ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Physical Abuse: ರಾಮನಗರದಲ್ಲಿ ಬಾಲಕಿಯ ಸಾಮೂಹಿಕ ಅತ್ಯಾಚಾರ, ಮೂವರ ಸೆರೆ

ಬೆಂಗಳೂರಿನಲ್ಲಿ ಓದುತ್ತಿದ್ದ ವಿದ್ಯಾರ್ಥಿನಿಯನ್ನು ಪರಿಚಯ ಮಾಡಿಕೊಂಡಿದ್ದ ವಿಕಾಸ್, ಬಳಿಕ ಯುವತಿ ಜೊತೆಗೆ ಲೈಂಗಿಕ ಸಂಪರ್ಕ ಬೆಳೆಸಿದ್ದ. ಅದನ್ನು ವಿಡಿಯೋ ಮಾಡಿಕೊಂಡು ವಿದ್ಯಾರ್ಥಿನಿಗೆ ಬೆದರಿಕೆ ಹಾಕಿ ಬ್ಲ್ಯಾಕ್‌ಮೇಲ್‌ ಮಾಡುತ್ತಿದ್ದ. ಅನಂತರ ಪ್ರಶಾಂತ್ ಮತ್ತು ಚೇತನ್ ಜೊತೆಗೆ ಸೇರಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾನೆ.

ಆರೋಪಿಗಳಾದ ವಿಕಾಸ್‌, ಚೇತನ್‌ ಮತ್ತು ಪ್ರಶಾಂತ್‌

ರಾಮನಗರ, ಡಿ.18 : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ಬೆಳಕಿಗೆ ಬಂದಿದ್ದು, ರಾಮನಗರದಲ್ಲಿ (Ramanagara) 19 ವರ್ಷದ ಕಾಲೇಜು ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ (Physical Abuse) ನಡೆಸಲಾಗಿದೆ ಎಂದು ವರದಿಯಾಗಿದೆ. ಮಾಗಡಿ ಠಾಣೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳನ್ನು ವಿಕಾಸ್‌, ಚೇತನ್‌ ಮತ್ತು ಪ್ರಶಾಂತ್‌ ಎಂದು ಗುರುತಿಸಲಾಗಿದೆ.

ಬೆಂಗಳೂರಿನಲ್ಲಿ ಓದುತ್ತಿದ್ದ ವಿದ್ಯಾರ್ಥಿನಿಯನ್ನು ಪರಿಚಯ ಮಾಡಿಕೊಂಡಿದ್ದ ವಿಕಾಸ್, ಬಳಿಕ ಯುವತಿ ಜೊತೆಗೆ ಲೈಂಗಿಕ ಸಂಪರ್ಕ ಬೆಳೆಸಿದ್ದ. ಅದನ್ನು ವಿಡಿಯೋ ಮಾಡಿಕೊಂಡು ವಿದ್ಯಾರ್ಥಿನಿಗೆ ಬೆದರಿಕೆ ಹಾಕಿ ಬ್ಲ್ಯಾಕ್‌ಮೇಲ್‌ ಮಾಡುತ್ತಿದ್ದ. ಅನಂತರ ಪ್ರಶಾಂತ್ ಮತ್ತು ಚೇತನ್ ಜೊತೆಗೆ ಸೇರಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾನೆ ಎನ್ನುವ ಆರೋಪ ಕೇಳಿ ಬಂದಿದೆ. 19 ವರ್ಷದ ಕಾಲೇಜು ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್ ಎಸಗಿದ ಈ ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ.

10 ಬಾಲಕಿಯರಿಗೆ ನಿದ್ರೆ ಔಷಧಿ ನೀಡಿ ಅತ್ಯಾಚಾರ

ಮುಂಬೈ: ಮುಂಬೈ ನಗರದಲ್ಲಿ ಬೆಚ್ಚಿಬೀಳಿಸುವ ಘಟನೆಯೊಂದು ವರದಿಯಾಗಿದೆ. ವ್ಯಕ್ತಿಯೊಬ್ಬ 10 ಅಪ್ರಾಪ್ತ ಬಾಲಕಿಯರಿಗೆ ತಂಪು ಪಾನೀಯದಲ್ಲಿ ನಿದ್ರಾಜನಕ ಔಷಧ ಬೆರೆಸಿ, ಬಳಿಕ ಅತ್ಯಾಚಾರ ಎಸಗಿದ್ದಾನೆ. ಅಷ್ಟೇ ಅಲ್ಲದೆ ವಿಡಿಯೋ ಚಿತ್ರಿಸಿಕೊಂಡಿದ್ದ. ಅಶ್ಲೀಲ ವಿಡಿಯೋಗಳನ್ನು ರೆಕಾರ್ಡ್​ ಮಾಡಿ, ಸಂತ್ರಸ್ತೆಯರನ್ನು ಬ್ಲ್ಯಾಕ್​ಮೇಲ್ ಮಾಡುತ್ತಿದ್ದ. ಇದೀಗ ಪೊಲೀಸರು ವಿರಾರ್​ನಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ. ಪೊಲೀಸರ ತನಿಖೆಯಿಂದ ಆರೋಪಿಯು ಇಲ್ಲಿಯವರೆಗೆ 8 ರಿಂದ 10 ಹುಡುಗಿಯರ ಮೇಲೆ ಅತ್ಯಾಚಾರ ಮಾಡಿದ್ದಾನೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಮಾದಕ ದ್ರವ್ಯ ನೀಡಿ ಕೋರ್ಟ್‌ ಆವರಣದಲ್ಲೇ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ

ಅಪ್ರಾಪ್ತ ಬಾಲಕಿಯರಿಗೆ ತಂಪು ಪಾನೀಯಗಳಲ್ಲಿ ನಿದ್ರಾಜನಕ ಮಾತ್ರೆಗಳನ್ನು ಬೆರೆಸಿ ಮಾದಕ ದ್ರವ್ಯ ನೀಡಿ, ಅವರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ, ನಂತರ ಅವರ ಆಕ್ಷೇಪಾರ್ಹ ವೀಡಿಯೊಗಳನ್ನು ವೈರಲ್ ಮಾಡುವುದಾಗಿ ಬೆದರಿಕೆ ಹಾಕುತ್ತಿದ್ದ. ಕುರಾರ್ ಪೊಲೀಸರು ತ್ವರಿತವಾಗಿ ಕಾರ್ಯನಿರ್ವಹಿಸಿ ದೂರು ದಾಖಲಾದ ಆರು ಗಂಟೆಗಳಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಮಹೇಶ್ ರಮೇಶ್ ಪವಾರ್ (45) ಎಂದು ಗುರುತಿಸಲಾಗಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಸಂಜಯ್ ತಾವ್ಡೆ ಅವರ ಮಾರ್ಗದರ್ಶನದಲ್ಲಿ ಕುರಾರ್ ಪೊಲೀಸ್ ಪತ್ತೆ ತಂಡವು ವಿರಾರ್‌ನಲ್ಲಿ ಆತನನ್ನು ಬಂಧಿಸಿದೆ.

ಪೊಲೀಸ್ ಅಧಿಕಾರಿಗಳ ಪ್ರಕಾರ, ಆರೋಪಿ ಅಪ್ರಾಪ್ತ ವಯಸ್ಸಿನ ಹುಡುಗಿಯರಿಗೆ ತಂಪು ಪಾನೀಯಗಳನ್ನು ನೀಡುವ ನೆಪದಲ್ಲಿ ಆಮಿಷ ಒಡ್ಡಿ, ಅದರಲ್ಲಿ ಮಾದಕ ಮಾತ್ರೆಗಳನ್ನು ಬೆರೆಸುತ್ತಿದ್ದ ಎನ್ನಲಾಗಿದೆ. ಹೆಣ್ಣುಮಕ್ಕಳು ಪ್ರಜ್ಞೆ ತಪ್ಪಿದ ನಂತರ, ಆತ ಅವರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ, ಕೃತ್ಯದ ವೀಡಿಯೊಗಳನ್ನು ರೆಕಾರ್ಡ್ ಮಾಡುತ್ತಿದ್ದ. ನಂತರ ಆರೋಪಿ ಈ ವೀಡಿಯೊಗಳನ್ನು ಬಳಸಿಕೊಂಡು ಅವರನ್ನು ಪದೇ ಪದೇ ಬ್ಲ್ಯಾಕ್‌ಮೇಲ್ ಮಾಡಿ ಲೈಂಗಿಕವಾಗಿ ಶೋಷಣೆ ಮಾಡುತ್ತಿದ್ದ ಎನ್ನಲಾಗಿದೆ.

ಲೈಂಗಿಕ ದೌರ್ಜನ್ಯ; 70 ವರ್ಷದ ಪತಿ ವಿರುದ್ಧ ದೂರು ನೀಡಿದ ನಿವೃತ್ತ ಪ್ರಾಧ್ಯಾಪಕಿ

ಡಿಸೆಂಬರ್ 13 ರಂದು ಕುರಾರ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ದೂರಿನ ಆಧಾರದ ಮೇಲೆ ತನಿಖೆ ನಡೆಸಿದಾಗ, ಆರೋಪಿಯು ವಾಟ್ಸಾಪ್ ಗ್ರೂಪೊಂದರಲ್ಲಿ ಅತ್ಯಾಚಾರದ ವೀಡಿಯೊವನ್ನು ಹಂಚಿಕೊಂಡಿರುವುದು ಬೆಳಕಿಗೆ ಬಂದಿತ್ತು. ಹೆಚ್ಚಿನ ತನಿಖೆಯಲ್ಲಿ ಆರೋಪಿಯು ವಕೋಲಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿಯೂ ಇದೇ ರೀತಿಯ ಅಪರಾಧಗಳನ್ನು ಮಾಡಿದ್ದಾನೆ ಎಂದು ತಿಳಿದುಬಂದಿದೆ. ಕುರಾರ್ ಪೊಲೀಸರು ಹೆಚ್ಚಿನ ತನಿಖೆಗಾಗಿ ಆರೋಪಿಯನ್ನು ವಕೋಲಾ ಪೊಲೀಸರಿಗೆ ಹಸ್ತಾಂತರಿಸಿದ್ದಾರೆ. ವಕೋಲಾ ಪೊಲೀಸರು ಪ್ರಸ್ತುತ ಆಳವಾದ ತನಿಖೆ ನಡೆಸುತ್ತಿದ್ದಾರೆ.

ಹರೀಶ್‌ ಕೇರ

View all posts by this author