ವಿದೇಶ ಫ್ಯಾಷನ್‌ ಲೋಕ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್‌ ಹೌಸ್‌ ಸಂಪಾದಕೀಯ

Pune Horror: ಪೊಲೀಸ್‌ ಸ್ಟೇಷನ್‌ ಸಮೀಪವೇ ಬಸ್‌ನಲ್ಲಿ ಮಹಿಳೆ ಮೇಲೆ ಅತ್ಯಾಚಾರ- ಬಸ್‌ ಸ್ಟ್ಯಾಂಟ್‌ ಭದ್ರತಾ ಕಚೇರಿ ಧ್ವಂಸ!

ಮಂಗಳವಾರ ಮುಂಜಾನೆ ಮಹಾರಾಷ್ಟ್ರದ ಪುಣೆಯ ಸ್ವರ್ಗೇಟ್ ಬಸ್ ಡಿಪೋದಲ್ಲಿ 26 ವರ್ಷದ ಮಹಿಳೆಯ ಮೇಲೆ ಬಸ್‌ನಲ್ಲಿ ಅತ್ಯಾಚಾರ ನಡೆದಿದೆ. ಆರೋಪಿಯನ್ನು ದತ್ತಾತ್ರಯ ರಾಮದಾಸ್ ಗಡೆ ಎಂದು ಗುರುತಿಸಲಾಗಿದೆ. ಮಂಗಳವಾರ ಬೆಳಿಗ್ಗೆ 5.30 ರ ಸುಮಾರಿಗೆ ಈ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ. ಘಟನೆಯ ಬಗ್ಗೆ ಮಹಿಳೆ ಪೊಲೀಸರಿಗೆ ದೂರು ನೀಡಿದ್ದು, ತನಿಖೆ ನಡೆಯುತ್ತಿದೆ.

ಪುಣೆ ಅತ್ಯಾಚಾರ ಪ್ರಕರಣ; ಬಸ್ ನಿಲ್ದಾಣದ ಭದ್ರತಾ ಕಚೇರಿ ಧ್ವಂಸ

ಪುಣೆಯಲ್ಲಿ ಪ್ರತಿಭಟನೆ

Profile Vishakha Bhat Feb 27, 2025 9:52 AM

ಮುಂಬೈ: ಮಹಾರಾಷ್ಟ್ರದ ಪುಣೆಯಲ್ಲಿಆಘಾತಕಾರಿ ಘಟನೆಯೊಂದು ನಡೆದಿದ್ದು, (Pune Horror) ನಗರದ ಜನನಿಬಿಡ ಸ್ವರ್ಗೇಟ್ ಬಸ್ ನಿಲ್ದಾಣದಲ್ಲಿ ನಿಲ್ಲಿಸಿದ್ದ ರಾಜ್ಯ ಸಾರಿಗೆ ಬಸ್ಸಿನೊಳಗೆ 26 ವರ್ಷದ ಮಹಿಳೆಯ ಮೇಲೆ ವ್ಯಕ್ತಿಯೊಬ್ಬ ಅತ್ಯಾಚಾರ ನಡೆಸಿದ್ದಾನೆ. ವ್ಯಕ್ತಿ ಅಪರಾಧ ಹಿನ್ನಲೆಯುಳ್ಳವನಾಗಿದ್ದು, ಪೊಲೀಸರು ಆತನನ್ನು ಹುಡುಕಾಟ ನಡೆಸುತ್ತಿದ್ದಾರೆ. ಆರೋಪಿಯನ್ನು ದತ್ತಾತ್ರಯ ರಾಮದಾಸ್ ಗಡೆ ಎಂದು ಗುರುತಿಸಲಾಗಿದೆ. ಮಂಗಳವಾರ ಬೆಳಿಗ್ಗೆ 5.30 ರ ಸುಮಾರಿಗೆ ಈ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ. ಘಟನೆಯ ಬಗ್ಗೆ ಮಹಿಳೆ ಪೊಲೀಸರಿಗೆ ದೂರು ನೀಡಿದ್ದು, ತನಿಖೆ ನಡೆಯುತ್ತಿದೆ.

ಫೆ. 25 ರ ಬೆಳಗ್ಗೆ ಮಹಿಳೆ ಪ್ಲಾಟ್‌ಫಾರ್ಮ್‌ನಲ್ಲಿ ಪೈಥಾನ್‌ಗೆ ತೆರಳಲು ಬಸ್‌ಗಾಗಿ ಕಾಯುತ್ತಿದ್ದಾಗ, ಒಬ್ಬ ವ್ಯಕ್ತಿ ಮಹಿಳೆ ಬಳಿಗೆ ಬಂದು ಸಹೋದರಿ ಎಂದು ಕರೆದು ಬಸ್ ಮತ್ತೊಂದು ಪ್ಲಾಟ್‌ಫಾರ್ಮ್‌ಗೆ ಬಂದಿದೆ ಎಂದು ಹೇಳಿದ್ದಾನೆ. ಆಕೆಯನ್ನು ನಿಲ್ದಾಣದ ಆವರಣದಲ್ಲಿ ಬೇರೆಡೆ ನಿಲ್ಲಿಸಿದ್ದ ಶಿವಶಾಹಿ ಎಸಿ ಬಸ್ಸಿನ ಬಳಿಗೆ ಕರೆದೊಯ್ದನು. ಅತ್ಯಾಚಾರದ ಬಗ್ಗೆ ದೂರು ನೀಡಿರುವ ಖಾಸಗಿ ವೈದ್ಯಕೀಯ ಕ್ಷೇತ್ರದಲ್ಲಿ ಕೆಲಸ ಮಾಡುವ ಮಹಿಳೆ ಪೊಲೀಸರಿಗೆ ಘಟನೆಯ ಬಗ್ಗೆ ವಿವರಣೆ ನೀಡಿದ್ದು, ಬಸ್ಸಿನೊಳಗಿನ ದೀಪಗಳು ಉರಿಯದ ಕಾರಣ ಮೊದಲು ಬಸ್ ಹತ್ತಲು ಹಿಂಜರಿದಳು, ಆದರೆ ಆ ವ್ಯಕ್ತಿ ಅದು ಸರಿಯಾದ ವಾಹನ ಎಂದು ಮನವೊಲಿಸಿ ಒಳಗೆ ಹೋಗಿ ಅತ್ಯಾಚಾರ ಮಾಡಿ ಪರಾರಿಯಾಗಿದ್ದಾನೆ.ಅಲ್ಲದೇ ಈ ಕೃತ್ಯದ ಬಗ್ಗೆ ಯಾರಿಗೂ ಹೇಳದಂತೆ ಬೆದರಿಕೆಯೊಡ್ಡಿದ್ದಾನೆ.

ಘಟನೆಯ ನಂತರ ಪುಣೆಯಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿದೆ. ಅತ್ಯಾಚಾರವನ್ನು ಖಂಡಿಸಿ ಪ್ರತಿಭಟನೆ ನಡೆಯುತ್ತಿದೆ. ಶಿವಸೇನೆ (ಯುಬಿಟಿ) ನಾಯಕ ವಸಂತ್ ಮೋರ್ ನೇತೃತ್ವದ ಪ್ರತಿಭಟನಾಕಾರರು ಬುಧವಾರ ನಗರದ ಭದ್ರತಾ ಕಚೇರಿ ಮತ್ತು ಅಪರಾಧ ನಡೆದ ಬಸ್ ಅನ್ನು ಧ್ವಂಸಗೊಳಿಸಿದ್ದಾರೆ. ಸರ್ಕಾರ 23 ಭದ್ರತಾ ಸಿಬ್ಬಂದಿಯನ್ನು ಸಹ ಅಮಾನತುಗೊಳಿಸಿದೆ. ಸ್ವರ್ಗೇಟ್ ಬಸ್ ಡಿಪೋದಲ್ಲಿ ಕೋಪಗೊಂಡ 20ಕ್ಕೂ ಹೆಚ್ಚು ಜನರ ಗುಂಪು ಜಮಾಯಿಸಿ ಭದ್ರತಾ ಸಿಬ್ಬಂದಿ ಕುಳಿತುಕೊಳ್ಳುವ ಕ್ಯಾಬಿನ್‌ನ ಗಾಜನ್ನು ಒಡೆದಿದ್ದಾರೆ.



ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ (ಎಸ್‌ಪಿ) ನಾಯಕಿ ಮತ್ತು ಬಾರಾಮತಿ ಲೋಕಸಭಾ ಸಂಸದೆ ಸುಪ್ರಿಯಾ ಸುಳೆ ಭಾರತೀಯ ಜನತಾ ಪಕ್ಷದ ನೇತೃತ್ವದ ಮಹಾಯುತಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಉಪಮುಖ್ಯಮಂತ್ರಿ ಅಜಿತ್‌ ಪವಾರ್‌ ಅವರು ಪ್ರಕರಣದ ತನಿಖೆ ನಡೆಸಿ ಆರೋಪಿಗಳನ್ನು ತ್ವರಿತವಾಗಿ ಬಂಧಿಸುವಂತೆ ಪುಣೆ ಪೊಲೀಸ್ ಆಯುಕ್ತರಿಗೆ ನಿರ್ದೇಶನ ನೀಡಿದ್ದಾರೆ.

ರಾಷ್ಟ್ರೀಯ ಮಹಿಳಾ ಆಯೋಗ (NCW) ಈ ಘಟನೆಯನ್ನು ಸ್ವಯಂಪ್ರೇರಿತವಾಗಿ ಸ್ವೀಕರಿಸಿದ್ದು, ಈ ವಿಷಯದಲ್ಲಿ ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದೆ. NCW ಅಧ್ಯಕ್ಷೆ ವಿಜಯಾ ರಹತ್ಕರ್ ಅವರು ಪೊಲೀಸ್ ಮಹಾನಿರ್ದೇಶಕರಿಗೆ ಪತ್ರ ಬರೆದು, ಮೂರು ದಿನಗಳಲ್ಲಿ ಕ್ರಮ ಕೈಗೊಂಡ ವರದಿಯನ್ನು FIR ಪ್ರತಿಯೊಂದಿಗೆ ಆಯೋಗಕ್ಕೆ ಸಲ್ಲಿಸುವಂತೆ ಕೇಳಿಕೊಂಡಿದ್ದಾರೆ.

ಸದ್ಯ ಪೊಲೀಸರು ತನಿಖೆ ಪ್ರಾರಂಭಿಸಿದ್ದು, ಬುಧವಾರ ಪುಣೆ ಪೊಲೀಸ್ ತಂಡ ಆರೋಪಿಯ ಸಹೋದರನನ್ನು ವಿಚಾರಣೆ ನಡೆಸಿದೆ. ಸ್ವರ್ಗೇಟ್ ಬಸ್ ನಿಲ್ದಾಣ ಮತ್ತು ಹತ್ತಿರದ ಪ್ರದೇಶಗಳ ಸಿಸಿಟಿವಿ ಕ್ಯಾಮೆರಾ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ. ಸಿಸಿಟಿವಿ ಕ್ಯಾಮೆರಾ ದೃಶ್ಯಾವಳಿಗಳಲ್ಲಿ ಮಹಿಳೆ ಆರೋಪಿಯೊಂದಿಗೆ ಬಸ್ ಕಡೆಗೆ ನಡೆದುಕೊಂಡು ಹೋಗುತ್ತಿರುವುದು ಕಂಡುಬಂದಿದೆ ಎಂದು ಉಪ ಪೊಲೀಸ್ ಆಯುಕ್ತೆ ಸ್ಮಾರ್ತನಾ ಪಾಟೀಲ್ ಸುದ್ದಿಗಾರರಿಗೆ ತಿಳಿಸಿದ್ದಾರೆ.



ಈ ಸುದ್ದಿಯನ್ನೂ ಓದಿ: Pune Horror: ನಿರ್ಭಯಾ ಘಟನೆ ಮಾದರಿ ಕೃತ್ಯ; ಪೊಲೀಸ್‌ ಠಾಣೆಯಿಂದ 100 ಮೀ. ದೂರದಲ್ಲಿ ಬಸ್‌ನೊಳಗೆ ಮಹಿಳೆ ಮೇಲೆ ಅತ್ಯಾಚಾರ

ಘಟನೆ ನಡೆದ ತಕ್ಷಣ ಮಹಿಳೆ ಪೊಲೀಸರನ್ನು ಸಂಪರ್ಕಿಸಲಿಲ್ಲ, ಬದಲಿಗೆ ಬೇರೆ ಬಸ್ಸಿನಲ್ಲಿ ತನ್ನ ಊರಿಗೆ ಹೋಗಿ ಪ್ರಯಾಣ ಮಾಡುವಾಗ ತನ್ನ ಸ್ನೇಹಿತರಿಗೆ ಫೋನ್‌ನಲ್ಲಿ ಘಟನೆಯನ್ನು ವಿವರಿಸಿದ್ದಾಳೆ ಎಂದು ಅವರು ಹೇಳಿದರು.