ಆಮಿಷವೊಡ್ಡಿ 9 ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ; ಆರೋಪಿ ಬಂಧನ
ರಾಜ್ಯದಲ್ಲಿ ಮತ್ತೊಂದು ಬೆಚ್ಚಿ ಬೀಳಿಸುವಂತಹ ಘಟನೆ ನಡೆದಿದ್ದು, ಚಾಕೊಲೇಟ್ ನೀಡುವುದಾಗಿ ಬಾಲಕಿಯನ್ನು ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ಬೆಂಗಳೂರಿನ ಆನೇಕಲ್ ಪೊಲೀಸ್ ಅಣಾ ವ್ಯಾಪ್ತಿಯಲ್ಲಿ ನಡೆದಿದೆ. ಆನೇಕಲ್ ಪೊಲೀಸ್ ಠಾಣೆಯಲ್ಲಿ ಆರೋಪಿ ವಿರುದ್ಧ ಪೋಕ್ಸ್ ಕೇಸ್ ದಾಖಲಾಗಿದೆ.
ಸಂಗ್ರಹ ಚಿತ್ರ -
ಬೆಂಗಳೂರು: ರಾಜ್ಯದಲ್ಲಿ ಮತ್ತೊಂದು ಬೆಚ್ಚಿ ಬೀಳಿಸುವಂತಹ ಘಟನೆ ನಡೆದಿದ್ದು, ಚಾಕೊಲೇಟ್ ನೀಡುವುದಾಗಿ ಬಾಲಕಿಯನ್ನು ಕರೆದೊಯ್ದು (Physical Abuse) ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ಬೆಂಗಳೂರಿನ ಆನೇಕಲ್ ಪೊಲೀಸ್ ಅಣಾ ವ್ಯಾಪ್ತಿಯಲ್ಲಿ ನಡೆದಿದೆ. ಅಷ್ಟೆ ಅಲ್ಲದೇ 9 ಶಾಲಾ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯಸಿದ ಆರೋಪ ಕೇಳಿ ಬಂದಿದೆ. ಕೃಷ್ಣಮೂರ್ತಿ ಅಲಿಯಾಸ್ ಕಿಟ್ಟಿ ಎಂಬಾತನಿಂದ ಈ ಒಂದು ದುಷ್ಕೃತ್ಯ ನಡೆದಿದೆ.
ಪೋಷಕರು ಬೆಳಗ್ಗೆ 8:30ಕ್ಕೆ ಮಕ್ಕಳನ್ನು ಶಾಲೆಗೆ ಬಿಟ್ಟು ಕೂಲಿ ಕೆಲಸಕ್ಕೆ ಹೋಗುತ್ತಿದ್ದರು. 10 ಗಂಟೆಗೆ ಶಾಲೆ ಆರಂಭವಾದರೂ ಬಾಲಕಿಯರು ಎಂಟೂವರೆಗೆ ಬರುತ್ತಿದ್ದನ್ನು ಮನಗಂಡ ವೃದ್ಧ ಮಕ್ಕಳಿಗೆ ಚಾಕೋಲೆಟ್ ಆಸೆ ತೋರಿಸಿ ಲೈಂಗಿಕ ಕಿರುಕುಳ ಕೊಡುತ್ತಿದ್ದ. ಶಾಲಾ ಆವರಣ ಮತ್ತು ಶೌಚಾಲಯದಲ್ಲಿ ಲೈಂಗಿಕ ದೌರ್ಜನ್ಯ ಎಸಗಿದ್ದು, ಆರೋಪಿ ಕೃತ್ಯದ ಬಗ್ಗೆ ಪೋಷಕರ ಬಳಿ ಮಕ್ಕಳು ಎಲ್ಲ ವಿಚಾರ ತಿಳಿಸಿದ್ದಾರೆ. ನಿನ್ನೆ ಬೆಳಿಗ್ಗೆ ಆರೋಪಿ ಕೃಷ್ಣ ಮೂರ್ತಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಆನೇಕಲ್ ಪೊಲೀಸ್ ಠಾಣೆಯಲ್ಲಿ ಆರೋಪಿ ವಿರುದ್ಧ ಪೋಕ್ಸ್ ಕೇಸ್ ದಾಖಲಾಗಿದೆ. ಆರೋಪಿಯ ಈ ದುಷ್ಕೃತ್ಯದಿಂದ ನೊಂದ ಮಕ್ಕಳು, ಮನೆಯಲ್ಲಿ ಪೋಷಕರ ಬಳಿ ತಮ್ಮ ನೋವನ್ನು ತೋಡಿಕೊಂಡಿದ್ದಾರೆ. ಮಕ್ಕಳ ಮಾತು ಕೇಳಿ ಬೆಚ್ಚಿಬಿದ್ದ ಪೋಷಕರು ತಕ್ಷಣವೇ ಆನೇಕಲ್ ಪೊಲೀಸ್ ಠಾಣೆಗೆ ಧಾವಿಸಿ ದೂರು ನೀಡಿದ್ದಾರೆ. ಪ್ರಕರಣದ ಗಂಭೀರತೆಯನ್ನು ಅರಿತ ಪೊಲೀಸರು ತಕ್ಷಣವೇ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.
ಕೋಣೆಗೆ ಕರೆದು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ; ಚಿತ್ರದುರ್ಗದಲ್ಲಿ ಖಾಸಗಿ ಶಾಲೆ ಶಿಕ್ಷಕನ ಬಂಧನ
ಸೊಸೆಗೆ ಲೈಂಗಿಕ ಕಿರುಕುಳ
ಮನೆಯಲ್ಲಿ ಒಬ್ಬಳೇ ಇದ್ದಾಗ ಸೊಸೆಗೆ ಮಾವನೇ ಲೈಂಗಿಕ ಕಿರುಕುಳ ನೀಡಿರುವ ಘಟನೆ ಬೆಂಗಳೂರಿನ ಆರ್.ಟಿ.ನಗರದಲ್ಲಿ ನಡೆದಿದೆ. ಮಾವನ ದುರ್ವರ್ತನೆಗೆ ಬೇಸತ್ತು ಆರ್.ಟಿ. ನಗರ ಪೊಲೀಸ್ ಠಾಣೆಗೆ ಸೊಸೆ ದೂರು ನೀಡಿದ್ದಾಳೆ. ಆರ್.ಟಿ.ನಗರದ ನಿವಾಸಿಯಾಗಿರುವ ಅಬ್ದುಲ್ ಹಫೀಜ್ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಕೇಳಿಬಂದಿದೆ. ಆರೋಪಿಯು ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯ ಫೌಂಡರ್ ಆಗಿದ್ದು, ಸಮಾಜದಲ್ಲಿ ಗೌರವಯುತ ಸ್ಥಾನ ಹೊಂದಿದ್ದರೂ ಮನೆಯಲ್ಲಿ ಮಾತ್ರ ವಿಕೃತವಾಗಿ ವರ್ತಿಸುತ್ತಿದ್ದ ಎನ್ನಲಾಗಿದೆ.