ಜೈಪುರ, ಅ.23: ಅಪ್ರಾಪ್ತ ಗರ್ಭಿಣಿ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದ ಘಟನೆ ರಾಜಸ್ಥಾನದ (Rajasthan) ದೌಸಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತೀವ್ರ ಹೊಟ್ಟೆನೋವಿನಿಂದ ಬಾಲಕಿಯು ಆಸ್ಪತ್ರೆಗೆ ಬಂದಾಗ ಈ ಪ್ರಕರಣ ಬೆಳಕಿಗೆ ಬಂದಿದೆ. ಬಾಲಕಿ ಮಗುವಿಗೆ ಜನ್ಮ ನೀಡಿದ್ದಾಳೆ, ಆದರೆ ನವಜಾತ ಶಿಶು ಮೃತಪಟ್ಟಿದೆ. ಕೊಲ್ವಾ (Crime News) ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. 16 ವರ್ಷದ ಬಾಲಕಿ ಗರ್ಭಿಣಿಯಾಗಿರುವುದು ತಿಳಿದುಬಂದಿದ್ದು, ಬಳಿಕ ಮಗುವಿಗೆ ಜನ್ಮ ನೀಡಿದ್ದಾಳೆ. ಆದರೆ, ನವಜಾತ ಶಿಶು ಬದುಕುಳಿಯಲಿಲ್ಲ ಎಂದು ಪೊಲೀಸರು ಹೇಳಿದ್ದಾರೆ.
ಈ ಪ್ರಕರಣದ ಗಂಭೀರತೆಯನ್ನು ಗಮನದಲ್ಲಿಟ್ಟುಕೊಂಡು ಅಪ್ರಾಪ್ತ ಬಾಲಕಿಯ ಹೇಳಿಕೆಯನ್ನು ದಾಖಲಿಸಿಕೊಳ್ಳಲಾಗಿದೆ ಹಾಗೂ ಪ್ರಕರಣ ದಾಖಲಿಸಲಾಗಿದೆ ಎಂದು ದೌಸಾ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಂದನ್ ಕನ್ವಾರಿಯಾ ತಿಳಿಸಿದ್ದಾರೆ. ಪ್ರಕರಣದ ಹೆಚ್ಚಿನ ತನಿಖೆಗಾಗಿ ಉಪ ಪೊಲೀಸ್ ವರಿಷ್ಠಾಧಿಕಾರಿಯೊಬ್ಬರನ್ನು ನಿಯೋಜಿಸಲಾಗಿದೆ.
ಬಾಲಕಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದ್ದು, ಸದ್ಯ ಆಕೆಯ ಆರೋಗ್ಯ ಸ್ಥಿರವಾಗಿದೆ. ಆಕೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ಪ್ರಾಥಮಿಕ ತನಿಖೆಯಲ್ಲಿ ಸಂತ್ರಸ್ತೆಯ ಹೇಳಿಕೆಗೆ ವಿರುದ್ಧವಾದ ಯಾವುದೇ ಸಾಕ್ಷ್ಯಗಳು ಪತ್ತೆಯಾಗಿಲ್ಲ. ಬಾಲಕಿಯ ಸ್ನೇಹಿತನೊಬ್ಬ ಆಕೆಯನ್ನು ಬೈಕ್ನಲ್ಲಿ ಮನೆಯಿಂದ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದ ಎಂಬುದು ತನಿಖೆಯಿಂದ ತಿಳಿದುಬಂದಿದೆ. ಪ್ರಕರಣದಲ್ಲಿ ಹೆಸರಿಸಲಾದ ಶಂಕಿತ ವ್ಯಕ್ತಿಯೊಬ್ಬನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಎಸ್ಪಿ ತಿಳಿಸಿದ್ದಾರೆ.
ಮೈಸೂರಿನಲ್ಲಿ ಬಲೂನ್ ಮಾರುವ ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದ ಕಾಮುಕನಿಗೆ ಗಲ್ಲು ಶಿಕ್ಷೆ ಪ್ರಕಟ
ಅಪ್ರಾಪ್ತ ಬಾಲಕಿ ನೀಡಿದ ದೂರಿನ ಪ್ರಕಾರ, ಯುವಕರ ಗುಂಪೊಂದು ಆಕೆಯನ್ನು ಅಪಹರಿಸಿ, ದೆಹಲಿ-ಮುಂಬೈ ಎಕ್ಸ್ಪ್ರೆಸ್ವೇ ಬಳಿಯ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಸಾಮೂಹಿಕ ಅತ್ಯಾಚಾರ ಎಸಗಿದೆ. ಇದರಿಂದ ಸಂತ್ರಸ್ತೆಗೆ ಹೆರಿಗೆ ನೋವು ಕಾಣಿಸಿಕೊಂಡು ಸ್ಥಳದಲ್ಲೇ ಮಗುವಿಗೆ ಜನ್ಮ ನೀಡಿದ್ದಾಳೆ. ನಂತರ, ಅವಳು ಆಸ್ಪತ್ರೆಗೆ ತಲುಪಿದಳು. ಅಲ್ಲಿ ನವಜಾತ ಶಿಶು ಮೃತಪಟ್ಟಿದೆ ಎಂದು ಘೋಷಿಸಲಾಯಿತು. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಯೂಟ್ಯೂಬ್ ನೋಡಿ ಗರ್ಭಪಾತಕ್ಕೆ ಯತ್ನಿಸಿದ ಯುವಕ, ಮಗುವಿಗೆ ಜನ್ಮ ನೀಡಿದ ಅಪ್ರಾಪ್ತೆ
18 ವರ್ಷದ ಹದಿಹರೆಯದ ಯುವಕನೊಬ್ಬನನ್ನು ಬಾಲಕಿ ಮೇಲೆ ಅತ್ಯಾಚಾರವೆಸಗಿದ ಆರೋಪದ ಮೇಲೆ ಪೊಲೀಸರು ಬಂಧಿಸಿದ್ದಾರೆ. ಮಹಾರಾಷ್ಟ್ರದ ನಾಗ್ಪುರದಲ್ಲಿ ಘಟನೆ ನಡೆದಿದೆ. ಆತನ 16 ವರ್ಷದ ಶಾಲಾ ಸಹಪಾಠಿ ಗರ್ಭಿಣಿಯಾಗಿದ್ದಳು. ಗರ್ಭಪಾತ ಮಾಡಿಸಿಕೊಳ್ಳಲು ಆಕೆ ಯೂಟ್ಯೂಬ್ ವಿಡಿಯೋಗಳನ್ನು ನೋಡಿ, ಅವುಗಳಲ್ಲಿ ತಿಳಿಸಿದಂತೆ ಗಿಡಮೂಲಿಕೆಗಳ ಮಿಶ್ರಣವನ್ನು ತಯಾರಿಸಿ ಬಳಸಿದ್ದಾಳೆ. ಆದರೆ, ಇದರಿಂದ ಆಕೆಗೆ ಗರ್ಭಪಾತವಾಗಲಿಲ್ಲ. ಬಳಿಕ ಆಕೆ ಮನೆಯಲ್ಲೇ ಮಗುವಿಗೆ ಜನ್ಮ ನೀಡಿದ್ದಾಳೆ .
ಹುಡುಗಿ ಗರ್ಭಿಣಿಯಾದ ನಂತರ, 18 ವರ್ಷದ ಯುವಕ ತಕ್ಷಣದ ವೈದ್ಯಕೀಯ ಸಹಾಯವನ್ನು ಪಡೆಯುವ ಬದಲು ಗರ್ಭಪಾತ ಮಾಡುವುದು ಹೇಗೆ ಎಂದು ಯೂಟ್ಯೂಬ್ನಲ್ಲಿ ಹುಡುಕಿದ್ದಾನೆ ಎಂದು ಆರೋಪಿಸಲಾಗಿದೆ. ಯೂಟ್ಯೂಬ್ನಲ್ಲಿ ಟ್ಯುಟೋರಿಯಲ್ಗಳನ್ನು ನೋಡಿದ ನಂತರ ಗಿಡಮೂಲಿಕೆ ಔಷಧಿ ಮಿಶ್ರಣವನ್ನು ತಯಾರಿಸಿದ ಆರೋಪ ಅವನ ಮೇಲಿದೆ. ಸೋಮವಾರ (ಅ.12) ಹೆರಿಗೆ ನೋವು ಪ್ರಾರಂಭವಾಗುವ ಮೊದಲು ಹಲವಾರು ವಾರಗಳವರೆಗೆ, ಬಾಲಕಿಗೆ ಗಿಡಮೂಲಿಕೆ ಮಿಶ್ರಣ ಮತ್ತು ಇತರ ಗರ್ಭಪಾತ ಮಾತ್ರೆಗಳನ್ನು ಬಲವಂತವಾಗಿ ನೀಡಲಾಗುತ್ತಿತ್ತು ಎಂದು ಆರೋಪಿಸಲಾಗಿದೆ.