ಮಹಿಳೆಯರೊಬ್ಬರ ಜೊತೆ ಅಸಭ್ಯವಾಗಿ ವರ್ತಿಸಿದ್ದಾರೆ ಎಂದು ಆರೋಪಿಸಿ ಹೆಡ್ ಕಾನ್ಸ್‌ಟೆಬಲ್ ಹಿಗ್ಗಾಮುಗ್ಗ ಥಳಿಸಿದ ಘಟನೆ ಗಂಗಮ್ಮನ ಗುಡಿ ಸರ್ಕಲ್ ಬಳಿ ನಡೆದಿದೆ. ಸಂಜಯ್ ನಗರ ಠಾಣೆಯ ಹೆಡ್ ಕಾನ್ಸ್‌ಟೆಬಲ್ ಮಂಜುನಾಥ್ ಅವರ ಮೇಲೆ ಹಲ್ಲೆ ನಡೆದಿದೆ. ಜಾಲಹಳ್ಳಿಗೆ ತೆರಳಲು ಅವರು ಬಸ್ ಹತ್ತಿದ್ದರು. ಬಸ್‌ನಲ್ಲಿ ಮಹಿಳೆಯೊಬ್ಬರ ಜೊತೆ ಅಸಭ್ಯವಾಗಿ ವರ್ತಿಸಿದ್ದಾರೆ ಎಂದು ಆರೋಪಿಸಲಾಗಿದೆ.
ಮಹಿಳೆ ಸಂಬಂಧಿಕರಿಗೆ ಕರೆ ಮಾಡಿ, ಗಂಗಮ್ಮನ ಗುಡಿ ಸರ್ಕಲ್ ಬಳಿಗೆ ಕರೆಸಿಕೊಂಡಿದ್ದಳು. ಬಸ್ ಅಲ್ಲಿಗೆ ಬರುತ್ತಿದ್ದಂತೆ ಯುವಕರ ಗುಂಪು ಹಲ್ಲೆ ನಡೆಸಿದೆ. ನಾನು ಪೊಲೀಸ್ ಪೊಲೀಸ್ ಎಂದರೂ ಬಿಡದೆ ಬಟ್ಟೆ ಹರಿದು ಹಲ್ಲೆ ಮಾಡಿದ್ದಾರೆ. ಹಲ್ಲೆಯಿಂದ ಮುಖ ಹಾಗೂ ಮೈಮೇಲೆ ಗಾಯಗಳಾಗಿದ್ದು, ಅವರಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಬಾಲಕರಿಗೆ ಮನಸೋಇಚ್ಛೆ ಥಳಿತ; ಒಬ್ಬ ಸಾವು, ಮತ್ತೊಬ್ಬ ಗಂಭೀರ
ಒಡಿಶಾದ ಮಯೂರ್‌ಭಂಜ್ ಜಿಲ್ಲೆಯ ಹೆರೋಗೋಡಾ ಎಂಬಲ್ಲಿ 9ನೇ ತರಗತಿ ವಿದ್ಯಾರ್ಥಿಯನ್ನು ಗ್ರಾಮಸ್ಥರು ಮನಸೋಇಚ್ಛೆ ಹಲ್ಲೆ ನಡೆಸಿ ಕೊಂದು ಹಾಕಿದ್ದಾರೆ. ಸಂಬಿತ್ ಬಿಂಧಾನಿ ಮೃತಪಟ್ಟ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ಈತ ರೈರಂಗಪುರ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯ ಭೂತಕಬಾದಿ ಗ್ರಾಮದ ರಾಜ್‌ಕುಮಾರ್ ಬಿಂಧಾನಿ ಎಂಬವರ ಒಬ್ಬನೇ ಮಗ. ಬಸಿಂಗಿ ಗ್ರಾಮದಲ್ಲಿರುವ ತಮ್ಮ ಮಾವನ ಮನೆಯಲ್ಲಿದ್ದ ಬಾಲಕ, ಸರ್ಕಾರಿ ಪ್ರೌಢಶಾಲೆಯಲ್ಲಿ ಓದುತ್ತಿದ್ದ. ಮಗನ ಸಾವಿನ ಸಂಬಂಧ ಟಿರಿಂಗ್ ಪೊಲೀಸ್ ಠಾಣೆಯಲ್ಲಿ ಪೋಷಕರು ದೂರು ದಾಖಲಿಸಿದ್ದು, ಕೊಲೆ ಪ್ರಕರಣ ದಾಖಲಾಗಿದೆ. ಘಟನೆಯ ತನಿಖೆ ನಡೆಸಿದ ಪೊಲೀಸರು ಒಟ್ಟು 12 ಆರೋಪಿಗಳನ್ನು ಬಂಧಿಸಿದ್ದಾರೆ.
ಬಿಎಂಟಿಸಿ ಬಸ್‌ನಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ: ಕಾಮುಕನಿಗೆ ಕಪಾಳಮೋಕ್ಷ ಮಾಡಿದ ಚಾಲಕ; ವಿಡಿಯೊ ವೈರಲ್
ಬಾಲಕನ ತಂದೆ ರಾಜ್‌ಕುಮಾರ್ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ, "ಸೋಮವಾರ ಸಂಜೆ ಇಂದಖೋಲಿ ಹೆರೋಗೋಡಾ ಗ್ರಾಮದ ಕೆಲವರು ಕಳ್ಳತನ ಮಾಡಿದ್ದಾರೆ ಎಂದು ಆರೋಪಿಸಿ ಸಂಬಿತ್ ಸೇರಿದಂತೆ ಇಬ್ಬರು ಬಾಲಕರನ್ನು ಥಳಿಸಿದ್ದರು. ಇಬ್ಬರೂ ಗಂಭೀರ ಸ್ಥಿತಿಯಲ್ಲಿದ್ದ ಕಾರಣ ಯಾರೋ ನನಗೆ ಫೋನ್ ಮಾಡಿ ಘಟನೆ ಬಗ್ಗೆ ತಿಳಿಸಿದರು. ನಾನು ಸ್ಥಳ ತಲುಪುವ ಮೊದಲೇ ಪೊಲೀಸರು ಗಂಭೀರವಾಗಿ ಗಾಯಗೊಂಡ ಇಬ್ಬರನ್ನೂ ರಕ್ಷಿಸಿ ಜರಾಧಿಹಿ ವೈದ್ಯಕೀಯ ಕಾಲೇಜಿಗೆ ಕರೆದೊಯ್ದಿದ್ದರು ಎಂಬುದು ತಿಳಿಯಿತು. ನಾನು ತಕ್ಷಣ ಅಲ್ಲಿಗೆ ಹೋದೆ. ರಾಯ್‌ರಂಗಪುರ ವೈದ್ಯಕೀಯ ಕಾಲೇಜಿನಲ್ಲಿ ವೈದ್ಯರು, ನನ್ನ ಮಗ ಮೃತಪಟ್ಟಿರುವುದಾಗಿ ಘೋಷಿಸಿದರು" ಎಂದು ಕಣ್ಣೀರು ಸುರಿಸಿದ್ದಾರೆ.