ ಚಳ್ಳಕೆರೆ ಠಾಣೆಗೆ ದೂರು ನೀಡಿದ್ದಾರೆ.

ಅಪ್ರಾಪ್ತೆ ಮೇಲೆ ದೌರ್ಜನ್ಯ, ಆರೋಪಿಗೆ 20 ವರ್ಷ ಜೈಲು

ಮಂಡ್ಯ: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ (Sexual assault) ಎಸಗಿದ ಆರೋಪದ ಸಾಬೀತಾದ ಹಿನ್ನೆಲೆಯಲ್ಲಿ ಆರೋಪಿಗೆ 20 ವರ್ಷ ಜೈಲು ಶಿಕ್ಷೆ ಹಾಗೂ 7 ಲಕ್ಷ ರೂ. ದಂಡ ವಿಧಿಸಿ ಮಂಡ್ಯ ಅಧಿಕ ಸೆಷನ್ಸ್ ಮತ್ತು 2ನೇ ತ್ವರಿತಗತಿ ನ್ಯಾಯಾಲಯ (Court) ವಿಶೇಷ ನ್ಯಾಯಾಧೀಶ ಬಿ.ದಿಲೀಪ್ ಕುಮಾರ್ ಅವರು ತೀರ್ಪು ನೀಡಿದ್ದಾರೆ. ಮಂಡ್ಯ ನಗರ ತಾವರಗೆರೆ ಬಡಾವಣೆ ನಿವಾಸಿ ವಾಯಿದ್ ಇಕ್ಬಾಲ್ ಅವರ ಮಗ ಅಖೀಬ್ ಆಲಂ ಉ. ಶೇಖ್ ಅಖೀಬ್ ಆಲಂ ಶಿಕ್ಷೆಗೆ ಒಳಗಾದ ಆರೋಪಿ.

ಬಾಲಕಿ ಶಾಲೆಗೆ ಹೋಗುವಾಗ ಮತ್ತು ಬರುವಾಗ ಆಗಾಗ್ಗೆ ಹೋಗಿ ಭೇಟಿ ಮಾಡಿ, ಪುಸಲಾಯಿಸಿ ನಿನ್ನನ್ನು ಪ್ರೀತಿಸುತ್ತಿದ್ದು, ನೀನು ನನ್ನನ್ನು ಪ್ರೀತಿಸದೇ ಹೋದರೆ ಕೈಯನ್ನು ಕೊಯ್ದುಕೊಳ್ಳುತ್ತೇನೆ ಹಾಗೂ ಅತ್ಯಹತ್ಯೆ ಮಾಡಿಕೊಳ್ಳುತ್ತೇನೆಂದು ಹೆದರಿಸಿ ಕಳೆದ 2023ರ ಜ.27ರಂದು ಆಕೆಯನ್ನ ಕಾರಿನಲ್ಲಿ ಕೂರಿಸಿಕೊಂಡು ಶ್ರೀರಂಗಪಟ್ಟಣ ತಾಲ್ಲೂಕಿನ ಕರಿಘಟ್ಟ ಬೆಟ್ಟದ ದೇವಸ್ಥಾನದ ಹಿಂಭಾಗದಲ್ಲಿ ಕಾರನ್ನ ನಿಲ್ಲಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದು, ಈ ವಿಚಾರವನ್ನು ನಿಮ್ಮ ತಂದೆ-ತಾಯಿಗೆ ಹೇಳಿದರೆ ಕೊಲೆ ಮಾಡುವುದಾಗಿ ಬೆದರಿಸಿದ್ದಾನೆ.

Physical Abuse: ಪ್ರತ್ಯೇಕವಾಗಿ ವಾಸಿಸುತ್ತಿದ್ದ ಪತ್ನಿಯ ಮೇಲೆ ಬಲಾತ್ಕಾರ, ಕ್ರಿಮಿನಲ್‌ ಕೇಸ್‌ ರದ್ದುಪಡಿಸಲು ಹೈಕೋರ್ಟ್ ನಕಾರ

ಇದರಿಂದ ಮನನೊಂದ ಬಾಲಕಿ ಮನೆಯ ಕೊಠಡಿಯಲ್ಲಿ ಫ್ಯಾನ್‌ಗೆ ವೇಲಿನಿಂದ ನೇಣು ಬಿಗಿದುಕೊಂಡು ಮೃತಪಟ್ಟಿದ್ದಳು. ಆರೋಪಿತನಿಂದ ಬಾಲಕಿಯು ಗರ್ಭಿಣಿಯಾಗಿರುವುದು ವೈದ್ಯಕೀಯ ಪರೀಕ್ಷೆ ವೇಳೆ ದೃಢಪಟ್ಟ ಹಿನ್ನೆಲೆಯಲ್ಲಿ ಈ ಸಂಬಂಧ ಮಂಡ್ಯ ಮಹಿಳಾ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಮತ್ತು ಫೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ ತನಿಖಾಧಿಕಾರಿಯಾದ ಮಹಿಳಾ ಪೊಲೀಸ್ ಠಾಣಾ ಇನ್‌ಸ್ಪೆಪೆಕ್ಟರ್ ಎಚ್.ಆನಂದಕುಮಾರ್ ಅವರು ತನಿಖೆಯನ್ನು ಕೈಗೊಂಡು, ಸೂಕ್ತ ಸಾಕ್ಷಾಧಾರಗಳನ್ನ ಸಂಗ್ರಹಿಸಿ ನಿಗಧಿತ ಸಮಯದಲ್ಲಿ ತನಿಖೆಯನ್ನು ಪೂರ್ಣಗೊಳಿಸಿ, ಆರೋಪಿ ವಿರುದ್ದ 2ನೇ ತ್ವರಿತಗತಿ ವಿಶೇಷ ನ್ಯಾಯಾಲಯಕ್ಕೆ ದೋಷಾರೋಪಪಟ್ಟಿ ಸಲ್ಲಿಸಿದ್ದರು.

ಅಂದಿನಿಂದ ಹೆಚ್ಚುವರಿ ಸೆಷನ್ಸ್‌ ಮತ್ತು ತ್ವರಿತಗತಿ 2ನೇ ನ್ಯಾಯಾಲಯದಲ್ಲಿ ವಿಚಾರಣೆ ನಡೆದು ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ನ್ಯಾಯಾಧೀಶ ಬಿ.ದಿಲೀಪ್ ಕುಮಾರ್ ಅವರು ಆರೋಪಿ ಅಖೀಬ್ ಆಲಂ ಉ. ಶೇಖ್ ಅಖೀಬ್ ಆಲಂಗೆ 20 ವರ್ಷ ಕಾರಾಗೃಹ ಶಿಕ್ಷೆ ಹಾಗೂ 7 ಲಕ್ಷ ರೂ. ದಂಡ ವಿಧಿಸಿ ತೀರ್ಪಿತ್ತಿದ್ದಾರೆ. ಅಭಿಯೋಜನೆಯ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಹೆಬ್ಬಕವಾಡಿ ನಾಗರಾಜು ಅವರು ವಾದ ಮಂಡಿಸಿದ್ದರು.

Physical Abuse: ಹಿಂದೂ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಬಿಹಾರದ ಕೂಲಿ ಕಾರ್ಮಿಕ

ಹರೀಶ್‌ ಕೇರ

View all posts by this author