ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಶೌಚಾಲಯ ಬಳಕೆ ವೇಳೆ ಚಿತ್ರೀಕರಣ: ಬೆಂಗಳೂರು ಆಸ್ಪತ್ರೆಯ ಸಿಬ್ಬಂದಿ ವಿರುದ್ಧ ಗರ್ಭಿಣಿ ದೂರು

ಬೆಂಗಳೂರಿನ ಆಸ್ಪತ್ರೆಯೊಂದರಲ್ಲಿ ಗರ್ಭಿಣಿಯೊಬ್ಬರು ಶೌಚಾಲಯ ಬಳಕೆ ಮಾಡುತ್ತಿದ್ದಾಗ ಚಿತ್ರೀಕರಣ ಮಾಡಲಾಗಿದೆ ಎಂದು ಆರೋಪಿಸಿ ಪೊಲೀಸರಿಗೆ ದೂರು ನೀಡಲಾಗಿದೆ. ಮೇ 21ರಂದು ಈ ಘಟನೆ ನಡೆದಿದ್ದು, ರೋಗಿಯ ಗೌಪ್ಯತೆ ಮತ್ತು ಭದ್ರತಾ ಶಿಷ್ಟಾಚಾರಗಳ ಉಲ್ಲಂಘನೆಯಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಆಸ್ಪತ್ರೆ ಶೌಚಾಲಯ ಬಳಕೆ ವೇಳೆ ಚಿತ್ರೀಕರಣ: ದೂರು

ಸಂಗ್ರಹ ಚಿತ್ರ -

ಬೆಂಗಳೂರು: ಆಸ್ಪತ್ರೆಯಲ್ಲಿ (Apollo Hospital) ಶೌಚಾಲಯ (hospital restroom) ಬಳಕೆ ಮಾಡುತ್ತಿದ್ದಾಗ ಆಸ್ಪತ್ರೆ ಸಿಬ್ಬಂದಿಯೊಬ್ಬ ಚಿತ್ರೀಕರಣ ಮಾಡಿರುವುದಾಗಿ ಗರ್ಭಿಣಿಯೊಬ್ಬರು ಪೊಲೀಸರಿಗೆ ದೂರು ನೀಡಿದ್ದಾರೆ. ಮೇ 21ರಂದು ಈ ಘಟನೆ ನಡೆದಿದ್ದು, ಇದು ಪ್ರಮುಖ ಆಸ್ಪತ್ರೆಗಳಲ್ಲಿ ರೋಗಿಯ ಗೌಪ್ಯತೆ ಮತ್ತು ಭದ್ರತಾ ಶಿಷ್ಟಾಚಾರಗಳಿಗೆ ಸಂಬಂಧಿಸಿ ತನಿಖೆಗೆ ಕಾರಣವಾಗಿದೆ. ಬೆಂಗಳೂರಿನ (Bengaluru) ಸರ್ಜಾಪುರ ರಸ್ತೆಯಲ್ಲಿರುವ (Sarjapur Road) ಅಪೊಲೊ (ಬೆಲ್ಲೆನಸ್ ಚಾಂಪಿಯನ್ಸ್) ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದ್ದು, ವರ್ತೂರು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಬೆಂಗಳೂರಿನ ಸರ್ಜಾಪುರ ರಸ್ತೆಯಲ್ಲಿರುವ ಅಪೊಲೊ (ಬೆಲ್ಲೆನಸ್ ಚಾಂಪಿಯನ್ಸ್) ಆಸ್ಪತ್ರೆಯ ಹೌಸ್‌ಕೀಪಿಂಗ್ ಸಿಬ್ಬಂದಿಯೊಬ್ಬ ತನ್ನ ಮೊಬೈಲ್ ನಲ್ಲಿ 36 ವರ್ಷದ ಗರ್ಭಿಣಿ ಆಸ್ಪತ್ರೆಯ ಶೌಚಾಲಯ ಬಳಕೆ ಮಾಡುತ್ತಿರುವುದನ್ನು ಚಿತ್ರೀಕರಿಸಿದ್ದಾನೆ. ಈ ಕುರಿತು ಮಹಿಳೆ ಆತನನ್ನು ಪ್ರಶ್ನಿಸಿದ್ದು, ಆತನ ಮೊಬೈಲ್ ಪರಿಶೀಲನೆಯನ್ನು ಕೂಡ ಮಾಡಿದ್ದಾಳೆ. ಆ ಕ್ಷಣದಲ್ಲಿ ಆರೋಪಿ ಅಲ್ಲಿಂದ ಪರಾರಿಯಾಗಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

6 ವರ್ಷದ ನೆರೆ ಮನೆ ಬಾಲಕಿ ಮೇಲೆ ಅತ್ಯಾಚಾರವೆಸಗಿದ 9ನೇ ತರಗತಿಯ ಬಾಲಕ; ತ್ರಿಪುರಾದಲ್ಲಿ ದೇಶವನ್ನೇ ಬೆಚ್ಚಿ ಬೀಳಿಸಿದ ಅಮಾನುಷ ಘಟನೆ

ಮೇ 21ರಂದು ಮಹಿಳೆ ಮಧ್ಯಾಹ್ನ 12.30 ರಿಂದ ಸಂಜೆ 4.15ರ ಅವಧಿಯಲ್ಲಿ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ಈ ಸಂದರ್ಭದಲ್ಲಿ ಆಕೆ ಶೌಚಾಲಯ ಬಳಕೆ ಮಾಡುತ್ತಿದ್ದಾಗ ಹೌಸ್ ಕೀಪಿಂಗ್ ಸಿಬ್ಬಂದಿ ಅನುಮಾನಾಸ್ಪದವಾಗಿ ವರ್ತಿಸುತ್ತಿರುವುದನ್ನು ಮತ್ತು ತನ್ನ ಮೊಬೈಲ್ ಫೋನ್ ಬಳಸಿ ಫೋಟೋ ಅಥವಾ ವಿಡಿಯೋಗಳನ್ನು ತೆಗೆದುಕೊಳ್ಳಲು ಪ್ರಯತ್ನಿಸುತ್ತಿರುವುದನ್ನು ಮಹಿಳೆ ಗಮನಿಸಿ ಪ್ರಶ್ನಿಸಿದ್ದಳು. ತಕ್ಷಣವೇ ಆತ ಸ್ಥಳದಿಂದ ಪರಾರಿಯಾಗಿದ್ದಾನೆ.

ಈ ಕುರಿತು ಆಸ್ಪತ್ರೆ ಆಡಳಿತ ಮಂಡಳಿಗೆ ಮಹಿಳೆ ದೂರು ನೀಡಿದ ಮೇಲೆ ಶಂಕಿತ ವ್ಯಕ್ತಿಯ ಮೊಬೈಲ್ ವಶಕ್ಕೆ ಪಡೆಯಲಾಗಿದೆ. ಅದರಲ್ಲಿ ಹಲವಾರು ಮಹಿಳೆಯರ ಅಶ್ಲೀಲ ಫೋಟೋಗಳು ಮತ್ತು ವಿಡಿಯೊಗಳು ಕಂಡು ಬಂದಿವೆ ಎನ್ನಲಾಗಿದೆ,

ಪ್ರಕರಣಕ್ಕೆ ಸಂಬಂಧಿಸಿ ವರ್ತೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಆರೋಪಿಯ ವಿರುದ್ಧ ಬಿಎನ್‌ಎಸ್‌ನ ಸೆಕ್ಷನ್ 77, 79 ಮತ್ತು 62 ಜೊತೆಗೆ ಐಟಿ ಕಾಯ್ದೆಯ ಸೆಕ್ಷನ್ 66 ಇ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ಹೌಸ್ ಕೀಪಿಂಗ್ ಸಿಬ್ಬಂದಿ ಕೃಷ್ಣ ರಾಮ್ ಪಾಂಗಿಂಗ್ ಎಂದು ಗುರುತಿಸಲಾಗಿದೆ. ಆತನ ಮೊಬೈಲ್ ಅನ್ನು ವಶಕ್ಕೆ ಪಡೆಯಲಾಗಿದ್ದು, ವಿವರವಾದ ವಿಶ್ಲೇಷಣೆಗಾಗಿ ಅದನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.

ಮಸೀದಿಯೊಳಗೆ 11 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಮೌಲ್ವಿಗೆ ಜೀವಾವಧಿ ಶಿಕ್ಷೆ

ಈ ಘಟನೆಯ ಬಳಿಕ ವೈಟ್‌ಫೀಲ್ಡ್‌ನ ಉಪ ಪೊಲೀಸ್ ಆಯುಕ್ತರು ಆರೋಪಿ ಮತ್ತು ಆಸ್ಪತ್ರೆ ಆಡಳಿತ ಮಂಡಳಿಗೆ ಅಧಿಕೃತ ನೋಟಿಸ್ ಜಾರಿ ಮಾಡಿದ್ದಾರೆ. ಬಳಿಕ ಆರೋಪಿ ಮತ್ತು ಆಸ್ಪತ್ರೆ ಆಡಳಿತ ಮಂಡಳಿ ಸಿಬ್ಬಂದಿ ತನಿಖೆಗೆ ಹಾಜರಾಗಿದ್ದಾರೆ ಎಂದು ಅವರು ತಿಳಿಸಿದ್ದಾರೆ.