ಕರ್ನಾಟಕ ಬಜೆಟ್​ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹೋಳಿ ಹಬ್ಬ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Punjab Shootout : ಪಂಜಾಬ್ ಶಿವಸೇನಾ ನಾಯಕನ ಹತ್ಯೆ ಪ್ರಕರಣ; ಕೊಲೆಗೂ ಮೊದಲಿನ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಪಂಜಾಬ್‌ನ ಮೋಗಾದಲ್ಲಿ ಗುರುವಾರ ತಡರಾತ್ರಿ ಬೈಕ್‌ನಲ್ಲಿ ಬಂದ ಮೂವರು ವ್ಯಕ್ತಿಗಳು ಶಿವಸೇನಾ ನಾಯಕನನ್ನು ಗುಂಡು ಹಾರಿಸಿ ಕೊಲೆ ಮಾಡಿದ್ದಾರೆ. ಅವರು ಸಾಯುವ ಕೆಲವೇ ಕ್ಷಣಗಳ ಮೊದಲು ಹೇಗೆ ದಾಳಿಕೋರರಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸಿದರು ಎಂಬುದು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸದ್ಯ ಎಲ್ಲೆಡೆ ವೈರಲ್‌ ಆಗಿದೆ.

ಶಿವಸೇನಾ ನಾಯಕನ ಹತ್ಯೆ ; ಕೊಲೆಗೂ ಮೊದಲಿನ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಮಂಗತ್ ರೈ

Profile Vishakha Bhat Mar 15, 2025 10:18 AM

ಚಂಡೀಗಢ: ಪಂಜಾಬ್‌ನ (Punjab Shootout) ಮೋಗಾದಲ್ಲಿ ಗುರುವಾರ ತಡರಾತ್ರಿ ಬೈಕ್‌ನಲ್ಲಿ ಬಂದ ಮೂವರು ವ್ಯಕ್ತಿಗಳು ಶಿವಸೇನಾ ನಾಯಕನನ್ನು ಗುಂಡು ಹಾರಿಸಿ ಕೊಲೆ ಮಾಡಿದ್ದಾರೆ. ಅವರು ಸಾಯುವ ಕೆಲವೇ ಕ್ಷಣಗಳ ಮೊದಲು ಹೇಗೆ ದಾಳಿಕೋರರಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸಿದರು ಎಂಬುದು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸದ್ಯ ಎಲ್ಲೆಡೆ ವೈರಲ್‌ ಆಗಿದೆ. ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆಯ ಮೋಗಾ ಜಿಲ್ಲಾಧ್ಯಕ್ಷರಾಗಿದ್ದ ಮಂಗತ್ ರೈ ಹಾಲು ಖರೀದಿಸಲು ಸ್ಕೂಟರ್‌ನಲ್ಲಿ ಮನೆಯಿಂದ ಹೊರಬಂದಾಗ ಅವರ ಮೇಲೆ ದಾಳಿ ನಡೆಸಲಾಯಿತು. ಅವರು ತಮ್ಮ ಮೇಲೆ ಹಾರಿಸಲಾದ ಹಲವಾರು ಗುಂಡುಗಳನ್ನು ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದರು, ಆದರೆ ಅದು ಸಾಧ್ಯವಾಗದೆ ಮೃತಪಟ್ಟಿದ್ದಾರೆ.

ರಾತ್ರಿ 10 ಗಂಟೆ ಸುಮಾರಿಗೆ ಮೂವರು ಅಪರಿಚಿತ ವ್ಯಕ್ತಿಗಳು ಶಿವಸೇನಾ ನಾಯಕನ ಮೇಲೆ ಗುಂಡು ಹಾರಿಸಿದರು. ಆದರೆ, ಮಂಗತ್‌ ಬದಲಿಗೆ 11 ವರ್ಷದ ಬಾಲಕನಿಗೆ ತಗುಲಿತು. ದಾಳಿಕೋರರು ಬೆನ್ನಟ್ಟಿದಾಗ ಮಂಗಾ ತಕ್ಷಣ ದ್ವಿಚಕ್ರ ವಾಹನದಲ್ಲಿ ಆ ಪ್ರದೇಶದಿಂದ ಪರಾರಿಯಾಗಲು ಯತ್ನಿಸಿದರು. ಬೆನ್ನಟ್ಟಿ ಮತ್ತೆ ಗುಂಡು ಹಾರಿಸಿ ಹತ್ಯೆ ಮಾಡಿದ್ದಾರೆ. ಸಿಸಿಟಿವಿ ದೃಶ್ಯಗಳಲ್ಲಿ, ಶಿವಸೇನಾ ನಾಯಕ ದಾಳಿಕೋರರಿಂದ ತಪ್ಪಿಸಿಕೊಳ್ಳಲು ಬೀಗ ಹಾಕಿದ ಗೇಟ್ ಹತ್ತಲು ಪ್ರಯತ್ನಿಸುತ್ತಿರುವುದು ಕಂಡುಬಂದಿದೆ. ಆದರೆ ದಾಳಿಕೋರರು ಮಂಗತ್‌ ಅವರನ್ನು ಕಂಡಿದ್ದಾರೆ. ನಂತರ ಅವರ ಗುಂಡಿನ ದಾಳಿ ನಡೆಸಲಾಗಿದೆ. ಕೊಲೆ ಮಾಡಿದ ನಂತರ ಹಂತಕರು ತಪ್ಪಿಸಿಕೊಂಡು ಹೋಗುವುದು ವಿಡಿಯೋದಲ್ಲಿ ಕಂಡು ಬಂದಿದೆ.

ಈ ಸುದ್ದಿಯನ್ನೂ ಓದಿ: Anokh Mittal: ಪಂಜಾಬ್‌ ಎಎಪಿ ನಾಯಕ ಮಿತ್ತಲ್‌ ಮೇಲೆ ದಾಳಿ: ಪತ್ನಿ ಬರ್ಬರ ಹತ್ಯೆ!

ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿರುವ ವೀಡಿಯೊದಲ್ಲಿ ದಾಳಿಕೋರರು ಕೊಲೆಯ ಹೊಣೆಯನ್ನು ಹೊತ್ತುಕೊಂಡಿದ್ದಾರೆ. ಮಂಗತ್ ರಾಯ್ ತಮ್ಮನ್ನು ಬೆದರಿಸಿ ಹಣ ಸುಲಿಗೆ ಮಾಡುತ್ತಿದ್ದರಿಂದ ತಮಗೆ ಅವರ ವಿರುದ್ಧ ಕೋಪ ಇದೆ. ಅದಕ್ಕಾಗಿ ಕೊಲೆ ಮಾಡಿದ್ದೇವೆ ಎಂದು ಹೇಳಿದ್ದಾರೆ. ಏತನ್ಮಧ್ಯೆ, ಪೊಲೀಸರು ಆರು ಶಂಕಿತರ ವಿರುದ್ಧ ಪ್ರಥಮ ಮಾಹಿತಿ ವರದಿ (ಎಫ್‌ಐಆರ್) ದಾಖಲಿಸಿದ್ದಾರೆ. "ಇದು ವೈಯಕ್ತಿಕ ದ್ವೇಷದ ಪ್ರಕರಣ. ಮೃತರ ಕುಟುಂಬ ಹೆಸರಿಸಿರುವ ಆರು ಶಂಕಿತರ ವಿರುದ್ಧ ಕೊಲೆಗೆ ಸಂಬಂಧಿಸಿದಂತೆ ಎಫ್‌ಐಆರ್ ದಾಖಲಿಸಲಾಗಿದೆ. ಅವರನ್ನು ಶೀಘ್ರದಲ್ಲೇ ಬಂಧಿಸಲಾಗುವುದು" ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಅಜಯ್ ಗಾಂಧಿ ತಿಳಿಸಿದ್ದಾರೆ. ಗಾಯಗೊಂಡ ಬಾಲಕನನ್ನು ಆರಂಭದಲ್ಲಿ ಮೋಗಾ ಸಿವಿಲ್ ಆಸ್ಪತ್ರೆಗೆ ದಾಖಲಿಸಲಾಯಿತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಬೇರೆ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ಅವರು ತಿಳಿಸಿದ್ದಾರೆ.