Actor Darshan: ನಟ ದರ್ಶನ್‌ರಿಂದ ಸಹಕೈದಿಗಳಿಗೆ ಕಿರುಕುಳ, ಒದೆತ: ಆರೋಪ
ದರ್ಶನ್ ಜೊತೆ ಒಂದೇ ಸೆಲ್‌ನಲ್ಲಿ ಅನುಕುಮಾರ್, ಜಗ್ಗ, ನಾಗರಾಜು, ಪ್ರದೋಶ್, ಲಕ್ಷ್ಮಣ್ ಇದ್ದಾರೆ. ಇವರೆಲ್ಲರೂ ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ (Renuka swamy murder case) ಜೈಲು ಸೇರಿದವರೇ. ನಾಗರಾಜು ಅವರನ್ನು ಹೊರತುಪಡಿಸಿ ಉಳಿದ ಆರೋಪಿಗಳಿಗೆ ದರ್ಶನ್ ಮಾನಸಿಕ ಹಾಗೂ ದೈಹಿಕ ಹಿಂಸೆ ನೀಡುತ್ತಿದ್ದಾರೆ ಎನ್ನಲಾಗಿದೆ. ಕೆಲ ದಿನದ ಹಿಂದೆ ದರ್ಶನ್ ಸೆಲ್‌ನಲ್ಲಿ ದೊಡ್ಡ ಜಗಳ ನಡೆದು ಹೋಗಿದೆಯಂತೆ.
ನಟ ದರ್ಶನ್ -
ಬೆಂಗಳೂರು, ಡಿ.08: ನಟ ದರ್ಶನ್ (Actor Darshan) ಅವರು ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ (Renuka swamy murder case) ಬಂಧನಕ್ಕೆ ಒಳಗಾಗಿ ಪರಪ್ಪನ ಅಗ್ರಹಾರ (Parappana Agrahara jail) ಜೈಲಿನಲ್ಲಿದ್ದಾರೆ. ಆರಂಭದಲ್ಲಿ ಜಾಮೀನು ಪಡೆದು ಹೊರಗೆ ಸುತ್ತಾಡಿಕೊಂಡು ಹಾಗೂ ಡೆವಿಲ್ ಫಿಲಂ ಶೂಟಿಂಗ್ ಮಾಡಿದ್ದ ಅವರು ಸುಪ್ರೀಂಕೋರ್ಟ್ ಬೇಲ್ ರದ್ದು ಮಾಡುತ್ತಿದ್ದಂತೆ ಮರಳಿ ಜೈಲು ಸೇರಿದ್ದಾರೆ. ಈಗ ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿ ನಿಯಮಗಳು ಇನ್ನಷ್ಟು ಕಠಿಣವಾಗಿದ್ದು, ದರ್ಶನ್ ಸಹ ಕೈದಿಗಳಿಗೆ ಅವರು ಕಿರುಕುಳ ನೀಡುತ್ತಿರುವ ಆರೋಪ ಕೇಳಿ ಬಂದಿದೆ.
ದರ್ಶನ್ ಈ ಬಾರಿ ಜೈಲು ಸೇರಿದಾಗಿನಿಂದಲೂ ಕಠಿಣ ನಿಯಮ ಜಾರಿಯಲ್ಲಿದೆ. ಅಲ್ಲದೆ, ಇತ್ತೀಚೆಗೆ ಜೈಲಿನ ಪಾರ್ಟಿ ವಿಡಿಯೋ ವೈರಲ್ ಆಗುತ್ತಿದ್ದಂತೆ ಎಲ್ಲವೂ ಬದಲಾಗಿದೆ. ಐಪಿಎಸ್ ಅಧಿಕಾರಿ ಅಂಶು ಕುಮಾರ್ ಜೈಲಿನ ಮುಖ್ಯ ಸೂಪರಿಂಟೆಂಡೆಂಟ್ ಆಗಿ ನೇಮಕಗೊಂಡಿದ್ದು, ಜೈಲಿನಲ್ಲಿ ಅತಿ ಕಠಿಣ ರೂಲ್ಸ್ ಜಾರಿಗೆ ತಂದಿದ್ದಾರೆ. ದರ್ಶನ್ ಅವರು ಸಾಲಿನಲ್ಲಿ ನಿಂತು ತಾವೇ ಊಟ ತೆಗೆದುಕೊಂಡು ಬರಬೇಕಿದೆ. ಒಳಗಿನ ಶೌಚಾಲಯ ಕೂಡ ತಾವೇ ಕ್ಲೀನ್ ಮಾಡಬೇಕಿದೆ. ಈ ನಿಯಮಗಳಿಂದ ದರ್ಶನ್ ತತ್ತರಿಸಿ ಹೋಗಿದ್ದಾರೆ.
ದರ್ಶನ್ ಜೊತೆ ಒಂದೇ ಸೆಲ್‌ನಲ್ಲಿ ಅನುಕುಮಾರ್, ಜಗ್ಗ, ನಾಗರಾಜು, ಪ್ರದೋಶ್, ಲಕ್ಷ್ಮಣ್ ಇದ್ದಾರೆ. ಇವರೆಲ್ಲರೂ ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಜೈಲು ಸೇರಿದವರೇ. ನಾಗರಾಜು ಅವರನ್ನು ಹೊರತುಪಡಿಸಿ ಉಳಿದ ಆರೋಪಿಗಳಿಗೆ ದರ್ಶನ್ ಮಾನಸಿಕ ಹಾಗೂ ದೈಹಿಕ ಹಿಂಸೆ ನೀಡುತ್ತಿದ್ದಾರೆ ಎನ್ನಲಾಗಿದೆ.
82 ಲಕ್ಷ ರೂ. ಹಣದ ದಾಖಲೆ ತೋರಿಸದ ದರ್ಶನ್, ಕೃಷಿಯಿಂದ ಬಂತು ಎಂದ ದಾಸ
ಕೆಲ ದಿನದ ಹಿಂದೆ ದರ್ಶನ್ ಸೆಲ್‌ನಲ್ಲಿ ದೊಡ್ಡ ಜಗಳ ನಡೆದು ಹೋಗಿದೆ. ಜಗ್ಗ ಹಾಗೂ ದರ್ಶನ್ ಮಧ್ಯೆ ದೊಡ್ಡ ಜಗಳ ಆಗಿದೆಯಂತೆ. ಇಬ್ಬರ ಜಗಳ ಜೋರಾಗುತ್ತಿದ್ದಂತೆ ಜೈಲಧಿಕಾರಿಗಳು ಬಂದು ಜಗಳ ಬಿಡಿಸಿದ್ದಾರೆ. ಇನ್ನು, ಮಲಗಿದ್ದ ಸಹ ಕೈದಿಗಳನ್ನು ಕಾಲಿನಲ್ಲಿ ಒದ್ದು ಎಬ್ಬಿಸಿರೋ ದರ್ಶನ್ ಅವಾಚ್ಯ ಶಬ್ದಗಳಿಂದ ಬೈದಿದ್ದಾರೆ.
ವಕೀಲರ ನೇಮಕ ವಿಚಾರವಾಗಿಯೂ ಎಲ್ಲರ ನಡುವೆ ಗಲಾಟೆ ಶುರುವಾಗಿದೆ. ಅಲ್ಲದೇ ನಾನು ಇಲ್ಲೆ ಇದ್ದರೆ ಸಾಯೋದಾಗಿ ಅನುಕುಮಾರ್ ಹೇಳಿಕೊಂಡಿದ್ದಾರಂತೆ. ಅನುಕುಮಾರ್ಗೆ ಜಾಮೀನು ಸಿಗುತ್ತಿಲ್ಲ ಎಂಬುದು ಒಂದು ಕಡೆಯಾದರೆ, ದರ್ಶನ್ ಚಿತ್ರಹಿಂಸೆ ತಡೆಯಲಾಗುತ್ತಿಲ್ಲ ಅನ್ನೋದು ಮತ್ತೊಂದು ಕಡೆ. ಹೀಗಾಗಿ, ದರ್ಶನ್ ಸೆಲ್ ಮೇಲೆ ವಿಶೇಷ ಕಾಳಜಿ ಇಡಲಾಗಿದೆ. ಟಾರ್ಚರ್ ತಡೆಯಲಾರದೆ ಅನುಕುಮಾರ್, ಜಗದೀಶ್ ಅವರು ತಮ್ಮನ್ನು ಚಿತ್ರದುರ್ಗ ಜೈಲಿಗೆ ಶಿಫ್ಟ್ ಮಾಡಲು ಮನವಿ ಮಾಡಿದ್ದಾರೆ.