ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ಮಹಿಳೆಯರ ಒಳ ಉಡುಪು ಕದ್ದು ಧರಿಸಿ ವಿಕೃತಿ ಮೆರೆಯುತ್ತಿದ್ದ ಸೈಕೋ ವ್ಯಕ್ತಿಯ ಬಂಧನ

ಮಹಿಳೆಯರ ಒಳ ಉಡುಪುಗಳನ್ನು ಕದ್ದ ಆರೋಪದ ಮೇಲೆ ಬೆಂಗಳೂರು ಮೂಲದ ವಿಕೃತ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ವಿಭಾಗದ ಹೆಬ್ಬಗೋಡಿ ಪೊಲೀಸರು, ಮಹಿಳೆಯರ ಒಳ ಉಡುಪುಗಳನ್ನು ಕದ್ದ ಆರೋಪದ ಮೇಲೆ 23 ವರ್ಷದ ವಿಕೃತಕಾಮಿಯನ್ನು ಬಂಧಿಸಿದ್ದಾರೆ.

ಸಂಗ್ರಹ ಚಿತ್ರ

ಬೆಂಗಳೂರು: ಮಹಿಳೆಯರ ಒಳ ಉಡುಪುಗಳನ್ನು ಕದ್ದ ಆರೋಪದ ಮೇಲೆ ಬೆಂಗಳೂರು ಮೂಲದ ವಿಕೃತ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ವಿಭಾಗದ ಹೆಬ್ಬಗೋಡಿ (Physical Assault) ಪೊಲೀಸರು, ಮಹಿಳೆಯರ ಒಳ ಉಡುಪುಗಳನ್ನು ಕದ್ದ ಆರೋಪದ ಮೇಲೆ 23 ವರ್ಷದ ವಿಕೃತಕಾಮಿಯನ್ನು ಬೆಬಂಧಿಸಿದ್ದಾರೆ. ಜನವರಿ 19 ರಂದು ವಿದ್ಯಾ ನಗರದ ನಿವಾಸಿಗಳು ವ್ಯಕ್ತಿಯೊಬ್ಬ ಮನೆಯ ಮೇಲ್ಛಾವಣಿ ಮತ್ತು ಅಂಗಳದಲ್ಲಿ ಒಣಗಲು ಬಿಟ್ಟಿರುವ ಒಳ ಉಡುಪುಗಳನ್ನು ಕದ್ದುಕೊಂಡು ಹೋಗುತ್ತಿದ್ದಾನೆ ಎಂದು ದೂರು ನೀಡಿದ್ದರು.

ಹೆಬ್ಬಗೋಡಿಯ ಗಣೇಶ ದೇವಸ್ಥಾನದ ಬಳಿಯ ಸೋಮರಾಜ್ ಕಟ್ಟಡದ ನಿವಾಸಿ ಅಮಲ್ ಎನ್ ಅಲಿಯಾಸ್ ಅಜಿಕುಕುಮಾರ್ (23) ಆರೋಪಿ ಎಂದು ಗುರುತಿಸಲಾಗಿದೆ. ಆತ ವಾಸ ಮಾಡುತ್ತಿದ್ದಲ್ಲಿ ತೆರಳಿ ಪರಿಶೀಲನೆ ನಡೆಸಿದಾಗ ಮಹಿಳೆಯರ ಒಳ ಉಡುಪುಗಳ ಸಂಗ್ರಹ ಮತ್ತು ಆತ ಕದ್ದ ವಸ್ತುಗಳನ್ನು ಧರಿಸಿರುವ ಹಲವಾರು ಫೋಟೋಗಳು ಸಿಕ್ಕಿವೆ. ಹೆಬ್ಬಗೋಡಿ ನಿವಾಸಿ ಆರೋಪಿ ಆರು ತಿಂಗಳ ಹಿಂದೆ ಕೆಲಸ ಹುಡುಕಿಕೊಂಡು ನಗರಕ್ಕೆ ಬಂದು ಸ್ನೇಹಿತನ ಕೋಣೆಯಲ್ಲಿ ವಾಸಿಸುತ್ತಿದ್ದ. ಅವನಿಗೆ ಇನ್ನೂ ಕೆಲಸ ಸಿಕ್ಕಿರಲಿಲ್ಲ.

ಹೆಬ್ಬಗೋಡಿ ಪ್ರದೇಶದಲ್ಲಿ ಸುತ್ತಾಡುತ್ತಾ ಮನೆಗಳ ಹೊರಗೆ ನೇತುಹಾಕಿದ ಒಳ ಉಡುಪುಗಳನ್ನು ಕದಿಯುತ್ತಿದ್ದ ಎಂದು ತಿಳಿದು ಬಂದಿದೆ. ವಿಕೃತ ಕಾಮಿ ಮಹಿಳೆಯರ ಒಳ ಉಡುಪುಗಳನ್ನು ಕದ್ದುಕೊಂಡು ಹೋಗಿ ನಂತರ ಅವುಗಳನ್ನು ಧರಿಸಿ ಫೋಟೋಗೆ ಫೋಸ್ ಕೊಡುತ್ತಿದ್ದ. ಪೊಲೀಸರು ಬಿಎನ್‌ಎಸ್‌ನ ಸೆಕ್ಷನ್ 303(2), 329(4), ಮತ್ತು 79 ರ ಅಡಿಯಲ್ಲಿ ಸ್ವಯಂಪ್ರೇರಿತ ಪ್ರಕರಣವನ್ನು ದಾಖಲಿಸಿದ್ದಾರೆ.

ಪ್ರತ್ಯೇಕ ಪ್ರಕರಣದಲ್ಲಿ, ಬೆಂಗಳೂರು ಮೂಲದ 34 ವರ್ಷದ ಇನ್ಫ್ಲುಯೆನ್ಸರ್‌ ಮಹಿಳೆಯೊಬ್ಬರು ಹರಿಯಾಣದ ವ್ಯಕ್ತಿಯೊಬ್ಬರ ವಿರುದ್ಧ ಹಿಂಸೆ ಮತ್ತು ಲೈಂಗಿಕ ಕಿರುಕುಳದ ಆರೋಪ ಮಾಡಿದ್ದಾರೆ. ಮಹಿಳೆ ಕೂಡ ಹರಿಯಾಣ ಮೂಲದವರಾಗಿದ್ದು, ಕಳೆದ 15 ವರ್ಷಗಳಿಂದ ಬೆಂಗಳೂರಿನಲ್ಲಿ ವಾಸಿಸುತ್ತಿದ್ದಾರೆ. ಆರೋಪಿಯು ಸುಮಾರು ಒಂದು ವರ್ಷದಿಂದ ತನ್ನನ್ನು ಹಿಂಬಾಲಿಸುತ್ತಿದ್ದಾನೆ ಮತ್ತು ಕಿರುಕುಳ ನೀಡುತ್ತಿದ್ದಾನೆ ಎಂದು ಅವರು ಹೇಳಿದ್ದಾರೆ.

ಬಸ್‌ನಲ್ಲಿ ರೀಲ್ಸ್‌ ಮಾಡ್ತಾ ಲೈಂಗಿಕ ದೌರ್ಜನ್ಯದ ಆರೋಪ ಮಾಡಿದ ಮಹಿಳೆ; ವಿಡಿಯೊ ವೈರಲ್ ಆಗುತ್ತಿದ್ದಂತೆ ವ್ಯಕ್ತಿ ಆತ್ಮಹತ್ಯೆ

2025ರ ಅಕ್ಟೋಬರ್ 24 ಮತ್ತು ಡಿಸೆಂಬರ್ 20ರ ನಡುವೆ ಆ ವ್ಯಕ್ತಿ ಇನ್‌ಸ್ಟಾಗ್ರಾಮ್‌ನಲ್ಲಿ ಹಲವು ಲೈಂಗಿಕ ಮತ್ತು ಪ್ರಚೋದನಕಾರಿ ಸಂದೇಶಗಳನ್ನು ಕಳುಹಿಸಿದ್ದಾನೆ. ಬ್ಲಾಕ್ ಮಾಡಿದ ನಂತರವೂ, ಆರೋಪಿಯು ವಿವಿಧ ಸಾಮಾಜಿಕ ಮಾಧ್ಯಮ ಖಾತೆಗಳ ಮೂಲಕ ತನನ್ನು ಸಂಪರ್ಕಿಸಲು ಪ್ರಯತ್ನಿಸಿದ್ದ ಎಂದು ಆಕೆ ಆರೋಪಿಸಿದ್ದಾಳೆ.