ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

Punith Kerehalli: ಹಿಂದೂಪರ ಕಾರ್ಯಕರ್ತ ಪುನೀತ್‌ ಕೆರೆಹಳ್ಳಿ ಮತ್ತೆ ಅರೆಸ್ಟ್‌

ಹಿಂದೂ ಪರ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ಅವರನ್ನು ಇಂದು ಬಂಧಿಸಲಾಗಿದೆ. ಗೋ ಮಾಂಸ ಸಾಗಾಟ ವೇಳೆ ಚಾಲಕನ ಮೇಲೆ ಹಲ್ಲೆ ಮಾಡಿದ ಆರೋಪದ ಮೇಲೆ ಬಗಲಗುಂಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಕೋರ್ಟ್‌ನಿಂದ ನಾನ್ ಬೈಲೇಬಲ್ ವಾರೆಂಟ್ (NBW) ಜಾರಿಯಾಗಿದ್ದ ಹಿನ್ನೆಲೆಯಲ್ಲಿ ಮತ್ತೆ ಪುನೀತ್‌ ಕೆರೆಹಳ್ಳಿಯನ್ನು ಬಂಧಿಸಲಾಗಿದೆ.

ಪುನೀತ್‌ ಕೆರೆಹಳ್ಳಿ

ಬೆಂಗಳೂರು: ಹಿಂದೂ ಪರ ಕಾರ್ಯಕರ್ತ ಪುನೀತ್ ಕೆರೆಹಳ್ಳಿ (Puneeth Kerehalli) ಅವರನ್ನು ಇಂದು ಬಂಧಿಸಲಾಗಿದೆ. ಗೋ ಮಾಂಸ ಸಾಗಾಟ ವೇಳೆ ಚಾಲಕನ ಮೇಲೆ ಹಲ್ಲೆ ಮಾಡಿದ ಆರೋಪದ ಮೇಲೆ ಬಗಲಗುಂಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಈ ಪ್ರಕರಣದಲ್ಲಿ ಕೋರ್ಟ್‌ನಿಂದ ನಾನ್ ಬೈಲೇಬಲ್ ವಾರೆಂಟ್ (NBW) ಜಾರಿಯಾಗಿದ್ದ ಹಿನ್ನೆಲೆಯಲ್ಲಿ ಮತ್ತೆ ಪುನೀತ್‌ ಕೆರೆಹಳ್ಳಿಯನ್ನು ಬಂಧಿಸಲಾಗಿದೆ. ಗೋ ಮಾಂಸ ಅಥವಾ ಗೋವು ಸಾಗಾಟ ಸಂಬಂಧಿತ ಒಂದು ಘಟನೆಯಲ್ಲಿ ಪುನೀತ್ ಕೆರೆಹಳ್ಳಿ ಮತ್ತು ಆತನ ಸಹಚರರು ಚಾಲಕನ ಮೇಲೆ ಹಲ್ಲೆ ನಡೆಸಿದ್ದರು ಎಂಬ ಆರೋಪವಿತ್ತು.

ಗೋ ಮಾಂಸ ಸಾಗಾಟ ವೇಳೆ ಚಾಲಕನಿಗೆ ಹಲ್ಲೆ ಮಾಡಿದ್ದ ಪ್ರಕರಣ ಸಂಬಂಧ ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆ ಕೇಸ್‌ನಲ್ಲಿ ಆರೋಪಿ ಪುನೀತ್ ಕೆರೆಹಳ್ಳಿ ಕೋರ್ಟ್‌ಗೆ ಹಾಜರಾಗದ ಕಾರಣ, ನ್ಯಾಯಾಲಯವು NBW ಜಾರಿ ಮಾಡಿತ್ತು. ಈ ವಾರೆಂಟ್‌ನ ಆಧಾರದ ಮೇಲೆ ಪೊಲೀಸರು ಕಾರ್ಯಾಚರಣೆ ನಡೆಸಿ ಪುನೀತ್‌ ಕೆರೆಹಳ್ಳಿಯನ್ನು ಬಂಧಿಸಿದ್ದಾರೆ.

ಪುನೀತ್ ಕೆರೆಹಳ್ಳಿ ರಾಷ್ಟ್ರ ರಕ್ಷಣಾ ಪಡೆ ಎಂಬ ಸಂಘಟನೆಯ ಮೂಲಕ ಹಿಂದೂ ಪರ ಚಟುವಟಿಕೆಗಳಲ್ಲಿ ಸಕ್ರಿಯರಾಗಿದ್ದಾರೆ. ಗೋ ರಕ್ಷಣೆಯ ಹೆಸರಿನಲ್ಲಿ ಹಲವು ಘಟನೆಗಳಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪಗಳಿವೆ. ಹಿಂದೆಯೂ ಅವರು ಗೋವು ಸಾಗಾಟದ ವಿರುದ್ಧ ಹೋರಾಟ ನಡೆಸಿ, ಕೆಲವು ಪ್ರಕರಣಗಳಲ್ಲಿ ಬಂಧನಕ್ಕೊಳಗಾಗಿದ್ದರು. ಒಂದು ಪ್ರಕರಣದಲ್ಲಿ ಚಾಲಕನ ಮರಣಕ್ಕೆ ಕಾರಣರಾಗಿದ್ದಾರೆ ಎಂಬ ಆರೋಪವಿತ್ತು.

ಇದಕ್ಕೂ ಮುನ್ನ, ಡಿಸೆಂಬರ್ 18ರಂದು ಬನ್ನೇರುಘಟ್ಟ ಠಾಣಾ ವ್ಯಾಪ್ತಿಯಲ್ಲಿಯೂ ಪುನೀತ್ ಕೆರೆಹಳ್ಳಿ ಬಂಧನಕ್ಕೊಳಗಾಗಿ ನಂತರ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು. ಬಾಂಗ್ಲಾದೇಶದ ಅಕ್ರಮ ವಲಸಿಗರೆಂದು ಆರೋಪಿಸಿ ಶೆಡ್‌ಗಳಿಗೆ ತೆರಳಿ ದಾಖಲೆ ತೋರಿಸುವಂತೆ ದಾಂಧಲೆ ನಡೆಸಿದ ಆರೋಪ ಅವರ ಮೇಲೆ ದಾಖಲಾಗಿತ್ತು. ಎಲೆಕ್ಟ್ರಾನಿಕ್ ಸಿಟಿ, ಹೆಬ್ಬಗೋಡಿ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಅಕ್ರಮ ವಲಸಿಗರು ವಾಸಿಸುತ್ತಿದ್ದಾರೆ ಎಂದು ಹೇಳಿ, ಪುನೀತ್ ಕೆರೆಹಳ್ಳಿ ನೇತೃತ್ವದ ತಂಡವು ಕೆಲ ಶೆಡ್‌ಗಳಿಗೆ ತೆರಳಿ ವಿಡಿಯೋ ಚಿತ್ರೀಕರಣ ಮಾಡಿತ್ತು. ಈ ದೃಶ್ಯಾವಳಿಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು.