ತಿರುವನಂತಪುರಂ: ಮೊಬೈಲ್ ಅಪ್ಲಿಕೇಶನ್‌ನಲ್ಲಿ 16 ವರ್ಷದ ಬಾಲಕನೊಂದಿಗೆ ಸ್ನೇಹ ಬೆಳೆಸಿದ ನಂತರ ಆತನ ಮೇಲೆ ಲೈಂಗಿಕ (Physical Assault) ದೌರ್ಜನ್ಯ ಎಸಗಿದ ಆರೋಪದ ಮೇಲೆ ಒಂಬತ್ತು ಮಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. ಬಂಧಿತರ ಪೈಕಿ ಓರ್ವ ರಾಜಕಾರಣಿಯಾಗಿದ್ದಾನೆ ಎಂದು ತಿಳಿದು ಬಂದಿದೆ. ಜಿಲ್ಲೆಯ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರ ಪ್ರಕಾರ, ಬಾಲಕನ ಮೇಲೆ ಎರಡು ವರ್ಷಗಳಿಂದ ಆತನ ಮನೆಯಲ್ಲಿ ಮತ್ತು ಕಣ್ಣೂರು ಮತ್ತು ಕೋಯಿಕ್ಕೋಡ್ ಜಿಲ್ಲೆ ಸೇರಿದಂತೆ ಇತರ ಸ್ಥಳಗಳಲ್ಲಿ 14 ವಿಭಿನ್ನ ಪುರುಷರು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ.
ಮನೆಯಲ್ಲಿ ಬಾಲಕನೊಂದಿಗೆ ಇದ್ದ ವ್ಯಕ್ತಿಯನ್ನು ಆತನ ತಾಯಿ ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಆಕೆಯನ್ನು ನೋಡುತ್ತಿದ್ದಂತೆ ವ್ಯಕ್ತಿ ಅಲ್ಲಿಂದ ಓಡಿಹೋಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ತನ್ನ ಮಗನನ್ನು ವಿಚಾರಿಸಿದಾಗ, ಆತ ಘಟನೆಯ ಬಗ್ಗೆ ವಿವರಿಸಿದ್ದಾನೆ. ಆಕೆ ಮಕ್ಕಳ ಸಹಾಯವಾಣಿಗೆ ಮಾಹಿತಿ ನೀಡಿದ್ದು, ಅವರು ಪೊಲೀಸರನ್ನು ಸಂಪರ್ಕಿಸಿದ್ದಾರೆ ಎಂದು ಅಧಿಕಾರಿ ಹೇಳಿದ್ದಾರೆ. ಬಾಲಕ ನೀಡಿದ ಹೇಳಿಕೆಯ ಆಧಾರದ ಮೇಲೆ ಕಳೆದ ಎರಡು ದಿನಗಳಲ್ಲಿ ಆರೋಪಿಗಳ ವಿರುದ್ಧ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆ 2012ರ ಅಡಿಯಲ್ಲಿ 14 ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಹುಡುಗನ ಮನೆಯಲ್ಲಿ ಮತ್ತು ಇತರ ಜಿಲ್ಲೆಗಳಾದ್ಯಂತ ವಿವಿಧ ಸ್ಥಳಗಳಲ್ಲಿ ಹಲ್ಲೆಗಳು ನಡೆದಿವೆ ಎಂದು ಆರೋಪಿಸಲಾಗಿದೆ. ಬಾಲಕನ ತಾಯಿ ಬಂದಾಗ ಒಬ್ಬ ವ್ಯಕ್ತಿ ಮನೆಯಿಂದ ಓಡಿಹೋಗುವುದನ್ನು ನೋಡಿ ಅನುಮಾನಗೊಂಡ ನಂತರ ಪ್ರಕರಣ ಬೆಳಕಿಗೆ ಬಂದಿದೆ. ಅವರು ತಮ್ಮ ಮಗನನ್ನು ಪ್ರಶ್ನಿಸಿದಾಗ, ಏನು ನಡೆಯುತ್ತಿದೆ ಎಂದು ಬಹಿರಂಗಪಡಿಸಿದರು. ತಾಯಿ ತಕ್ಷಣ ಮಕ್ಕಳ ಸಹಾಯವಾಣಿಯನ್ನು ಸಂಪರ್ಕಿಸಿದರು ಎಂದು ಪೊಲೀಸರು ತಿಳಿಸಿದ್ದಾರೆ.
ಬಾಲಕನ ಹೇಳಿಕೆಯ ನಂತರ, ಪೊಲೀಸರು 16 ವ್ಯಕ್ತಿಗಳ ವಿರುದ್ಧ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆ, 2012 ರ ಅಡಿಯಲ್ಲಿ 14 ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿದ್ದಾರೆ. ಕಾಸರಗೋಡು ಜಿಲ್ಲೆಯಲ್ಲಿ ನಡೆದ ಎಂಟು ಪ್ರಕರಣಗಳ ತನಿಖೆಗಾಗಿ ಉಪ ಪೊಲೀಸ್ ವರಿಷ್ಠಾಧಿಕಾರಿ ಮತ್ತು ನಾಲ್ವರು ಇನ್ಸ್‌ಪೆಕ್ಟರ್‌ಗಳ ನೇತೃತ್ವದಲ್ಲಿ ವಿಶೇಷ ತನಿಖಾ ತಂಡವನ್ನು ರಚಿಸಲಾಗಿದೆ. ಉಳಿದ ಆರು ಪ್ರಕರಣಗಳನ್ನು ತನಿಖೆಗಾಗಿ ಕೋಝಿಕ್ಕೋಡ್ ಮತ್ತು ಕಣ್ಣೂರು ಜಿಲ್ಲೆಗಳಿಗೆ ವರ್ಗಾಯಿಸಲಾಗಿದೆ ಎಂದು ಕಾಸರಗೋಡು ಪೊಲೀಸ್ ಮುಖ್ಯಸ್ಥ ವಿಜಯ ಭರತ್ ರೆಡ್ಡಿ ತಿಳಿಸಿದ್ದಾರೆ.
ಈ ಸುದ್ದಿಯನ್ನೂ ಓದಿ: Harassment: ಬೆಂಗಳೂರಿನ ಬೀದಿಯಲ್ಲಿ ಲೈಂಗಿಕ ವಿಕೃತಿ ತೋರಿದ ಕಾಮುಕ ಆರೆಸ್ಟ್
ಉಳಿದ ಆರು ಪ್ರಕರಣಗಳನ್ನು ಕೋಯಿಕ್ಕೋಡ್ ಮತ್ತು ಕಣ್ಣೂರು ಜಿಲ್ಲೆಗಳಿಗೆ ವರ್ಗಾಯಿಸಲಾಗಿದ್ದು, ಅಲ್ಲಿಯೂ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ ಎಂದು ಅವರು ಹೇಳಿದರು. ಈ ಪ್ರಕರಣದಲ್ಲಿ 14 ಆರೋಪಿಗಳು 25 ರಿಂದ 51 ವರ್ಷ ವಯಸ್ಸಿನವರಾಗಿದ್ದು, ಅವರಲ್ಲಿ ಒಬ್ಬರು ರೈಲ್ವೆ ಉದ್ಯೋಗಿ ಎಂದು ಪೊಲೀಸರು ತಿಳಿಸಿದ್ದಾರೆ.