ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಭೀಕರ ಅಪಘಾತ; ದೇವಸ್ಥಾನಕ್ಕೆ ಹೋಗಿ ಬರುತ್ತಿದ್ದ ಒಂದೇ ಕುಟುಂಬದ 9 ಮಂದಿ ದುರ್ಮರಣ

Rajasthan Accident: ಪ್ರಸಿದ್ಧ ಯಾತ್ರಾಸ್ಥಳವಾದ ಕಾಟು ಶ್ಯಾಮ್‌ ದೇವಸ್ಥಾನದ ದರ್ಶನ ಮುಗಿಸಿ ಹಿಂತಿರುಗುತ್ತಿದ್ದ ಮಹಾರಾಷ್ಟ್ರ ಮೂಲದ ಒಂದೇ ಕುಟುಂಬದ ಒಂಬತ್ತು ಮಂದಿ ಭೀಕರ ರಸ್ತೆ ಅಪಘಾತದಲ್ಲಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ರಾಜಸ್ಥಾನದ ಕೋಟಾ-ಉದಯಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ.

ಸಂಗ್ರಹ ಚಿತ್ರ

ಜೈಪುರ: ಪ್ರಸಿದ್ಧ ಯಾತ್ರಾಸ್ಥಳವಾದ ಕಾಟು ಶ್ಯಾಮ್‌ ದೇವಸ್ಥಾನದ ದರ್ಶನ ಮುಗಿಸಿ ಹಿಂತಿರುಗುತ್ತಿದ್ದ ಮಹಾರಾಷ್ಟ್ರ ಮೂಲದ ಒಂದೇ ಕುಟುಂಬದ ಒಂಬತ್ತು ಮಂದಿ ಭೀಕರ ರಸ್ತೆ ಅಪಘಾತದಲ್ಲಿ ದಾರುಣವಾಗಿ (Rajasthan Accident) ಸಾವನ್ನಪ್ಪಿರುವ ಘಟನೆ ರಾಜಸ್ಥಾನದ ಕೋಟಾ-ಉದಯಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ. ಘಟನೆಯಲ್ಲಿ ಮಕ್ಕಳು ಸೇರಿದಂತೆ ಆರು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಶಂಭುಪುರ ಗ್ರಾಮದ ಬಳಿ ವೇಗವಾಗಿ ಬರುತ್ತಿದ್ದ 'ಕ್ರೂಸರ್' ವಾಹನವು ಹೆದ್ದಾರಿ ಬದಿಯಲ್ಲಿ ನಿಂತಿದ್ದ ಲಾರಿಗೆ ಹಿಂಬದಿಯಿಂದ ರಭಸವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಗೆ ವಾಹನವು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಒಳಗಿದ್ದವರು ಸಿಲುಕಿಕೊಂಡಿದ್ದರು. ಚಾಲಕನಿಗೆ ನಿದ್ರೆ ಮಂಪರು ಆವರಿಸಿದ್ದೇ ಈ ದುರಂತಕ್ಕೆ ಕಾರಣವಾಗಿರಬಹುದು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ.

ಮೃತರನ್ನು ಉಷಾ ಬಾಯಿ, ಸುಶೀಲಾ, ಕೈಲಾಶ್, ಸಾನ್ವಿ, ಸಜ್ಜನ್, ಅನಿತಾ, ಬಾಬುಲಾಲ್, ಜಾಹ್ನವಿ ಮತ್ತು ಮಾಧವಿ ಎಂದು ಗುರುತಿಸಲಾಗಿದೆ. ಗಾಯಗೊಂಡ ಆರು ಮಂದಿಯನ್ನು ತಕ್ಷಣವೇ ಆಂಬ್ಯುಲೆನ್ಸ್ ಮೂಲಕ ಸಮೀಪದ ನ್ಯೂ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದ್ದು, ವಿಶೇಷ ವೈದ್ಯಕೀಯ ತಂಡವು ಅವರಿಗೆ ಚಿಕಿತ್ಸೆ ನೀಡುತ್ತಿದೆ. ಮಹಾರಾಷ್ಟ್ರದ ಈ ಕುಟುಂಬದ ಒಟ್ಟು 36 ಮಂದಿ ಸಂಬಂಧಿಕರು ಮೂರು ಪ್ರತ್ಯೇಕ ವಾಹನಗಳಲ್ಲಿ ಖಾಟು ಶ್ಯಾಮ್‌ಜಿ ದೇಗುಲದಿಂದ ಮಧ್ಯಪ್ರದೇಶದ ಧಾರ್ ಕಡೆಗೆ ಪ್ರಯಾಣಿಸುತ್ತಿದ್ದರು.

ಮಂಗಳವಾರ ರಾತ್ರಿ ಪ್ರಯಾಣ ಬೆಳೆಸಿದ್ದ ಇವರು, ಮಾರ್ಗಮಧ್ಯೆ ಹೋಟೆಲ್‌ವೊಂದರಲ್ಲಿ ವಿಶ್ರಾಂತಿ ಪಡೆದು ಮುಂದೆ ಸಾಗಿದ್ದರು. ಈ ವೇಳೆ ಎರಡು ವಾಹನಗಳು ಹಿಂದೆ ಉಳಿದಿದ್ದು, 15 ಮಂದಿಯಿದ್ದ ಕ್ರೂಸರ್ ವಾಹನ ಮುಂದೆ ಸಾಗಿ ಅಪಘಾತಕ್ಕೀಡಾಗಿದೆ. ವಿಷಯ ತಿಳಿದ ತಕ್ಷಣ ಹಿಂದಿನ ವಾಹನಗಳಲ್ಲಿದ್ದ ಸಂಬಂಧಿಕರು ಸ್ಥಳಕ್ಕೆ ಧಾವಿಸಿದ್ದಾರೆ. ಸುದ್ದಿ ತಿಳಿಯುತ್ತಿದ್ದಂತೆಯೇ ನಗರ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ತೇಜಸ್ವಿನಿ ಗೌತಮ್, ಹೆಚ್ಚುವರಿ ಜಿಲ್ಲಾಧಿಕಾರಿ (ನಗರ) ರಾಜೇಶ್ ಜೋಶಿ ಹಾಗೂ ರಕ್ಷಣಾ ತಂಡಗಳು ಸ್ಥಳಕ್ಕೆ ದೌಡಾಯಿಸಿ, ವಾಹನದಲ್ಲಿ ಸಿಲುಕಿದ್ದವರನ್ನು ಹೊರತೆಗೆದಿದ್ದಾರೆ.

Vishakha Bhat Heggar

View all posts by this author