ವಿದೇಶ ಫ್ಯಾಷನ್‌ ಲೋಕ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್‌ ಹೌಸ್‌ ಸಂಪಾದಕೀಯ

Robbery Case: ಬೀದರ್ ಎಟಿಎಂ ದರೋಡೆಕೋರರ ಸುಳಿವು ನೀಡಿದವರಿಗೆ 5 ಲಕ್ಷ ರೂ. ಬಹುಮಾನ

ಪೊಲೀಸರ ಮಾಹಿತಿ ಪ್ರಕಾರ ತಲೆಮರೆಸಿಕೊಂಡಿರುವ ಇಬ್ಬರೂ ಆರೋಪಿಗಳು ಬಿಹಾರ ರಾಜ್ಯದವರು. ಇವರ ಹೆಸರು ಅಮನ್ ಕುಮಾರ್, ಅಲೋಕ್ ಕುಮಾರ್. ಈ ಇಬ್ಬರ ಕುರಿತು ಮಾಹಿತಿ ನೀಡಿದವರಿಗೆ 5 ಲಕ್ಷ ರೂ. ಬಹುಮಾನ ನೀಡಲಾಗುತ್ತದೆ. ಮಾಹಿತಿ ನೀಡಿದವರ ಹೆಸರು ಗೌಪ್ಯವಾಗಿಡಲಾಗುತ್ತದೆ ಎಂದು ತಿಳಿಸಲಾಗಿದೆ.

ಬೀದರ್ ಎಟಿಎಂ ದರೋಡೆಕೋರರ ಸುಳಿವು ನೀಡಿದವರಿಗೆ 5 ಲಕ್ಷ ರೂ. ಬಹುಮಾನ

ಬೀದರ್‌ ಎಟಿಎಂ ದರೋಡೆ ಆರೋಪಿಗಳು

ಹರೀಶ್‌ ಕೇರ ಹರೀಶ್‌ ಕೇರ Feb 17, 2025 3:51 PM

ಬೀದರ್: ಬೀದರ್‌ (Bidar news) ನಗರದಲ್ಲಿ ಹಾಡಹಗಲೇ ಭದ್ರತಾ ಸಿಬ್ಬಂದಿಗಳ ಮೇಲೆ ಗುಂಡಿನ ದಾಳಿ (firing) ನಡೆಸಿ ಎಟಿಎಂಗೆ ಹಣ ತುಂಬುವ ವಾಹನದಿಂದ ಸುಮಾರು 93 ಲಕ್ಷ ರೂ. ಹಣವನ್ನು ದರೋಡೆ (Robbery Case) ಮಾಡಿದ ಇಬ್ಬರು ಆರೋಪಿಗಳು (Crime news) ಇನ್ನೂ ಪೊಲೀಸರ ಕೈಗೆ ಸಿಕ್ಕಿಲ್ಲ. ಹೀಗಾಗಿ ಈ ಇಬ್ಬರ ಕುರಿತು ಮಾಹಿತಿ ನೀಡಿದವರಿಗೆ 5 ಲಕ್ಷ ರೂ. ಬಹುಮಾನ ಘೋಷಣೆ ಮಾಡಲಾಗಿದೆ.

ಈ ದರೋಡೆಯಲ್ಲಿ ಒಬ್ಬರು ಭದ್ರತಾ ಸಿಬ್ಭಂದಿ ಮೃತಪಟ್ಟಿದ್ದರು. ಪೊಲೀಸರ ಮಾಹಿತಿ ಪ್ರಕಾರ ತಲೆಮರೆಸಿಕೊಂಡಿರುವ ಇಬ್ಬರೂ ಆರೋಪಿಗಳು ಬಿಹಾರ ರಾಜ್ಯದವರು. ಇವರ ಹೆಸರು ಅಮನ್ ಕುಮಾರ್, ಅಲೋಕ್ ಕುಮಾರ್. ಇವರ ಕುರಿತು ಪೊಲೀಸರಿಗೆ ಯಾವುದೇ ಮಾಹಿತಿ ಸಿಗುತ್ತಿಲ್ಲ. ಆದ್ದರಿಂದ ಕರ್ನಾಟಕ ಪೊಲೀಸರು ಈ ಕುರಿತು ಪ್ರಕಟಣೆ ಮೂಲಕ ಮಾಹಿತಿ ನೀಡಿದ್ದಾರೆ. ಅಮನ್ ಕುಮಾರ್, ಅಲೋಕ್ ಕುಮಾರ್ ಫೋಟೋವನ್ನು ಹಾಕಿ, ಈ ಇಬ್ಬರ ಕುರಿತು ಮಾಹಿತಿ ನೀಡಿದವರಿಗೆ 5 ಲಕ್ಷ ರೂ. ಬಹುಮಾನ ನೀಡಲಾಗುತ್ತದೆ. ಮಾಹಿತಿ ನೀಡಿದವರ ಹೆಸರು ಗೌಪ್ಯವಾಗಿಡಲಾಗುತ್ತದೆ ಎಂದು ತಿಳಿಸಲಾಗಿದೆ.

ಈ ಇಬ್ಬರು ಆರೋಪಿಗಳು ಬೀದರ್‌ನ ಎಟಿಎಂ ದರೋಡೆ ಪ್ರಕರಣ ಮಾತ್ರವಲ್ಲ, ಉತ್ತರ ಪ್ರದೇಶದಲ್ಲಿ ದರೋಡೆ ಪ್ರಕರಣವೊಂದರಲ್ಲಿಯೂ ಪೊಲೀಸರಿಗೆ ಬೇಕಾಗಿದ್ದಾರೆ ಎಂಬ ಮಾಹಿತಿ ಇದೆ. ಆದ್ದರಿಂದ ಅಮನ್ ಕುಮಾರ್, ಅಲೋಕ್ ಕುಮಾರ್ ಕುರಿತು ಪೊಲೀಸರು ಹೆಚ್ಚಿನ ಮಾಹಿತಿ ಸಂಗ್ರಹ ಮಾಡಿ, ಅವರನ್ನು ಬಂಧಿಸಲು ಪ್ರಕಟಣೆಯನ್ನು ಹೊರಡಿಸಿದ್ದಾರೆ. ಅಮನ್ ಕುಮಾರ್, ಅಲೋಕ್ ಕುಮಾರ್ ಬಗ್ಗೆ ಮಾಹಿತಿ ಇದ್ದರೆ ಕಲಬುರಗಿ 9480800030, ಬೀದರ್‌ 9480803401, ಬೀದರ್ ಡಿಎಸ್‌ಪಿ 9480803420 ಸಂಖ್ಯೆಗೆ ಕರೆ ಮಾಡಿ ಮಾಹಿತಿ ನೀಡಬಹುದು ಎಂದು ಪೊಲೀಸರು ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.

ಬೀದರ್ ನಗರದ ಹೃದಯ ಭಾಗದಲ್ಲಿ ಜನವರಿ 16ರಂದು ದರೋಡೆ ನಡೆದಿತ್ತು. ಎಸ್‌ಬಿಐ ಬ್ಯಾಂಕ್ ಎಟಿಎಂಗೆ ಹಣ ಹಾಕಲು ಬಂದಿದ್ದ ವಾಹನದ ಮೇಲೆ ಗುಂಡಿನ ದಾಳಿ ಮಾಡಲಾಗಿತ್ತು. ವಾಹನದ ಭದ್ರತಾ ಸಿಬ್ಬಂದಿ ಗಿರಿ ವೆಂಕಟೇಶ್ ಮೃತಪಟ್ಟಿದ್ದರು. ಶಿವಕುಮಾರ್ ಎಂಬವರು ಗಂಭೀರವಾಗಿ ಗಾಯಗೊಂಡಿದ್ದರು. ಘಟನೆ ನಡೆದು ಒಂದು ತಿಂಗಳು ಕಳೆದಿದೆ. ಆರೋಪಿಗಳು ಹಣದೊಂದಿಗೆ ಹೈದರಾಬಾದ್‌ಗೆ ತೆರಳಿ ಅಲ್ಲಿಂದ ಬೇರೆ ಕಡೆಗೆ ಪರಾರಿಯಾಗಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ. ಆದರೆ ಆರೋಪಿಗಳು ಇನ್ನೂ ಪತ್ತೆಯಾಗಿಲ್ಲ.

ಮುಖಕ್ಕೆ ಮಾಸ್ಕ್ ಹಾಕಿಕೊಂಡು ದರೋಡೆ ಮಾಡಲಾಗಿತ್ತು. ಪೊಲೀಸರು ಸಿಸಿಟಿವಿ ದೃಶ್ಯಾವಳಿ ಮತ್ತು ಇತರ ತನಿಖೆಯನ್ನು ಆಧರಿಸಿ ಅಮನ್ ಕುಮಾರ್, ಅಲೋಕ್ ಕುಮಾರ್ ಫೋಟೋವನ್ನು ಪತ್ತೆ ಹಚ್ಚಿದ್ದು, ಅವರ ಬಗ್ಗೆ ಮಾಹಿತಿ ನೀಡಿದರೆ 5 ಲಕ್ಷ ರೂ. ಬಹುಮಾನವನ್ನು ಘೋಷಣೆ ಮಾಡಿದ್ದಾರೆ. ಬೀದರ್‌ನಿಂದ ಪರಾರಿಯಾದ ದರೋಡೆಕೋರರು ಹೈದರಾಬಾದ್‌ನಲ್ಲಿಯೂ ತಮ್ಮನ್ನು ಹಿಡಿಯಲು ಬಂದ ಪೊಲೀಸರ ಮೇಲೆ ಗುಂಡಿನ ದಾಳಿ ಮಾಡಿದ್ದಾರೆ ಎಂಬ ಮಾಹಿತಿ ಇದೆ. ಪೊಲೀಸರು ಆರೋಪಿಗಳ ಪತ್ತೆಗಾಗಿ ಹುಡುಕಾಟವನ್ನು ತೀವ್ರಗೊಳಿಸಿದ್ದಾರೆ. ಬೇರೆ ರಾಜ್ಯದಲ್ಲಿ ಅವರು ಅಡಗಿರಬಹುದು ಎಂದು ಅಂದಾಜಿಸಲಾಗಿದೆ.

ಇದನ್ನೂ ಓದಿ: Bidar ATM Robbery: ಬೀದರ್ ಎಟಿಎಂ ದರೋಡೆ ಪ್ರಕರಣ; ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮಕ್ಕೆ ಸಚಿವ ಖಂಡ್ರೆ ಸೂಚನೆ