ಬಿಗ್​ಬಾಸ್ ಬಿಹಾರ ರಿಸಲ್ಟ್​ ಫೋಟೋ ಗ್ಯಾಲರಿ ಫ್ಯಾಷನ್​ ವಿಶ್ವವಾಣಿ ಪ್ರಾಪರ್ಟಿ ವಿದೇಶ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Prajwal Revanna case: ಪ್ರಜ್ವಲ್‌ ರೇವಣ್ಣ ಜೈಲುವಾಸ ಮುಂದುವರಿಕೆ, ಜಾಮೀನಿಗೆ ಕೋರ್ಟ್‌ ನಕಾರ

ಜೀವಾವಧಿ ಶಿಕ್ಷೆಯನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ್ದ ಪ್ರಜ್ವಲ್‌ ರೇವಣ್ಣ (Prajwal Revanna case) ಅವರ ಅರ್ಜಿಯ ವಿಚಾರಣೆ ಹಾಗೂ ಪ್ರಾಸಿಕ್ಯೂಷನ್ ವಾದಮಂಡನೆಯನ್ನು ನವೆಂಬರ್ 24ಕ್ಕೆ ಮುಂದೂಡಲಾಗಿದೆ. ಹೈಕೋರ್ಟ್​ ನ್ಯಾಯಮೂರ್ತಿಗಳಾದ ಕೆ.ಎಸ್‌ ಮುದಗಲ್‌ ಮತ್ತು ನ್ಯಾಯಮೂರ್ತಿ ಟಿ. ವೆಂಕಟೇಶ್‌ ನಾಯಕ್‌ ಅವರ ಪೀಠ ಅರ್ಜಿ ವಿಚಾರಣೆ ನಡೆಸಿತು. ಪ್ರಾಸಿಕ್ಯೂಷನ್‌ ಪರವಾಗಿ ನವೆಂಬರ್‌ 24ರಂದು ವಿಶೇಷ ಸರ್ಕಾರಿ ಅಭಿಯೋಜಕ ಪ್ರೊ. ರವಿವರ್ಮ ಕುಮಾರ್ ವಾದ ಮಂಡಿಸಲಿದ್ದಾರೆ.

ಪ್ರಜ್ವಲ್‌ ರೇವಣ್ಣ ಮೇಲ್ಮನವಿ ವಿಚಾರಣೆ ನ.24ಕ್ಕೆ

ಬೆಂಗಳೂರು, ನ13: ಜೆಡಿಎಸ್ ಮಾಜಿ ಸಂಸದ, ಲೈಂಗಿಕ ಹಗರಣದ ಆರೋಪಿ ಪ್ರಜ್ವಲ್ ರೇವಣ್ಣ ಅವರಿಗೆ (Prajwal Revanna case) ಸದ್ಯಕ್ಕೆ ಜೈಲುವಾಸ ಮುಂದುವರೆದಿದೆ. ಹಾಸನದ ಹೊಳೆನರಸೀಪುರದ ಮನೆಕೆಲಸದಾಕೆಯ ಮೇಲೆ ಲೈಂಗಿಕ ದೌರ್ಜನ್ಯ (physical abuse) ನಡೆಸಿದ ಆರೋಪ ಎದುರಿಸಿದ್ದ ಪ್ರಜ್ವಲ್ ರೇವಣ್ಣ ಜೀವಾವಧಿ ಶಿಕ್ಷೆಗೆ ಒಳಗಾಗಿದ್ದಾರೆ. ಈ ಶಿಕ್ಷೆಯನ್ನು ಪ್ರಶ್ನಿಸಿ ಅವರು ಮೇಲ್ಮನವಿ ಸಲ್ಲಿಸಿದ್ದರು. ನಿನ್ನೆ ಆ ಮೇಲ್ಮನವಿ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ (Karnataka high court) ವಿಚಾರಣೆ ನಡೆಸಿತು.

ಪ್ರಜ್ವಲ್ ರೇವಣ್ಣ ಪರ ಹಿರಿಯ ವಕೀಲ ಸಿದ್ಧಾರ್ಥ್ ಲೂತ್ರಾ ವಾದ ಮಂಡಿಸಿದ್ದರು. ಪ್ರಾಸಿಕ್ಯೂಷನ್ ಸಲ್ಲಿಸಿದ ಸಾಕ್ಷ್ಯಗಳಲ್ಲಿ ಪರಸ್ಪರ ಹೊಂದಾಣಿಕೆಯಿಲ್ಲ, ಪ್ರಜ್ವಲ್ ರೇವಣ್ಣ ತಪ್ಪಿತಸ್ಥನೆಂದು ತೋರಿಸುವ ಯಾವುದೇ ಪ್ರಬಲ ಸಾಕ್ಷ್ಯಗಳಿಲ್ಲ. 4 ವರ್ಷಗಳ ಬಳಿಕ ದೂರು ದಾಖಲಿಸಲಾಗಿದೆ. ಯಾವುದೇ ವಿಶ್ವಾಸಾರ್ಹತೆ ಇಲ್ಲದ ವಿಡಿಯೋವನ್ನು ಸಾಕ್ಷ್ಯವನ್ನಾಗಿ ಪರಿಗಣಿಸಲಾಗಿದೆ. ಫಾರ್ಮ್‌ಹೌಸ್‌ನ ಅಂದಿನ ಮಾಲೀಕರ ಹೇಳಿಕೆಯನ್ನು ದಾಖಲಿಸಿಲ್ಲ. ಕೃತ್ಯ ನಡೆದ ಸ್ಥಳದಲ್ಲಿದ್ದವರ ಹೇಳಿಕೆ ದಾಖಲಿಸಿಲ್ಲ ಎಂದಿದ್ದರು.

ಸಂತ್ರಸ್ತೆಯ ಮೊಬೈಲ್ ಸಿಡಿಆರ್ ಹಾಜರುಪಡಿಸಿಲ್ಲ. ಸಂತ್ರಸ್ತೆಯ ಬಟ್ಟೆ ವಶಕ್ಕೆ ಪಡೆದ ರೀತಿಯ ಬಗ್ಗೆಯೂ ಅನುಮಾನಗಳಿವೆ. ಹೀಗಾಗಿ ಪ್ರಜ್ವಲ್ ಅವರಿಗೆ ವಿಧಿಸಲಾಗಿರುವ ಜೀವಾವಧಿ ಶಿಕ್ಷೆಯನ್ನು ಅಮಾನತಿನಲ್ಲಿಟ್ಟು ಜಾಮೀನು ನೀಡುವಂತೆ ಅವರು ವಾದ ಮಂಡನೆ ವೇಳೆ ಮನವಿ ಮಾಡಿದ್ದರು. ನಮ್ಮ ವಾದವನ್ನು ಸೂಕ್ತ ರೀತಿಯಲ್ಲಿ ಆಲಿಸದೇ ವಿಚಾರಣಾಧೀನ ನ್ಯಾಯಾಲಯವು ಗರಿಷ್ಠ ಶಿಕ್ಷೆಯನ್ನು ವಿಧಿಸಿದೆ ಎಂದು ಪ್ರಜ್ವಲ್ ಪರ ವಕೀಲರು ಇಂದು ಆಕ್ಷೇಪ ವ್ಯಕ್ತಪಡಿಸಿದ್ದರು.

ಆದರೆ ನಿನ್ನೆ ಪ್ರಜ್ವಲ್​ಗೆ ಜಾಮೀನು ಸಿಕ್ಕಿಲ್ಲ. ಪ್ರಾಸಿಕ್ಯೂಷನ್ ವಾದಮಂಡನೆಗೆ ವಿಚಾರಣೆಯನ್ನು ನವೆಂಬರ್ 24ಕ್ಕೆ ಮುಂದೂಡಲಾಗಿದೆ. ಹೈಕೋರ್ಟ್​ ನ್ಯಾಯಮೂರ್ತಿಗಳಾದ ಕೆ.ಎಸ್‌ ಮುದಗಲ್‌ ಮತ್ತು ನ್ಯಾಯಮೂರ್ತಿ ಟಿ. ವೆಂಕಟೇಶ್‌ ನಾಯಕ್‌ ಅವರ ಪೀಠ ಅರ್ಜಿ ವಿಚಾರಣೆ ನಡೆಸಿತು. ಪ್ರಾಸಿಕ್ಯೂಷನ್‌ ಪರವಾಗಿ ನವೆಂಬರ್‌ 24ರಂದು ವಿಶೇಷ ಸರ್ಕಾರಿ ಅಭಿಯೋಜಕ ಪ್ರೊ. ರವಿವರ್ಮ ಕುಮಾರ್ ವಾದ ಮಂಡಿಸಲಿದ್ದಾರೆ.

ಇದನ್ನೂ ಓದಿ: Prajwal Revanna case: ಜೀವಾವಧಿ ಶಿಕ್ಷೆ ಪ್ರಶ್ನಿಸಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ ಪ್ರಜ್ವಲ್‌ ರೇವಣ್ಣ

ಹರೀಶ್‌ ಕೇರ

View all posts by this author