Physical assault: ರಾಜ್ಯವನ್ನೇ ಬೆಚ್ಚಿ ಬೀಳಿಸೋ ಘಟನೆ; ಬಾಲಕಿ ಮೇಲೆ ಗ್ಯಾಂಗ್ರೇಪ್
Haveri Horror: ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಬಂಕಾಪುರ ಠಾಣೆ ವ್ಯಾಪ್ತಿಯಲ್ಲಿ ಬಾಲಕಿಯನ್ನು ಪ್ರೀತಿಸುತ್ತಿದ್ದ ಯುವಕನ ಇಬ್ಬರು ಸ್ನೇಹಿತರೇ ಬೆದರಿಸಿ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ ಎನ್ನಲಾಗಿದೆ. ಇನ್ನು ಆರೋಪಿಗಳನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.


ಹಾವೇರಿ: ಬೆಳಗಾವಿ ಬೆನ್ನಲ್ಲೇ ರಾಜ್ಯದಲ್ಲಿ ಮತ್ತೊಂದು ಹೀನ ಕೃತ್ಯ ವರದಿಯಾಗಿದೆ. ಅಪ್ರಾಪ್ತ ಬಾಲಕಿ ಮೇಲೆ ಇಬ್ಬರು ಸಾಮೂಹಿಕ ಅತ್ಯಾಚಾರ(physical assault) ಎಸಗಿರುವ ಪೈಶಾಚಿಕ ಘಟನೆ ಹಾವೇರಿ ಜಿಲ್ಲೆಯಲ್ಲಿ ನಡೆದಿದೆ. ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಬಂಕಾಪುರ ಠಾಣೆ ವ್ಯಾಪ್ತಿಯಲ್ಲಿ ಬಾಲಕಿಯನ್ನು ಪ್ರೀತಿಸುತ್ತಿದ್ದ ಯುವಕನ ಇಬ್ಬರು ಸ್ನೇಹಿತರೇ ಬೆದರಿಸಿ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ ಎನ್ನಲಾಗಿದೆ. ಇನ್ನು ಆರೋಪಿಗಳನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಬಂಧಿತ ಆರೋಪಿಗಳನ್ನು ಗೋಣಿರುದ್ರಾ ಶಿಗ್ಗಟ್ಟಿ (24), ಮಂಜುನಾಥ್ ಶಿಗ್ಗಟ್ಟಿ (23), ಲಕ್ಷ್ಮಣ ಕಬನೂರು ಹಾಗೂ ಮಾರುತಿ ಶಿಗಟ್ಟಿ ಎಂದು ಗುರುತಿಸಲಾಗಿದೆ. ಇವರನ್ನು ಬಂಕಾಪುರ ಠಾಣೆ ಪೊಲೀಸರು ಬಂಧಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಅತ್ಯಾಚಾರ ಹಾಗೂ ಪೋಕ್ಸೊ ಕಾಯ್ದೆಯಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಈ ಸುದ್ದಿಯನ್ನೂ ಓದಿ: Physical Abuse: ಮಗಳ ಮೇಲೆ ತನ್ನ ಪ್ರಿಯಕರ, ಆತನ ಸ್ನೇಹಿತ ಅತ್ಯಾಚಾರ ಎಸಗೋಕೆ ಹೆತ್ತ ತಾಯಿಯೇ ಸಪೋರ್ಟ್- ಬಿಜೆಪಿ ಮಾಜಿ ನಾಯಕಿ ಅರೆಸ್ಟ್
ಕೆಲವು ದಿನಗಳ ಹಿಂದೆಯಷ್ಟೇ ಬೆಳಗಾವಿಯಲ್ಲೂ ಇಂತಹದ್ದೇ ಒಂದು ಘಟನೆ ವರದಿಯಾಗಿದೆ. ಬಾಲಕಿ ಮೇಲೆ ಆರು ಜನ ಕಾಮುಕರು ಸಾಮೂಹಿಕ ಅತ್ಯಾಚಾರ(Physical Abuse) ಎಸಗಿರುವ ಹೀನ ಕೃತ್ಯವೊಂದು ಬೆಳಗಾವಿಯಲ್ಲಿ ನಡೆದಿದೆ. ಬಾಲಕಿಯನ್ನು ಪುಸಲಾಯಿಸಿ ಕರೆದೊಯ್ದು 6 ಜನರಿಂದ ಅತ್ಯಾಚಾರ ನಡೆಸಿದ್ದರು. ಬೆಳಗಾವಿ ತಾಲೂಕಿನ ಕಾಕತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಹೀನ ಕೃತ್ಯ ನಡೆದಿತ್ತು. ಕಾಮುಕರು ಬಾಲಕಿ ಮೇಲೆ ಎರಡು ಬಾರಿ ಅತ್ಯಾಚಾರ ಎಸಗಿದ್ದಾರೆ ಎನ್ನಲಾಗಿದೆ. 6 ತಿಂಗಳ ಹಿಂದೆ ಗ್ಯಾಂಗ್ ರೇಪ್ ಮಾಡಿ ವಿಡಿಯೋ ಮಾಡಿಕೊಂಡಿದ್ದರು. ವಿಡಿಯೋ ಇಟ್ಟುಕೊಂಡು ಬ್ಲ್ಯಾಕ್ ಮೇಲೆ ಮಾಡಿ ಮತ್ತೊಮ್ಮೆ ಅತ್ಯಾಚಾರ ಮಾಡಿದ್ದರು.