ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

POCSO Case: ಚಾಕೊಲೇಟ್‌ ನೀಡಿ ದೌರ್ಜನ್ಯ ಎಸಗಿದ ವಾಹನ ಚಾಲಕ, 10 ತರಗತಿ ಬಾಲಕಿಗೆ ಹೆರಿಗೆ

ಹಾಸನ ಜಿಲ್ಲೆಯ ಖಾಸಗಿ ಶಾಲೆಯೊಂದರಲ್ಲಿ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಬಾಲಕಿಯ ಮೇಲೆ ಅದೇ ಶಾಲೆಯಲ್ಲಿ ವಾಹನ ಚಾಲಕನಾಗಿದ್ದ ರಂಜಿತ್ ಎಂಬಾತ 8 ತಿಂಗಳಿನಿಂದ ಲೈಂಗಿಕ ದೌರ್ಜನ್ಯವೆಸಗಿದ್ದು, ಆಕೆ ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ. ಆರೋಪಿಯನ್ನು ಚನ್ನರಾಯಪಟ್ಟಣ ನಗರ ಠಾಣೆಯ ಪೊಲೀಸರು ಈಗಾಗಲೇ ಬಂಧಿಸಿದ್ದಾರೆ.

ಸಾಂದರ್ಭಿಕ ಚಿತ್ರ

ಹಾಸನ, ಡಿ.24 : ಕಳೆದ ಕೆಲವು ದಿನಗಳ ಹಿಂದೆ ಶಿವಮೊಗ್ಗ ಹಾಗೂ ಯಾದಗಿರಿ ಜಿಲ್ಲೆಯಲ್ಲಿ ಅಪ್ರಾಪ್ತ ಬಾಲಕಿಯರು ಮಗುವಿಗೆ ಜನ್ಮ ನೀಡಿದ್ದ ಘಟನೆ ವರದಿಯಾಗಿತ್ತು. ಈ ಘಟನೆ ಮಾಸುವ ಮುನ್ನವೇ ಹಾಸನ (Hassan news) ಜಿಲ್ಲೆಯಲ್ಲೂ ಅಂತಹದ್ದೇ ವರದಿಯಾಗಿದೆ.‌ ಹತ್ತನೇ ತರಗತಿಯ (sslc student) ವಿದ್ಯಾರ್ಥಿನಿ, ಅಪ್ರಾಪ್ತ ಬಾಲಕಿಯೊಬ್ಬಳಿಗೆ ಪಾಪಿಯೊಬ್ಬ ನಿತ್ಯ ಚಾಕೋಲೆಟ್​ ನೀಡಿ ಆಕೆಯ ಮೇಲೆ ಲೈಂಗಿಕ (POCSO case) ದೌರ್ಜನ್ಯವೆಸಗಿದ್ದು, ಈ ಹಿನ್ನೆಲೆಯಲ್ಲಿ ಆಕೆ ಮಗುವಿಗೆ ಜನ್ಮ ನೀಡಿದ್ದಾಳೆ.

ಹಾಸನ ಜಿಲ್ಲೆಯ ಖಾಸಗಿ ಶಾಲೆಯೊಂದರಲ್ಲಿ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಬಾಲಕಿಯ ಮೇಲೆ ಅದೇ ಶಾಲೆಯಲ್ಲಿ ವಾಹನ ಚಾಲಕನಾಗಿದ್ದ ರಂಜಿತ್ ಎಂಬಾತ 8 ತಿಂಗಳಿನಿಂದ ಲೈಂಗಿಕ ದೌರ್ಜನ್ಯವೆಸಗಿದ್ದು, ಆಕೆ ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ.

ಆರೋಪಿಯನ್ನು ಚನ್ನರಾಯಪಟ್ಟಣ ನಗರ ಠಾಣೆಯ ಪೊಲೀಸರು ಈಗಾಗಲೇ ಬಂಧಿಸಿದ್ದಾರೆ. ಅಲ್ಲದೇ, ನ್ಯಾಯಾಂಗ ಬಂಧನಕ್ಕೂ ಒಪ್ಪಿಸಿದ್ದಾರೆ. ಆತನ ಮೇಲೆ ಪೋಕ್ಸೋ ಕೇಸ್‌ ಹಾಕಲಾಗಿದೆ. ಬಾಲಕಿ ಮತ್ತು ಮಗುವನ್ನು ಕೆಲ ದಿನಗಳ ಕಾಲ ಆರೈಕೆ ಬಳಿಕ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಾಂತ್ವನ ಕೇಂದ್ರಕ್ಕೆ ಶೀಘ್ರ ಒಪ್ಪಿಸಲಾಗುವುದು ಎಂದು ಪ್ರಕಟಣೆಯಲ್ಲಿ ಹಾಸನ ಡಿಹೆಚ್​ಒ ಅನಿಲ್ ತಿಳಿಸಿದ್ದಾರೆ.

ಗಾಂಜಾ ಬಗ್ಗೆ ದೂರು ನೀಡಿದ್ದಕ್ಕೆ ಮಕ್ಕಳ ಮೇಲೆ ಹಲ್ಲೆ ನಡೆಸಿದ ಅಪ್ರಾಪ್ತ ಬಾಲಕರು

ಕೌಟುಂಬಿಕ ಕಲಹ, 2 ತಿಂಗಳ ಗರ್ಭಿಣಿ ನೇಣಿಗೆ ಶರಣು

ಚಿತ್ರದುರ್ಗ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ 2 ತಿಂಗಳ ಗರ್ಭಿಣಿ ನೇಣಿಗೆ ಶರಣಾಗಿರುವ ಘಟನೆ ಚಿತ್ರದುರ್ಗ (Chitradurga) ತಾಲೂಕಿನ ಕಾಟಿಹಳ್ಳಿ ಗ್ರಾಮದಲ್ಲಿ ನಡೆದಿದೆ. ಪುಷ್ಪ (25) ಮೃತ ಮಹಿಳೆ. ಪತಿ, ಕಾಟಿಹಳ್ಳಿ ಗ್ರಾಮದ ಹರೀಶ್ ನಗರದ ಖಾಸಗಿ ಗಾರ್ಮೆಂಟ್ಸ್ ಕಾರ್ಮಿಕ. ಪುಷ್ಪ ಹಾಗೂ ಹರೀಶ್‌ಗೆ ಒಂದೂವರೆ ವರ್ಷದ ಒಂದು ಮದ್ದಾದ ಗಂಡು ಮಗುವಿದೆ.

ಗಾರ್ಮೆಂಟ್ಸ್‌ಗೆ ಹೋಗುತ್ತಿದ್ದ ಪುಷ್ಪ ಹಾಗೂ ಹರೀಶ್ ಮಧ್ಯೆ ಪ್ರೇಮಾಂಕುರವಾಗಿ ರಿಜಿಸ್ಟರ್ ಮ್ಯಾರೇಜ್ ಆಗಿದ್ದರು. ಆದರೆ ಅನ್ಯಜಾತಿ ಎಂಬ ಕಾರಣಕ್ಕೆ ಹರೀಶ್ ಮನೆಯವರು ಪುಷ್ಪ ಹಾಗೂ ಆಕೆಯ ಪೋಷಕರನ್ನು ಸೇರಿಸಿಕೊಂಡಿರಲಿಲ್ಲ. ಈ ಮದ್ಯೆ, ಸಣ್ಣಪುಟ್ಟ ವಿಚಾರಕ್ಕೆ ಪದೇ ಪದೇ ಕೌಟಂಬಿಕ ಕಲಹ ಶುರುವಾಗಿದ್ದು, ಪರಸ್ಪರ ವಿಚ್ಛೇದನ ಪಡೆಯುವ ಮಟ್ಟಕ್ಕೆ ತಿರುಗಿತ್ತು. ಕಳೆದ ಎರಡು ದಿನಗಳ ಹಿಂದೆಯಷ್ಟೇ ದಂಪತಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದರು. ಆಗ ರಾಜಿಸಂಧಾನದೊಂದಿಗೆ ಮನೆಗೆ ತೆರಳಿದ್ದ ಪುಷ್ಪ ನೇಣಿಗೆ ಶರಣಾಗಿದ್ದಾಳೆ. ಮನೆಯಲ್ಲಿದ್ದ ಪತಿ ಹರೀಶ್, ಅಸ್ವಸ್ಥಳಾಗಿದ್ದ ಪತ್ನಿಯನ್ನು ಆಸ್ಪತ್ರೆಗೆ ಸೇರಿಸುವ ಮಾರ್ಗಮಧ್ಯೆ ಪುಷ್ಪ ಕೊನೆಯುಸಿರೆಳೆದಿದ್ದಾಳೆ.

ರೌಡಿ ಹತ್ಯೆ ಪ್ರಕರಣದಲ್ಲಿ ಶಾಸಕ ಬೈರತಿ ಬಸವರಾಜುಗೆ ಲುಕ್‌ಔಟ್‌ ನೋಟಿಸ್‌ ಸಾಧ್ಯತೆ

ವಿಷಯ ತಿಳಿದು ಆಸ್ಪತ್ರೆಗೆ ದೌಡಾಯಿಸಿದ ಪುಷ್ಪ ಪೋಷಕರು ಹಾಗೂ ಸಂಬಂಧಿಗಳು, ಹರೀಶ್ ವಿರುದ್ಧ ಕೆಂಡಕಾರಿದ್ದಾರೆ. ಪುಷ್ಪ ಆತ್ಮಹತ್ಯೆ ಮಾಡಿಕೊಳ್ಳುವಂಥ ಹುಡುಗಿಯಲ್ಲ. ಹರೀಶನೇ ಈ ಕೃತ್ಯವೆಸಗಿ ಇದು ಸೂಸೈಡ್ ಎಂದು ಬಿಂಬಿಸಿದ್ದಾನೆಂದು ಆರೋಪಿಸಿದ್ದಾರೆ. ಚಿತ್ರದುರ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪತಿ ಹರೀಶ್ ನಾಪತ್ತೆ ಆಗಿದ್ದಾನೆ. ಈ ಪ್ರಕರಣದ ಹಿಂದೆ ಹರೀಶ್‌ ಹಾಗೂ ಮತ್ತೊಬ್ಬ ಮಹಿಳೆಯ ಅಕ್ರಮ ಸಂಬಂಧದ ನೆರಳು ಸಹ ಇದೆ ಎನ್ನಲಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.

ಹರೀಶ್‌ ಕೇರ

View all posts by this author