ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Physical Abuse: ಕೊಡಗಿನ ಹೋಮ್‌ಸ್ಟೇಯಲ್ಲಿ ವಿದೇಶಿ ಮಹಿಳೆ ಮೇಲೆ ಅತ್ಯಾಚಾರ, ಇಬ್ಬರ ಬಂಧನ

ಅಮೆರಿಕದ ವಾಶಿಂಗ್ಟನ್ ಮೂಲದ ಮಹಿಳೆ ಏಪ್ರಿಲ್ 19ರಂದು ದೇವಿ ವಿಲ್ಲಾ ಎಂಬ ಹೋಂಸ್ಟೇನಲ್ಲಿ ವಾಸ್ತವ್ಯ ಹೂಡಿದ್ದ ವೇಳೆ, ಜಾರ್ಖಂಡ್ ಮೂಲದ ವೃಜೇಶ್ ಕುಮಾರ್ ಎಂಬಾತ ಅತ್ಯಾಚಾರ ಎಸಗಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಈ ಸಂಬಂಧ ಕುಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಾಂದರ್ಭಿಕ ಚಿತ್ರ

ಕೊಡಗು, ಏ.22: ಇತಿಹಾಸ ಪ್ರಸಿದ್ದ ಹಂಪಿಯ (Hampi) ಸಮೀಪದ ನಡೆದ ಗ್ಯಾಂಗ್‌ ರೇಪ್‌ (Physical Abuse) ಹಾಗೂ ಕೊಲೆ (murder case) ಪ್ರಕರಣದ ಕರಾಳ ನೆನಪು ಮಾಸುವ ಮೊದಲೇ ಕೊಡಗು (coorg) ಜಿಲ್ಲೆಯಲ್ಲಿ ವಿದೇಶಿ ಮಹಿಳೆಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ (Harassment) ನಡೆಸಿದ ಆರೋಪ ಕೇಳಿಬಂದಿದೆ. ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಪೊನ್ನಂಪೇಟೆ ತಾಲೂಕಿನ ಕುಟ್ಟ ಪೊಲೀಸ್ ಠಾಣಾ ವ್ಯಾಪ್ತಿಯ ಕುಟ್ಟ ಗ್ರಾಮದಲ್ಲಿರುವ ಖಾಸಗಿ ಹೋಂಸ್ಟೇನಲ್ಲಿ (Home stay) ಈ ಘಟನೆ ನಡೆದಿರುವುದಾಗಿ ತಿಳಿದುಬಂದಿದೆ.

ಅಮೆರಿಕದ ವಾಶಿಂಗ್ಟನ್ ಮೂಲದ ಮಹಿಳೆ ಏಪ್ರಿಲ್ 19ರಂದು ದೇವಿ ವಿಲ್ಲಾ ಎಂಬ ಹೋಂಸ್ಟೇನಲ್ಲಿ ವಾಸ್ತವ್ಯ ಹೂಡಿದ್ದ ವೇಳೆ, ಜಾರ್ಖಂಡ್ ಮೂಲದ ವೃಜೇಶ್ ಕುಮಾರ್ ಎಂಬಾತ ಅತ್ಯಾಚಾರ ಎಸಗಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಈ ಸಂಬಂಧ ಕುಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯಾಗಿರುವ ವೃಜೇಶ್ ಕುಮಾರ್​ನನ್ನು ಪೊಲೀಸರು ಬಂಧಿಸಿದ್ದಾರೆ. ಇದೇ ಪ್ರಕರಣದಲ್ಲಿ ಹೋಂಸ್ಟೇ ಮಾಲೀಕ ವಿಶಾಲ್ ಮೇಲೂ ಆರೋಪಗಳಿದ್ದು, ಅವರನ್ನು ಸಹ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಯ ಹಿನ್ನೆಲೆ ಹಾಗೂ ಆರೋಪಗಳ ಬಗ್ಗೆ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

ಸಿಟಿ ರವಿ ಖಂಡನೆ

ಪ್ರಕರಣದ ಬಗ್ಗೆ ಟ್ವೀಟ್(X) ಮಾಡಿರುವ ಎಂಎಲ್​ಸಿ ಸಿಟಿ ರವಿ, ಕೊಡಗಿನ ಕುಟ್ಟ ಗ್ರಾಮದಲ್ಲಿ ವಿದೇಶಿ ಮಹಿಳೆಯ ಮೇಲೆ ನಡೆದ ಭೀಕರ ಹಲ್ಲೆ ಅತ್ಯಂತ ನಾಚಿಕೆಗೇಡಿನ ಸಂಗತಿ ಮತ್ತು ಇದು ಎಂದಿಗೂ ಒಪ್ಪಲಾಗದ ಕೃತ್ಯ. ಇಂತಹ ಘಟನೆಗಳು ಭಾರತದ ‘ಅತಿಥಿ ದೇವೋ ಭವ’ ಎಂಬ ಸಂಸ್ಕೃತಿಯ ಆತ್ಮಕ್ಕೆ ಏಟು ನೀಡುತ್ತವೆ. ಇದು ಕೇವಲ ವ್ಯಕ್ತಿಯ ವಿರುದ್ಧದ ಅಪರಾಧವಲ್ಲ, ಬದಲಾಗಿ ನಮ್ಮ ರಾಷ್ಟ್ರದ ಪ್ರತಿಷ್ಠೆ ಮತ್ತು ಮೌಲ್ಯಗಳ ಮೇಲಿನ ಕಳಂಕ. ಇದರಲ್ಲಿ ಭಾಗಿಯಾಗಿರುವ ಎಲ್ಲರ ವಿರುದ್ಧ ರಾಜ್ಯ ಸರ್ಕಾರವು ತ್ವರಿತ ಮತ್ತು ಕಠಿಣ ಕ್ರಮ ಕೈಗೊಳ್ಳಬೇಕು ಮತ್ತು ವಿಳಂಬವಿಲ್ಲದೆ ನ್ಯಾಯ ದೊರಕಿಸಿಕೊಡಬೇಕೆಂದು ನಾನು ಒತ್ತಾಯಿಸುತ್ತೇನೆ ಎಂದು ಹೇಳಿದ್ದಾರೆ.

ಹಂಪಿಯಲ್ಲಿ ಇಸ್ರೇಲ್ ಮಹಿಳೆ ಮೇಲೆ ಅತ್ಯಾಚಾರ, ಯುವಕನ ಕೊಲೆ ಪ್ರಕರಣ; ಮೂವರು ಅಪರಾಧಿಗಳಿಗೆ ಗಲ್ಲು ಶಿಕ್ಷೆ

ಕಳೆದ ವರ್ಷ ಹಂಪಿಗೆ ಸಮೀಪದ ರೆಸಾರ್ಟ್‌ ಒಂದರಲ್ಲಿ ತಂಗಿದ್ದ ಇಸ್ರೇಲಿ ಮಹಿಳೆಯೊಬ್ಬರು ಹಾಗೂ ಸ್ಥಳೀಯ ಮಹಿಳೆಯೊಬ್ಬರ ಮೇಲೆ ಗ್ಯಾಂಗ್‌ ರೇಪ್‌ ನಡೆದಿತ್ತು. ಮಹಿಳೆಯರ ಜೊತೆಗಿದ್ದ ಗಂಡಸರನ್ನು ದುಷ್ಕರ್ಮಿಗಳು ಕಾಲುವೆಗೆ ತಳ್ಳಿ ಕೊಲ್ಲುವ ಯತ್ನ ಮಾಡಿದ್ದು, ಅವರಲ್ಲಿ ಒಬ್ಬ ಮುಳುಗಿ ಮೃತಪಟ್ಟಿದ್ದ. ಇದರಲ್ಲಿ ಮೂವರು ಆರೋಪಿಗಳನ್ನು ಬಂಧಿಸಲಾಗಿದ್ದು, ಅವರಿಗೆ ಗಲ್ಲು ಶಿಕ್ಷೆ ಘೋಷಣೆಯಾಗಿದೆ.

ಹರೀಶ್‌ ಕೇರ

View all posts by this author