Physical Assault: ಗರ್ಭಿಣಿ ಮೇಲೆ ಲೈಂಗಿಕ ದೌರ್ಜನ್ಯ; ಚಲಿಸುತ್ತಿದ್ದ ರೈಲಿನಿಂದ ತಳ್ಳಿದ ಪಾಪಿಗಳು
ತಮಿಳುನಾಡಿನ ಕೊಯಮತ್ತೂರಿನಲ್ಲಿ ಅಮಾನುಷ ಘಟನೆ ನಡೆದಿದ್ದು, ಚಲಿಸುತ್ತಿದ್ದ ರೈಲಿನಲ್ಲಿ ಗರ್ಭಿಣಿ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಆಕೆಯನ್ನು ರೈಲಿನಿಂದ ಹೊರಗಸೆಯಲಾಗಿದೆ. ಚಿಕಿತ್ಸೆಗಾಗಿ ವೆಲ್ಲೂರಿನ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಆಕೆ ಚೇತರಿಸಿಕೊಳ್ಳುತ್ತಿದ್ದಾಳೆ ಎನ್ನಲಾಗಿದೆ.
ಚೆನ್ನೈ: ಚಲಿಸುತ್ತಿದ್ದ ರೈಲಿನಲ್ಲಿ ಗರ್ಭಿಣಿ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಆಕೆಯನ್ನು ರೈಲಿನಿಂದ ಹೊರಗಸೆದಿರುವ ಅಮಾನುಷ ಘಟನೆ ತಮಿಳುನಾಡಿನ (Tamil Nadu) ಕೊಯಮತ್ತೂರಿನಲ್ಲಿ ನಡೆದಿದೆ. ಮಹಿಳೆ ಕೊಯಮತ್ತೂರಿನಿಂದ ಆಂಧ್ರಪ್ರದೇಶ ಚಿತ್ತೂರಿಗೆ ಪ್ರಯಾಣಿಸುತ್ತಿದ್ದಳು. ಆಕೆ ನಾಲ್ಕು ತಿಂಗಳ ಗರ್ಭಿಣಿ ಆಗಿದ್ದು, ಶುಕ್ರವಾರ ಮುಂಜಾನೆ ರೈಲು ತಿರುಪತ್ತೂರು ಜಿಲ್ಲೆಯ ಜೋಲಾರ್ಪೇಟೆ ಬಳಿ ಚಲಿಸುತ್ತಿರುವಾಗ ಮಹಿಳೆ ಶೌಚಾಲಯಕ್ಕೆಂದು ಎದ್ದು ಹೋಗಿದ್ದಾಳೆ ಆಗ ಇಬ್ಬರು ಪುರುಷರು ಆಕೆಯ ಮೇಲೆ ಲೈಂಗಿಕ ದೌರ್ಜನ್ಯ (Physical Assault) ಎಸಗಿದ್ದಾರೆ ಎಂದು ತಿಳಿದು ಬಂದಿದೆ. ಸದ್ಯ ಮಹಿಳೆಯನ್ನು , ಚಿಕಿತ್ಸೆಗಾಗಿ ವೆಲ್ಲೂರಿನ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.
ಸಂತ್ರಸ್ತ ಮಹಿಳೆ ಕೊಯಮತ್ತೂರಿನಲ್ಲಿ ಕೆಲಸ ಮಾಡುತ್ತಿದ್ದು, ಆಕೆ ರೈಲಿನಲ್ಲಿ ಮಹಿಳಾ ಭೋಗಿಯಲ್ಲಿ ಪ್ರಯಾಣಿಸುತ್ತಿದ್ದಳು. ಶುಕ್ರವಾರ ಬೆಳಗಿನ ಜಾವ ಜೋಲಾರ್ಪೇಟೆಯ ಬಳಿ ಆಕೆ ಶೌಚಾಲಯಕ್ಕೆಂದು ಎದ್ದು ರೈಲಿನ ಶೌಚಾಲಯಕ್ಕೆ ತೆರಳಿದ್ದಾಳೆ. ಆಗ ಇಬ್ಬರು ಪುರುಷರು ದು ಗರ್ಭಿಣಿಗೆ ತೊಂದರೆ ಕೊಟ್ಟಿದೆ. ಆಕೆ ಅವರ ಬಳಿ ಹೊರ ಹೋಗುವಂತೆ ಕೇಳಿಕೊಂಡರೂ ಕೂಡ ಆಕೆಗೆ ಲೈಂಗಿಕ ಕಿರುಕುಳ ನೀಡಿದ್ದಾರೆ. ಆಕೆ ಕೂಗಿಕೊಳ್ಳುತ್ತಿದ್ದಂತೆ ವ್ಯಕ್ತಿಗಳು ಆಕೆಯನ್ನು ರೈಲಿನಿಂದ ಹೊರಗೆ ತಳ್ಳಿದ್ದಾರೆ.
ಸದ್ಯ ವೆಲ್ಲೂರಿನ ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ಆಕೆಯನ್ನು ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಆಕೆಯ ಕೈ ಮತ್ತು ಕಾಲುಗಳಲ್ಲಿ ಮೂಳೆ ಮುರಿದಿದೆ ಎಂದು ತಿಳಿದು ಬಂದಿದೆ. ಘಟನೆಯ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದು, ಮಹಿಳೆಯ ಹೇಳಿಕೆ ಆಧಾರದ ಮೇಲೆ ಕೆ.ವಿ. ಕುಪ್ಪಂ ಪ್ರದೇಶದ ಪೂಂಚೋಲೈ ಗ್ರಾಮದ ಹೇಮರಾಜ್ ಎಂಬಾನನ್ನು ಬಂಧಿಸಿದ್ದಾರೆ. ಇನ್ನೊಬ್ಬ ಆರೋಪಿ ಘಟನಾ ಸ್ಥಳದಿಂದ ಪರಾರಿಯಾಗಿದ್ದು, ರೈಲ್ವೆ ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.
ಈ ಸುದ್ದಿಯನ್ನೂ ಓದಿ: Physical Assault : ಮೂವರು ಶಿಕ್ಷಕರಿಂದಲೇ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ
ಸದ್ಯ ಈ ಘಟನೆಯನ್ನು ಖಂಡಿಸಿ ತಮಿಳುನಾಡಿನಾದ್ಯಂತ ಆಕ್ರೋಶ ವ್ಯಕ್ತವಾಗಿದ್ದು, ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಎಡಪ್ಪಾಡಿ ಕೆ ಪಳನಿಸ್ವಾಮಿ ಈ ಘಟನೆಯನ್ನು ಖಂಡಿಸಿದ್ದಾರೆ. ಡಿಎಂಕೆ ಸರ್ಕಾರದಲ್ಲಿ ಮಹಿಳೆಯರಿಗೆ ರಕ್ಷಣೆ ಇಲ್ಲ ಎಂದು ಅವರು ಹೇಳಿದ್ದಾರೆ. ರೈಲಿನಲ್ಲಿ ಗರ್ಭಿಣಿ ಮಹಿಳೆಗೆ ಸುರಕ್ಷತೆ ಇಲ್ಲ, ಹೆಣ್ಣು ಮಕ್ಕಳು ಶಾಲಾ ಕಾಲೇಜಿಗೆ ನಿರ್ಭೀತಿಯಿಂದ ಹೋಗುವಂತಿಲ್ಲ. ಇದು ನಾಚಿಕೆಗೇಡಿನ ಸಂಗತಿ ಎಂದು ಅವರು ಕಿಡಿ ಕಾರಿದರು. ಮಹಿಳೆಯರಿಗೆ ಮಾತ್ರ ಪ್ರತ್ಯೇಕ ಬೋಗಿಗಳಿದ್ದರೂ, ಮಹಿಳಾ ಪ್ರಯಾಣಿಕರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳುವಲ್ಲಿ ಅಧಿಕಾರಿಗಳು ವಿಫಲರಾಗಿದ್ದಾರೆ ಎಂದು ಎಲ್ಲೆಡೆ ಆಕ್ರೋಶ ವ್ಯಕ್ತವಾಗುತ್ತಿದೆ.