ಮಹಾರಾಷ್ಟ್ರ: ಮಗುವಿನ ಕನಸು ಕಾಣುತ್ತಾ ಹೆರಿಗೆಗೆಂದು ಆಸ್ಪತ್ರೆಗೆ ಹೋದ ಒಂಬತ್ತು ತಿಂಗಳ ಗರ್ಭಿಣಿ (nine months pregnant) ಶವವಾಗಿ ಬಂದ ಘಟನೆ ಮಹಾರಾಷ್ಟ್ರದಲ್ಲಿ (Maharastra) ನಡೆದಿದೆ. ಯಾವುದೇ ಮೂಲ ಸೌಲಭ್ಯಗಳಿಲ್ಲದ ಮಹಾರಾಷ್ಟ್ರದ ಗ್ರಾಮವೊಂದರಲ್ಲಿ ಮಹಿಳೆಯೊಬ್ಬರು ಹೆರಿಗೆಗಾಗಿ (delivery) ಸುಮಾರು 6 ಕಿ.ಮೀ ನಡೆದುಕೊಂಡು ಹೋಗಿ ಸಾವನ್ನಪ್ಪಿದ್ದಾರೆ. ಆಲ್ದಂಡಿ ಟೋಲಾದ ನಿವಾಸಿ ಆಶಾ ಸಂತೋಷ್ ಕಿರಂಗ (24) ಮೃತರು ಎಂದು ಗುರುತಿಸಲಾಗಿದೆ. ಆಶಾ ಒಂಬತ್ತು ತಿಂಗಳ ಗರ್ಭಿಣಿಯಾಗಿದ್ದರು ಎಂದು ಆಸ್ಪತ್ರೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಮಹಾರಾಷ್ಟ್ರದ ಗಡ್ಚಿರೋಲಿ ಜಿಲ್ಲೆಯ ಎಟಪಲ್ಲಿ ತಾಲೂಕಿನ ಆಲ್ದಂಡಿ ಟೋಲಾ ಗ್ರಾಮದಲ್ಲಿ ಯಾವುದೇ ವೈದ್ಯಕೀಯ ಸೌಲಭ್ಯಗಳಿರಲಿಲ್ಲ. ಈ ಗ್ರಾಮವು ಮುಖ್ಯ ರಸ್ತೆಯಿಂದ ಸಂಪರ್ಕ ಕಡಿತಗೊಂಡಿದ್ದು, ಆಸ್ಪತ್ರೆಗಾಗಿ ಸುಮಾರು 6 ಕಿ.ಮೀ. ದೂರ ನಡೆದುಕೊಂಡು ಹೋಗಬೇಕಿತ್ತು. ಇದರಿಂದ ಒಂಬತ್ತು ತಿಂಗಳ ಗರ್ಭಿಣಿಯಾಗಿದ್ದ ಆಶಾ ಸಾವನ್ನಪ್ಪಿದ್ದಾರೆ.
ಬಾಂಗ್ಲಾದಲ್ಲಿ ಹಿಂದೂಗಳ ನರಮೇಧ; ಔಷಧಿ ಅಂಗಡಿ ಮಾಲೀಕನಿಗೆ ಬೆಂಕಿ ಹಚ್ಚಿ ಕೊಂದ ಇಸ್ಲಾಮಿಕ್ ಗುಂಪು
ಈ ಕುರಿತು ಶುಕ್ರವಾರ ಮಾಹಿತಿ ನೀಡಿರುವ ಆಸ್ಪತ್ರೆ ಅಧಿಕಾರಿ, ಗಡ್ಚಿರೋಲಿ ಜಿಲ್ಲೆಯ ಎಟಪಲ್ಲಿ ತಾಲೂಕಿನ ಆಲ್ದಂಡಿ ಟೋಲಾದ ನಿವಾಸಿ ಆಶಾ ಸಂತೋಷ್ ಕಿರಂಗ ಅವರು ಒಂಬತ್ತು ತಿಂಗಳ ಗರ್ಭಿಣಿಯಾಗಿದ್ದರು. ಅವರ ಗ್ರಾಮಕ್ಕೆ ಸರಿಯಾದ ರಸ್ತೆ ಸೌಲಭ್ಯವಿಲ್ಲ. ಗ್ರಾಮದಲ್ಲಿ ಯಾವುದೇ ಹೆರಿಗೆ ಸೌಲಭ್ಯಗಳು ಲಭ್ಯವಿಲ್ಲ. ಹೀಗಾಗಿ ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗದೆ ಅವರು ಸಾವನ್ನಪ್ಪಿದ್ದಾರೆ ಎಂದು ತಿಳಿಸಿದ್ದಾರೆ.
ಜನವರಿ 1ರಂದು ಪತಿಯೊಂದಿಗೆ ಕಾಡಿನ ಹಾದಿಗಳ ಮೂಲಕ ಸುಮಾರು 6 ಕಿ.ಮೀ. ದೂರದ ಪೆಥಾದಲ್ಲಿರುವ ತನ್ನ ಸಹೋದರಿಯ ಮನೆಗೆ ಹೊರಟಿದ್ದ ಆಶಾ ಸುದೀರ್ಘವಾಗಿ ನಡೆದಿದ್ದಾರೆ. ಇದರಿಂದ ಅವರ ಆರೋಗ್ಯದ ಮೇಲೆ ಪರಿಣಾಮ ಬೀರಿದೆ. ಜನವರಿ 2ರಂದು ಬೆಳಗ್ಗೆ ತೀವ್ರ ಹೆರಿಗೆ ನೋವು ಕಾಣಿಸಿಕೊಂಡಿದ್ದು, ಕೂಡಲೇ ಆಕೆಯನ್ನು ಆಂಬ್ಯುಲೆನ್ಸ್ ಮೂಲಕ ಹೆಡ್ರಿಯ ಕಾಳಿ ಅಮ್ಮಲ್ ಆಸ್ಪತ್ರೆಗೆ ದಾಖಲಿಸಲಾಯಿತು. ವೈದ್ಯರುಶಸ್ತ್ರ ಚಿಕಿತ್ಸೆ ನಡೆಸಲು ನಿರ್ಧರಿಸಿದರು. ಆದರೆ ಅದಾಗಲೇ ಮಗು ಗರ್ಭದಲ್ಲೇ ಸಾವನ್ನಪ್ಪಿತ್ತು. ರಕ್ತದೊತ್ತಡ ಹೆಚ್ಚಾದ ಕಾರಣ ಆಶಾ ಕೂಡ ಮೃತಪಟ್ಟಿದ್ದಾರೆ ಎಂದು ಅವರು ತಿಳಿಸಿದ್ದಾರೆ.
Kalaburagi News: ಕಲಬುರಗಿ ಕೇಂದ್ರ ಕಾರಾಗೃಹಕ್ಕೆ ಡಿಜಿಪಿ ಅಲೋಕ್ ಕುಮಾರ್ ಭೇಟಿ, ತಪಾಸಣೆ
ಇದಕ್ಕೆ ಸಂಬಂಧಿಸಿ ಗಡ್ಚಿರೋಲಿ ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ಪ್ರತಾಪ್ ಶಿಂಧೆ ಅವರು ಆಶಾ ಕಾರ್ಯಕರ್ತರನ್ನು ಸಂಪರ್ಕಿಸಿದ್ದು, ಅವರೇ ಆಶಾ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ತಿಳಿಸಿದ್ದಾರೆ. ಈ ಕುರಿತು ತಾಲೂಕು ಆರೋಗ್ಯ ಅಧಿಕಾರಿಯಿಂದ ವಿವರವಾದ ವರದಿಯನ್ನು ಕೇಳಲಾಗಿದೆ. ತನಿಖೆ ನಡೆಸುವುದಾಗಿ ಶಿಂಧೆ ತಿಳಿಸಿದ್ದಾರೆ.