ಕರಾವಳಿಯಲ್ಲಿ ಮತ್ತೆ ಹರಿದ ನೆತ್ತರು, ತೊಕ್ಕೊಟ್ಟಿನಲ್ಲಿ ರೌಡಿಶೀಟರ್ ಕಗ್ಗೊಲೆ
ಆರೋಪಿಗಳು ಕಾರಿನಲ್ಲಿ ಬಂದು ಹಿಂಬದಿಯಿಂದ ಬೈಕ್‌ಗೆ ಡಿಕ್ಕಿ ಹೊಡೆದಿದ್ದಾರೆ. ಬಳಿಕ ರೌಡಿಶೀಟರ್ ರಸ್ತೆಗೆ ಬಿದ್ದಾಗ ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆ ಮಾಡಿದ್ದಾರೆ. ನಂತರ ಕಾರಿನಲ್ಲಿ ಪರಾರಿಯಾಗಿದ್ದಾರೆ. ಘಟನೆ ಹಿನ್ನೆಲೆಯಲ್ಲಿ ಗ್ಯಾಂಗ್ ವಾರ್ ಶಂಕೆ ವ್ಯಕ್ತವಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ರೌಡಿಶೀಟರ್ ಆರಿಫ್ -
ಮಂಗಳೂರು, ಮಾ.27: ಬೆಳ್ಳಂಬೆಳಗ್ಗೆ ಕರಾವಳಿಯಲ್ಲಿ ನೆತ್ತರು ಹರಿದಿದೆ. ಮಂಗಳೂರು (Mangaluru) ಹೊರವಲಯದ ತೊಕ್ಕೊಟ್ಟು (Thokottu) ಫೈಓವರ್ ಮೇಲೆ ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ (Rowdy sheeter murder case) ಒಬ್ಬನನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಮುಳ್ಳುಗುಡ್ಡೆ ಹೌಸ್ ತಲಪಾಡಿ ನಿವಾಸಿ ಆರಿಫ್ @ ಟಾಬ್ಲೆಟ್ ಆರಿಫ್ ಕೊಲೆಯಾದ ರೌಡಿಶೀಟರ್.
ಇಂದು (ಮಾ.27) ಬೆಳ್ಳಂಬೆಳಗ್ಗೆ ಬೈಕ್‌ನಲ್ಲಿ ತೆರಳುತ್ತಿದ್ದಾಗ ದುಷ್ಕರ್ಮಿಗಳು ಕೊಲೆ ಮಾಡಿದ್ದಾರೆ. ಆರೋಪಿಗಳು ಕಾರಿನಲ್ಲಿ ಬಂದು ಹಿಂಬದಿಯಿಂದ ಬೈಕ್‌ಗೆ ಡಿಕ್ಕಿ ಹೊಡೆದಿದ್ದಾರೆ. ಬಳಿಕ ರೌಡಿಶೀಟರ್ ರಸ್ತೆಗೆ ಬಿದ್ದಂತೆ ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆ ಮಾಡಿದ್ದಾರೆ. ನಂತರ ಕಾರಿನಲ್ಲಿ ಪರಾರಿಯಾಗಿದ್ದಾರೆ. ಘಟನೆ ಹಿನ್ನೆಲೆಯಲ್ಲಿ ಗ್ಯಾಂಗ್ ವಾರ್ ಶಂಕೆ ವ್ಯಕ್ತವಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕಳೆದ 2022ರ ಮೇ ತಿಂಗಳಲ್ಲಿಯೂ ಇದೇ ರೀತಿ ಆರೀಫ್ ಕೊಲೆಗೆ ಯತ್ನ ನಡೆದಿತ್ತು. ಬೆಳಗ್ಗೆ ಬೈಕಲ್ಲಿ ಧಕ್ಕೆಗೆ ತೆರಳುತ್ತಿದ್ದ ವೇಳೆ ಬಜಾಲಿನ ಟೊಪ್ಪಿ ನೌಫಾಲ್ ಮತ್ತು ತಂಡವು ದಾಳಿ ನಡೆಸಿ ಚೂರಿ ಇರಿದು ಕೊಲೆಗೆ ಯತ್ನಿಸಿತ್ತು. ವಿವಾಹಿತನಾಗಿರುವ ಆರೀಫ್ ಪತ್ನಿ ಹಾಗೂ ಮೂರು ಗಂಡು, ಒಂದು ಹೆಣ್ಣು ಒಟ್ಟು ನಾಲ್ವರು ಮಕ್ಕಳನ್ನು ಅಗಲಿದ್ದಾನೆ. ಮೂಲತಃ ಕುದ್ರೋಳಿ ನಿವಾಸಿಯಾಗಿದ್ದು ಕಳೆದ ಆರೇಳು ವರುಷದಿಂದ ಕುಟುಂಬ ಸಮೇತ ಅಜ್ಜಿನಡ್ಕ ಬಳಿಯ ಮುಳ್ಳುಗುಡ್ಡೆ ಎಂಬಲ್ಲಿ ಮನೆ ಮಾಡಿ ವಾಸವಿದ್ದ. ಘಟನಾ ಸ್ಥಳಕ್ಕೆ ಡಿಸಿಪಿ ಮಿಥುನ್, ಸೋಕೋ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ.
ಆಸ್ತಿ ವೈಷಮ್ಯದಿಂದ ವ್ಯಕ್ತಿಯ ಕೊಲೆ
ಚಿತ್ರದುರ್ಗ: ಎರಡು ಕುಟುಂಬದ ಮಧ್ಯೆ ಆಸ್ತಿ ವೈಷಮ್ಯ (Property Dispute) ಹಿನ್ನೆಲೆ ಮಾರಕಾಸ್ತ್ರದಿಂದ ಕೊಚ್ಚಿ ವ್ಯಕ್ತಿಯನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಚಿತ್ರದುರ್ಗ (Chitradurga) ತಾಲೂಕಿನ ಕಡ್ಲೆಗುದ್ದು ಗ್ರಾಮದಲ್ಲಿ ನಡೆದಿದೆ.
Murder Case: ಸೊಸೆಯನ್ನು ಕಾಮದಾಹಕ್ಕೆ ಬಳಸಿಕೊಂಡ ಅಪ್ಪ ಮಗನಿಂದಲೇ ಸುಪಾರಿ ಹತ್ಯೆ!
ವೀರಭದ್ರಪ್ಪ (55) ಕೊಲೆಯಾದ ದುರ್ದೈವಿ. 16 ವರ್ಷದ ಅಪ್ರಾಪ್ತ ಈ ಕೃತ್ಯ ನಡೆಸಿದ್ದಾನೆ. ದೊಡ್ಡಾಲಘಟ್ಟದಿಂದ ಜಮೀನಿಗೆ ಹೋಗುವ ರಸ್ತೆಯಲ್ಲಿ ಮಚ್ಚಿನಿಂದ ಹೊಡೆದು ಕೊಲೆ ಮಾಡಲಾಗಿದೆ. ಘಟನಾ ಸ್ಥಳಕ್ಕೆ ಭರಮಸಾಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಅಪ್ರಾಪ್ತ ಆರೋಪಿಯನ್ನು ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.