ತಿರುವನಂತಪುರಂ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ (physical abuse case) ಸಂಬಂಧಿಸಿ ಮಲಯಾಳಂನ ಖ್ಯಾತ ಚಲನಚಿತ್ರ ನಿರ್ದೇಶಕನನ್ನು (Malayalam film director) ಪೊಲೀಸರು ಬಂಧಿಸಿ ಜಾಮೀನಿನ ಮೇಲೆ ಬಿಡುಗಡೆ ಮಾಡಿದ್ದಾರೆ. ಕೇರಳದ (Kerala) ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ( kerala International Film Festival) ಸಂದರ್ಭದಲ್ಲಿ ನಡೆದಿದೆ ಎನ್ನಲಾದ ಚಲನಚಿತ್ರೋದ್ಯಮಕ್ಕೆ ಸಂಬಂಧಿಸಿದ ಮಹಿಳೆಯೊಬ್ಬರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರ ನಿರ್ಮಾಪಕ ಮತ್ತು ಮಾಜಿ ಶಾಸಕ ಪಿ.ಟಿ. ಕುಂಜು ಮುಹಮ್ಮದ್ (Former MLA P T Kunju Muhammad) ಅವರನ್ನು ಬಂಧಿಸಿ ಬಿಡುಗಡೆ ಮಾಡಲಾಯಿತು.
ಕೇರಳದ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಸಂದರ್ಭದಲ್ಲಿ ಹೊಟೇಲ್‌ನಲ್ಲಿ ಮಹಿಳೆಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎನ್ನುವ ಆರೋಪದ ಹಿನ್ನೆಲೆಯಲ್ಲಿ ಪೊಲೀಸರ ಮುಂದೆ ಹಾಜರಾದ ಪಿ.ಟಿ. ಕುಂಜು ಮುಹಮ್ಮದ್ ಅವರನ್ನು ಔಪಚಾರಿಕವಾಗಿ ಬಂಧಿಸಲಾಯಿತು. ಬಳಿಕ ತನಿಖೆಗೆ ಸಹಕರಿಸುವುದಾಗಿ ಅವರು ನ್ಯಾಯಾಲಯಕ್ಕೆ ಭರವಸೆ ನೀಡಿದ್ದರಿಂದ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ.
ಭಾರತ ಪಾಕಿಸ್ತಾನವಾಗದಿರಲು ಹಿಂದೂಗಳು 4 ಮಕ್ಕಳನ್ನು ಹೊಂದಬೇಕು; ಕರೆ ಕೊಟ್ಟ ಬಿಜೆಪಿ ನಾಯಕಿ
ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ತೀರ್ಪುಗಾರರ ಅಧ್ಯಕ್ಷರಾಗಿದ್ದ ಕುಂಜು ಮುಹಮ್ಮದ್ ತಮ್ಮ ಕೋಣೆಗೆ ನುಗ್ಗಿ ಹಲ್ಲೆ ನಡೆಸಿ ಅವಮಾನಿಸಿದ್ದಾರೆ ಮತ್ತು ನನ್ನ ಜೊತೆಗೆ ಕೆಟ್ಟದಾಗಿ ವರ್ತಿಸಿದ್ದಾರೆ ಎಂದು ತೀರ್ಪುಗಾರರ ಸಮಿತಿಯ ಮಹಿಳಾ ಸದಸ್ಯೆಯೊಬ್ಬರು ಕೇರಳ ಸಿಎಂ ಪಿಣರಾಯಿ ವಿಜಯನ್ಗೆ ದೂರು ನೀಡಿದ್ದರು. ಈ ಕುರಿತು ತನಿಖೆ ನಡೆಸಲು ತಿರುವನಂತಪುರಂ ನಗರ ಪೊಲೀಸ್ ಆಯುಕ್ತರಿಗೆ ತಿಳಿಸಲಾಗಿತ್ತು.
ಈ ಕುರಿತು ಬುಧವಾರ ಮಾಹಿತಿ ನೀಡಿದ ಪೊಲೀಸರು, ಚಲನಚಿತ್ರೋದ್ಯಮಕ್ಕೆ ಸೇರಿದ ಮಹಿಳೆಯ ಮೇಲೆ ಮಲಯಾಳಂ ಚಲನಚಿತ್ರ ನಿರ್ದೇಶಕ ಮತ್ತು ಮಾಜಿ ಶಾಸಕ ಪಿ.ಟಿ. ಕುಂಜು ಮುಹಮ್ಮದ್ ಅವರು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎನ್ನುವ ದೂರು ಬಂದ ಹಿನ್ನೆಲೆಯಲ್ಲಿ ಅವರನ್ನು ಬಂಧಿಸಲಾಗಿತ್ತು ಎಂದು ತಿಳಿಸಿದ್ದಾರೆ.
ಕಂಟೋನ್ಮೆಂಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಈ ಕುರಿತು ತನಿಖೆ ನಡೆಸುತ್ತಿರುವ ಅಧಿಕಾರಿಗಳ ಮುಂದೆ ಮಂಗಳವಾರ ಮುಹಮ್ಮದ್ ಹಾಜರಾಗಿದ್ದರು. ಅವರನ್ನು ಔಪಚಾರಿಕವಾಗಿ ಬಂಧಿಸಿ ಬಳಿಕ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಿದರು.
ಡಿಸೆಂಬರ್ ತಿಂಗಳ ಆರಂಭದಲ್ಲಿ ಕೇರಳದ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಮಲಯಾಳಂ ಚಲನಚಿತ್ರಗಳನ್ನು ಆಯ್ಕೆ ಮಾಡಲು ಅವರು ತಂಗಿದ್ದ ಹೊಟೇಲ್‌ನಲ್ಲಿ ಮಹಿಳೆಯೊಬ್ಬರ ಮೇಲೆ ಅವರು ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎನ್ನುವ ದೂರು ಬಂದ ಹಿನ್ನೆಲೆಯಲ್ಲಿ ಕಂಟೋನ್ಮೆಂಟ್ ಪೊಲೀಸರು ಅವರ ವಿರುದ್ಧ ಪ್ರಕರಣ ದಾಖಲಿಸಿದ್ದರು.
ತಿರುವನಂತಪುರಂ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು ಮುಹಮ್ಮದ್ ಅವರಿಗೆ ಏಳು ದಿನಗಳ ಒಳಗೆ ತನಿಖಾಧಿಕಾರಿಯ ಮುಂದೆ ವಿಚಾರಣೆಗೆ ಹಾಜರಾಗುವಂತೆ ಮತ್ತು ತನಿಖೆಗೆ ಸಹಕರಿಸುವಂತೆ ಸೂಚಿಸಿದ್ದು, ಅವರು ಒಪ್ಪಿಕೊಂಡಿದ್ದರಿಂದ ಅವರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ.
ಈ ಕುರಿತು ಪ್ರತಿಕ್ರಿಯೆ ನೀಡಿರುವ ನಿರ್ದೇಶಕ ಪಿಟಿ ಕುಂಜು ಮುಹಮ್ಮದ್, ನಾನು ಯಾವುದೇ ತಪ್ಪು ಮಾಡಿಲ್ಲ. ಅದು ತಪ್ಪು ಗ್ರಹಿಕೆಯಾಗಿರಬೇಕು. ನಾನು 25 ವರ್ಷಗಳಿಂದ ಸಾರ್ವಜನಿಕ ಕ್ಷೇತ್ರದಲ್ಲಿದ್ದೇನೆ ಮತ್ತು ಯಾರೊಂದಿಗೂ ಕೆಟ್ಟದಾಗಿ ವರ್ತಿಸಿಲ್ಲ ಎಂದು ತಿಳಿಸಿದ್ದಾರೆ.
ಅಶ್ವಥಾಮ, ಮ್ಯಾಗ್ರಿಬ್, ಗರ್ಶೋಮ್, ಪರದೇಸಿ, ವಿಶ್ವಾಸಪೂರ್ವಂ ಮನ್ಸೂರ್ ಮೊದಲಾದ ಚಿತ್ರ ನಿರ್ಮಾಪಕರಾಗಿರುವ ಅವರು ಈ ಹಿಂದೆ ಕೇರಳದಲ್ಲಿ ಎಡಪಂಥೀಯ ಬೆಂಬಲಿತ ಸ್ವತಂತ್ರ ಶಾಸಕರಾಗಿದ್ದರು.