Reels Case: ಲಾಂಗ್ ಹಿಡಿದು ರೀಲ್ಸ್ ಮಾಡಿದ ರಜತ್, ವಿನಯ್‌ಗೆ ನ್ಯಾಯಾಂಗ ಬಂಧನ
ವಿನಯ್ ಹಾಗೂ ರಜತ್ಗೆ ನ್ಯಾಯಾಂಗ ಬಂಧನ ವಿಧಿಸಿದ ಬಳಿಕ ಅವರನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್ ಮಾಡಲಾಗಿದೆ. ರಾತ್ರಿ ಇಡೀ ಇಬ್ಬರೂ ಜೈಲಿನಲ್ಲಿ ಕಳೆದಿದ್ದಾರೆ. ಪರಪ್ಪನ ಅಗ್ರಹಾರ ಜೈಲಿನಲ್ಲಿ ಕಾಲ ಕಳೆದ ರಜತ್ ಹಾಗೂ ವಿನಯ್ ಇಂದು ಜಾಮೀನಿಗೆ ಅರ್ಜಿ ಸಲ್ಲಿಕೆ ಮಾಡುವ ಸಾಧ್ಯತೆ ಇದೆ.

ವಿನಯ್ ಗೌಡ ಮತ್ತು ರಂಜಿತ್

ಬೆಂಗಳೂರು: ರೀಲ್ಸ್‌ಗಾಗಿ (Reels Case) ಲಾಂಗ್ ಝಳಪಿಸಿ ವಿಡಿಯೋ ಮಾಡಿ ಸೋಶಿಯಲ್ ಮೀಡಿಯಾದಲ್ಲಿ ಅಪ್‌ಲೋಡ್ ಮಾಡಿದ ಬಿಗ್ ಬಾಸ್ (bigg boss) ಖ್ಯಾತಿಯ ವಿನಯ್ ಗೌಡ (Vinay Gowda) ಹಾಗೂ ರಜತ್‌ರನ್ನು (Rajath) ಒಂದು ದಿನದ ನ್ಯಾಯಾಂಗ ಬಂಧನಕ್ಕೆ (Judicial Custody) ನೀಡಿ ಕೋರ್ಟ್ ಆದೇಶ ನೀಡಿದೆ. ಇಂದು (ಮಾರ್ಚ್ 26) ಪೊಲೀಸರು ಮತ್ತೆ ಇವರನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಲಿದ್ದು, ಒಂದು ವಾರದ ನ್ಯಾಯಾಂಗ ಕಸ್ಟಡಿಗೆ ಕೇಳಲಿದ್ದಾರೆ ಎಂದು ಗೊತ್ತಾಗಿದೆ. ಇದೀಗ ಇಬ್ಬರೂ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ.
ಇವರು ರೀಲ್ಸ್‌ಗಾಗಿ ಬಳಸಿದ ಲಾಂಗ್ ಇನ್ನಷ್ಟೇ ಪತ್ತೆಯಾಗಬೇಕಿದೆ. ಈ ಹಿನ್ನೆಲೆಯಲ್ಲಿ ಇವರನ್ನು ಒಂದು ವಾರದ ನ್ಯಾಯಾಂಗ ಬಂಧನಕ್ಕೆ ಕೇಳಲು ಪೊಲೀಸರು ಮುಂದಾಗಿದ್ದಾರೆ. ಬಿಗ್ ಬಾಸ್ 10ರ ಸ್ಪರ್ಧಿ ವಿನಯ್ ಗೌಡ ಹಾಗೂ ಬಿಗ್ ಬಾಸ್ 11ರ ಸ್ಪರ್ಧಿ ರಜತ್ ವಿರುದ್ಧ ಬಸವೇಶ್ವರನಗರ ಪೊಲೀಸ್ ಠಾಣೆಯಲ್ಲಿ ಶಸ್ತ್ರಾಸ್ತ್ರ ಕಾಯ್ದೆಯಡಿ ಎಫ್‌ಐಆರ್ ಅನ್ನು ದಾಖಲು ಮಾಡಿಕೊಳ್ಳಲಾಗಿದೆ. ಕೆಲವು ದಿನಗಳ ಹಿಂದೆ ಲಾಂಗ್ ಹಿಡಿದು ಇಬ್ಬರೂ ರೀಲ್ಸ್ ಮಾಡಿದ್ದರು. ಅದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸರು ವಿನಯ್ ಗೌಡ ಹಾಗೂ ರಜತ್‌ರನ್ನು ಬಂಧಿಸಿದ್ದರು. ಬಳಿಕ ಬೆಂಗಳೂರಿನ 24 ನೇ ಎಸಿಜೆಂ ಕೋರ್ಟ್‌ಗೆ ಹಾಜರುಪಡಿಸಲಾಗಿದ್ದು, ಕೋರ್ಟ್ ಇಬ್ಬರಿಗೂ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶ ಹೊರಡಿಸಿದೆ.
ರಾತ್ರಿ ನ್ಯಾಯಾಧೀಶರು ವಿನಯ್ ಹಾಗೂ ರಜತ್ಗೆ ನ್ಯಾಯಾಂಗ ಬಂಧನ ವಿಧಿಸಿದ ಬಳಿಕ ಅವರನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್ ಮಾಡಲಾಗಿದೆ. ರಾತ್ರಿ ಇಡೀ ಇಬ್ಬರೂ ಜೈಲಿನಲ್ಲಿ ಕಳೆದಿದ್ದು, ಇವರಿಗೆ ಸಂಕಷ್ಟ ಹೆಚ್ಚುವ ಸೂಚನೆ ಸಿಕ್ಕಿದೆ. ಪರಪ್ಪನ ಅಗ್ರಹಾರ ಜೈಲಿನಲ್ಲಿ ಕಾಲ ಕಳೆದ ರಜತ್ ಹಾಗೂ ವಿನಯ್ ಇಂದು ಜಾಮೀನಿಗೆ ಅರ್ಜಿ ಸಲ್ಲಿಕೆ ಮಾಡುವ ಸಾಧ್ಯತೆ ಇದೆ. ಇವರ ಪರ ವಕೀಲರು ಇಬ್ಬರಿಗೂ ಜಾಮೀನು ಕೇಳಿ ಕೋರ್ಟ್ನಲ್ಲಿ ಮನವಿ ಮಾಡಲಿದ್ದಾರೆ. ಕೋರ್ಟ್ನಲ್ಲಿ ಇಬ್ಬರ ಭವಿಷ್ಯ ನಿರ್ಧಾರವಾಗಲಿದೆ.
‘ಬಾಯ್ಸ್ vs ಗರ್ಲ್ಸ್’ ರಿಯಾಲಿಟಿ ಶೋ ವೇಳೆ ವಿನಯ್ ಹಾಗೂ ರಜತ್ ಮಚ್ಚು ಹಿಡಿದು ರೀಲ್ಸ್ ಮಾಡಿದ್ದರು. ರೀಲ್ಸ್ ಮಾಡಲು ಮಚ್ಚು ಬಳಕೆ ಮಾಡಿದ್ದ ಪ್ರಕರಣವನ್ನು ಗಂಭೀರವಾಗಿ ಸ್ವೀಕರಿಸಿರುವ ಪೊಲೀಸರು ಕೇಸ್ ದಾಖಲಿಸಿ ತನಿಖೆ ಆರಂಭಿಸಿದರು. ವಿನಯ್ ಹಾಗೂ ರಜತ್ ಅವರನ್ನು ಬಂಧಿಸಿ ವಿಚಾರಣೆ ಮಾಡಿದರು. ಈ ವೇಳೆ ಮಚ್ಚನ್ನು ಹಾಜರುಪಡಿಸುವಂತೆ ಕೇಳಿದ್ದರು. ಪೊಲೀಸರಿಗೆ ರಜತ್ ಹಾಗೂ ವಿನಯ್ ಫೈಬರ್ ಮಚ್ಚನ್ನು ನೀಡಿದ್ದರು. ರೀಲ್ಸ್ಗೆ ಬಳಕೆಯಾದ ನಿಜವಾದ ಮಚ್ಚು ಕಾಣೆಯಾಗಿರುವುದರಿಂದ ಪೊಲೀಸರಿಗೆ ಅನುಮಾನ ಹೆಚ್ಚಾಗಿದೆ.
ಇದನ್ನೂ ಓದಿ: Rajath Kishan: ಎಫ್ಐಆರ್ ಆದ್ರೂ ಲಾಂಗ್ ಹಿಡಿದು ರೀಲ್ಸ್ ಮಾಡಿದ ವಿಡಿಯೋವನ್ನು ಇನ್ನೂ ಡಿಲೀಟ್ ಮಾಡದ ರಜತ್