ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Shidlaghatt Crime: ಪೊಲೀಸರ ಚುರುಕಿನ ಕಾರ್ಯಾಚರಣೆಗೆ ಸಿಕ್ಕಿಬಿದ್ದ ವಾಹನ ಕಳ್ಳ ಕಳುವಾಗಿದ್ದ 5 ವಾಹನಗಳ ಜಪ್ತಿ

ಸಾರ್ವಜನಿಕ ಆಸ್ಪತ್ರೆ ಬಳಿ ತಮ್ಮ ದ್ವಿಚಕ್ರ ವಾಹನ ಕಳುವಾಗಿರುವ ಕುರಿತು ಇದಾಯತ್ ಎಂಬವರು ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ದೂರು ದಾಖಲಿಸಿಕೊಂಡ ಪೊಲೀಸರು ಪ್ರಕರಣ ವನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ಆರಂಭಿಸಿದರು. ಸಿಪಿಐ ಆನಂದ್ ಕುಮಾರ್ ಮಾರ್ಗ ದರ್ಶನದಲ್ಲಿ ಪಿಎಸ್‌ಐ ವೇಣುಗೋಪಾಲ್ ಹಾಗೂ ಸಿಬ್ಬಂದಿ ವಿಶೇಷ ಕಾರ್ಯಾಚರಣೆ ನಡೆಸಿದರು.

ಸಿಕ್ಕಿಬಿದ್ದ ವಾಹನ ಕಳ್ಳ ಕಳುವಾಗಿದ್ದ ೫ ವಾಹನಗಳ ಜಪ್ತಿ....

ನಗರದ ಸಾರ್ವಜನಿಕ ಆಸ್ಪತ್ರೆ ಮುಂಭಾಗ ದ್ವಿಚಕ್ರ ವಾಹನಗಳನ್ನು ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಶಿಡ್ಲಘಟ್ಟ ನಗರ ಪೊಲೀಸರು ಬಂಧಿಸಿ, ಕಳುವಾಗಿದ್ದ ಐದು ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. -

Profile
Ashok Nayak May 8, 2026 11:49 PM

ಶಿಡ್ಲಘಟ್ಟ: ನಗರದ ಸಾರ್ವಜನಿಕ ಆಸ್ಪತ್ರೆ ಮುಂಭಾಗ ದ್ವಿಚಕ್ರ ವಾಹನಗಳನ್ನು ಕಳ್ಳತನ ಮಾಡು ತ್ತಿದ್ದ ಆರೋಪಿಯನ್ನು ಶಿಡ್ಲಘಟ್ಟ ನಗರ ಪೊಲೀಸರು ಬಂಧಿಸಿ, ಕಳುವಾಗಿದ್ದ ಐದು ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.

ಸಾರ್ವಜನಿಕ ಆಸ್ಪತ್ರೆ ಬಳಿ ತಮ್ಮ ದ್ವಿಚಕ್ರ ವಾಹನ ಕಳುವಾಗಿರುವ ಕುರಿತು ಇದಾಯತ್ ಎಂಬವರು ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ದೂರು ದಾಖಲಿಸಿಕೊಂಡ ಪೊಲೀಸರು ಪ್ರಕರಣ ವನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ಆರಂಭಿಸಿದರು. ಸಿಪಿಐ ಆನಂದ್ ಕುಮಾರ್ ಮಾರ್ಗ ದರ್ಶನದಲ್ಲಿ ಪಿಎಸ್‌ಐ ವೇಣುಗೋಪಾಲ್ ಹಾಗೂ ಸಿಬ್ಬಂದಿ ವಿಶೇಷ ಕಾರ್ಯಾಚರಣೆ ನಡೆಸಿದರು.

ಇದನ್ನೂ ಓದಿ: Shidlaghatta News: ಪಿ.ಎಸ್.ಐ ವೇಣುಗೋಪಾಲ್ ನೇತೃತ್ವದಲ್ಲಿ ಸುಗಮ ಸಂಚಾರಕ್ಕೆ ಅಡ್ಡಲಾಗಿದ್ದ ಅಂಗಡಿಗಳ ತೆರವು

ತನಿಖೆ ವೇಳೆ ಶ್ರೀನಿವಾಸಪುರ ಮೂಲದ ಸೈಯದ್ ಯಾಸಿನ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ, ಆತ ನಗರದ ವಿವಿಧ ಭಾಗಗಳಲ್ಲಿ ದ್ವಿಚಕ್ರ ವಾಹನ ಕಳ್ಳತನ ಮಾಡಿರುವುದನ್ನು ಒಪ್ಪಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ.

ಆರೋಪಿಯಿಂದ ಕಳ್ಳತನವಾಗಿದ್ದ ಐದು ದ್ವಿಚಕ್ರ ವಾಹನಗಳನ್ನು ಪೊಲೀಸರು ಅಮಾನತ್ತು ಪಡಿಸಿಕೊಂಡಿದ್ದಾರೆ.

ಬಂಧಿತ ಆರೋಪಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ಪ್ರಕರಣ ಸಂಬಂಧ ಇನ್ನಷ್ಟು ತನಿಖೆ ಮುಂದುವರಿದಿದೆ.