ಅಪರಿಚಿತರಿಂದ ಗುಂಡಿನ ದಾಳಿ: ಆರ್‌ಎಸ್‌ಎಸ್ ಕಾರ್ಯಕರ್ತನ ಮಗನ ಹತ್ಯೆ
ಆರ್‌ಎಸ್‌ಎಸ್ ಕಾರ್ಯಕರ್ತನ ಮಗನನ್ನು ಪಂಜಾಬ್‌ನ ಫಿರೋಜ್‌ಪುರದಲ್ಲಿ ಹತ್ಯೆ ಮಾಡಲಾಗಿದೆ. ಇಬ್ಬರು ಅಪರಿಚಿತರು ದಾಳಿ ನಡೆಸಿ 40 ವರ್ಷದ ವ್ಯಕ್ತಿಯನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಆರೋಪಿಗಳು ಪರಾರಿಯಾಗಿದ್ದು, ಮೃತನನ್ನು ನವೀನ್ ಅರೋರಾ ಎಂದು ಗುರುತಿಸಲಾಗಿದೆ. ಘಟನೆಯ ಕುರಿತು ಪ್ರತಿಕ್ರಿಯಿಸಿರುವ ಬಿಜೆಪಿ ರಾಜ್ಯದ ಕಾನೂನು ಸುವ್ಯವಸ್ಥೆ ಬಗ್ಗೆ ಪ್ರಶ್ನಿಸಿದೆ.
(ಸಂಗ್ರಹ ಚಿತ್ರ) -
ಪಂಜಾಬ್: ವ್ಯಕ್ತಿಯೊಬ್ಬನನ್ನು ಶನಿವಾರ ರಾತ್ರಿ ಅಪರಿಚಿತರು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಪಂಜಾಬ್‌ನ (Punjab) ಫಿರೋಜ್‌ಪುರದಲ್ಲಿ (Ferozepur) ನಡೆದಿದೆ. ಆರ್‌ಎಸ್‌ಎಸ್ (RSS) ಕಾರ್ಯಕರ್ತನ (RSS Worker) ಮಗ 40 ವರ್ಷದ ನವೀನ್ ಅರೋರಾ ಮೃತರು. ಇವರು ಫಿರೋಜ್‌ಪುರದ ಬುಧ್ವಾರಾ ವಾಲಾ ಮೊಹಲ್ಲಾ ಬಳಿ ಮನೆಗೆ ಹಿಂತಿರುಗುತ್ತಿದ್ದಾಗ ಇಬ್ಬರು ಅಪರಿಚಿತರು ಗುಂಡಿನ ದಾಳಿ ನಡೆಸಿದ್ದಾರೆ. ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದು, ಫಿರೋಜ್‌ಪುರ ಠಾಣೆಯಲ್ಲಿ (Ferozepur Station) ಪ್ರಕರಣ ದಾಖಲಾಗಿದೆ.
ಆರ್‌ಎಸ್‌ಎಸ್ ಕಾರ್ಯಕರ್ತನ ಮಗ ನವೀನ್ ಅರೋರಾ ಎಂಬವರು ಶನಿವಾರ ರಾತ್ರಿ ಮನೆಗೆ ಹಿಂದಿರುಗುತ್ತಿದ್ದಾಗ ಅಪರಿಚಿತರಿಬ್ಬರು ಗುಂಡಿನ ದಾಳಿ ನಡೆಸಿದ್ದಾರೆ. ಬುಧ್ವಾರಾ ವಾಲಾ ಮೊಹಲ್ಲಾ ಬಳಿ ಈ ಘಟನೆ ನಡೆದಿದೆ. ಗುಂಡು ಹಾರಿಸಿದ ಬಳಿಕ ದಾಳಿಕೋರರು ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ: Physical Assault: ಪ್ರತಿಷ್ಠಿತ ಇಂಜಿನಿಯರಿಂಗ್ ಕಾಲೇಜಿನ ಉಪನ್ಯಾಸಕನ ಮೇಲೆ ಲೈಂಗಿಕ ಕುರುಳದ ಆರೋಪ; ದೂರು ದಾಖಲು
ಅಪರಿಚಿತರ ಗುಂಡಿನ ದಾಳಿಯಲ್ಲಿ ಮೃತಪಟ್ಟ ನವೀನ್ ಅರೋರಾ ಹಿರಿಯ ಆರ್‌ಎಸ್‌ಎಸ್ ಸ್ವಯಂಸೇವಕ ಬಲದೇವ್ ರಾಜ್ ಅರೋರಾ ಅವರ ಮಗ. ದಾಳಿಕೋರರನ್ನು ದಾಳಿಕೋರರನ್ನು ಗುರುತಿಸಲು ಮತ್ತು ಹತ್ಯೆಯ ಹಿಂದಿನ ಉದ್ದೇಶವನ್ನು ಪತ್ತೆಹಚ್ಚಲು ಹಲವು ತಂಡಗಳನ್ನು ರಚಿಸಲಾಗಿದೆ. ಸ್ಥಳದ ಸಿಸಿಟಿವಿ ದೃಶ್ಯಾವಳಿಗಳನ್ನು ಪೊಲೀಸರು ವಶಕ್ಕೆ ಪಡೆದು ಪರಿಶೀಲನೆ ನಡೆಸುತ್ತಿದ್ದಾರೆ.
ಘಟನೆ ನಡೆದ ತಕ್ಷಣವೇ ಬಿಜೆಪಿ ವಕ್ತಾರ ಶೆಹಜಾದ್ ಪೂನವಾಲ್ಲಾ ಅವರು ಸಾಮಾಜಿಕ ಮಾಧ್ಯಮದ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ. ಇದು ಪಂಜಾಬ್‌ನಲ್ಲಿ ಸಂಪೂರ್ಣ ಕಾನೂನು ಮತ್ತು ಸುವ್ಯವಸ್ಥೆ ಕುಸಿತವಾಗಿರುವುದನ್ನು ತೋರಿಸುತ್ತದೆ ಎಂದು ಹೇಳಿದ್ದಾರೆ.
ಚುನಾವಣೆಯಲ್ಲಿ ಸೋತಿರುವ ನಾಯಕರಿಗೆ ಆಪ್ ವಿವಿಐಪಿ ಭದ್ರತೆಯನ್ನು ಒದಗಿಸಿದೆ. ಕೇಜ್ರಿವಾಲ್ ಅವರ ರಾಜಕೀಯ ಪ್ರತಿಸ್ಪರ್ಧಿಗಳ ಮೇಲೆ ಸೇಡು ತೀರಿಸಿಕೊಳ್ಳಲು ಪೊಲೀಸರನ್ನು ಒತ್ತಾಯಿಸಲಾಗುತ್ತಿದೆ. ಸಿಧು ಮೂಸೆವಾಲಾ, ಸಂದೀಪ್ ಥಾಪರ್, ಸೋನು ಚೀಮಾ, ವಿಕಾಸ್ ಬಗ್ಗಾ ಹತ್ಯೆ ಸೇರಿದಂತೆ ಇನ್ನು ಹಲವು ಪ್ರಕರಣಗಳಲ್ಲಿ ಪಂಜಾಬ್‌ನಲ್ಲಿ ಕಾನೂನು ಮತ್ತು ಸುವ್ಯವಸ್ಥೆ ವಿಫಲವಾಗಿದೆ. ಇಲ್ಲಿನ ಮುಖ್ಯಮಂತ್ರಿ ಭಗವಂತ್ ಮಾನ್ ಅವರನ್ನು ಇದಕ್ಕೆ ಹೊಣೆಗಾರರನ್ನಾಗಿ ಮಾಡಬೇಕು ಎಂದು ಅವರು ಹೇಳಿದ್ದಾರೆ.
ಇದನ್ನೂ ಓದಿ: Bigg Boss Kannnada 12: ಓವರ್ ಕಾನ್ಫಿಡೆನ್ಸ್ ಬೇಡ! ಮಾಳು ವಿಚಾರಕ್ಕೆ ಗಿಲ್ಲಿ ನಟನಿಗೆ ಕಿಚ್ಚನ ಕ್ಲಾಸ್
ನವೀನ್ ಅರೋರಾ ಅವರ ಹತ್ಯೆಯ ಕುರಿತು ತನಿಖೆ ನಡೆಸಲಾಗುತ್ತಿದೆ. ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದೆ. ಅಪರಾಧಿಗಳಿಗೆ ಕಾನೂನಿನ ಪ್ರಕಾರ ಶಿಕ್ಷೆಯಾಗುತ್ತದೆ ಎಂದು ಫಿರೋಜ್‌ಪುರ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ.