ರಾಮನಗರ: ಬೆಂಗಳೂರು ದಕ್ಷಿಣ ಜಿಲ್ಲೆಯ ಅಡವಿ ಹೋಮ್ ಸ್ಟೇನಲ್ಲಿ ರೇವ್ ಪಾರ್ಟಿ ಆರೋಪ ಹಿನ್ನೆಲೆಯಲ್ಲಿ ತಡರಾತ್ರಿ ಕಗ್ಗಲೀಪುರ ಪೊಲೀಸರು ದಾಳಿ ಮಾಡಿ ನಡೆಸಿದ್ದಾರೆ. ಬೆಂಗಳೂರಿನ (Bengaluru) ದಕ್ಷಿಣ ಎಸ್‌ಪಿ ಶ್ರೀನಿವಾಸ್ ಗೌಡ ನೇತೃತ್ವದಲ್ಲಿ ದಾಳಿ ನಡೆಸಿ, 115 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ. ದೇವಿಗೆರೆ ಕ್ರಾಸ್ ಸಮೀಪದಲ್ಲಿರುವ ಅಯಾನಾ ಖಾಸಗಿ ರೆಸಾರ್ಟ್‌ನಲ್ಲಿ ರಾತ್ರಿ ವೇಳೆ ರೇವ್ ಪಾರ್ಟಿ ನಡೆಯುತ್ತಿದೆ ಎನ್ನುವ ಮಾಹಿತಿ ಮೇರೆಗೆ ದಾಳಿ ನಡೆಸಲಾಗಿತ್ತು.
ಪಾರ್ಟಿ ನಡೆಸುತ್ತಿದ್ದವೆರಲ್ಲ ಬೆಂಗಳೂರು ಮೂಲದವರು ಎಂದು ಹೇಳಲಾಗಿದ್ದು, 150ಕ್ಕೂ ಹೆಚ್ಚು ಜನರು ಮೋಜು ಮಸ್ತಿಯಲ್ಲಿ ತೊಡಗಿದ್ದರು. ಒಟ್ಟು 130 ಜನರನ್ನು ಬಂಧಿಸಲಾಗಿದೆ. ಸದ್ಯ ಜಿಲ್ಲಾಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆ ನಡೆಸಲಾಗುತ್ತದೆ.
ಮನೆಯಲ್ಲಿ ನೆತ್ತರ ಕಲೆಯ ಪ್ರಕರಣ; ಲ್ಯಾಬ್ ವರದಿಯಲ್ಲೇನಿದೆ?
ಮಂಡ್ಯ ಜಿಲ್ಲೆಯ ಮದ್ದೂರು ತಾಲ್ಲೂಕಿನ ಹೊಂಬಾಳೆಗೌಡನ ದೊಡ್ಡಿ ಗ್ರಾಮದಲ್ಲಿ ಸತೀಶ್ ದಂಪತಿಯ ಮನೆಯಲ್ಲಿ ರಕ್ತದ ಕಲೆಗಳು ಕಂಡು ಬಂದಿದ್ದು, ಇಡೀ ಗ್ರಾಮದಲ್ಲಿ ಆತಂಕ ಮೂಡಿಸಿತ್ತು. ರಕ್ತದ ಸ್ಯಾಂಪಲ್ ಅನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಇದೀಗ ಲ್ಯಾಬ್ ರಿಪೋರ್ಟ್ ಬಂದಿದ್ದು, ಮನೆಯ ತುಂಬಾ ಮನುಷ್ಯನ ರಕ್ತವೆಂದು ದೃಢಪಟ್ಟಿದೆ. ಮನೆಯ ಎಲ್ಲೆಡೆ ರಕ್ತದ ಕಲೆಗಳು ಕಂಡುಬಂದಿದ್ದು, ಪೊಲೀಸರು ಮತ್ತು ಎಫ್‌ಎಸ್‌ಎಲ್ ಶ್ವಾನದಳ ಸ್ಥಳ ಪರಿಶೀಲನೆ ನಡೆಸಿದ್ದರು. ರಕ್ತದ ಮಾದರಿಯನ್ನು ಲ್ಯಾಬ್‌ಗೆ ಕಳುಹಿಸಲಾಗಿತ್ತು. ಪ್ರಾಥಮಿಕ ತನಿಖೆಯಲ್ಲಿ ಅದು ಮನುಷ್ಯನ ರಕ್ತವಾಗಿರುವುದು ದೃಢಪಟ್ಟಿದೆ.
ಸತೀಶ್ ದಂಪತಿ ತಮ್ಮ ಇಬ್ಬರು ಮಕ್ಕಳನ್ನು ಬೆಂಗಳೂರಿನಲ್ಲಿ ವಿದ್ಯಾಭ್ಯಾಸಕ್ಕೆ ಸೇರಿಸಿ ಮನೆಯಲ್ಲಿ ಇಬ್ಬರೇ ವಾಸವಾಗಿದ್ದರು. ಸೋಮವಾರ ಬೆಳಿಗ್ಗೆ ಸತೀಶ್ ಅವರ ಪತ್ನಿ ಮನೆ ಸ್ವಚ್ಛಗೊಳಿಸಿ, ಉಪಹಾರ ತಯಾರಿಸಲು ಅಡುಗೆಮನೆಗೆ ತೆರಳಿದ್ದರು. ಕೆಲವೇ ಕ್ಷಣಗಳಲ್ಲಿ ಮನೆ ಹಾಲ್, ಬಾತ್‌ರೂಂ, ಟಿವಿ ಹಾಗೂ ಫ್ಯಾನ್‌ಗಳ ಮೇಲೆ ರಕ್ತದ ಕಲೆಗಳು ಕಾಣಿಸಿಕೊಂಡವು. ದಂಪತಿ ಆ ಕೂಡಲೇ ಪೊಲೀಸರಿಗೆ ದೂರು ಸಲ್ಲಿಸಿದ್ದರು.
ಈ ಸುದ್ದಿಯನ್ನೂ ಓದಿ: Missing Case: 2023ರಲ್ಲಿಯೇ ಕೊಲೆಯಾಗಿದ್ದಾಳೆಂದು ಭಾವಿಸಲಾಗಿದ್ದ ಮಹಿಳೆ ಮನೆಗೆ ವಾಪಸ್, ಆಕೆಯ ಕೊಲೆ ಆರೋಪದ ಮೇಲೆ ಜೈಲಿನಲ್ಲಿರುವ ನಾಲ್ವರು
ಬೆಸಗರಹಳ್ಳಿ ಠಾಣಾ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದರು. ಬಳಿಕ ಎಫ್‌ಎಸ್‌ಎಲ್ ಹಾಗೂ ಶ್ವಾನದಳದ ಸಿಬ್ಬಂದಿಯು ಸ್ಥಳಕ್ಕೆ ಆಗಮಿಸಿ ಮನೆಯಲ್ಲಿ ಕಂಡುಬಂದ ರಕ್ತದ ಮಾದರಿಗಳನ್ನು ಸಂಗ್ರಹಿಸಿ, ಪ್ರಯೋಗಾಲಯಕ್ಕೆ ಕಳುಹಿಸಿದ್ದರು.