ಬೆಂಗಳೂರು : ಬೆಂಗಳೂರಿನಲ್ಲಿ (Bengaluru) ವಕೀಲೆಯೊಬ್ಬರಿಗೆ (Advocate) ಮದುವೆಯಾಗುತ್ತೇನೆ ಎಂದು ಹೇಳಿ ನಂಬಿಸಿ ಅತ್ಯಾಚಾರ ಎಸಗಿರುವ (Physical Abuse) ಆರೋಪದ ಮೇಲೆ ಸ್ಪೆಷಲ್ ಆಕ್ಷನ್ ಫೋರ್ಸ್ ಅಲ್ಲಿದ್ದ ಸಿದ್ದೇಗೌಡ ಎನ್ನುವವರ ಮೇಲೆ ದೂರು ದಾಖಲಾಗಿದೆ. ಬೆಂಗಳೂರಿನ ಬಸವೇಶ್ವರ ನಗರ ಠಾಣೆ ಪೊಲೀಸರು ಇದೀಗ ಪೊಲೀಸ್ ಕಾನ್ಸ್ಟೇಬಲ್ (police constable) ಸಿದ್ದೇಗೌಡನನ್ನು ಆರೆಸ್ಟ್ ಮಾಡಿದ್ದಾರೆ.
ಸಿದ್ದೇಗೌಡನ ವಿರುದ್ಧ ಮದುವೆಯಾಗುವುದಾಗಿ ನಂಬಿಸಿ ಯುವತಿ ಮೇಲೆ ಅತ್ಯಾಚಾರ ಆರೋಪ ಕೇಳಿಬಂದಿದೆ. ಮಂಗಳೂರಿನ ಪಾಂಡೇಶ್ವರ SAF ನಲ್ಲಿದ್ದ ಪಿಸಿ ಸಿದ್ದೇಗೌಡ, ವಿಜಯಪುರ ಜಿಲ್ಲೆಯ ಬಬಲೇಶ್ವರ ಮೂಲದ ಯುವತಿಯ ಮೇಲೆ ಅತ್ಯಾಚಾರ ಎಸಗಿದ ಆರೋಪ ಕೇಳಿಬಂದಿದೆ. ಸಿದ್ದೇಗೌಡ ಬಾಗಲಕೋಟೆ ಜಿಲ್ಲೆಯ ಜಮಖಂಡಿ ಮೂಲದ ನಿವಾಸಿ. ಹುಬ್ಬಳ್ಳಿಯಲ್ಲಿ ನಡೆದ ಮದುವೆಯೊಂದರಲ್ಲಿ ಸಿದ್ದೇಗೌಡನಿಗೆ ಯುವತಿಯ ಪರಿಚಯವಾಗಿದೆ.
ಮೊದಲಿಗೆ ಮದುವೆಯಾಗುವುದಾಗಿ ಸಿದ್ದೇಗೌಡ ಹೇಳಿದ್ದ. ಮದುವೆಗೂ ಮುಂಚೆ ಯುವತಿಯನ್ನು ಕರೆಸಿ ಅತ್ಯಾಚಾರ ಎಸಗಿದ್ದಾನೆ. ಬೆಂಗಳೂರಿನ ಕೆಲವು ಕಡೆ ಲಾಡ್ಜ್ ಬುಕ್ ಮಾಡಿ ಅತ್ಯಾಚಾರ ಎಸಗಿದ್ದಾನೆ. ನಂತರ ಜಾತಿ ವಿಚಾರ ಎತ್ತಿ, ಈ ಮದುವೆ ಬೇಡ ಎಂದು ಸಿದ್ದೇಗೌಡ ಹೇಳಿದ್ದಾನೆ. ನಿಮ್ಮದು ಕೀಳು ಜಾತಿ, ಮದುವೆಗೆ ನಮ್ಮ ಮನೆಯಲ್ಲಿ ಒಪ್ಪಲ್ಲ ಅಂತ ಹೇಳಿದ್ದಾನೆ. ಜೊತೆಗೆ ಲಕ್ಷಾಂತರ ರೂಪಾಯಿ ಸಾಲ ಪಡೆದು ವಂಚಿಸಿದ್ದಾನೆ ಎಂದು ವಕೀಲೆ ಬಸವೇಶ್ವರನಗರ ಠಾಣೆಗೆ ದೂರು ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಪಿಸಿ ಸಿದ್ದೇಗೌಡನನ್ನು ಪೊಲೀಸರು ಆರೆಸ್ಟ್ ಮಾಡಿದ್ದಾರೆ.
ಇದನ್ನೂ ಓದಿ: Actress Shilpa Shetty: 60 ಕೋಟಿ ವಂಚನೆ-ರೆಸ್ಟೋರೆಂಟ್ ಮುಚ್ಚಿದ ಶಿಲ್ಪಾ ಶೆಟ್ಟಿ