ಯುಗಾದಿ ಹಬ್ಬ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Physical Abuse: ಮೈಸೂರಿನಲ್ಲೊಂದು ಅಮಾನವೀಯ ಘಟನೆ; ಚಿಕ್ಕಪ್ಪನಿಂದಲೇ ಅತ್ಯಾಚಾರಕ್ಕೊಳಗಾಗಿ ಗರ್ಭಿಣಿಯಾದ 10ನೇ ತರಗತಿ ವಿದ್ಯಾರ್ಥಿನಿ

Crime News: ಮೈಸೂರಿನ ನಂಜನಗೂಡು ಪಟ್ಟಣ ಠಾಣಾ ವ್ಯಾಪ್ತಿಯಲ್ಲಿ ಚಿಕ್ಕಪ್ಪನಿಂದಲೇ ಅತ್ಯಾಚಾರಕ್ಕೊಳಗಾದ ಅಪ್ರಾಪ್ತ ಬಾಲಕಿ ಗರ್ಣಿಣಿಯಾಗಿರುವ ವಿಚಾರ ಬೆಳಕಿಗೆ ಬಂದಿದೆ. ಆರೋಪಿಯನ್ನು ನಂಜುಂಡಸ್ವಾಮಿ ಎಂದು ಗುರುತಿಸಲಾಗಿದೆ. ಸದ್ಯ ಆತನನ್ನು ಪೊಲೀಸರು ಬಂಧಿಸಿದ್ದಾರೆ ಎಂದು ವರದಿ ತಿಳಿಸಿದೆ.

ಚಿಕ್ಕಪ್ಪನಿಂದಲೇ ಅತ್ಯಾಚಾರಕ್ಕೊಳಗಾಗಿ ಗರ್ಭಿಣಿಯಾದ ಅಪ್ರಾಪ್ತೆ

ಸಾಂದರ್ಭಿಕ ಚಿತ್ರ.

Profile Ramesh B Mar 27, 2025 6:30 PM

ಮೈಸೂರು: ಇಡೀ ನಾಗರಿಕ ಸಮಾಜವೇ ತಲೆ ತಗ್ಗಿಸುವ ಘಟನೆಯೊಂದು ಮೈಸೂರಿನಲ್ಲಿ ನಡೆದಿದ್ದು, ಚಿಕ್ಕಪ್ಪನಿಂದ ಅತ್ಯಾಚಾರಕ್ಕೊಳಗಾದ ಅಪ್ರಾಪ್ತ ಬಾಲಕಿ ಗರ್ಭಿಣಿಯಾಗಿದ್ದಾಳೆ (Physical Abuse). ಈ ಹಿನ್ನಲೆಯಲ್ಲಿ ಆರೋಪಿ ಚಿಕ್ಕಪ್ಪನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ನಂಜುಂಡಸ್ವಾಮಿ ಎಂದು ಗುರುತಿಸಲಾಗಿದೆ. ಶಾಲೆಗೆ ತೆರಳಿದ್ದ ವಿದ್ಯಾರ್ಥಿನಿಯನ್ನು ಮನೆಗೆ ಕರೆದುಕೊಂಡು ಬಂದು ಆರೋಪಿ ಅತ್ಯಾಚಾರ ಎಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಮೈಸೂರು ಜಿಲ್ಲೆಯ ನಂಜನಗೂಡು ಪಟ್ಟಣ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಬಾಲಕಿ 10ನೇ ತರಗತಿ ಓದುತ್ತಿದ್ದಾಳೆ. 2 ತಿಂಗಳಿನಿಂದ ಋತುಮತಿಯಾಗದ ಹಿನ್ನೆಲೆಯಲ್ಲಿ ಆತಂಕಗೊಂಡ ಪೋಷಕರು ವೈದ್ಯರ ಬಳಿ ಕರೆದುಕೊಂಡು ಹೋದಾಗ ಬಾಲಕಿ ಗರ್ಭಿಣಿಯಾಗಿರುವ ವಿಚಾರ ತಿಳಿದು ಬಂದಿದೆ. ಈ ವೇಳೆ ಬಾಲಕಿ ಚಿಕ್ಕಪ್ಪನ ಕೃತ್ಯವನ್ನು ಬಾಯಿ ಬಿಟ್ಟಿದ್ದಾಳೆ.

ಈ ಸುದ್ದಿಯನ್ನೂ ಓದಿ: Physical Abuse: 7 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಬಿಜೆಪಿ ಯುವ ಮುಖಂಡ ಅರೆಸ್ಟ್‌

ಘಟನೆ ವಿವರ

ಕೆಲವು ತಿಂಗಳ ವಿದ್ಯಾರ್ಥಿನಿಯನ್ನ ಪುಸಲಾಯಿಸಿ ಮನೆಗೆ ಕರೆತಂದಿದ್ದ ನಂಜುಂಡಸ್ವಾಮಿ ಅತ್ಯಾಚಾರ ಎಸಗಿದ್ದಾನೆ. ಈ ವಿಷಯವನ್ನು ಯಾರಿಗೂ ತಿಳಿಸದಂತೆ ತಾಕೀತು ಮಾಡಿ ಆಕೆಯನ್ನು ಮರಳಿ ಶಾಲೆಗೆ ತಂದು ಬಿಟ್ಟಿದ್ದಾನೆ ಎಂದು ಇದೀಗ ಸಂತ್ರಸ್ತೆ ವಿವರಿಸಿದ್ದಾಳೆ ಎಂಬುದಾಗಿ ವರದಿಯೊಂದು ತಿಳಿಸಿದೆ.

ಸದ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳು ಬಾಲಕಿಯನ್ನು ವಶಕ್ಕೆ ಪಡೆದಿದ್ದಾರೆ. ನಂಜುಂಡಸ್ವಾಮಿ ವಿರುದ್ದ ಪೋಕ್ಸೋ ಕಾಯ್ದೆ ಅನ್ವಯ ಪ್ರಕರಣ ದಾಖಲಿಸಲಾಗಿದೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ನಡೆಯುತ್ತಿರುವುದರಿಂದ ಬಾಲಕಿಯನ್ನು ಬಾಲಮಂದಿರದಿಂದ ಪರೀಕ್ಷಾ ಕೇಂದ್ರಕ್ಕೆ ಪೊಲೀಸರ ಭದ್ರತೆಯೊಂದಿಗೆ ಕರೆತರಲಾಗುತ್ತಿದೆ.

ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಮನೆಯವರು ಆಘಾತಕ್ಕೊಳಗಾಗಿದ್ದಾರೆ. ಆರೋಪಿ ನಂಜುಂಡಸ್ವಾಮಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಸ್ಥಳೀಯರು ಕಠಿಣ ಶೀಕ್ಷೆ ನೀಡುವಂತೆ ಆಗ್ರಹಿಸಿದ್ದಾರೆ.

ಕಾಮಪಿಶಾಚಿ ತಂದೆಯ ಬಂಧನ

ದೇವನಹಳ್ಳಿ: ಇದೇ ರೀತಿಯ ಪ್ರಕರಣವೊಂದು ಕೆಲವು ದಿನಗಳ ಹಿಂದೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯಲ್ಲಿ ನಡೆದಿತ್ತು. ಆ ಪ್ರಕರಣದಲ್ಲಿ ತಂದೆಯೇ ಮಗಳ ಮೇಲೆ ಕಾಮಪಿಶಾಚಿಯಂತೆ ಅತ್ಯಾಚಾರ ಎಸಗಿದ್ದ. ತಂದೆಯಿಂದ ಅತ್ಯಾಚಾರಕ್ಕೊಳಗಾದ ಮತ್ತು ಬೆದರಿಕೆ ಹಾಕಲ್ಪಟ್ಟ ಯುವತಿಯೊಬ್ಬಳು ಮನೆ ಬಿಟ್ಟು ಪಿಜಿಯಲ್ಲಿ ಆಶ್ರಯ ಪಡೆದ ಪ್ರಕರಣ ಬಳಿಕ ಪೊಲೀಸ್ ಠಾಣೆ ಮೆಟ್ಟಿಲೇರಿತ್ತು. ದೂರು ದಾಖಲಾಗುತ್ತಿದ್ದಂತೆ ಹೊಸಕೋಟೆ ಮಹಿಳಾ ಠಾಣೆ ಪೊಲೀಸರು ಆರೋಪಿ ಮಂಜುನಾಥ್​ನನ್ನು ವಶಕ್ಕೆ ಪಡೆದು ತನಿಖೆಗೆ ಒಳಪಡಿಸಿದ್ದರು.

19 ವರ್ಷ ವಯಸ್ಸಿನ ಮಗಳ‌ ಮೇಲೆ ತಂದೆ ಮಂಜುನಾಥ ಅತ್ಯಾಚಾರ ಮಾಡಿದ್ದರ ಜತೆಗೆ ಈ ವಿಷಯವನ್ನು ಬಹಿರಂಗಪಡಿಸಿದರೆ ಕೊಲ್ಲುವುದಾಗಿ ಆಕೆಗೆ ಬೆದರಿಕೆಯನ್ನೂ ಹಾಕಿದ್ದ. ಕಾರು ಚಾಲಕನಾಗಿರುವ ಮಂಜುನಾಥ್​​​ಗೆ ಮೂವರು ಮಕ್ಕಳು. ಈ ಪೈಕಿ ಹಿರಿಯ ಮಗಳ ಮೇಲೆ‌ ಅತ್ಯಾಚಾರ ಮಾಡಿರುವ ಆರೋಪ ಕೇಳಿ ಬಂದಿತ್ತು. ಕೊನೆಗೆ ತಂದೆಯ ಕಾಟ ತಾಳಲಾರದೆ ಯುವತಿ ಪಿಜಿಯಲ್ಲಿ ವಾಸ ಮಾಡತೊಡಗಿದ್ದಳು.

ಮಂಜುನಾಥನನ್ನು ಪೊಲೀಸರು ಬಂಧಿಸಿದ್ದು, ಬಾಯಿ ಬಿಡಿಸಲಾಗುತ್ತಿದೆ. ಈತ ಇನ್ನಿತರರ ಮೇಲೂ ಇಂಥ ಕೃತ್ಯ ಎಸಗಿದ್ದಾನೆಯೇ ಎಂಬುದನ್ನೂ ಪರಿಶೀಲಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.