Road Accident: ಟ್ರಾಕ್ಟರ್ ಮಗುಚಿ ಬಿದ್ದು ಬಾಲಕಿ ಸಾವು, ಇಬ್ಬರಿಗೆ ಗಾಯ
ಚಾಲಕ ತನ್ನ ಆರು ಮತ್ತು ಒಂಬತ್ತು ವರ್ಷದ ಮಕ್ಕಳನ್ನು ಟ್ರ್ಯಾಕ್ಟರ್‌ನಲ್ಲಿ ಕೂರಿಸಿಕೊಂಡು ತನ್ನ ಶೆಡ್‌ಗೆ ಹೋಗುತ್ತಿದ್ದರು. ಪಟ್ಟಂದೂರು ಅಗ್ರಹಾರ ಕೆರೆ ಏರಿ ಮೇಲೆ ಹೋಗುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ಉರುಳಿದ ಟ್ರ್ಯಾಕ್ಟರ್ ಕೆರೆಗೆ ಬಿದ್ದಿದೆ.

ಸಾಂದರ್ಭಿಕ ಚಿತ್ರ

ಬೆಂಗಳೂರು: ಬೆಂಗಳೂರಲ್ಲಿ (benagaluru news) ಘೋರ ದುರಂತವೊಂದು (road accident) ಸಂಭವಿಸಿದ್ದು, 9 ವರ್ಷದ ಬಾಲಕಿಯ (girl) ಮೇಲೆ ಟ್ರಾಕ್ಟರ್ ಹರಿದು ಸಾವನ್ನಪ್ಪಿರುವ (death) ದುರ್ಘಟನೆ ನಡೆದಿದೆ. ಕೆರೆ ಏರಿ ಮೇಲೆ ಚಲಿಸುತ್ತಿದ್ದ ಟ್ರ್ಯಾಕ್ಟರ್ ಉರುಳಿ ಬಿದ್ದ ಪರಿಣಾಮ 9 ವರ್ಷದ ಬಾಲಕಿ ಮೃತಪಟ್ಟಿರುವ ಘಟನೆ ವೈಟ್‌ಫೀಲ್ಡ್ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮೃತ ಬಾಲಕಿಯನ್ನು ಇಸಿನಾಕಾ ಭಟ್ (9) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಚಾಲಕ ಹಾಗೂ ಆರು ವರ್ಷದ ಬಾಲಕಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಾರೆ.
ಚಾಲಕ ತನ್ನ ಆರು ಮತ್ತು ಒಂಬತ್ತು ವರ್ಷದ ಮಕ್ಕಳನ್ನು ಟ್ರ್ಯಾಕ್ಟರ್‌ನಲ್ಲಿ ಕೂರಿಸಿಕೊಂಡು ತನ್ನ ಶೆಡ್‌ಗೆ ಹೋಗುತ್ತಿದ್ದರು. ಪಟ್ಟಂದೂರು ಅಗ್ರಹಾರ ಕೆರೆ ಏರಿ ಮೇಲೆ ಹೋಗುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ಉರುಳಿದ ಟ್ರ್ಯಾಕ್ಟರ್ ಕೆರೆಗೆ ಬಿದ್ದಿದೆ. ಆಗ ಟ್ರ್ಯಾಕ್ಟರ್ ಕೆಳಗೆ ಸಿಲುಕಿಕೊಂಡ ಬಾಲಕಿ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಚಾಲಕ ಮತ್ತು ಆರು ವರ್ಷದ ಬಾಲಕಿಗೆ ಸಣ್ಣ ಪುಟ್ಟ ಗಾಯಗಳಾಗಿವೆ ಎಂದು ಪೊಲೀಸರು ತಿಳಿಸಿದರು. ವೈಟ್‌ಫೀಲ್ಡ್ ಸಂಚಾರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಶಿಕ್ಷಕರ ಎಡವಟ್ಟಿಗೆ ಕಣ್ಣು ಕಳೆದುಕೊಂಡ ಬಾಲಕ
ಚಿಕ್ಕಬಳ್ಳಾಪುರ: ಶಿಕ್ಷಕರೊಬ್ಬರ ಎಡವಟ್ಟಿಗೆ ಒಂದನೇ ತರಗತಿ ವಿದ್ಯಾರ್ಥಿಯೊಬ್ಬ ಕಣ್ಣು ಕಳೆದುಕೊಂಡಿರುವ ಘಟನೆ (Eyesight loss) ಚಿಂತಾಮಣಿ ತಾಲೂಕಿನ ಯಗವಕೋಟೆ ಗ್ರಾಮದ ಸರ್ಕಾರಿ ಮಾದರಿ ಹಿರಿಯ ಪ್ರಾರ್ಥಮಿಕ ಶಾಲೆಯಲ್ಲಿ ನಡೆದಿದೆ. ಶಾಲೆಯ ಶಿಕ್ಷಕಿ ಕೋಲಿನಿಂದ ಹೊಡೆದಿದ್ದರಿಂದಲೇ ತಮ್ಮ ಮಗನ ಕಣ್ಣಿಗೆ ಹಾನಿಯಾಗಿದೆ. ಹೀಗಾಗಿ ಶಿಕ್ಷಕಿ ವಿರುದ್ಧ ಕ್ರಮ ಕೈಗೊಂಡು, ತಮಗೆ ನ್ಯಾಯ ಕೊಡಿಸಬೇಕು ಎಂದು ಬಾಲಕನ ಪೋಷಕರು ಆಗ್ರಹಿಸಿದ್ದಾರೆ. ಕಣ್ಣು ಕಳೆದುಕೊಂಡ ಬಾಲಕನ ತಂದೆ-ತಾಯಿ ನ್ಯಾಯಕ್ಕಾಗಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮುಂದೆ ಧರಣಿ ನಡೆಸಿದ್ದಾರೆ.
ಯಗವಕೋಟೆ ಸರ್ಕಾರಿ ಮಾದರಿ ಹಿರಿಯ ಪ್ರಾರ್ಥಮಿಕ ಶಾಲೆಯಲ್ಲಿ ನಟರಾಜ್ - ಅಂಜಲಿ ದಂಪತಿ ಪುತ್ರನಾದ ಯಶ್ವಂತ್ (8) ಒಂದನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ. ಶಿಕ್ಷಕಿ ಸರಸ್ವತಿ ಕೋಲಿನಿಂದ ಬೇರೆ ಬಾಲಕನಿಗೆ ಹೊಡೆಯಲು ಹೋದಾಗ ಯಶ್ವಂತ್ ಕಣ್ಣಿಗೆ ಪೆಟ್ಟು ಬಿದ್ದಿದೆ. ಇದರಿಂದ ಬಲಗಣ್ಣಿಗೆ ಹಾನಿಯಾಗಿದೆ ಎಂಬ ಆರೋಪ ಕೇಳಿಬಂದಿದೆ.
ಪೋಷಕರು ಬಾಲಕನಿಗೆ ಕಣ್ಣಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿದ್ದರು. ಆದರೆ, ವೈದ್ಯರು ಬಾಲಕನ ಕಣ್ಣು ಕಾಣುವುದಿಲ್ಲ ಎಂದು ದೃಢಕರಿಸಿದ್ದರಿಂದ ಪೋಷಕರು ಶಿಕ್ಷಕಿಯ ವಿರುದ್ಧ ಪೊಲೀಸ್ ಠಾಣೆಗೆ, ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ದೂರು ನೀಡಿದ್ದರು. ಆದರೆ ಯಾವುದೇ ರೀತಿಯ ಕ್ರಮ ಜರುಗಿಸದ ಕಾರಣಕ್ಕೆ ನ್ಯಾಯಕ್ಕಾಗಿ ಬಾಲಕ ಹಾಗೂ ಅವರ ತಂದೆ-ತಾಯಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮುಂಭಾಗ ಧರಣಿ ನಡೆಸಿದ್ದಾರೆ. ಶಿಕ್ಷಕಿಯ ಮೇಲೆ ಕ್ರಮ ಜರುಗಿಸುವವರೆಗೂ ಕಾನೂನು ಹೋರಾಟ ಮಾಡುವುದಾಗಿ ಅವರು ತಿಳಿಸಿದ್ದಾರೆ.
ಇದನ್ನೂ ಓದಿ: Murder Case: ಪತಿಯ ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಹಿಳೆ ಸಂಶಯಾಸ್ಪದ ಸಾವು