ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಪಿಯುಸಿ ವಿದ್ಯಾರ್ಥಿನಿ ಸಾವು: ಪ್ರಕರಣ ದಾಖಲು

ಮೃತ ಶ್ರೇಯಾ ಅವರು ರಾಮಕೃಷ್ಣ ಹಾಗೂ ನಾಗರತ್ನಮ್ಮ ದಂಪತಿಯ ಕಿರಿಯ ಪುತ್ರಿಯಾಗಿದ್ದು, ಉಡುಪಿ ಜಿಲ್ಲೆಯ ಪ್ರತಿಷ್ಠಿತ ಕಾಲೇಜೊಂದರಲ್ಲಿ ಪಿಯುಸಿ ವ್ಯಾಸಂಗ ಮಾಡುತ್ತಿದ್ದರು. ಆರೋಗ್ಯ ಸಮಸ್ಯೆಯ ಹಿನ್ನೆಲೆಯಲ್ಲಿ ನಾಲ್ಕು ದಿನಗಳ ಹಿಂದೆ ಕಾಲೇಜಿನಿಂದ ಚಿಕ್ಕಬಳ್ಳಾಪುರಕ್ಕೆ ಮರಳಿದ್ದರು ಎನ್ನಲಾಗಿದೆ. ಪೋಷಕರು ಮಗಳಿಗೆ ಚಿಕಿತ್ಸೆ ಕೊಡಿಸಿದ್ದರು ಎಂದು ತಿಳಿದುಬಂದಿದೆ.

ಚಿಕ್ಕಬಳ್ಳಾಪುರ: ನಗರದ ಪ್ರಶಾಂತ ನಗರ ಬಡಾವಣೆಯಲ್ಲಿ ಪಿಯುಸಿ ವ್ಯಾಸಂಗ ಮಾಡುತ್ತಿದ್ದ 17 ವರ್ಷದ ವಿದ್ಯಾರ್ಥಿನಿ ಶ್ರೇಯಾ ಮೃತಪಟ್ಟಿರುವ ಘಟನೆ ನಡೆದಿದೆ.

ಮೃತ ಶ್ರೇಯಾ ಅವರು ರಾಮಕೃಷ್ಣ ಹಾಗೂ ನಾಗರತ್ನಮ್ಮ ದಂಪತಿಯ ಕಿರಿಯ ಪುತ್ರಿಯಾಗಿದ್ದು, ಉಡುಪಿ ಜಿಲ್ಲೆಯ ಪ್ರತಿಷ್ಠಿತ ಕಾಲೇಜೊಂದರಲ್ಲಿ ಪಿಯುಸಿ ವ್ಯಾಸಂಗ ಮಾಡುತ್ತಿದ್ದರು. ಆರೋಗ್ಯ ಸಮಸ್ಯೆಯ ಹಿನ್ನೆಲೆಯಲ್ಲಿ ನಾಲ್ಕು ದಿನಗಳ ಹಿಂದೆ ಕಾಲೇಜಿನಿಂದ ಚಿಕ್ಕಬಳ್ಳಾಪುರಕ್ಕೆ ಮರಳಿದ್ದರು ಎನ್ನಲಾಗಿದೆ. ಪೋಷಕರು ಮಗಳಿಗೆ ಚಿಕಿತ್ಸೆ ಕೊಡಿಸಿದ್ದರು ಎಂದು ತಿಳಿದುಬಂದಿದೆ.

ಇದನ್ನೂ ಓದಿ: Crime News: ಅನುಕಂಪದ ಸರ್ಕಾರಿ ಕೆಲಸ ಗಿಟ್ಟಿಸಿಕೊಳ್ಳಲು ತಾಯಿಯನ್ನೇ ಕೊಂದ ಪಾಪಿ ಮಗಳು; ಸಹೋದರನ ಸಣ್ಣ ಅನುಮಾನದಿಂದ ಬೆಳಕಿಗೆ ಬಂತು ಭಯಾನಕ ಸಂಚು

ಪೋಷಕರು ಕೆಲಸಕ್ಕೆ ತೆರಳಿದ್ದ ಸಂದರ್ಭದಲ್ಲಿ ಶ್ರೇಯಾ ಮನೆಯಲ್ಲಿ ಒಬ್ಬರೇ ಇದ್ದರು. ಸಂಜೆ ಪೋಷಕರು ಮನೆಗೆ ಹಿಂದಿರುಗಿದಾಗ ಕೊಠಡಿ ಒಳಗಿನಿಂದ ಬಾಗಿಲು ಹಾಕಿಕೊಂಡಿರುವುದು ಕಂಡುಬಂದಿದೆ. ಬಳಿಕ ಪರಿಶೀಲಿಸಿದಾಗ ಶ್ರೇಯಾ ಮೃತಪಟ್ಟಿರುವುದು ಗೊತ್ತಾಗಿದೆ.

2cbpm10nenu ok

ತಕ್ಷಣ ನಗರ ಠಾಣೆ ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪೋಷಕರ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀ ಸರು, ವಿದ್ಯಾರ್ಥಿನಿಯ ಸಾವಿಗೆ ನಿಖರ ಕಾರಣವೇನು ಎಂಬುದರ ಕುರಿತು ತನಿಖೆ ಮುಂದುವರಿಸಿ ದ್ದಾರೆ.

ಘಟನೆ ಹಿನ್ನೆಲೆಯಲ್ಲಿ ಕುಟುಂಬಸ್ಥರು ಹಾಗೂ ಸ್ಥಳೀಯರಲ್ಲಿ ದುಃಖದ ವಾತಾವರಣ ನಿರ್ಮಾಣ ವಾಗಿದೆ.