ಬಿಗ್​ಬಾಸ್ ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Bengaluru Robbery Case: ಬೆಂಗಳೂರು ದರೋಡೆ ಪ್ರಕರಣದಲ್ಲಿದೆಯಾ ಕಾನ್ಸ್‌ಟೇಬಲ್ ಕೈವಾಡ? ಶಾಕಿಂಗ್‌ ಸಂಗತಿ ಬಯಲು

Bengaluru News: ಬೆಂಗಳೂರಿನಲ್ಲಿ ಡೇರಿ ಸರ್ಕಲ್‌ ಬಳಿ ನಡೆದಿದ್ದ ರಾಬರಿ ಕೇಸ್‌ಗೆ ಇದೀಗ್‌ ಬಿಗ್‌ ಟ್ವಿಸ್ಟ್‌ ದೊರಕಿದ್ದು, ಪೊಲೀಸ ಕಾನ್ಸ್‌ಟೇಬಲ್‌ ಕೈವಾಡವಿರುವ ಬಗ್ಗೆ ಅನುಮಾನ ವ್ಯಕ್ತವಾಗುತ್ತಿದೆ. ಈಗಾಗಲೇ ಇಬ್ಬರು ದರೋಡೆಕೋರರನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ.

ಬೆಂಗಳೂರು ದರೋಡೆ ಪ್ರಕರಣದಲ್ಲಿದೆಯಾ ಕಾನ್ಸ್‌ಟೇಬಲ್ ಕೈವಾಡ?

ಸಾಂಧರ್ಬಿಕ ಚಿತ್ರ -

Vishakha Bhat
Vishakha Bhat Nov 21, 2025 6:59 AM

ಬೆಂಗಳೂರು: ರಾಜ್ಯ ರಾಜಧಾನಿಯ ಹೃದಯ ಭಾಗದಲ್ಲಿ ನಡೆದಿದ್ದ 7.11 ಕೋಟಿ ರೂ. ದರೋಡೆ ಪ್ರಕರಣಕ್ಕೆ ಇದೀಗ ದೊಡ್ಡ ತಿರುವು ಸಿಕ್ಕಿದೆ. (Bengaluru Robbery Case) ದರೋಡೆ ಪ್ರಕರಣ ಹಿಂದೆ ಪೊಲೀಸರ ಕೈವಾಡವಿರುವ ಬಗ್ಗೆ ಅನುಮಾನ ವ್ಯಕ್ತವಾಗುತ್ತಿದೆ. ಈಗಾಗಲೇ ಇಬ್ಬರು ದರೋಡೆಕೋರರನ್ನು ಬಂಧಿಸಿದ್ದು, ಅವರ ಜೊತೆ ಪೊಲೀಸ್‌ ಬ್ಸ್‌ಸ್ಟೇಬಲ್‌ ನಿರಂತರ ಸಂಪರ್ಕದಲ್ಲಿದ್ದ ಎನ್ನುವ ವಿಚಾರ ಮೂಲಗಳಿಂದ ಬಹಿರಂಗವಾಗಿದೆ. ದರೋಡೆ ಬಗ್ಗೆ ತರಬೇತಿ ನೀಡಿರುವ ಆರೋಪದ ಮೇಲೆ ಪೊಲೀಸ್ ಕಾನ್ಸ್​ಟೇಬಲ್ ವಿಚಾರಣೆ ನಡೆಸಲಾಗುತ್ತಿದೆ. ಗೋವಿಂದಪುರ ಠಾಣೆಯ ಕಾನ್ಸ್​ಟೇಬಲ್ ಅಣ್ಣಪ್ಪ ನಾಯಕ ಅವರನ್ನು ದಕ್ಷಿಣ ವಿಭಾಗದ ಪೊಲೀಸರು ವಿಚಾರಗೆ ಒಳಪಡಿಸಿದ್ದಾರೆ.

ಘಟನೆ ನಡೆದು 24 ಗಂಟೆಯ ಒಳಗೆ ಬಾಣಸವಾಡಿಯ ಕಲ್ಯಾಣ ನಗರದ ಇಬ್ಬರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ದರೋಡೆಯ ವೇಳೆ ಕರ್ನಾಟಕ ನೋಂದಣಿ ನಂಬರ್ ಪ್ಲೇಟ್‌ ಹಾಕಿದ್ದ ಆರೋಪಿಗಳು, ಪರಾರಿಯಾದ ಬಳಿಕ ಯುಪಿ ನೋಂದಣಿಯ ನಂಬರ್ ಪ್ಲೇಟ್ ಹಾಕಿಕೊಂಡು ಓಡಾಡುತ್ತಿದ್ದರು ಎನ್ನಲಾಗಿದೆ. ಸಿಸಿಟಿವಿ ದೃಶ್ಯ ಮತ್ತು ಲೊಕೇಶನ್ ಆಧರಿಸಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಹಿಂದಿ ಮಾತನಾಡಿ ಆರೋಪಿಗಳು ದಾರಿ ತಪ್ಪಿಸುವ ಕೆಲಸ ಮಾಡಿದ್ದರು. ಆದರೆ, ಅನುಮಾಸ್ಪದವಾಗಿ ವರ್ತಿಸಿದ್ದರಿಂದ ಸಿಕ್ಕಿಬಿದ್ದಿದ್ದಾರೆ.

Bengaluru Robbery Case: ಬೆಂಗಳೂರು ದರೋಡೆ ಪ್ರಕರಣ; ಶಂಕಿತ ಆರೋಪಿಗಳ ಪೋಟೊ ಬಿಡುಗಡೆ ಮಾಡಿದ ಪೊಲೀಸರು

ವಾಹನದ ಜಿಪಿಎಸ್ ಆಪ್ ಮಾಡಲು ಸಹಕರಿಸಿದ್ದ ಆರೋಪ ಮೇಲೆ CMS ಏಜೆನ್ಸಿ ಮಾಜಿ ಉದ್ಯೋಗಿಯನ್ನು ಪೊಲೀಸರ ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಸದ್ಯ ತನಿಖೆ ತೀವ್ರಗತಿಯಲ್ಲಿ ನಡೆಯುತ್ತಿದ್ದು, ಆರೋಪಿಗಳಿಗಾಗಿ ಬಲೆ ಬೀಸಲಾಗಿದೆ.

ಏನಿದು ಘಟನೆ?

ಬೆಂಗಳೂರಿನಲ್ಲಿ ನ.19ರಂದು ಹಾಡಹಗಲೇ 7.11 ಕೋಟಿ ರೂ. ದರೋಡೆ ಮಾಡಿರುವ ಘಟನೆ ನಡೆದಿತ್ತು. ಎಟಿಎಂಗಳಿಗೆ ಹಣ ಹಾಕಲು ಡೇರಿ ಸರ್ಕಲ್​ ಫ್ಲೈಓವರ್ ಮೇಲೆ ಹೋಗುತ್ತಿದ್ದ ವಾಹನ ತಡೆದು ದರೋಡೆ ಮಾಡಲಾಗಿತ್ತು. ಸೌತ್ ಎಂಡ್ ಸರ್ಕಲ್ ಬಳಿಯ ಎಟಿಎಂ ಕಡೆ ಹಣ ತುಂಬಿಸಿಕೊಂಡು ಸಿಎಂಎಸ್​ ಏಜೆನ್ಸಿ ಸಿಬ್ಬಂದಿ ಹೊರಟಿದ್ದರು. ಈ ವೇಳೆ ಇನ್ನೋವಾ ಕಾರಿನಲ್ಲಿ ಬಂದಿದ್ದ 7-8 ಜನರ ಗ್ಯಾಂಗ್ ಆರ್‌ಬಿಐ ಅಧಿಕಾರಿಗಳ ಸೋಗಿನಲ್ಲಿ ಬಂದು ಗನ್​ಮ್ಯಾನ್ ಸೇರಿದಂತೆ ಎಲ್ಲರನ್ನೂ ಅಲ್ಲೇ ಇಳಿಸಿದ್ದ ಗ್ಯಾಂಗ್​, ವಾಹನ ಸಮೇತ ಚಾಲಕನನ್ನು ಡೇರಿ ಸರ್ಕಲ್​ಗೆ ಕರೆದೊಯ್ದಿದ್ದರು. ಡೇರಿ ಸರ್ಕಲ್ ಬಳಿ ಫ್ಲೈಓವರ್​ನಲ್ಲಿ ವಾಹನ ನಿಲ್ಲಿಸಿ, ವಾಹನದಲ್ಲಿದ್ದ ಹಣವನ್ನು ಇನ್ನೋವಾ ಕಾರಿಗೆ ತುಂಬಿಕೊಂಡು ಪರಾರಿಯಾಗಿದ್ದರು.