ಫುಟ್‌ಬಾಲ್‌ನಂತೆ ಮಗುವಿಗೆ ಒದ್ದ ಸೈಕೋ ರಂಜನ್ ಮೇಲೆ ಪೋಕ್ಸೋ ಕೇಸ್ ದಾಖಲಿಸಲು ಮುಂದಾದ ಪೊಲೀಸರು
ಪೊಲೀಸರು ನಡೆಸಿದ ಪ್ರಾಥಮಿಕ ತನಿಖೆ ವೇಳೆ ಸೈಕೋ ರಂಜನ್ ಮಕ್ಕಳ ಮೇಲೆ ನಡೆಸಿರೋ ವಿಕೃತಿಯ ಸಾಲು ಸಾಲು ಘಟನೆಗಳು ಬೆಳಕಿಗೆ ಬಂದಿವೆ. ಸೈಕಲ್‌ನಲ್ಲಿ ಹೋಗುತ್ತಿದ್ದ ಬಾಲಕನ ತಲೆ ಕೂದಲು ಹಿಡಿದು ಗರಗರನೇ ತಿರುಗಿಸಿ ಹಲ್ಲೆ ನಡೆಸಿದ್ದ. ಒಂದು ಮಗುವಿನ ಮೇಲೆ ಬೈಕ್ ಹತ್ತಿಸಲು ಯತ್ನಿಸಿದ್ದ. ಹೀಗೆ ಒಂದು ವಾರದ ಅಂತರದಲ್ಲಿ ನಾಲ್ಕು ಮಕ್ಕಳಿಗೆ ಹಲ್ಲೆ ಮಾಡಿ ಕಿರುಕುಳ ನೀಡಿದ್ದಾನೆ.
ಮಕ್ಕಳ ಮೇಲೆ ವಿಕೃತಿ ಮೆರೆಯುವ ಸೈಕೋ ರಂಜನ್ -
ಬೆಂಗಳೂರು, ಡಿ.20: ರಾಜಧಾನಿಯ (Bengaluru crime news) ಬೀದಿಗಳಲ್ಲಿ ಮಕ್ಕಳ ಮೇಲೆ ಹಲ್ಲೆ (child assault) ಮಾಡಿ ಕ್ರೌರ್ಯ ಪ್ರದರ್ಶಿಸುತ್ತಿದ್ದ ಸೈಕೋ ರಂಜನ್ (Psycho Ranjan) ಎಂಬ ಪಾತಕಿಯ ವಿರುದ್ಧ ಪೊಲೀಸರು ಪೋಕ್ಸೋ ಕೇಸ್ (Pocso case) ದಾಖಲಿಸಿ ಬಂಧಿಸಲು ಮುಂದಾಗಿದ್ದಾರೆ. ಈತ ಜಿಮ್ ಟ್ರೈನರ್ (Gym trainer) ಎಂದು ಗೊತ್ತಾಗಿದೆ. ಮಕ್ಕಳ ಮೇಲೆ ವಿಕೃತಿ ಮೆರೆಯುತ್ತಿದ್ದ ಈತನ ಹಲವು ಕರಾಳ ಕೃತ್ಯಗಳು ಸಿಸಿಟಿವಿ ಕ್ಯಾಮೆರಾದಲ್ಲಿ ದಾಖಲಾಗಿದ್ದವು. ಈತನನ್ನು ಹೀಗೇ ಬಿಟ್ಟರೆ ಮುಂದೆ ಮಕ್ಕಳ ಸರಣಿ ಕೊಲೆಗಾರ ಆಗುವ ಸಾಧ್ಯತೆಯನ್ನೂ ಅಲ್ಲಗಳೆಯುವಂತಿಲ್ಲ ಎಂದು ಸಂತ್ರಸ್ತರು ಆಕ್ರೋಶ ವ್ಯಕ್ತಪಡಿಸಿದ್ದರು.
ಈತ ತ್ಯಾಗರಾಜ ನಗರದ ಪೋಸ್ಟ್ ಆಫೀಸ್ ರಸ್ತೆಯಲ್ಲಿ ಆಟವಾಡುತ್ತಿದ್ದ 5 ವರ್ಷದ ಮಗುವನ್ನು ಕಾಲಿನಿಂದ ಒದ್ದು ವಿಕೃತಿ ಮೆರೆದಿದ್ದ. ಒದ್ದ ಏಟಿಗೆ ಮಗು ದೂರಕ್ಕೆ ಮುಗ್ಗರಿಸಿ ಬಿದ್ದಿತ್ತು. ಬಿದ್ದ ರಭಸಕ್ಕೆ ಮಗುವಿನ ಹಣೆ, ಕಣ್ಣಿನ ಭಾಗ, ಕೈ-ಕಾಲುಗಳಲ್ಲಿ ರಕ್ತ ಸ್ರಾವವಾಗಿತ್ತು. ಈ ಸಂಬಂಧ ಸಿಸಿಟಿವಿ ದೃಶ್ಯ ಆಧರಿಸಿ ಪೊಲೀಸರು ತನಿಖೆ ನಡೆಸಲು ಮುಂದಾಗಿದ್ದಾರೆ. ಈತ ಮಕ್ಕಳ ಮೇಲೆ ಮಾತ್ರವಲ್ಲದ ಇತರ ದಾರಿಹೋಕರ ಮೇಲೆ ವಿನಾಕಾರಣ ಹಲ್ಲೆ ನಡೆಸಲು ಮುಂದಾಗುತ್ತಿದ್ದುದೂ ಪತ್ತೆಯಾಗಿದೆ.
A Bizarre incident caught on camera.
— Neetu Khandelwal (@T_Investor_) December 19, 2025
A man kicking a child without provocation from behind while the kid was playing badminton with his mother on the street. https://t.co/HlHbX4lRVK
ಪೊಲೀಸರು ನಡೆಸಿದ ಪ್ರಾಥಮಿಕ ತನಿಖೆ ವೇಳೆ ಸೈಕೋ ರಂಜನ್ ಮಕ್ಕಳ ಮೇಲೆ ನಡೆಸಿರೋ ವಿಕೃತಿಯ ಸಾಲು ಸಾಲು ಘಟನೆಗಳು ಬೆಳಕಿಗೆ ಬಂದಿವೆ. ಸೈಕಲ್‌ನಲ್ಲಿ ಹೋಗುತ್ತಿದ್ದ ಬಾಲಕನ ತಲೆ ಕೂದಲು ಹಿಡಿದು ಗರಗರನೇ ತಿರುಗಿಸಿ ಹಲ್ಲೆ ನಡೆಸಿದ್ದ. ಒಂದು ಮಗುವಿನ ಮೇಲೆ ಬೈಕ್ ಹತ್ತಿಸಲು ಯತ್ನಿಸಿದ್ದ. ಹೀಗೆ ಒಂದು ವಾರದ ಅಂತರದಲ್ಲಿ ನಾಲ್ಕು ಮಕ್ಕಳಿಗೆ ಹಲ್ಲೆ ಮಾಡಿ ಕಿರುಕುಳ ನೀಡಿದ್ದಾನೆ. ವಿಪರ್ಯಾಸ ಅಂದರೆ ಇಷ್ಟೆಲ್ಲಾ ಘಟನೆಗಳು ನಡೆದಿದ್ದರೂ ಯಾವುದೇ ಮಕ್ಕಳ ಪೋಷಕರು, ಯಾವುದೇ ದೂರು ನೀಡಿರಲಿಲ್ಲ.
ಆಟವಾಡುತ್ತಿದ್ದ ಬಾಲಕನನ್ನು ಫುಟ್‌ಬಾಲ್‌ನಂತೆ ಒದ್ದ ಜಿಮ್ ಟ್ರೈನರ್; ಕ್ರೂರ ಕೃತ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!
ಈ ಜಿಮ್ ಟ್ರೈನರ್‌ಗೆ ದಾರಿಹೋಕರಿಗೆ ಅನಗತ್ಯವಾಗಿ ಬೈಯುವುದು ಮತ್ತು ಮಕ್ಕಳ ಮೇಲೆ ಹಲ್ಲೆ ನಡೆಸುವುದು ಚಾಳಿಯಾಗಿದೆ ಎಂದು ಸ್ಥಳೀಯರು ಹೇಳಿದ್ದಾರೆ. ಬಾಲಕನ ತಾಯಿ ನೀಡಿದ ದೂರಿನ ಮೇರೆಗೆ ಬನಶಂಕರಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದರೂ, ಸದ್ಯ ಆತ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾನೆ. ಈಗಾಗಲೇ ಒಂದು ಪ್ರಕರಣದಲ್ಲಿ ಆರೋಪಿಯನ್ನು ವಿಚಾರಣೆ ನಡೆಸಲಾಗಿದೆ. ಸದ್ಯ ಆರೋಪಿ ಸ್ಟೇಷನ್ ಬೇಲ್ ಪಡೆದು ಚೆನ್ನೈಗೆ ತೆರಳಿದ್ದಾನೆ. ಆತನ ವಿರುದ್ಧ ಪೋಕ್ಸೋ ಕೇಸ್ ದಾಖಲಿಸಿ ಬಂಧಿಸಲು ಪೊಲೀಸರು ಮುಂದಾಗಿದ್ದಾರೆ.