ಲೈಂಗಿಕ ದೌರ್ಜನ್ಯ ಪ್ರಕರಣ: ತರುಣ್ ತೇಜ್‌ಪಾಲ್‌ಗೆ 10 ವರ್ಷಗಳ ಜೈಲು ಶಿಕ್ಷೆ
ತೆಹಲ್ಕಾದ ಮಾಜಿ ಸಂಪಾದಕ ತರುಣ್ ತೇಜ್‌ಪಾಲ್‌ಗೆ ಬಾಂಬೆ ಹೈಕೋರ್ಟ್ 10 ವರ್ಷಗಳ ಜೈಲು ಶಿಕ್ಷೆ ವಿಧಿಸಿ ಆದೇಶ ನೀಡಿದೆ. 2013ರ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿ ವಿಚಾರಣೆ ನಡೆಸಿದ ಬಾಂಬೆ ಹೈಕೋರ್ಟ್‌ನ ಗೋವಾ ಪೀಠವು ಗುರುವಾರ ಅವರನ್ನು ದೋಷಿ ಎಂದು ತೀರ್ಮಾನಿಸಿ ತೀರ್ಪು ನೀಡಿದೆ.
ಸಂಗ್ರಹ ಚಿತ್ರ -
ಮುಂಬೈ: ಕಿರಿಯ ಸಹೋದ್ಯೋಗಿಯ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿ ತೆಹಲ್ಕಾ ನಿಯತಕಾಲಿಕೆಯ ಸ್ಥಾಪಕ ಮತ್ತು ಮಾಜಿ ಸಂಪಾದಕ (Ex-Tehelka Editor) ತರುಣ್ ತೇಜ್‌ಪಾಲ್ (Tarun Tejpal) ಅವರಿಗೆ ಬಾಂಬೆ ಹೈಕೋರ್ಟ್ (Bombay High Court) 10 ವರ್ಷಗಳ ಜೈಲು ಶಿಕ್ಷೆ ವಿಧಿಸಿ ಆದೇಶಿಸಿದೆ. ಈ ಕುರಿತು ಗುರುವಾರ ನ್ಯಾಯಮೂರ್ತಿಗಳಾದ ಡಾ. ನೀಲಾ ಗೋಖಲೆ ಮತ್ತು ಅಮಿತ್ ಜಮ್ಸಂದೇಕರ್ ಅವರನ್ನೊಳಗೊಂಡ ಬಾಂಬೆ ಹೈಕೋರ್ಟ್‌ನ ಗೋವಾ ಪೀಠವು ತೀರ್ಪು ನೀಡಿದೆ.
ಸಹೋದ್ಯೋಗಿಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪದಲ್ಲಿ ಅಪರಾಧಿ ಎಂದು ನ್ಯಾಯಾಲಯದಿಂದ ಘೋಷಿಸಲ್ಪಟ್ಟ ತೆಹಲ್ಕಾದ ಮಾಜಿ ಸಂಪಾದಕ ತರುಣ್ ತೇಜ್‌ಪಾಲ್ ಅವರಿಗೆ ಬಾಂಬೆ ಹೈಕೋರ್ಟ್ ಗುರುವಾರ 10 ವರ್ಷಗಳ ಜೈಲು ಶಿಕ್ಷೆ ವಿಧಿಸಿ ಆದೇಶಿಸಿದೆ. ಈ ಪ್ರಕರಣದಲ್ಲಿ ಐದು ವರ್ಷಗಳ ಹಿಂದೆ ಗೋವಾ ಸೆಷನ್ಸ್ ನ್ಯಾಯಾಲಯವು ಅವರನ್ನು ಖುಲಾಸೆಗೊಳಿಸಿತ್ತು.
ತರುಣ್ ತೇಜ್‌ಪಾಲ್ ಅವರ ಕೋರಿಕೆಯ ಮೇರೆಗೆ ನ್ಯಾಯಾಲಯವು ಅವರಿಗೆ ಎರಡು ವಾರಗಳಲ್ಲಿ ಶರಣಾಗಲು ಅವಧಿ ನೀಡಿದೆ. ಪ್ರಕರಣಕ್ಕೆ ಸಂಬಂಧಿಸಿ ಕನಿಷ್ಠ ಶಿಕ್ಷೆಯನ್ನು ನ್ಯಾಯಾಲಯ ವಿಧಿಸಿದ್ದು, ಇದಕ್ಕೆ ಕಾರಣವನ್ನು ಉಲ್ಲೇಖಿಸಿದೆ. ಈ ಘಟನೆ 13 ವರ್ಷಗಳ ಹಿಂದೆ ನಡೆದಿದೆ. ತೇಜ್‌ಪಾಲ್ ಅವರಿಂದ ಬೇರೆ ಯಾವುದೇ ಅಪರಾಧವಾಗಿಲ್ಲ ಎಂದು ತಿಳಿಸಿದೆ.
ತೇಜ್‌ಪಾಲ್ ಅವರಿಗೆ ನ್ಯಾಯಾಲಯವು 10,21,000 ರೂಪಾಯಿ ದಂಡವನ್ನು ವಿಧಿಸಿದ್ದು, ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಸಂತ್ರಸ್ತೆಗೆ ಸಂಪೂರ್ಣ ದಂಡದ ಮೊತ್ತವನ್ನು ಪಾವತಿಸಲಾಗುವುದು. ಭಾರತೀಯ ದಂಡ ಸಂಹಿತೆಯ ಸೆಕ್ಷನ್ 376, 354 ಮತ್ತು 354 ರ ಅಡಿಯಲ್ಲಿ ಅವರನ್ನು ದೋಷಿ ಎಂದು ಘೋಷಿಸಿರುವ ನ್ಯಾಯಾಲಯ ಅವರಿಗೆ ಸೆಕ್ಷನ್ 376 ರ ಅಡಿಯಲ್ಲಿ ಹತ್ತು ವರ್ಷ, ಸೆಕ್ಷನ್ 354 ರ ಅಡಿಯಲ್ಲಿ ಒಂದು ವರ್ಷ ಮತ್ತು ಸೆಕ್ಷನ್ 354 ರ ಅಡಿಯಲ್ಲಿ ಮೂರು ವರ್ಷ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಎಲ್ಲಾ ಶಿಕ್ಷೆಗಳು ಏಕಕಾಲದಲ್ಲಿ ಜಾರಿಯಾಗುತ್ತವೆ ಎಂದು ತಿಳಿಸಿದೆ.
ನ್ಯಾಯಾಲಯದಲ್ಲಿ ತಾನು ಇಬ್ಬರು ಹೆಣ್ಣು ಮಕ್ಕಳ ತಂದೆ. ನನಗೆ ಹೆಂಡತಿ ಇದ್ದಾಳೆ. ರಾಜಕೀಯಕ್ಕೆ ನಾನು ಬಲಿಪಶುವಾಗಿದ್ದೇನೆ ಎಂದಿರುವ ತೇಜ್ ಪಾಲ್, ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸುವುದಾಗಿ ತೇಜ್‌ಪಾಲ್ ತಿಳಿಸಿದ್ದಾರೆ.
ತೇಜ್‌ಪಾಲ್ ಅವರ ವಕೀಲ ಆಬಾದ್ ಪೊಂಡಾ ಅವರು ಕನಿಷ್ಠ ಶಿಕ್ಷೆಗಾಗಿ ನ್ಯಾಯಾಲಯಕ್ಕೆ ಮನವಿ ಮಾಡಿದರು. ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲು ಸಾಧ್ಯವಾಗುವಂತೆ ಶಿಕ್ಷೆ ಮತ್ತು ಶಿಕ್ಷೆಯನ್ನು ಕನಿಷ್ಠ 10 ವಾರಗಳ ಕಾಲ ಅಮಾನತುಗೊಳಿಸುವಂತೆ ನ್ಯಾಯಾಲಯವನ್ನು ಒತ್ತಾಯಿಸಿದರು.
ಜಾರ್ಖಂಡ್ ಪ್ರತಿಭಟನೆಗೆ ಸಿಜೆಪಿಯ ಅಭಿಜಿತ್ ದೀಪ್ಕೆ ಬೆಂಬಲ: ಮುಂದುವರಿದ ವಿದ್ಯಾರ್ಥಿಗಳ ಉಪವಾಸ ಸತ್ಯಾಗ್ರಹ
2013ರ ಪ್ರಕರಣದಲ್ಲಿ ಅವರ ಕಿರಿಯ ಸಹೋದ್ಯೋಗಿಯೊಬ್ಬರು ಗೋವಾದಲ್ಲಿ ನಡೆದ ಥಿಂಕ್‌ಫೆಸ್ಟ್ ಕಾರ್ಯಕ್ರಮದ ಸಂದರ್ಭದಲ್ಲಿ ಹೊಟೇಲ್ ಲಿಫ್ಟ್‌ನಲ್ಲಿ ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಯೆರೊಪಾಯಿಸಿದ್ದರು. 2021ರಲ್ಲಿ ವಿಚಾರಣಾ ನ್ಯಾಯಾಲಯವು ತೇಜ್ ಪಾಲ್ ಅವರನ್ನು ಆರೋಪದಿಂದ ಖುಲಾಸೆಗೊಳಿಸಿತ್ತು. ಇದನ್ನು ಪ್ರಶ್ನಿಸಿ ಗೋವಾ ಸರ್ಕಾರ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದು, ಅದರ ತೀರ್ಪನ್ನು ಗುರುವಾರ ಬಾಂಬೆ ಹೈಕೋರ್ಟ್ ನೀಡಿದೆ.