Physical Abuse: ನಡುರಾತ್ರಿ ಒಂಟಿಯಾಗಿ ಆಸ್ಪತ್ರೆಗೆ ಬಂದ ಬಾಲಕಿ; ಆಕೆಯ ಸ್ಥಿತಿ ಕಂಡವರಿಗೆ ಫುಲ್ ಶಾಕ್!
Physical Abuse suspected: ಮಧ್ಯರಾತ್ರಿ ಅರೆಪ್ರಜ್ಞಾಹೀನ ಸ್ಥಿತಿಯಲ್ಲಿ ಬಾಲಕಿಯೊಬ್ಬಳು ಒಂಟಿಯಾಗಿ ಆಸ್ಪತ್ರೆಗೆ ನಡೆದುಕೊಂಡು ಬಂದ ಘಟನೆ ಒಡಿಶಾದಲ್ಲಿ ನಡೆದಿದೆ. ಬಾಲಕಿಯ ಮೇಲೆ ಅತ್ಯಾಚಾರ ನಡೆದಿರುವ ಶಂಕೆ ವ್ಯಕ್ತವಾಗಿದ್ದು, ಪೊಲೀಸರಿಗೆ ಮಾಹಿತಿ ನೀಡಲಾಗಿದೆ ಬಾಲಕಿ ಜಾರ್ಖಂಡ್ ಮೂಲದವಳಾಗಿದ್ದು, ಅವಳ ಕುಟುಂಬವನ್ನು ಪತ್ತೆ ಹಚ್ಚಲು ಪೊಲೀಸರು ಪ್ರಯತ್ನಿಸುತ್ತಿದ್ದಾರೆ.

-

ಭುವನೇಶ್ವರ: ಅಪ್ರಾಪ್ತ ಬಾಲಕಿಯೊಬ್ಬಳು (Minor Girl) ಒಂಟಿಯಾಗಿ ಮಧ್ಯರಾತ್ರಿ ರಕ್ತಸಿಕ್ತವಾಗಿ ಅರೆಪ್ರಜ್ಞಾಹೀನ ಸ್ಥಿತಿಯಲ್ಲಿ (Physical Abuse) ಆಸ್ಪತ್ರೆಗೆ ಬಂದು ದಾಖಲಾದ ಘಟನೆ ಒಡಿಶಾದಲ್ಲಿ (Odisha) ನಡೆದಿದೆ. ಆಕೆಯ ಮೇಲೆ ಅತ್ಯಾಚಾರ (Crime news) ನಡೆದಿರುವ ಶಂಕೆ ವ್ಯಕ್ತವಾಗಿದೆ. 17 ವರ್ಷದ ಬಾಲಕಿ ರಕ್ತಸಿಕ್ತವಾಗಿ ಅರೆಪ್ರಜ್ಞಾವಸ್ಥೆಯಲ್ಲಿ ಕ್ಯಾಪಿಟಲ್ ಆಸ್ಪತ್ರೆಗೆ (Odisha Capital Hospital) ಒಂಟಿಯಾಗಿ ನಡೆದುಕೊಂಡು ಬಂದಿದ್ದಾಳೆ. ಆಕೆಯ ಸ್ಥಿತಿಯನ್ನು ಕಂಡ ಕೂಡಲೇ ವೈದ್ಯರು ಚಿಕಿತ್ಸೆಗೆ ಮುಂದಾಗಿದ್ದಾರೆ ಹಾಗೂ ಈ ಕುರಿತು ಪೊಲೀಸರಿಗೆ ಮಾಹಿತಿಯನ್ನೂ ನೀಡಿದ್ದಾರೆ. ಈ ಘಟನೆ ಶುಕ್ರವಾರ ತಡರಾತ್ರಿ ನಡೆದಿದೆ.
ಒಡಿಶಾದ ಕ್ಯಾಪಿಟಲ್ ಆಸ್ಪತ್ರೆಗೆ ಶುಕ್ರವಾರ ತಡರಾತ್ರಿ 17 ವರ್ಷದ ಬಾಲಕಿಯೊಬ್ಬಳು ರಕ್ತಸಿಕ್ತವಾಗಿ ಅರೆಪ್ರಜ್ಞಾಹೀನ ಸ್ಥಿತಿಯಲ್ಲಿ ಒಬ್ಬಂಟಿಯಾಗಿ ನಡೆದುಕೊಂಡು ಬಂದಿದ್ದಾಳೆ. ಆಕೆಯ ಸ್ಥಿತಿಯನ್ನು ಕಂಡ ವೈದ್ಯರು ತಕ್ಷಣ ಆಕೆಗೆ ವೈದ್ಯಕೀಯ ಸಹಾಯವನ್ನು ನೀಡಿದ್ದಾರೆ. ಮಧ್ಯರಾತ್ರಿಯ ಸುಮಾರಿಗೆ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ವೈದ್ಯರು ಆಕೆಯ ಗಾಯಗಳನ್ನು ಗಮನಿಸಿ ಅತ್ಯಾಚಾರ ನಡೆದಿರುವ ಬಗ್ಗೆ ಶಂಕೆ ವ್ಯಕ್ತಪಡಿಸಿದ್ದಾರೆ. ಹೀಗಾಗಿ ಶಿಷ್ಟಾಚಾರದ ಪ್ರಕಾರ ವೈದ್ಯಕೀಯ ತಂಡವು ಆಸ್ಪತ್ರೆಯ ಹೊರಠಾಣೆ ಪೊಲೀಸರಿಗೆ ಈ ಕುರಿತು ಮಾಹಿತಿ ನೀಡಿದೆ.
ಇದನ್ನೂ ಓದಿ: Bribery Case: ಆರ್‌ಟಿಸಿ ದುರಸ್ತಿಗೆ 12 ಸಾವಿರ ಲಂಚ ಸ್ವೀಕಾರ; ಶಿರಸ್ತೇದಾರ ಸೇರಿ ಮೂವರ ಬಂಧನ
ತಕ್ಷಣ ಆಸ್ಪತ್ರೆಗೆ ಆಗಮಿಸಿದ ಪೊಲೀಸರು ಬಾಲಕಿಯನ್ನು ಪ್ರಶ್ನಿಸಲು ಪ್ರಯತ್ನ ನಡೆಸಿದ್ದಾರೆ. ಆದರೆ ಆಕೆಯ ಆರೋಗ್ಯ ಸ್ಥಿತಿಯ ಕಾರಣದಿಂದ ಆಕೆ ಯಾವುದೇ ರೀತಿಯಲ್ಲಿ ಸರಿಯಾದ ಪ್ರತಿಕ್ರಿಯೆ ನೀಡಿಲ್ಲ ಎಲ್ಲಾವಿದೆ. ಹೀಗಾಗಿ ಹೆಚ್ಚಿನ ಚಿಕಿತ್ಸೆಗಾಗಿ ಆಕೆಯನ್ನು ಆಸ್ಪತ್ರೆಯಲ್ಲಿ ಇರಿಸಲಾಗಿದೆ. ಆಕೆಯ ಮೇಲೆ ವೈದ್ಯರು ತೀವ್ರ ನಿಗಾ ಇರಿಸಿದ್ದಾರೆ.
ಘಟನೆಯ ಕುರಿತು ತನಿಖೆಯನ್ನು ಪೊಲೀಸರು ಮುಂದುವರಿಸಿದ್ದಾರೆ. ಬಾಲಕಿಯನ್ನು ವಿಧಿವಿಜ್ಞಾನ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲು ತೀರ್ಮಾನಿಸಲಾಗಿದೆ. ಘಟನೆಗೆ ಕಾರಣ ಪತ್ತೆಹಚ್ಚಲು ಹತ್ತಿರದ ಪ್ರದೇಶಗಳ ಸಿಸಿಟಿವಿಗಳನ್ನು ಪೊಲೀಸ್ ಸಿಬ್ಬಂದಿ ಪರಿಶೀಲಿಸುತ್ತಿದ್ದಾರೆ ಎನ್ನಲಾಗಿದೆ.
ಈ ಕುರಿತು ಮಾಹಿತಿ ನೀಡಿರುವ ಉಪ ಪೊಲೀಸ್ ಆಯುಕ್ತರು (ಡಿಸಿಪಿ), ಕ್ಯಾಪಿಟಲ್ ಆಸ್ಪತ್ರೆ ವತಿಯಿಂದ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಘಟನೆ ನಡೆದ ದಿನ ರಾತ್ರಿಯೇ ಈ ಕುರಿತು ನಮಗೆ ಮಾಹಿತಿ ಬಂದಿತ್ತು. ಬಾಲಕಿ ಮಾನಸಿಕವಾಗಿ ಅಸ್ವಸ್ಥಳಾಗಿರುವುದು ಮತ್ತು ಲೈಂಗಿಕ ದೌರ್ಜನ್ಯಕ್ಕೊಳಗಾಗಿರುವುದು ಕಂಡು ಬಂದಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ: Deepavali Fashion 2025: ದೀಪಾವಳಿಯ ರಂಗು ಹೆಚ್ಚಿಸುವ ಡಿಸೈನರ್‌ವೇರ್‌ಗಳಿವು
ಬಾಲಕಿಯು ಜಾರ್ಖಂಡ್ ಮೂಲದವಳಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಮಹಿಳೆಯರನ್ನು ಬಂಧಿಸಲಾಗಿದೆ. ಮೂವರನ್ನು ರಕ್ಷಿಸಲಾಗಿದೆ. ಬಾಲಕಿಯ ಕುಟುಂಬವನ್ನು ಪತ್ತೆಹಚ್ಚಲು ಜಾರ್ಖಂಡ್ ಅಧಿಕಾರಿಗಳನ್ನು ಸಂಪರ್ಕಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಲೈಂಗಿಕ ದೌರ್ಜನ್ಯ: ಟ್ಯೂಷನ್ ಶಿಕ್ಷಕನಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ
ತರಗತಿಗಳಿಗೆ ಹಾಜರಾಗುತ್ತಿದ್ದ 12 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇರೆಗೆ ಟ್ಯೂಷನ್ ಶಿಕ್ಷಕನಿಗೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ವಿಶೇಷ ನ್ಯಾಯಾಲಯ 10 ವರ್ಷ ಕಠಿಣ ಜೈಲು ಶಿಕ್ಷೆ ಮತ್ತು 5,000 ರೂ. ದಂಡ ವಿಧಿಸಿದೆ. ರಾಜೇಂದ್ರನಗರ ಮಂಡಲದ ಹೈದರ್ಗುಡ ನಿವಾಸಿಯಾಗಿರುವ ಸಂತ್ರಸ್ತೆಯ ಮೇಲೆ ಶಿಕ್ಷಕ 2017 ರ ಡಿಸೆಂಬರ್‌ನಲ್ಲಿ ಅತ್ಯಾಚಾರ ಎಸಗಿದ್ದ ಎಂದು ದೂರು ದಾಖಲಾಗಿತ್ತು.
ಸಂತ್ರಸ್ತೆಯ ತಾಯಿಯ ಹೇಳಿಕೆ ಪ್ರಕಾರ, 7 ನೇ ತರಗತಿ ವಿದ್ಯಾರ್ಥಿನಿಯಾಗಿದ್ದ ಆಕೆಯ ಮಗಳು, ಅದೇ ಅಪಾರ್ಟ್ಮೆಂಟ್ ಸಮುಚ್ಚಯದಲ್ಲಿ ವಾಸಿಸುತ್ತಿದ್ದ ದ್ರೋಣಂರಾಜು ಸುಬ್ರಹ್ಮಣ್ಯೇಶ್ವರ ರಾವ್ ಅವರ ಮನೆಯಲ್ಲಿ ಟ್ಯೂಷನ್ ತರಗತಿಗಳಿಗೆ ಹಾಜರಾಗುತ್ತಿದ್ದಳು. ಅದೇ ಸಮಯದಲ್ಲಿ ಆತ ಬಾಲಕಿ ಮೇಲೆ ಅತ್ಯಾಚಾರ ನಡೆಸಿದ್ದ. ತಾಯಿ ತಕ್ಷಣ ರಾಜೇಂದ್ರನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ದೂರಿನ ಆಧಾರದ ಮೇಲೆ, ಐಪಿಸಿಯ ಸೆಕ್ಷನ್ 376(2)(f)(i), ಪೋಕ್ಸೋ ಕಾಯ್ದೆ 2012 ರ ಸೆಕ್ಷನ್ 6 ರೊಂದಿಗೆ ಓದಲಾದ ಸೆಕ್ಷನ್ 5(o) ಮತ್ತು ಬಾಲ ನ್ಯಾಯ ಕಾಯ್ದೆಯ ಸೆಕ್ಷನ್ 75 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.