Road Accident: ಬೈಕ್‌ಗಳ ನಡುವೆ ಭೀಕರ ಡಿಕ್ಕಿ; ಇಬ್ಬರು ಸ್ಥಳದಲ್ಲಿಯೇ ಸಾವು
ಬೀದರ್ ತಾಲೂಕಿನ ಬೆನಕನಹಳ್ಳಿಯಲ್ಲಿ ಶನಿವಾರ ಎರಡು ಬೈಕ್‌ಗಳ ನಡುವೆ ಡಿಕ್ಕಿ ಸಂಭವಿಸಿದ್ದು, ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟರೆ, (Rd Accident) ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಒಬ್ಬರು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.
ಸಾಂಧರ್ಬಿಕ ಚಿತ್ರ -
ಬೀದರ್: ತಾಲೂಕಿನ ಬೆನಕನಹಳ್ಳಿಯಲ್ಲಿ ಶನಿವಾರ ಎರಡು ಬೈಕ್‌ಗಳ ನಡುವೆ ಡಿಕ್ಕಿ ಸಂಭವಿಸಿದ್ದು, ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟರೆ, (Rd Accident) ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಒಬ್ಬರು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮಲ್ಲಿಕಾರ್ಜುನ ಜೋಳದಪ್ಪಕ (40), ಔರಾದ್ ತಾಲೂಕಿನ ನಿವಾಸಿ ಮತ್ತು ಪವನ್ ಕುಮಾರ್ (32), ಎಂಬುವವರು ಚಾಂಬೋಳ ಗ್ರಾಮದ ನಿವಾಸಿಗಳು ಈ ಗಟನೆಯಲ್ಲಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಬೀದರ್-ಔರಾದ್ ರಸ್ತೆಯಲ್ಲಿ ಮಧ್ಯಾಹ್ನ ಸುಮಾರು 1:30ರ ಸಮಯದಲ್ಲಿ ಈ ದುರಂತ ನಡೆದಿದೆ. ಡಿಕ್ಕಿಯ ಪರಿಣಾಮ ಎರಡೂ ಬೈಕ್‌ಗಳು ಎಗರಿ ಬಿದ್ದಿವೆ. ಮಲ್ಲಿಕಾರ್ಜುನ ಮತ್ತು ಪವನ್ ಕುಮಾರ್ ಅವರ ತಲೆಗೆ ತೀವ್ರ ಗಾಯಗಳಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಆಕ್ಟೀವಾ ಸ್ಕೂಟರ್‌ನಲ್ಲಿ ಪವನ್ ಕುಮಾರ್ ಜೊತೆಗೆ ಹಿಂದೆ ಕೂತಿದ್ದ ಮೂವರು ಪ್ರಯಾಣಿಕರಲ್ಲಿ ಇಬ್ಬರು ಮಹಿಳೆಯರು ಸೇರಿದಂತೆ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಗಾಯಾಳುಗಳನ್ನು ತಕ್ಷಣ ಸ್ಥಳೀಯರು ಮತ್ತು ಪೊಲೀಸರು ಸೇರಿ ಬೀದರ್‌ನ ಬ್ರಿಮ್ಸ್ ಆಸ್ಪತ್ರೆಗೆ ರವಾನಿಸಿದ್ದಾರೆ. ಗಂಭೀರ ಸ್ಥಿತಿಯಲ್ಲಿರುವ ಮೂವರನ್ನೂ ಐಸಿಯುವಿನಲ್ಲಿ ದಾಖಲಿಸಲಾಗಿದೆ. ಅಪಘಾತ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ತೇಜಸ್ ಯುದ್ಧ ವಿಮಾನ ಅಪಘಾತ: ಪೈಲೆಟ್ ನಮಾಂಶ್ ಸಯಾಲ್ ಕೊನೆಯ ಕ್ಷಣದ ವಿಡಿಯೊ ಇಲ್ಲಿದೆ
ಮದುವೆಗೆ ಬಂದವ ಮಸಣಕ್ಕೆ
ನೆಲಮಂಗಲದಲ್ಲಿ ನಡೆದ ಅಪಘಾತದಲ್ಲಿ ಜರ್ಮನಿಯಲ್ಲಿ ಎಂಎಸ್ ಪದವಿ ಪಡೆಯುತ್ತಿದ್ದ 27 ವರ್ಷದ ಯುವಕ ಸಾವನ್ನಪ್ಪಿದ್ದಾನೆ. ನೆಲಮಂಗಲದ ಸಿ ತೇಜಸ್ ಗೌಡ ಮೃತ ವಿದ್ಯಾರ್ಥಿ. ಬೈಕ್ ಸ್ಕಿಡ್ ಆಗಿ ರಸ್ತೆ ವಿಭಜಕಕ್ಕೆ ಬಿದ್ದ ಪರಿಣಾಮ ಬೈಕ್ ಚಾಲಕನ ನಿಯಂತ್ರಣ ತಪ್ಪಿ ಬಿದ್ದಿದ್ದಾನೆ. ಹೆಲ್ಮೆಟ್ ಧರಿಸಿರಲಿಲ್ಲ, ಇದರಿಂದ ತಲೆಗೆ ತೀವ್ರ ಪೆಟ್ಟಾಗಿದೆ. ಸೋಮವಾರ ಬೆಸ್ಕಾಂ ಕಚೇರಿ ಎದುರು, ತೇಜಸ್ ಸ್ನೇಹಿತನ ಮದುವೆಗೆ ಹೋಗಿ ಮನೆಗೆ ಮರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅವರು ಒಂದು ವಾರದ ಹಿಂದೆ ಜರ್ಮನಿಯಿಂದ ಕಾರ್ಯಕ್ರಮಕ್ಕಾಗಿ ಆಗಮಿಸಿದ್ದರು. ಗುರುವಾರ ರಾತ್ರಿ ಖಾಸಗಿ ಆಸ್ಪತ್ರೆಯಲ್ಲಿ ತೇಜಸ್ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಹೆಲ್ಮೆಟ್ ಧರಿಸದ ಕಾರಣ, ವಿಭಜಕಕ್ಕೆ ಡಿಕ್ಕಿ ಹೊಡೆದ ನಂತರ ಆತನ ತಲೆಗೆ ಮಾರಣಾಂತಿಕ ಗಾಯಗಳಾಗಿವೆ. ಫ್ಲೆಕ್ಸ್ ಬೋರ್ಡ್ ನಿರ್ಮಿಸಲು ಪೂರ್ವಾನುಮತಿ ಪಡೆಯಲಾಗಿದೆಯೇ ಎಂದು ನಾವು ಪರಿಶೀಲಿಸುತ್ತಿದ್ದೇವೆ" ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.