Belagavi News: ಕಾನ್ಸ್ಟೇಬಲ್ ಗೆ ಚಾಕು ಇರಿತ; ಗ್ಯಾಂಗ್ ರೇಪ್ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್
ಬಂಧಿಸಲು ತೆರಳಿದ್ದ ಪೊಲೀಸ್ ಕಾನ್ಸ್ಟೇಬಲ್ ಗೆ ಚಾಕು ಇರಿದು ಪರಾರಿ ಯಾಗಲು ಯತ್ನಿಸಿದ್ದ ದರೋಡೆ ಹಾಗು ಗ್ಯಾಂಗ್ ರೇಪ್ ಆರೋಪಿ ಕಾಲಿಗೆ ಪೊಲೀಸರಿಂದ ಫೈರಿಂಗ್ ನಡೆಸಿರುವ ಘಟನೆ ಬೆಳಗಾವಿ ಜಿಲ್ಲೆಯ ಕಿತ್ತೂರು ಪಟ್ಟಣದ ಹೊರವಲಯದಲ್ಲಿ ನಡೆದಿದೆ.

-

ಬೆಳಗಾವಿ: ಬಂಧಿಸಲು ತೆರಳಿದ್ದ ಪೊಲೀಸ್ ಕಾನ್ಸ್ಟೇಬಲ್ ಗೆ ಚಾಕು (Belagavi News) ಇರಿದು ಪರಾರಿ ಯಾಗಲು ಯತ್ನಿಸಿದ್ದ ದರೋಡೆ ಹಾಗು ಗ್ಯಾಂಗ್ ರೇಪ್ ಆರೋಪಿ ಕಾಲಿಗೆ ಪೊಲೀಸರಿಂದ ಫೈರಿಂಗ್ ನಡೆಸಿರುವ ಘಟನೆ ಬೆಳಗಾವಿ ಜಿಲ್ಲೆಯ ಕಿತ್ತೂರು ಪಟ್ಟಣದ ಹೊರವಲಯದಲ್ಲಿ ನಡೆದಿದೆ. ರಮೇಶ್ ಕಿಲ್ಲಾರ್ ಕಾಲಿಗೆ ಕಿತ್ತೂರು ಠಾಣೆ ಪೊಲೀಸರು ಫೈರಿಂಗ್ ನಡೆಸಿದ್ದಾರೆ. ಬಂಧಿಸಲು ತೆರಳಿದ್ದಾಗ ಪಿಸಿಗೆ ಚಾಕು ಇರಿದು ಪರಾರಿ ಯಾಗಲು ಯತ್ನಿಸಿದ್ದಾನೆ. ಕಾನ್ಸ್ಟೇಬಲ್ ಷರೀಫ್ ಗೆ ಚಾಕು ಇರಿದು ರಮೇಶ್ ಪರಾರಿಯಾಗಲು ಯತ್ನಿಸಿದ್ದಾನೆ ಎಂದು ಪೊಲೀಸರು ತೆರಳಿದ್ದಾರೆ.
ಆತ್ಮ ರಕ್ಷಣೆಗಾಗಿ ಪಿಎಸ್ಐ ಪ್ರವೀಣ್ ಗಂಗೊಳ್ಳಿ ಅವರು ರಮೇಶ್ ಮೇಲೆ ಫೈರಿಂಗ್ ನಡೆಸಿದ್ದಾರೆ ಗಾಯಗೊಂಡ ಆರೋಪಿ ರಮೇಶ್ ಗೆ ಬಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ದರೋಡೆ ಸಾಮೂಹಿಕ ಅತ್ಯಾಚಾರ ಸೇರಿದಂತೆ ಅಕ್ರಮ ಶಸ್ತ್ರಾಸ್ತ್ರ ಸೇರಿದಂತೆ ಹಲವು ಪ್ರಕರಣಗಳಲ್ಲಿ ರಮೇಶ್ ಕಿಲ್ಲರ್ ಭಾಗಿಯಾಗಿದ್ದ ಕಿತ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರತ್ಯೇಕ ಘಟನೆಯಲ್ಲಿ, ರಾಜಧಾನಿ ಬೆಂಗಳೂರಿನಲ್ಲಿ ಬೆಚ್ಚಿ ಬೀಳಿಸುವಂತಹ ಘಟನೆ ನಡೆದಿದ್ದು ಸ್ನೇಹಿತನಿಂದಲೇ ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಕೇಳಿ ಬಂದಿದೆ. ಸ್ನೇಹಿತ ಅಷ್ಟೆ ಅಲ್ಲದೇ ಆತನ ತಂದೆ ಸಹ ಯುವತಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಕೇಳಿ ಬಂದಿದೆ.
ಈ ಸುದ್ದಿಯನ್ನೂ ಓದಿ: Triple Murder Case: ಕೊಲೆಯಾದ ರೌಡಿಶೀಟರ್ ಪತ್ನಿಯ ಶಪಥ ಈಡೇರಿಸಲು ತ್ರಿವಳಿ ಕೊಲೆ! 10 ಆರೋಪಿಗಳ ಸೆರೆ
ಬೆಂಗಳೂರಿನ ಸುಬ್ರಮಣ್ಯ ನಗರ ಠಾಣಾ ವ್ಯಾಪ್ತಿಯಲ್ಲಿ ಈ ಒಂದು ಘಟನೆ ನಡೆದಿದೆ. ಯುವತಿಯ ಸ್ನೇಹಿತ ನಿರಂಜನ್ ಹಾಗು ಆತನ ತಂದೆ ರಾಜಶೇಖರ್ ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದು ಅಲ್ಲದೆ ಬ್ಲಾಕ್ ಮೇಲ್ ಮಾಡಿರುವ ಆರೋಪ ಕೇಳಿ ಬಂದಿದ್ದು ವಿಡಿಯೋ ಮಾಡಿ ಯುವತಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ. ಇದೆ ವೇಳೆ ನಿರಂಜನ್ ತಂದೆಯಿಂದಲೂ ಬ್ಲಾಕ್ ಮೇಲ್ ಆರೋಪ ಕೇಳಿ ಬಂದಿದೆ ಸದ್ಯ ನಿರಂಜನ್ ಹಾಗು ರಾಜಶೇಖರ್ ವಿರುದ್ಧ ಇದೀಗ ಎಫ್ಐಆರ್ ದಾಖಲಾಗಿದೆ.ಸುಬ್ರಮಣ್ಯ ನಗರ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ.