ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ತರಗತಿಯೊಳಗೆ ನುಗ್ಗಿ ಕಾನೂನು ವಿದ್ಯಾರ್ಥಿನಿಯನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ; ಭಯಾನಕ ವಿಡಿಯೋ ವೈರಲ್‌

Punjab Law college tragedy: ಇಡೀ ದೇಶವನ್ನೇ ಬೆಚ್ಚಿ ಬೀಳಿಸುವ ಘಟನೆ ಪಂಜಾಬ್‌ನಲ್ಲಿ ನಡೆದಿದ್ದು, ಕಾನೂನು ವಿದ್ಯಾರ್ಥಿಯೊಬ್ಬ ತನ್ನ ಸಹಪಾಠಿಯ ಮೇಲೆ ಗುಂಡು ಹಾರಿಸಿ ಕೊಲೆ ಮಾಡಿದ್ದಾನೆ. ಪಂಜಾಬ್‌ನ ಟಾರ್ನ್ ತರಣ್ ಕಾನೂನು ಕಾಲೇಜಿನಲ್ಲಿ ಈ ಘಟನೆ ನಡೆದಿದೆ.

ಕಾನೂನು ವಿದ್ಯಾರ್ಥಿನಿಯನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ

ಸಾಂದರ್ಭಿಕ ಚಿತ್ರ -

Vishakha Bhat Heggar
Vishakha Bhat Heggar Feb 9, 2026 2:54 PM

ಚಂಡೀಗಢ: ಇಡೀ ದೇಶವನ್ನೇ ಬೆಚ್ಚಿ ಬೀಳಿಸುವ ಘಟನೆ ಪಂಜಾಬ್‌ನಲ್ಲಿ ನಡೆದಿದ್ದು, ಕಾನೂನು ವಿದ್ಯಾರ್ಥಿಯೊಬ್ಬ ತನ್ನ ಸಹಪಾಠಿಯ ಮೇಲೆ ಗುಂಡು ಹಾರಿಸಿ ಕೊಲೆ ಮಾಡಿದ್ದಾನೆ. ಪಂಜಾಬ್‌ನ ಟಾರ್ನ್ ತರಣ್ ಕಾನೂನು ಕಾಲೇಜಿನಲ್ಲಿ ಈ ಘಟನೆ ನಡೆದಿದೆ. ಶಾಲೆಯಲ್ಲಿ ವಿದ್ಯಾರ್ಥಿನಿ ಬೆಂಚ್ ಮೇಲೆ ಕುಳಿತಿದ್ದಾಗ ಆಕೆಯ ಸಹಪಾಠಿ ಏಕಾಏಕಿ ಬಂದು ವಿದ್ಯಾರ್ಥಿನಿ ತಲೆಗೆ ಗುಂಡಿಕ್ಕಿ ಕೊಲ್ಲುತ್ತಾನೆ ಬಳಿಕ ವಿದ್ಯಾರ್ಥಿ ತಾನು ಸಹ ತಲೆಗೆ ಗುಂಡಿಟ್ಟುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ.

ಮೃತ ವಿದ್ಯಾರ್ಥಿನಿಯನ್ನು ಸಂದೀಪ್ ಕೌರ್ ಎಂದು ಗುರುತಿಸಲಾಗಿದೆ. ಆರೋಪಿಯನ್ನು ಪ್ರಿನ್ಸ್ ರಾಜ್ ಸಿಂಗ್ ಎಂದು ಗುರುತಿಸಲಾಗಿದ್ದು, ಕಾಲೇಜು ಕ್ಯಾಂಪಸ್ ಒಳಗೆ ಸಂದೀಪ್ ಮೇಲೆ ಗುಂಡು ಹಾರಿಸಿದ್ದಾನೆ ಎಂದು ಹೇಳಲಾಗುತ್ತದೆ. ನಂತರ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇಬ್ಬರೂ ವಿದ್ಯಾರ್ಥಿಗಳು ಕಾಲೇಜಿನಲ್ಲಿ ಮೊದಲ ಸೆಮಿಸ್ಟರ್‌ನಲ್ಲಿದ್ದರು. ಸಿಸಿಟಿವಿ ದೃಶ್ಯಾವಳಿಯಲ್ಲಿ ಪ್ರಿನ್ಸ್ ರಾಜ್ ಬೆನ್ನಿನ ಮೇಲೆ ಬ್ಯಾಗ್ ಹಿಡಿದುಕೊಂಡು ತರಗತಿಯೊಳಗೆ ಪ್ರವೇಶಿಸುತ್ತಿರುವುದು ಕಂಡು ಬಂದಿದೆ. ಈ ವೇಲೆ ಕೌರ್‌ ತನ್ನ ಸ್ನೇಹಿತೆಯ ಜೊತೆ ಮಾತನಾಡುತ್ತಿದ್ದಳು.

ವಿಡಿಯೋ ನೋಡಿ



ಕೆಲವು ಕ್ಷಣಗಳ ನಂತರ, ರಾಜ್ ತನ್ನ ಬ್ಯಾಗ್ ತೆರೆದು, ಬಂದೂಕನ್ನು ಹೊರತೆಗೆದು, ಕೌರ್ ಮೇಲೆ ಹತ್ತಿರದಿಂದ ಗುಂಡು ಹಾರಿಸಿದನು. ನಂತರ ಅವನು ತನಗೆ ತಾನೇ ಗುಂಡು ಹಾರಿಸಿಕೊಂಡಿದ್ದಾನೆ. ಗುಂಡಿನ ದಾಳಿ ನಡೆದ ತಕ್ಷಣ ವಿದ್ಯಾರ್ಥಿಗಳು ಭಯಭೀತರಾಗಿ ಕೊಠಡಿಯಿಂದ ಓಡಿಹೋಗುತ್ತಿರುವುದನ್ನು ವೀಡಿಯೊ ತೋರಿಸುತ್ತದೆ. ತರಗತಿಗಳು ಪ್ರಾರಂಭವಾಗುವ ಸ್ವಲ್ಪ ಸಮಯದ ಮೊದಲು ದಾಳಿ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಹಾಡಹಗಲೇ ಆಮ್‌ ಆದ್ಮಿ ನಾಯಕನ ಮೇಲೆ ಗುಂಡಿನ ದಾಳಿ; ಗುರುದ್ವಾರದ ಎದುರೇ ಕೊಲೆ ಮಾಡಿದ ದುಷ್ಕರ್ಮಿಗಳು

ಕೌರ್ ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ದಾಳಿಯ ಹಿಂದಿನ ಉದ್ದೇಶ ಸ್ಪಷ್ಟವಾಗಿಲ್ಲ ಎಂದು ಪೊಲೀಸರು ದೃಢಪಡಿಸಿದ್ದಾರೆ. ದುರಂತದ ತನಿಖೆಯ ಭಾಗವಾಗಿ ತನಿಖಾಧಿಕಾರಿಗಳು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ.