ಫೋಟೋ ಗ್ಯಾಲರಿ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Actor Darshan: ಇಂದು ಸುಪ್ರೀಂ ಕೋರ್ಟ್‌ನಲ್ಲಿ ನಟ ದರ್ಶನ್‌ ಜಾಮೀನು ಭವಿಷ್ಯ ವಿಚಾರಣೆ

ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ಆರೋಪಿಯಾಗಿರುವ ನಟ ದರ್ಶನ್​ಗೆ ಜಾಮೀನು ಸಿಕ್ಕರೂ ಸಂಕಷ್ಟ ತಪ್ಪಿಲ್ಲ. ದರ್ಶನ್​ ಹಾಗೂ ಪವಿತ್ರಾ ಗೌಡ ಸೇರಿದಂತೆ ಕೆಲ ಆರೋಪಿಗಳಿಗೆ ಸಿಕ್ಕಿರುವ ಜಾಮೀನು ರದ್ದುಗೊಳಿಸುವಂತೆ ಬೆಂಗಳೂರು ಪೊಲೀಸ್ ಇಲಾಖೆ ಸುಪ್ರೀಂ ಕೋರ್ಟ್​​ಗೆ ಮೇಲ್ಮನವಿ ಸಲ್ಲಿಸಿತ್ತು. ಅದರ ವಿಚಾರಣೆ ಇಂದು ಸುಪ್ರೀಂ ಪೀಠದ ಮುಂದೆ ಬರಲಿದೆ.

ಇಂದು ಸುಪ್ರೀಂ ಕೋರ್ಟ್‌ನಲ್ಲಿ ನಟ ದರ್ಶನ್‌ ಜಾಮೀನು ಭವಿಷ್ಯ ವಿಚಾರಣೆ

ದರ್ಶನ್

ಹರೀಶ್‌ ಕೇರ ಹರೀಶ್‌ ಕೇರ Apr 22, 2025 9:40 AM

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ (Renukaswamy Murder Case) ಕೊಲೆ ಕೇಸ್​ಗೆ ಸಂಬಂಧಿಸಿದಂತೆ ಸ್ಯಾಂಡಲ್​ವುಡ್ ನಟ ದರ್ಶನ್ (Actor Darshan) ಅವರಿಗೆ ನೀಡಲಾಗಿರುವ ಜಾಮೀನು ಕುರಿತು ಸುಪ್ರೀಂ ಕೋರ್ಟ್‌ನಲ್ಲಿ (Supreme court) ಇಂದು ವಿಚಾರಣೆ ನಡೆಯಲಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಕರ್ನಾಟಕ ಹೈಕೋರ್ಟ್‌ನಿಂದ (karnataka high court) ರೆಗ್ಯುಲರ್ ಬೇಲ್ ಪಡೆದು ಹೊರಗೆ ಬಂದಿದ್ದರು. ಕರ್ನಾಟಕ ಪೊಲೀಸರು ಇದರ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಅದರ ವಿಚಾರಣೆ ಇಂದು ಸುಪ್ರೀಂ ಪೀಠದ ಮುಂದೆ ಬರಲಿದೆ.

ಇವತ್ತು ವಿಚಾರಣೆ ಪ್ರಾರಂಭಕ್ಕೂ ಮುನ್ನವೇ ಆರೋಪಿ ಪರ ವಕೀಲರಿಂದ ಆಕ್ಷೇಪಣೆ ಸಲ್ಲಿಕೆಯಾಗಲಿದೆ. ಪೀಠ ಇವತ್ತು ಪ್ರಕರಣದ ಸಂಪೂರ್ಣ ವಿಚಾರಣೆ ನಡೆಸುವುದಾಗಿ ತಿಳಿಸಿತ್ತು. ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿಗಳು ಇತ್ತೀಚೆಗೆ ಏ.8ರಂದು ನಗರದ 57ನೇ ಸಿಸಿಹೆಚ್ ಕೋರ್ಟ್​ಗೆ ಹಾಜರಾಗಿದ್ದರು. ಪ್ರಕರಣದಲ್ಲಿ ಆರೋಪಿಗಳಿಗೆ ಜಾಮೀನು ಸಿಕ್ಕಿತ್ತು. ಜಾಮೀನು ಪಡೆದರೂ ಪ್ರತಿ ತಿಂಗಳು ನ್ಯಾಯಾಲಯಕ್ಕೆ ಹಾಜರಾಗಬೇಕು ಎಂಬ ಷರತ್ತು ಹಿನ್ನೆಲೆಯಲ್ಲಿ ಎಲ್ಲರೂ ಕೋರ್ಟ್​ಗೆ ಹಾಜರಾಗಿದ್ದಾರೆ. ಕೊಲೆ ಪ್ರಕರಣದ ವಿಚಾರಣೆಯನ್ನು ಕೋರ್ಟ್ ನಡೆಸಿದೆ. ಆದರೆ ದರ್ಶನ್‌ ಮಾತ್ರ ಗೈರಾಗಿದ್ದಾರೆ.

ವಿನಾಯಿತಿ ಅರ್ಜಿಯನ್ನು ದರ್ಶನ್ ಪರ ವಕೀಲರು ಸಲ್ಲಿಸಿದ್ದರು. ಕೇಸ್ ಇದ್ದಾಗ ಕೋರ್ಟ್‌ಗೆ ತಪ್ಪದೇ ಹಾಜರಾಗಬೇಕು. ಗೈರು ಆಗಬಾರದು ಎಂದು ದರ್ಶನ್ ಪರ ವಕೀಲರಿಗೆ ಜಡ್ಜ್ ಸೂಚನೆ ನೀಡಿ ದರ್ಶನ್ ವಿನಾಯಿತಿ ಅರ್ಜಿ ಪುರಸ್ಕರಿಸಿದ್ದಾರೆ. ಪವಿತ್ರಾ ಗೌಡ, ದರ್ಶನ್ ಮಾಜಿ ಮ್ಯಾನೇಜರ್ ನಾಗರಾಜು ಹಾಜರ್‌ ಆಗಿದ್ದರು. ಕೇಶವಮೂರ್ತಿ, ನಿಖಿಲ್, ಕಾರ್ತಿಕ್ ಮೂವರು ಆರೋಪಿಗಳಿಂದ ಶ್ಯೂರಿಟಿ ಸಲ್ಲಿಕೆಗೆ ಕೋರ್ಟ್‌ ಸೂಚನೆ ನೀಡಿದೆ. ನ್ಯಾಯಾಧೀಶರಿಂದ ಶ್ಯೂರಿಟಿ ಸಲ್ಲಿಕೆಗೆ ಸೂಚನೆ ನೀಡಲಾಗಿದೆ. ಸದ್ಯ ವಿಚಾರಣೆ ಮೇ 20ಕ್ಕೆ ಮುಂದೂಡಿದೆ.

ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ಆರೋಪಿಯಾಗಿರುವ ನಟ ದರ್ಶನ್​ಗೆ ಜಾಮೀನು ಸಿಕ್ಕರೂ ಸಂಕಷ್ಟ ತಪ್ಪಿಲ್ಲ. ದರ್ಶನ್​ ಹಾಗೂ ಪವಿತ್ರಾ ಗೌಡ ಸೇರಿದಂತೆ ಕೆಲ ಆರೋಪಿಗಳಿಗೆ ಸಿಕ್ಕಿರುವ ಜಾಮೀನು ರದ್ದುಗೊಳಿಸುವಂತೆ ಬೆಂಗಳೂರು ಪೊಲೀಸ್ ಇಲಾಖೆ ಸುಪ್ರೀಂ ಕೋರ್ಟ್​​ಗೆ ಮೇಲ್ಮನವಿ ಸಲ್ಲಿಸಿತ್ತು.

ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ನಟ ದರ್ಶನ್ 5 ತಿಂಗಳಿಗೂ ಹೆಚ್ಚು ಕಾಲ ಸೆರೆಮನೆ ವಾಸ ಅನುಭವಿಸಿ ಮಧ್ಯಂತರ ಜಾಮೀನು ಪಡೆದು ಹೊರಗೆ ಬಂದಿದ್ದರು. ಬಳಿಕ ಈ ಪ್ರಕರಣದ ಎಲ್ಲಾ ಆರೋಪಿಗಳಿಗೂ ರೆಗ್ಯುಲರ್​ ಬೇಲ್ ಸಿಕ್ಕಿತು. ಹೈಕೋರ್ಟ್ ತೀರ್ಪು ಪ್ರಶ್ನಿಸಿ ಪೊಲೀಸ್ ಇಲಾಖೆಯು ಗೃಹ ಇಲಾಖೆಯ ಅನುಮತಿ ಪಡೆದು ಆರೋಪಿಗಳ ಜಾಮೀನು ರದ್ದು ಕೋರಿ ಸುಪ್ರೀಂ ಕೋರ್ಟ್​ಗೆ ಅರ್ಜಿ ಸಲ್ಲಿಸಿದೆ.

ಇದನ್ನೂ ಓದಿ: Vijaya lakshmi darshan: ಅಣ್ಣಮ್ಮ ದೇವಿ ದೇವಸ್ಥಾನದಲ್ಲಿ ಹರಕೆ ಸಲ್ಲಿಸಿದ ವಿಜಯಲಕ್ಷ್ಮಿ ; ದರ್ಶನ್‌ಗಾಗಿ ವಿಶೇಷ ಪೂಜೆ