ಎಸ್​ ಎಲ್​ ಭೈರಪ್ಪ ನಿಧನ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Physical Abuse: ಕಾಲೇಜು ವಿದ್ಯಾರ್ಥಿನಿ ಮೇಲೆ 5 ತಿಂಗಳಿಂದ ನಿರಂತರ ಗ್ಯಾಂಗ್‌ರೇಪ್‌! 7 ಮಂದಿ ಅರೆಸ್ಟ್‌

ಥಾಣೆಯ ಕಲ್ಯಾಣ ನಗರದಲ್ಲಿ 17 ವರ್ಷದ ಯುವತಿಯ ಮೇಲೆ ಏಳು ಮಂದಿ ಸುಮಾರು ಐದು ತಿಂಗಳ ಕಾಲ ಕೂಡಿ ಹಾಕಿ ಅತ್ಯಾಚಾರ ನಡೆಸಿದ್ದು, ಇವರನ್ನು ಬಂಧಿಸಲಾಗಿದೆ. ಆರೋಪಿಗಳನ್ನು ಸ್ಥಳೀಯ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ಎಂಟು ದಿನಗಳ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಥಾಣೆ: ಕಾಲೇಜು ವಿದ್ಯಾರ್ಥಿನಿಯೊಬ್ಬಳ (College student) ಮೇಲೆ ಐದು ತಿಂಗಳಿಗೂ ಹೆಚ್ಚು ಕಾಲ ಸಾಮೂಹಿಕ ಅತ್ಯಾಚಾರ (physical abuse) ನಡೆಸಿರುವ ಏಳು ಮಂದಿ ಆರೋಪಿಗಳನ್ನು ಬಂಧಿಸಲಾಗಿದ್ದು, ಅವರನ್ನು ಎಂಟು ದಿನಗಳ ಪೊಲೀಸ್ ಕಸ್ಟಡಿಗೆ (Police custody) ಒಪ್ಪಿಸಲಾಗಿದೆ. ಮಹಾರಾಷ್ಟ್ರದ (Maharastra) ಥಾಣೆ ಜಿಲ್ಲೆಯ (Thane District) ಕಲ್ಯಾಣ ನಗರದಲ್ಲಿ 17 ವರ್ಷದ ಯುವತಿಯ ಮೇಲೆ ಏಳು ಮಂದಿ ಸುಮಾರು ಐದು ತಿಂಗಳ ಕಾಲ ಕೂಡಿ ಹಾಕಿ ಅತ್ಯಾಚಾರ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಎಲ್ಲಾ ಆರೋಪಿಗಳನ್ನು ಬಂಧಿಸಿ ಸ್ಥಳೀಯ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು.

ಕಾಲೇಜು ವಿದ್ಯಾರ್ಥಿನಿಯಾಗಿದ್ದ ಯುವತಿ ಕಳೆದ ಏಪ್ರಿಲ್‌ನಲ್ಲಿ ಇನ್‌ಸ್ಟಾಗ್ರಾಮ್‌ನಲ್ಲಿ ಭೇಟಿಯಾದ ಯುವಕನೊಂದಿಗೆ ಸಂಬಂಧ ಬೆಳೆಸಿದ್ದು, ಆತ ಆಕೆಯ ಒಪ್ಪಿಗೆಯಿಲ್ಲದೆ ಅವರ ಲೈಂಗಿಕ ಸಂಪರ್ಕಗಳನ್ನು ವಿಡಿಯೋ ಮಾಡಿ ಆಕೆಯನ್ನು ಬೆದರಿಸಲು ಪ್ರಾರಂಭಿಸಿದ್ದಾನೆ. ಅನಂತರ ಅವರ ವಿಡಿಯೋಗಳನ್ನು ತನ್ನ ಇತರ ಸ್ನೇಹಿತರೊಂದಿಗೆ ಹಂಚಿಕೊಂಡಿದ್ದನು.

ಅವರೆಲ್ಲರೂ ಸೇರಿ ಯುವತಿಯನ್ನು ಬ್ಲ್ಯಾಕ್‌ಮೇಲ್ ಮಾಡಲು ಪ್ರಾರಂಭಿಸಿದರು. ಅಲ್ಲದೇ ಆಕ್ಷೇಪಾರ್ಹ ವಿಡಿಯೋಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಮಾಡುವುದಾಗಿ ಬೆದರಿಕೆ ಹಾಕಲು ಪ್ರಾರಂಭಿಸಿದರು. ಇದರಿಂದ ಹೆದರಿದ ಬಾಲಕಿ ಅವರೊಂದಿಗೆ ಒತ್ತಾಯಪೂರ್ವಕವಾಗಿ ಲೈಂಗಿಕ ಸಂಪರ್ಕ ಮಾಡಿದ್ದಾಳೆ. ಇದು ಸುಮಾರು ಐದು ತಿಂಗಳ ಕಾಲ ನಡೆದಿದೆ. ಆದರೂ ಸಂತ್ರಸ್ತೆಯ ಆಕ್ಷೇಪಾರ್ಹ ವಿಡಿಯೊಗಳು ಆನ್‌ಲೈನ್‌ನಲ್ಲಿ ಪ್ರಸಾರವಾಗುತ್ತಿರುವುದನ್ನು ಸಂತ್ರಸ್ತೆಯ ಕುಟುಂಬ ನೋಡಿದ್ದು, ಈ ಬಗ್ಗೆ ಬಾಲಕಿಯನ್ನು ವಿಚಾರಿಸಿದಾಗ ಆಕೆ ಎಲ್ಲ ಸತ್ಯವನ್ನು ಹೇಳಿದ್ದಾಳೆ. ಕೂಡಲೇ ಯುವತಿಯೊಂದಿಗೆ ಪೊಲೀಸ್ ಠಾಣೆಗೆ ತೆರಳಿದ ಕುಟುಂಬಸ್ಥರು ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದಾರೆ.

ಇದನ್ನೂ ಓದಿ: Viral News: ಅರಣ್ಯದಲ್ಲಿ ನವಜಾತ ಶಿಶುವಿನ ದೇಹ ಪತ್ತೆ; ತುಟಿಗೆ ಗಮ್‌ ಅಂಟಿಸಿ, ಬಾಯಿಗೆ ಕಲ್ಲು ಹಾಕಿದ್ದ ಪಾಪಿಗಳು

ಅನಂತರ ಎಲ್ಲ ಆರೋಪಿಗಳನ್ನು ಬಂಧಿಸಲಾಗಿದ್ದು, ಕಲ್ಯಾಣ್ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಬಳಿಕ ಆರೋಪಿಗಳನ್ನು ಎಂಟು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ. ಇವರ ವಿರುದ್ಧ ಲೈಂಗಿಕ ದೌರ್ಜನ್ಯದಿಂದ ಮಕ್ಕಳ ರಕ್ಷಣೆ ಕಾಯ್ದೆ (ಪೋಕ್ಸೊ) ಅಡಿಯಲ್ಲಿಯೂ ಪ್ರಕರಣ ದಾಖಲಿಸಲಾಗಿದೆ. ಸಂತ್ರಸ್ತೆಯ ವೈದ್ಯಕೀಯ ಪರೀಕ್ಷೆಯಲ್ಲಿ ಆಕೆ ಗರ್ಭಿಣಿಯಾಗಿದ್ದಾಳೆ ಎಂದು ತಿಳಿದು ಬಂದಿದ್ದು, ಈ ಬಗ್ಗೆ ಪೊಲೀಸರು ವಿಚಾರಣೆಯನ್ನು ಮುಂದುವರಿಸಿದ್ದಾರೆ.

ವಿದ್ಯಾ ಇರ್ವತ್ತೂರು

View all posts by this author